Breaking News

BigTv News

ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು : ರಾಜ್ಯ ಸರ್ಕಾರ ಪ್ರಸ್ತುತ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಲು ಮುಂದಾಗಿದೆ. ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಮಾಡಿದೆ. ಡಾ. ತ್ರಿಲೋಕ್ ಚಂದ್ರ ಕೆ. ವಿ. (ಕೆಎನ್: 2007), ಬಿ. ಬಿ. ಕಾವೇರಿ (ಕೆಎನ್: 2008), ಬಿ. ಬಿ. ಕಾವೇರಿ, ಸುಧೀರ್ ಕುಮಾರ್ ರೆಡ್ಡಿ ಸಿಹೆಚ್, ಐಪಿಎಸ್ (ಕೆಎನ್-2010) ರನ್ನು ವಿವಿಧ ಇಲಾಖೆಗಳಿಗೆ ವರ್ಗಾಯಿಸಲಾಗಿದೆ. ರಾಜ್ಯ ಸರ್ಕಾರ 14 ತಹಶೀಲ್ದಾರ್‌ಗಳನ್ನು ವರ್ಗಾವಣೆ ಮಾಡಿ …

Read More »

ಅಕ್ರಮ ಮರಳುಗಾರಿಕೆ ವಿರುದ್ಧ ಧ್ವನಿ ಎತ್ತಿದ್ದ ಕ್ಯಾಥೋಲಿಕ್ ಸಭಾ ಅಧ್ಯಕ್ಷರ ಮೇಲೆ ಹಲ್ಲೆ

ಮಂಗಳೂರು : ಉಳಿಯ ಪಾವೂರಿನಲ್ಲಿ ನಡೆಯುತ್ತಿದ್ದೆನ್ನಲಾದ ಅಕ್ರಮ ಮರಳುಗಾರಿಕೆ ವಿರುದ್ಧ ಧ್ವನಿ ಎತ್ತಿದ್ದ ಕ್ಯಾಥೋಲಿಕ್ ಸಭಾ ಅಧ್ಯಕ್ಷರಿಗೆ ತಂಡವೊಂದು ಹಲ್ಲೆ ನಡೆಸಿದ ಘಟನೆ ನಗರದ ಹೊರವಲಯದ ಅಡ್ಯಾರ್ ಬಳಿ ನಡೆದಿದೆ. ಕ್ಯಾಥೋಲಿಕ್ ಸಭಾ ಮಂಗಳೂರು ಪ್ರದೇಶ್ ಅಧ್ಯಕ್ಷ ಆಲ್ವಿನ್ ಜರೋಂ ಡಿಸೋಜ ಪಾಣೇರ್ ಗೆ ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ. ಸದ್ಯ ಆಲ್ವಿನ್ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶುಕ್ರವಾರ ನೇತ್ರಾವತಿ ನದಿ ತೀರದ ತುಂಬೆ, ಮಾರಿಪಳ್ಳದಲ್ಲಿ ನಡೆಯುತ್ತಿದ್ದೆನ್ನಲಾದ ಅಕ್ರಮ ಮರಳುಗಾರಿಕೆ …

Read More »

ಕಾರೊಂದು ಡಿವೈಡರ್ ಮೇಲೇರಿ ಕ್ರಾಶ್ ಗಾರ್ಡ್ ಗೆ ಡಿಕ್ಕಿ : 5 ಜನರಿಗೆ ಗಾಯ

ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್ ಮೇಲೇರಿ ಕ್ರಾಶ್ ಗಾರ್ಡ್ ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಕೀಯಾ ಶೋರೂಂ ಮುಂಭಾಗದಲ್ಲಿ ಶನಿವಾರ ರಾತ್ರಿ ಈ ಘಟನೆ ನಡೆದಿದೆ. ಕಾರಿನಲ್ಲಿ ಮಹಿಳೆಯರು ಸೇರಿ ಐವರು ಪ್ರಯಾಣಿಸುತ್ತಿದ್ದರು. ಕಾರು ಮಣಿಪಾಲದಿಂದ ಪಡುಬಿದ್ರಿ ಕಡೆಗೆ ತೆರಳುತ್ತಿತ್ತು. ಈ ವೇಳೆ ಘಟನೆ ನಡೆದಿದೆ. ಅಪಘಾತದ ಸಂದರ್ಭದಲ್ಲಿ ಈ ರಸ್ತೆ ಮಾರ್ಗದಲ್ಲಿಯೇ ತೆರಳುತ್ತಿದ್ದ ಕಾಪು ಶಾಸಕ …

Read More »

ಕೃಷಿ, ಪಶುಸಂಗೋಪನಾ ಕ್ಷೇತ್ರದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

ಮುಂಬೈ: ಪ್ರಧಾನಿ ನರೇಂದ್ರ ಮೋದಿ ಅವರು ಮಹಾರಾಷ್ಟ್ರದಲ್ಲಿ ಸುಮಾರು 23,300 ಕೋಟಿ ರೂಪಾಯಿ ಮೌಲ್ಯದ ಕೃಷಿ ಮತ್ತು ಪಶುಸಂಗೋಪನಾ ಕ್ಷೇತ್ರಕ್ಕೆ ಸಂಬಂಧಿಸಿದ ಯೋಜನೆಗಳಿಗೆ ವಾಶಿಮ್‌ನಲ್ಲಿ ಚಾಲನೆ ನೀಡಿದರು. ಬಂಜಾರ ಸಮುದಾಯದ ಶ್ರೀಮಂತ ಪರಂಪರೆಯನ್ನು ಕೊಂಡಾಡುವ ಬಂಜಾರ ವಿರಾಸತ್ ಮ್ಯೂಸಿಯಂ ಅನ್ನು ಅವರು ಉದ್ಘಾಟಿಸಿದರು. ಥಾಣೆಯಲ್ಲಿ 32,800 ಕೋಟಿ ರೂಪಾಯಿಗಳ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಇದೇ ಸಂದರ್ಭದಲ್ಲಿ ಅವರು ನಮೋ ಶೇತ್ಕಾರಿ ಮಹಾಸನ್ಮಾನ್ ನಿಧಿ ಯೋಜನೆಯಡಿ ಮಹಾರಾಷ್ಟ್ರದ …

Read More »

ಪ್ರತಿ ಜಿಲ್ಲೆಯಲ್ಲೂ ಮಹಿಳಾ ಪದವಿಪೂರ್ವ ಕಾಲೇಜು ಸ್ಥಾಪನೆ: ಸಚಿವ ಜಮೀರ್ ಅಹ್ಮದ್

ಬೆಂಗಳೂರು: ಅಲ್ಪಸಂಖ್ಯಾತರ ಸಮುದಾಯದ ಹೆಣ್ಣು ಮಕ್ಕಳ ಉನ್ನತ ಶಿಕ್ಷಣಕ್ಕೆ ಒತ್ತು ನೀಡಲು ವಕ್ಫ್ ಬೋರ್ಡ್ ವತಿಯಿಂದ ಪ್ರತಿ ಜಿಲ್ಲೆಯಲ್ಲೂ ಪದವಿ ಪೂರ್ವ ಕಾಲೇಜು ಸ್ಥಾಪನೆ ಮಾಡಲಾಗುವುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು. ಶನಿವಾರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ವಕ್ಫ್ ಬೋರ್ಡ್ ವತಿಯಿಂದ ತಿರುಮೇನಹಳ್ಳಿಯಲ್ಲಿರುವ ಹಜ್ ಭವನದ ಆವರಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ 100 ಮದ್ರಸಾಗಳಲ್ಲಿ ಔಪಚಾರಿಕ ಶಿಕ್ಷಣಕ್ಕೆ ಚಾಲನೆ, 26 ಜಿಲ್ಲೆಗಳಿಗೆ …

Read More »

ಸರ್ಕಾರಿ ಭೂಮಿ ಸಕ್ರಮಗೊಳಿಸುವ ಅರ್ಜಿಗಳ ಇತ್ಯರ್ಥಕ್ಕೆ ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು: ಸರ್ಕಾರಿ ಭೂಮಿ ಸಕ್ರಮಗೊಳಿಸುವ ಅರ್ಜಿಗಳ ಇತ್ಯರ್ಥಕ್ಕೆ ರಾಜ್ಯ ಸರ್ಕಾರ ನಿರ್ಧಾರ ಮಾಡಿದ್ದು, ಈ ಮೂಲಕ ರೈತರಿಗೆ ಗುಡ್ ನ್ಯೂಸ್ ಕೊಟ್ಟಿದೆ. ಈ ಬಗ್ಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಸರ್ಕಾರಿ ಭೂಮಿ ಸಕ್ರಮಗೊಳಿಸುವ ಅರ್ಜಿಗಳ ಇತ್ಯರ್ಥಕ್ಕೆ ನಿರ್ಧಾರ ಮಾಡಲಾಗಿದೆ. ಸಾಗುವಳಿ ಮಾಡುತ್ತಿರುವರುವ 14 ಲಕ್ಷ ರೈತರು ಅರ್ಜಿ ಹಾಕಿದ್ದಾರೆ ಸರ್ಕಾರಿ ಭೂಮಿ ಸಕ್ರಮಗೊಳಿಸುವಂತೆ ಅರ್ಜಿಗಳನ್ನು ಸಲ್ಲಿಸಿದ್ದಾರೆ. ಈ ಸಂಬಂಧ ತಹಶೀಲ್ದಾರ್​ಗಳ ಜೊತೆ ಸಭೆ …

Read More »

ಭಾರತೀಯ ರೈಲ್ವೆಯನ್ನು ಖಾಸಗಿಕರಣಗೊಳಿಸುವುದಿಲ್ಲ: ಕೇಂದ್ರ ಸಚಿವ ಅಶ್ವಿನಿ ವೈಷ್ಣವ್

ನಾಸಿಕ್: ಭಾರತೀಯ ರೈಲ್ವೆಯನ್ನು ಖಾಸಗೀಕರಣಗೊಳಿಸುವುದಿಲ್ಲ ಎಲ್ಲರಿಗೂ ಕೈಗೆಟಕುವ ದರದಲ್ಲಿ ಸೇವೆ ಒದಗಿಸಲು ಗಮನಹರಿಸುತ್ತೆವೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಹೇಳಿದರು. 400 ರೂ.ಗಿಂತ ಕಡಿಮೆ ವೆಚ್ಚದಲ್ಲಿ 1,000 ಕಿಮೀವರೆಗೆ ಪ್ರಯಾಣ ಮಾಡಬಹುದು ಎಂಬುದನ್ನು ಖಚಿತಪಡಿಸಿಕೊಳ್ಳುವುದು ಸರ್ಕಾರದ ಗುರಿ ಎಂದು ಸಚಿವರು ಮಹಾರಾಷ್ಟ್ರದ ನಾಸಿಕ್‌ನಲ್ಲಿ ಹೇಳಿದರು. ಮುಂದಿನ ಐದು ವರ್ಷಗಳಲ್ಲಿ ರೈಲ್ವೆ ಸಂಪೂರ್ಣ ಬದಲಾವಣೆಗೆ ಒಳಗಾಗಲಿದೆ. ವಂದೇ ಭಾರತ್ ಮತ್ತು ನಮೋ ಭಾರತ್‌ನಂತಹ ರೈಲುಗಳು ಹಾಗೂ ಕವಚ ರೈಲು ರಕ್ಷಣೆ …

Read More »

ಶುಕ್ರ ಗ್ರಹದ ಅನ್ವೇಷಣೆಗೆ ಮುಂದಾದ ಇಸ್ರೋ

ಬೆಂಗಳೂರು: ಇಸ್ರೋ ಚಂದ್ರಯಾನ 3 ಉಡಾವಣೆ ಮಾಡಿ ವಿಶ್ವದಲ್ಲೇ ದಾಖಲೆ ಬರೆದಿತ್ತ, ಅದಾದ ನಂತರ ಸೂರ್ಯನ ಅನ್ವೇಷಣೆಗೆ ಆದಿತ್ಯ ಎಲ್ 1 ಉಡಾವಣೆ ಮಾಡಿ ಅದರಲ್ಲೂ ಸಕ್ಸಸ್ ಆಗಿದ್ದ ಇಸ್ರೋ ಇದೀಗ ಶುಕ್ರಗ್ರಹದ ಮೇಲೆ ಅನ್ವೇಷಣೆ ಮಾಡುವುದಕ್ಕೆ ಮುಂದಾಗಿದೆ. ಆ ಮೂಲಕ ಭಾರತದಲ್ಲಿ ಮತ್ತೊಂದು ಮೈಲಿಗಲ್ಲು ಸೃಷ್ಟಿಸಲು ಸಜ್ಜಾಗಿದೆ 2028 ರ ವೇಳೆಗೆ ದಾಖಲೆ ಬರೆಯುವುದು ಖಚಿತವಾಗಿದೆ. ಇಸ್ರೋ ಶುಕ್ರಗ್ರಹದ ಅನ್ವೇಷಣೆ ಮುಂದಾಗಿದ್ದು, ಇದಕ್ಕೆ ಸರ್ಕಾರವು ಕೈ ಜೋಡಿಸಿದೆ. 1200 …

Read More »

ಭಾರತದಲ್ಲಿ ಮುಂದಿನ ಐದು ವರ್ಷಗಳಲ್ಲಿ ತಲಾ ಆದಾಯ ದ್ವಿಗುಣವಾಗಲಿದೆ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

ನವದೆಹಲಿ: ಮುಂದಿನ ಐದು ವರ್ಷದಲ್ಲಿ ಭಾರತದಲ್ಲಿ ತಲಾ ಆದಾಯ ದ್ವಿಗುಣವಾಗಲಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಕಳೆದ 10 ವರ್ಷಗಳಿಂದ ಸರ್ಕಾರ ಕೈಗೊಂಡ ರಚನಾತ್ಮಕ ಸುಧಾರಣೆಗಳ ಫಲಿತಾಂಶ ಇದಾಗಿದೆ ಎಂದು ಅವರು ಕೌಟಿಲ್ಯ ಆರ್ಥಿಕ ಸಮಾವೇಶದಲ್ಲಿ ಮಾತನಾಡಿದರು. ಮುಂದಿನ ಐದು ವರ್ಷಗಳಲ್ಲಿ ಭಾರತದಲ್ಲಿ ತಲಾ ಆದಾಯ ದ್ವಿಗುಣವಾಗುತ್ತದೆ. ಮುಂಬರುವ ದಶಕಗಳಲ್ಲಿ ಸಾಮಾನ್ಯ ಜನರ ಜೀವನಮಟ್ಟ ತೀವ್ರ ಏರಿಕೆ ಕಾಣಲಿದೆ ಎಂದು ತಿಳಿಸಿದ್ದಾರೆ. ಭಾರತದಲ್ಲಿ ಆರ್ಥಿಕ ಬೆಳವಣಿಗೆ …

Read More »

ಆರು ತಿಂಗಳಲ್ಲಿ ಸರ್ಕಾರದ ಗುರಿಗಿಂತ 10 ಸಾವಿರ ಕೋಟಿ ರೂ. ತೆರಿಗೆ ಸಂಗ್ರಹಣೆ ಕಡಿಮೆ: ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ ನಂತರ 2024-25ನೇ ಸಾಲಿನ ಆರ್ಥಿಕ ವರ್ಷದ ಮೊದಲ ಆರು ತಿಂಗಳಲ್ಲಿ ಸರ್ಕಾರದ ಗುರಿಗಿಂತ ಸುಮಾರು 10,000 ಕೋಟಿ ರೂ. ತೆರಿಗೆ ಸಂಗ್ರಹಣೆ ಕಡಿಮೆ ಆಗಿದೆ. ಇದು ರಾಜ್ಯದ ಆರ್ಥಿಕ ಸ್ಥಿತಿಗತಿಗೆ ಹಿಡಿದ ಕನ್ನಡಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಆರ್.ಅಶೋಕ್ ಅವರು, ರಾಜ್ಯ ಕಾಂಗ್ರೆಸ್ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿದಾಗಿನಿಂದ …

Read More »