Breaking News

BigTv News

ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ

ರಾಯಚೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಯಚೂರಿನಲ್ಲಿಂದು ಸಾರ್ವಜನಿಕ ಅಹವಾಲುಗಳನ್ನು ಸ್ವೀಕರಿಸಿ ಆಲಿಸಿದರು. ವಿವಿದೆಡೆಯಿಂದ ಆಗಮಿಸಿದ್ದ ಸಾರ್ವಜನಿಕರು ಮುಖ್ಯಮಂತ್ರಿಗಳಿಗೆ ಅಹವಾಲು ಸಲ್ಲಿಸಿದರು. ಸರ್ಕಾರಿ ನೌಕರರು ವರ್ಗಾವಣೆಗಾಗಿ ಹಲವರು ಮನವಿ ಸಲ್ಲಿಸಿದರು, ಅನಾರೋಗ್ಯದಿಂದ ಬಳಲುತ್ತಿರುವವರು ಆರ್ಥಿಕ ನೆರವು ಕೋರಿ ಅರ್ಜಿ ಸಲ್ಲಿಸಿದರು. ಹಲವರು ತಮಗೊಂದು ಸರ್ಕಾರಿ ಕೆಲಸ ಕೊಡಿಸುವಂತೆ ಕೋರಿದರು.

Read More »

ಕನ್ನಡ ಅಗ್ರ ಭಾಷೆಯಾಗಲಿ, ಕರ್ನಾಟಕ ಕನ್ನಡಮಯವಾಗಲಿ: ಸಿಎಂ ಸಿದ್ದರಾಮಯ್ಯ

ರಾಯಚೂರು: ಕರ್ನಾಟಕ ಸಂಪೂರ್ಣ ಕನ್ನಡಮಯವಾಗಲಿ ಕನ್ನಡ ನೆಲ, ಜಲ, ಸಂಸ್ಕೃತಿ, ಭಾಷೆ, ಭೂಮಿ ಎಲ್ಲವೂ ಕನ್ನಡಮಯವಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಕನ್ನಡ ಸಂಭ್ರಮ 50ರ ಅಂಗವಾಗಿ ಆಯೋಜಿಸಿದ್ದ ಗೋಕಾಕ್ ಚಳವಳಿ ಹಿನ್ನೋಟ ಮುನ್ನೋಟ ಬೃಹತ್ ಸಮಾವೇಷವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಲ್ಲಿ ನೆಲೆಸಿರುವ ಎಲ್ಲರೂ ಕನ್ನಡಿಗರೇ ಮನೆ ಭಾಷೆ ಯಾವುದೇ ಇದ್ದರೂ ವ್ಯಾವಹಾರಿಕ ಭಾಷೆ ಕನ್ನಡವಾಗಲಿ. …

Read More »

ಯುವಜನರಿಗೆ ತರಬೇತಿ ಅವಕಾಶ ಒದಗಿಸುವ ಪಿಎಂ ಇಂಟರ್ನ್ ಶಿಪ್ ಯೋಜನೆಗೆ ಅಭೂತಪೂರ್ವ ಪ್ರತಿಕ್ರಿಯೆ

ನವದೆಹಲಿ: ವಿವಿಧ ವೃತ್ತಿಗಳಿಗೆ ಸಂಬಂಧಿಸಿದಂತೆ ಯುವಜನರಿಗೆ ತರಬೇತಿ ಅವಕಾಶ ಒದಗಿಸುವ ಬಗ್ಗೆ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಪ್ರಕಟಿಸಿದ್ದ ಪಿಎಂ ಇಂಟರ್ನ್‌ಶಿಪ್‌ ಯೋಜನೆಗೆ ಅಭೂತ ಪೂರ್ವ ಪ್ರತಿಕ್ರಿಯ ವ್ಯಕ್ತವಾಗಿದೆ. ಸರ್ಕಾರದ ಪಿಎಂ ಇಂಟರ್ನ್‌ಶಿಪ್ ಕಂಪನಿಗಳ ಪಟ್ಟಿಯಲ್ಲಿ ಗಮನಾರ್ಹವಾದ ಏರಿಕೆ ಕಂಡಿದೆ, ಶುಕ್ರವಾರ ಮಧ್ಯಾಹ್ನ 3 ಗಂಟೆಗೆ 2,200 ಕ್ಕೂ ಹೆಚ್ಚು ಅವಕಾಶಗಳು ಲಭ್ಯವಿವೆ ಎಂದು ಮೂಲಗಳು ದೃಢಪಡಿಸಿವೆ. ಗುರುವಾರ ಸೇರ್ಪಡೆಗೊಂಡ 111 ಕಂಪನಿಗಳ ಜೊತೆಗೆ 50 ಹೊಸ ಕಂಪನಿಗಳು ಸೇರ್ಪಡೆಯಾಗಿವೆ. ಬ್ರಿಟಾನಿಯಾ, …

Read More »

ಹಿಂದುಳಿದ ವರ್ಗಗಳ ಆಯೋಗ ವರದಿ ಅನುಷ್ಠಾನಗೊಳಿಸಲು ಬಸವರಾಜ ರಾಯರಡ್ಡಿ ಆಗ್ರಹ

ಕೊಪ್ಪಳ: ರಾಜ್ಯದ ಎಲ್ಲ ಸಮುದಾಯಗಳ ಜನರ ಆರ್ಥಿಕ, ಶೈಕ್ಷಣಿಕ ಮತ್ತು ಸಾಮಾಜಿಕ ಸ್ಥಿತಿಗತಿ ಬಗ್ಗೆ ಕ್ರಮ ತಿಳಿಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಂದು ವಾರದ ಒಳಗೆ ಹಿಂದುಳಿದ ವರ್ಗಗಳ ಆಯೋಗದ ವರದಿ ಬಹಿರಂಗಗೊಳಿಸಬೇಕು, ನವೆಂಬರ್ ‌ಒಂದರಿಂದ ಅನುಷ್ಠಾನಗೊಳಿಸಬೇಕು ಎಂದು ಸಿ.ಎಂ. ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಆಗ್ರಹಿಸಿದರು. ತಾಲ್ಲೂಕಿನ ಗಿಣಗೇರಾದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಆಯೋಗದ ವರದಿ ಅನುಷ್ಠಾನಕ್ಕೆ ತರುವುದರಿಂದ ಸಾಮಾಜಿಕ ನ್ಯಾಯ ಸಿಗಲಿದೆ. ಮುಂದಿನ ವಾರದೊಳಗೆ ಸಂಪುಟ ಸಭೆಯಲ್ಲಿ ಅನುಮೋದನೆ …

Read More »

ವಿದ್ಯುತ್‍ ಉಪಕೇಂದ್ರದ ಕಾಮಗಾರಿ ಕಳಪೆ: ತನಿಖೆ ನಡೆಸಲು ಶಾಸಕ ಪ್ರಭು ಚವ್ಹಾಣ್ ಆಗ್ರಹ

ಔರಾದ್: ತಾಲ್ಲೂಕಿನ ನಾಗೂರ(ಬಿ) ಗ್ರಾಮದ ಬಳಿ ₹118 ಕೋಟಿ ಮೊತ್ತದಲ್ಲಿ ನಿರ್ಮಾಣವಾಗುತ್ತಿರುವ 220 ಕೆ.ವಿ. ವಿದ್ಯುತ್ ಉಪ ಕೇಂದ್ರದ ಕಾಮಗಾರಿ ಕಳಪೆಯಾಗಿದ್ದು, ಈ ಸಂಬಂಧ ತನಿಖೆ ನಡೆಸಬೇಕು ಎಂದು ಶಾಸಕ ಪ್ರಭು ಚವಾಣ್ ಆಗ್ರಹಿಸಿದ್ದಾರೆ. ನಂಜುಂಡಪ್ಪ ವರದಿಯಂತೆ ಹಿಂದುಳಿದ ಪ್ರದೇಶವಾದ ಇಲ್ಲಿ ರೈತರಿಗೆ ನಿಯಮಿತ ವಿದ್ಯುತ್ ಪೂರೈಕೆ ಹಾಗೂ ಸಣ್ಣಪುಟ್ಟ ಕಾರ್ಖಾನೆ ಸ್ಥಾಪಿಸಿ ಜನರಿಗೆ ಉದ್ಯೋಗ ಕೊಡುವ ನಿಟ್ಟಿನಲ್ಲಿ ಬಹಳ ಪ್ರಯತ್ನಗಳ ನಂತರ ವಿದ್ಯುತ್ ಉಪಕೇಂದ್ರಕ್ಕೆ ಮಂಜೂರಾತಿ ಸಿಕ್ಕಿದೆ. ಆದರೆ, …

Read More »

ಜಾತಿಗಣತಿ ಸದ್ಯಕ್ಕೆ ಜಾರಿಯಿಲ್ಲ, ಈ ಕುರಿತು ಚರ್ಚೆ ನಡೆಸಿದ್ದೇವೆ: ಸಿಎಂ ಸಿದ್ದರಾಮಯ್ಯ

ರಾಯಚೂರು: ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಗಣತಿ ವರದಿಯನ್ನು ಸಂಪುಟದಲ್ಲಿ ಚರ್ಚಿಸಿ, ಸದನದಲ್ಲೂ ಮಂಡಿಸಲಾಗುವುದು ಎಂದಿದ್ದ ಸಿಎಂ ಸಿದ್ದರಾಮಯ್ಯ ಅವರು ಇದೀಗ, ಜಾತಿ ಗಣತಿಯನ್ನು ನಾವು ತಕ್ಷಣಕ್ಕೆ ಜಾರಿ ಮಾಡುವುದಾಗಿ ಹೇಳಿಲ್ಲ ಈಗ ಚರ್ಚೆ ಮಾಡುತ್ತಿದ್ದೇವಷ್ಟೇ ಎಂದು ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಜಾತಿ ಗಣತಿಗೆ ಆಕ್ಷೇಪ ವ್ಯಕ್ತವಾಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಜಾತಿ ಗಣತಿಯ ಬಗ್ಗೆ ಮತ್ತೊಮ್ಮೆ ಚರ್ಚೆ ನಡೆಸಿ ಏನಾದರೂ ಲೋಪಗಳಿದ್ದರೆ ಸರಿಪಡಿಸಲಾಗುವುದು ಎಂದು ತಿಳಿಸಿದರು.

Read More »

ತುಮಕೂರು ಜಿಲ್ಲೆಯಲ್ಲಿ ಹಸಿರು ಹೊದಿಕೆಯ ಪ್ರಮಾಣ ಶೇ.15 ರಷ್ಟು ಇಳಿಕೆ: ಸಚಿವ ಪರಮೇಶ್ವರ್ ಬೇಸರ

ತುಮಕೂರು: ಈಗಾಗಲೇ ಜಿಲ್ಲೆಯ ಅರ್ಧಭಾಗ ಒಣಗಿದ್ದು, ಹಸಿರು ಹೊದಿಕೆ ಪ್ರಮಾಣ ಶೇ 15ಕ್ಕೆ ಇಳಿಕೆಯಾಗಿದೆ ಎಂದು ಹೇಳಲು ನಾಚಿಕೆಯಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಅವರು ಅರಣ್ಯ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ನಗರದಲ್ಲಿ ಅರಣ್ಯ ಇಲಾಖೆಯಿಂದ ಹಮ್ಮಿಕೊಂಡಿದ್ದ 70ನೇ ವನ್ಯಜೀವಿ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಜಿಲ್ಲೆಯಲ್ಲಿ ಮುಂದಿನ ಐದು ವರ್ಷದಲ್ಲಿ ಹಸಿರು ಹೊದಿಕೆ ಪ್ರಮಾಣ ಶೇ 20ಕ್ಕೆ ಹೆಚ್ಚಿಸಬೇಕು ಎಂದು ಸೂಚಿಸಿದರು. ಪ್ರಪಂಚದಲ್ಲಿ ಹಸಿರು ಹೊದಿಕೆ …

Read More »

ಇಸ್ರೇಲ್ ಮತ್ತು ಇರಾನ್ ಸಂಘರ್ಷ: ಏರಿಕೆಯ ಹಾದಿ ಹಿಡಿದ ತೈಲ ಬೆಲೆ

ನವದೆಹಲಿ: ಇಸ್ರೇಲ್‌ ಮತ್ತು ಇರಾನ್‌ ನಡುವೆ ಉಲ್ಬಣಗೊಂಡಿರುವ ಸಂಘರ್ಷದಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಪೂರೈಕೆಯಲ್ಲಿ ಅನಿಶ್ಚಿತತೆ ತಲೆದೋರಿದೆ ಹಾಗಾಗಿ, ತೈಲ ಬೆಲೆ ಏರಿಕೆಯ ಹಾದಿ ಹಿಡಿದಿದೆ. ಇರಾನ್‌ನ ತೈಲ ನಿಕ್ಷೇಪ ಮತ್ತು ಸಂಗ್ರಹಾಗಾರಗಳ ಮೇಲೆ ಇಸ್ರೇಲ್‌ ವಾಯುದಾಳಿ ನಡೆಸಿತ್ತು. ಇಸ್ರೇಲ್‌ನ ಈ ದಾಳಿಗೆ ಅಮೆರಿಕದ ಅಧ್ಯಕ್ಷ ಜೋ ಬೈಡನ್‌ ಬೆಂಬಲ ಘೋಷಿಸಿದ ಬೆನ್ನಲ್ಲೇ ಗುರುವಾರ ಬ್ರೆಂಟ್‌ ಕಚ್ಚಾ ತೈಲದ ಬೆಲೆಯಲ್ಲಿ ಶೇ 5ರಷ್ಟು ಏರಿಕೆಯಾಗಿತ್ತು. ಶುಕ್ರವಾರ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ …

Read More »

ಗ್ರಾ.ಪಂ ನೌಕರರ ಮುಷ್ಕರ: ವಿಜಯನಗರ ಜಿಲ್ಲೆಯಾದ್ಯಂತ ಗ್ರಾಮೀಣ ಆಡಳಿತ ಸೇವೆಗಳು ಸಂಪೂರ್ಣ ಸ್ಥಗಿತ

ಹೊಸಪೇಟೆ: ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ಎಲ್ಲಾ ವೃಂದ ಸಂಘಗಳು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟದ ನೇತೃತ್ವದಲ್ಲಿ ಶುಕ್ರವಾರದಿಂದ ಅನಿರ್ದಿಷ್ಟಾವಧಿಗೆ ಮುಷ್ಕರ ಆರಂಭವಾಗಿರುವದರಿಂದ ಜಿಲ್ಲೆಯಲ್ಲಿ ಗ್ರಾಮೀಣ ಸೇವೆಗಳು ಸಂಪೂರ್ಣ ಸ್ಥಗಿತಗೊಂಡಿವೆ. ಶುಕ್ರವಾರ ಆನ್‌ಲೈನ್ ಸೇವೆಗಳು ಸಂಪೂರ್ಣ ಸ್ಥಗಿತಗೊಂಡಿದ್ದವು ಹೆಚ್ಚಿನ ಪಿಡಿಒಗಳು ಬೆಂಗಳೂರಿಗೆ ತೆರಳಿದ್ದರು. ಬೆಂಗಳೂರಿಗೆ ಹೋಗದವರು ಕಚೇರಿಗೆ ಬಂದಿಲ್ಲ ಇಂದಿನ ಮಟ್ಟಿಗೆ ಸಾರ್ವಜನಿಕರಿಗೆ ಅಂತಹ ತೊಂದರೆ ಉಂಟಾದ …

Read More »

ಬಳ್ಳಾರಿ ಜಿಲ್ಲೆಯ ವಿವಿಧೆಡೆ ಮಳೆ ಆರ್ಭಟ: ನೂರಾರು ಗಣಿ ಲಾರಿಗಳು ಭಾಗಶಃ ಮುಳುಗಡೆ

ಬಳ್ಳಾರಿ: ಜಿಲ್ಲೆಯ ವಿವಿಧೆಡೆ ಶುಕ್ರವಾರ ರಾತ್ರಿ ಭರ್ಜರಿ ಮಳೆಯಾಗಿದ್ದು ಮಳೆ ಆರ್ಭಟಕ್ಕೆ ಹಳ್ಳಕೊಳ್ಳಗಳು ಉಕ್ಕಿ ಹರಿಯುತ್ತಿವೆ. ಭಾರೀ ಮಳೆಯ ಪರಿಣಾಮ ಸಂಡೂರಿನ ಗಣಿ ಪ್ರದೇಶದಲ್ಲಿ ಅವಾಂತರ ಸೃಷ್ಟಿಯಾಗಿದೆ ಮಳೆ ನೀರಿನಲ್ಲಿ ನೂರಾರು ಗಣಿ ಲಾರಿಗಳು ಭಾಗಶಃ ಮುಳುಗಡೆಯಾಗಿವೆ, ಲಾರಿಗಳು ಜಲಾವೃತಗೊಂಡ ಹಿನ್ನೆಲೆ ಇಡೀ ರಾತ್ರಿ ಚಾಲಕರು ಪರದಾಡಿದ್ದಾರೆ. ಸಂಡೂರಿನ ನಂದಿಹಳ್ಳಿ ವಾಶಿಂಗ್ ಪ್ಲಾಂಟ್ ಬಳಿ ಮಳೆ ಅವಾಂತರಕ್ಕೆ ಲಾರಿ ಚಾಲಕರು ನಲುಗಿ ಹೋಗಿದ್ದಾರೆ. ಕುಮಾರಸ್ವಾಮಿ ಬೆಟ್ಟದಲ್ಲಿ ಸುರಿದ ಮಳೆಯಿಂದ ಅವಾಂತರ …

Read More »