Breaking News

BigTv News

ವಿಜಯಪುರ ನಗರದ ಮುಬಾರಕ್ ಚೌಕ್ ಬಳಿ ವ್ಯಕ್ತಿಯ ಕೊಲೆ!

ವಿಜಯಪುರ : ನಗರದ ಮುಬಾರಕ್ ಚೌಕ್ ಬಳಿ ವ್ಯಕ್ತಿಯ ಕೊಲೆಯಾಗಿರುವ ಘಟನೆ ನಡೆದಿದೆ.ಶರಣು ಮಲ್ಲೇಶಪ್ಪ ಜೀವರ್ಗಿ (48) ಕೊಲೆಯಾದ ವ್ಯಕ್ತಿ. ಸ್ವಂತ ಪೈನಾನ್ಸ್ ನನ್ನು ಶರಣಪ್ಪ ನಡೆಸುತ್ತಿದ್ದರು. ಕಾಳಿಕಾ ನಗರದ ವಾಸಿ ಶರಣಪ್ಪ ಜೀವರ್ಗಿ ನಿತ್ಯ ಪೈನಾನ್ಸ್ ಪಿಗ್ಮಿ ಕಲೆಕ್ಷನ್ ಮಾಡುತ್ತಿದ್ದನು. ಇಂದು ಸಾಯಂಕಾಲದ ವೇಳೆ ಪಿಗ್ಮಿ ಕಲೆಕ್ಷನ್ ಗೆ ಬಂದಾಗ ಅಪರಿಚಿತ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಮಚ್ಚಿನಿಂದ ಕೊಚ್ಚಿ ಕಲ್ಲು ಹಾಕಿ ಕೊಲೆ ಮಾಡಿದ್ದಾರೆ. ಕೊಲೆಗೆ ನಿಖರ ಕಾರಣ …

Read More »

ಚಾಮರಾಜನಗರ : ತಾಯಿ ಜೊತೆ ಅಕ್ರಮ ಸಂಬಂಧ ಶಂಕೆ ಹಿನ್ನೆಲೆ : ಯುವಕನ ಬರ್ಬರ ಹತ್ಯೆ!

ಚಾಮರಾಜನಗರ : ಅನೈತಿಕ ಸಂಬಂಧಕ್ಕೆ ಹಿನ್ನೆಲೆಯಲ್ಲಿ ಯುವಕನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಚಾಮರಾಜನಗರ ತಾಲೂಕಿನ ಕೊಕ್ಕನಹಳ್ಳಿ ಎಲ್ಲಿ ಮಹೇಶ್ (26) ಎನ್ನುವ ಯುವಕನನ್ನು ಕುಮಾರಸ್ವಾಮಿ ಕೊಲೆ ಮಾಡಿದ್ದಾನೆ. ಕುಮಾರಸ್ವಾಮಿ ತಾಯಿಯ ಜೊತೆಗೆ ಮಹೇಶ್‌ಗೆ ಅಕ್ರಮ ಸಂಬಂಧ ಇತ್ತು ಎನ್ನಲಾಗಿದೆ. ಅಕ್ರಮ ಸಂಬಂಧ ಹೊಂದಿದ್ದಾನೆ ಎನ್ನುವ ಅನುಮಾನದಲ್ಲಿ ಮಹೇಶನನ್ನ ಕುಮಾರಸ್ವಾಮಿ ಕೊಲೆ ಮಾಡಿದ್ದಾನೆ. ಸ್ಥಳಕ್ಕೆ ಎಸ್ಪಿ, ಎಎಸ್ಪಿ ಹಾಗೂ ಡಿವೈಎಸ್ಪಿ ಭೇಟಿ ನೀಡಿ ಪರಿಶೀಲನೇ ನಡೆಸುತ್ತಿದ್ದು ರಾಮಸಮುದ್ರ ಪೂರ್ವ ಠಾಣೆಯಲ್ಲಿ ಪ್ರಕರಣ …

Read More »

ಬೆಂಗಳೂರಿನಲ್ಲಿ ಹಿಂದಿ ಮಾತನಾಡದ್ದಕ್ಕೆ ಡೆಲಿವರಿ ಬಾಯ್ ಮೇಲೆ ಹಲ್ಲೆ!

ಬೆಂಗಳೂರು, ಆಗಸ್ಟ್ 08: ನಗರದಲ್ಲಿ ಭಾಷಾ ವಿವಾದಕ್ಕೆ ಸಂಬಂಧಿಸಿದಂತೆ ಭೀಕರ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ನಗರದ ಯಲಹಂಕ ನ್ಯೂ ಟೌನ್‌ನಲ್ಲಿ ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಹಿಂದಿ ಭಾಷೆ ಮಾತನಾಡಲಿಲ್ಲ ಎಂಬ ಕಾರಣಕ್ಕೆ ಸ್ಥಳೀಯ ಫುಡ್ ಡೆಲಿವರಿ ಬಾಯ್ ಮೇಲೆ ಅನ್ಯ ರಾಜ್ಯದ ಮೂಲದವರು ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ. ಒಬ್ಬ ಯುವತಿ ಹಾಗೂ ಇಬ್ಬರು ಯುವಕರು ಸೇರಿ ನಡುರಸ್ತೆಯಲ್ಲೇ ಡೆಲಿವರಿ ಬಾಯ್ ಮುಖಕ್ಕೆ ತೀವ್ರವಾಗಿ ಪಂಚ್ …

Read More »

ದೇವಸ್ಥಾನ ಪ್ರವೇಶದ ವಿಚಾರಕ್ಕೆ ಬಾಲಕನ ಮೇಲೆ ಕತ್ತಿಯಿಂದ ಹಲ್ಲೆಗೆ ಯತ್ನ ಆರೋಪ: ದಲಿತ ದೌರ್ಜನ್ಯ ಪ್ರಕರಣ ದಾಖಲು

ಚಿಕ್ಕಮಗಳೂರು: ದೇವಸ್ಥಾನ ಪ್ರವೇಶಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿಗೆ ಸೇರಿದ 16 ವರ್ಷದ ಬಾಲಕನಿಗೆ ಅವಾಚ್ಯವಾಗಿ ನಿಂದಿಸಿ, ಕತ್ತಿಯಿಂದ ಹಲ್ಲೆ ನಡೆಸಲು ಯತ್ನಿಸಿದ ಆರೋಪದ ಮೇಲೆ ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ ಅಟ್ರಾಸಿಟಿ ಪ್ರಕರಣ ದಾಖಲಾಗಿದೆ. ಆಗಸ್ಟ್ 5ರಂದು ಸ್ನೇಹಿತನನ್ನು ಬಸ್‌ಗೆ ಹತ್ತಿಸಿ ಮನೆಗೆ ತೆರಳುತ್ತಿದ್ದ ವೇಳೆ ವಿಜಯ ಅಲಿಯಾಸ್ ವಿಜಯರಾಜ್ ಎಂಬಾತ ಕತ್ತಿಯಿಂದ ಹಲ್ಲೆಗೆ ಯತ್ನಿಸಿದ್ದಾನೆ ಎಂದು ಬಾಲಕ ದೂರಿನಲ್ಲಿ ಆರೋಪಿಸಿದ್ದಾನೆ. ಸ್ಥಳೀಯ ಮಹಿಳೆಯೊಬ್ಬರು ಬಾಲಕನನ್ನು ಪಕ್ಕಕ್ಕೆ ಎಳೆದ ಪರಿಣಾಮ …

Read More »

ಆಸ್ತಿಗಾಗಿ ಸ್ವಂತ ಅಣ್ಣನನ್ನೇ ಕಲ್ಲಿನಿಂದ ಜಜ್ಜಿ ಕೊಂದ ಪಾಪಿ ತಮ್ಮ

ಹಾವೇರಿ: ಆಸ್ತಿ ವಿವಾದದ ಹಿನ್ನೆಲೆಯಲ್ಲಿ ನಡೆದ ಜಗಳ ವಿಕೋಪಕ್ಕೆ ತಿರುಗಿ, ತಮ್ಮನೇ ಅಣ್ಣನನ್ನು ಕಲ್ಲಿನಿಂದ ಹೊಡೆದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಹಾನಗಲ್‌ನಲ್ಲಿ ನಡೆದಿದೆ. ಸಂತೋಷ್ ಮುರೇಗಪ್ಪ (30) ಕೊಲೆಯಾದವರು. ಅವರ ತಮ್ಮ ಕುಮಾರ್ (27) ಆರೋಪಿಯಾಗಿದ್ದು, ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ಸಂತೋಷ್ ಹಾಗೂ ಕುಮಾರ್ ನಡುವೆ 1 ಎಕರೆ ಜಮೀನಿನ ಹಂಚಿಕೆ ವಿಚಾರವಾಗಿ ಕೆಲ ದಿನಗಳಿಂದ ಗಲಾಟೆ ನಡೆಯುತ್ತಿತ್ತು. ಸಂತೋಷ್ ಊರಿಗೆ ಬಂದಾಗ ಇದೇ ವಿಚಾರಕ್ಕೆ ಮತ್ತೆ …

Read More »

ಐಟಿ ಉದ್ಯೋಗಿಗಳ ಮೇಲೆ ಬ್ಯಾಟ್‌ನಿಂದ ಹಲ್ಲೆ – ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿದ ಟೆಕಿ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇಬ್ಬರು ಐಟಿ ಉದ್ಯೋಗಿಗಳ ಮೇಲೆ ವ್ಯಕ್ತಿಯೊಬ್ಬ ಬೇಸ್‌ಬಾಲ್ ಬ್ಯಾಟ್‌ನಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ. ಸಂತ್ರಸ್ತರಾದ ಸಂದೀಪ್ ಮತ್ತು ಪ್ರಶಾಂತ್ ರಸ್ತೆಯಲ್ಲಿ ತೆರಳುತ್ತಿದ್ದಾಗ ಆರೋಪಿ ಅರುಣ್ ಎಸ್‌ಯುವಿ ನಿಲ್ಲಿಸಿ ಅವರನ್ನು ತಡೆದು, ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿದ್ದಾನೆ. ಇಬ್ಬರೂ ತಾವು ಭಾರತೀಯರು ಎಂದು ಉತ್ತರಿಸಿದರೂ, ಆರೋಪಿ ಐಡಿ ಕಾರ್ಡ್ ತೋರಿಸುವಂತೆ ಒತ್ತಾಯಿಸಿದ್ದಾನೆ. ಇದಕ್ಕೆ ಅವರು ಪ್ರಶ್ನಿಸಿದಾಗ, ಅರುಣ್ ಬ್ಯಾಟ್‌ನಿಂದ ಇಬ್ಬರ ಮೇಲೂ ಹಲ್ಲೆ ನಡೆಸಿದ್ದಾನೆ. ಹಲ್ಲೆಯಿಂದ …

Read More »

ಮಡಿಕೇರಿ | ಮೊಮ್ಮಗಳ ಮೇಲೆ ಅತ್ಯಾಚಾರ: ತಾತನಿಗೆ 20 ವರ್ಷ ಜೈಲು ಶಿಕ್ಷೆ

ಮಡಿಕೇರಿ: 15 ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರ ಎಸಗಿದ್ದ 60 ವರ್ಷದ ಅಪರಾಧಿಗೆ ಮಡಿಕೇರಿಯ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಲಯ 20 ವರ್ಷ ಕಠಿಣ ಶಿಕ್ಷೆ ವಿಧಿಸಿದೆ. ಬಾಲಕಿಯ ತಂದೆ, ತಾಯಿ ಮೃತಪಟ್ಟ ಬಳಿಕ ಆಕೆಯನ್ನು ಮಲತಂದೆ ಮಕ್ಕಳ ಗೃಹದಲ್ಲಿ ಬಿಟ್ಟು ಹೋಗಿದ್ದರು. ಬಳಿಕ ಬಾಲಕಿಯನ್ನು ನೋಡಿಕೊಳ್ಳುವುದಾಗಿ ಹೇಳಿ ಮನೆಗೆ ಕರೆದೊಯ್ದಿದ್ದ ತಾತ, 2024ರ ನವೆಂಬರ್‌ನಿಂದ 2025ರ ಮಾರ್ಚ್‌ವರೆಗೆ ಅತ್ಯಾಚಾರ ಎಸಗಿದ್ದಾನೆ. ಈ ವಿಚಾರವನ್ನು ಬಾಲಕಿ ಶಿಕ್ಷಕಿಗೆ …

Read More »

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಧರ್ಮಸ್ಥಳಕ್ಕೆ ಹೊರಟಿದ್ದ ಮೂವರು ಸಾವು

ಚಿಕ್ಕಮಗಳೂರು: ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರದಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದು ತಮಕೂರು ಜಿಲ್ಲೆಯ ಒಂದೇ ಗ್ರಾಮದ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗುಬ್ಬಿ ತಾಲ್ಲೂಕಿನ ಹಳಿಲ್ ಗದ್ದೆ ನಿವಾಸಿಗಳಾದ ಜ್ಞಾನೇಶ್(28), ಮೋಹನ್(30) ಮತ್ತು ಗುರುಕಿರಣ್(28) ಮೃತಪಟ್ಟವರು. ಪ್ರೇಮಕುಮಾರ್ ಮತ್ತು ಹೃತಿಕ್ ಗಾಯಗೊಂಡಿದ್ದಾರೆ. ಒಂದೇ ಊರಿನ ಯುವಕರು ಧರ್ಮಸ್ಥಳಕ್ಕೆ ಮಾರುತಿ ಸ್ವಿಫ್ಟ್ ಕಾರಿನಲ್ಲಿ ಹೊರಟಿದ್ದರು. ಬೆಳಗಿನ ಜಾವ ಕೊಟ್ಟಿಗೆಹಾರ ಬಳಿ ಬಂದಾಗ ಚಾಲಕ ನಿದ್ರೆಯಲ್ಲಿ ಇದ್ದಿದ್ದರಿಂದ …

Read More »

1.50 ಲಕ್ಷ ಲಂಚ ಪಡೆಯುವಾಗ ಸಿಕ್ಕಿ ಬಿದ್ದ ಬೆಸ್ಕಾಂ ಅಧಿಕಾರಿಗಳು;​ ಲೋಕಾಯುಕ್ತ ರೇಡ್​​ ವೇಳೆ ಹೈಡ್ರಾಮಾ

ಬೆಂಗಳೂರು (ಆ.08): ಹೊಸದಾಗಿ ನಿರ್ಮಿಸಲಾದ ಕಟ್ಟಡಕ್ಕೆ ವಿದ್ಯುತ್ ಸಂಪರ್ಕ ನೀಡಲು ₹1.50 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬೆಸ್ಕಾಂನ ಎಇಇ ಹಾಗೂ ಜೆಇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಹುಳಿಮಾವು ಬೆಸ್ಕಾಂ ಕಚೇರಿಯ ಎಇಇ ನಾಗರತ್ನ ಹಾಗೂ ಜೆಇ ಸ್ವಾಮಿ ಲಂಚದ ಹಣ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ರೆಡ್‌ಹ್ಯಾಂಡ್ ಆಗಿ ವಶಕ್ಕೆ ಪಡೆದಿದ್ದಾರೆ. ಗುತ್ತಿಗೆದಾರ ಅರ್ಷದ್ ಉಲ್ಲಾ ನೀಡಿದ ದೂರಿನ ಆಧಾರದ ಮೇಲೆ ಈ ದಾಳಿ ನಡೆದಿದ್ದು, …

Read More »

ಕಾಂಗ್ರೆಸ್ ಮುಖಂಡನ ಹತ್ಯೆ: ಹಂತಕನ ಮೇಲೆ ಪೊಲೀಸರಿಂದ ಫೈರಿಂಗ್

ಉಡುಪಿ: ಕಾಂಗ್ರೆಸ್ ಮುಖಂಡ ಹಾಗೂ ಉದ್ಯಮಿ ಡೇವಿಡ್ ಡಿಸೋಜ ಕೊಲೆ ಪ್ರಕರಣದ ಪ್ರಮುಖ ಆರೋಪಿ ಉತ್ತರ ಪ್ರದೇಶ ಮೂಲದ ಶೂಟರ್ ರಾಜು ಮೇಲೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ. ಬೈಂದೂರು ತಾಲೂಕಿನ ಒತ್ತಿನಣೆ ಪ್ರದೇಶದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ರಾಜು ಬಲಗಾಲಿಗೆ ಗುಂಡೇಟು ತಗುಲಿದೆ. ಮೂವರು ಆರೋಪಿಗಳನ್ನು ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಆರೋಪಿಗಳು ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ ಎಸ್‌ಐ ತೇಜಸ್ವಿ ಮತ್ತು ಪ್ರಸನ್ನ ನೇತೃತ್ವದ ತಂಡ …

Read More »