Breaking News

BigTv News

ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಅತಿಥಿ ಶಿಕ್ಷಕರ ಹಂಚಿಕೆ ಮಾಡಿ ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು: ಕರ್ನಾಟಕದ ಶಾಲಾ ಶಿಕ್ಷಣ ಇಲಾಖೆ ಆಯುಕ್ತ ಕಛೇರಿ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಅತಿಥಿ ಶಿಕ್ಷಕರ ಹಂಚಿಕೆ ಮಾಡಿ ಆದೇಶಿಸಿದೆ, ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರುಗಳನ್ನು ನೇಮಕ ಮಾಡಿಕೊಳ್ಳುವ ಕುರಿತು 2ನೇ ಹಂತದ ಹೆಚ್ಚುವರಿ ಅತಿಥಿ ಶಿಕ್ಷಕರ ಹಂಚಿಕೆ ಬಗ್ಗೆ ಆದೇಶಿಸಲಾಗಿದೆ. ಈ ಕುರಿತು ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಜ್ಞಾಪನಾ ಪತ್ರವನ್ನು ಹೊರಡಿಸಿದ್ದಾರೆ. ಈ ಪತ್ರ 2024-25ನೇ ಸಾಲಿನ ಶೈಕ್ಷಣಿಕ …

Read More »

ಅವ್ಯವಸ್ಥೆಯ ಆಗರವಾದ ಜಂಬಗಿ ಗ್ರಾ.ಪಂ ಗೆ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ

ಬೀದರ್​: ತಮ್ಮ ಸತ್ಯಮಾರ್ಗದಿಂದ ಇಡೀ ವಿಶ್ವಕ್ಕೆ ಚಿರಪರಿಚಿತರಾದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಹೆಸರಿನಲ್ಲಿ ನಮ್ಮ ರಾಜ್ಯ ಸರ್ಕಾರ ವಿಶೇಷ ಸಾಧನೆ ಮಾಡಿದ ಗ್ರಾಮ ಪಂಚಾಯಿತಿಗಳಿಗೆ ಪ್ರಶಸ್ತಿ ನೀಡಿ ಗೌರವಿಸುತ್ತಿದೆ. ಆದ್ರೆ, ಬೀದರ್​ನಲ್ಲಿ ಗಾಂಧಿ ಗ್ರಾಮ ಪುರಸ್ಕಾರ ಪಡೆದ ಔರಾದ್ ತಾಲೂಕಿನ ಜಂಬಗಿ ಗ್ರಾಮ ಪಂಚಾಯತ್ ಸರ್ಕಾರಕ್ಕೆ ‌ಚಳ್ಳೆ ಹಣ್ಣು ತಿನ್ನಿಸಿ, ಗಾಂಧೀಜಿ ಅವರ ಹೆಸರಿಗೆ ಕಳಂಕ ತರುವ ಕೆಲಸಕ್ಕೆ ಮುಂದಾಗಿದೆ. ಹೌದು, ಸ್ವಚ್ಛ ಭಾರತ ಅಭಿಯಾನದ ಹೆಸರಿನಲ್ಲಿ ಬೀದರ್ …

Read More »

ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ 18ನೇ ಕಂತಿನ ಹಣ ಇಂದು ಬಿಡುಗಡೆ

ನವದೆಹಲಿ: ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿಯಡಿ 18ನೇ ಕಂತಿನ ₹20 ಸಾವಿರ ಕೋಟಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಬಿಡುಗಡೆ ಮಾಡಲಿದ್ದಾರೆ. ದೇಶದ 9.4 ಕೋಟಿಗೂ ಹೆಚ್ಚು ರೈತರಿಗೆ ಈ ಯೋಜನೆಯಡಿ ಸೌಲಭ್ಯ ಸಿಗಲಿದೆ. ಮಹಾರಾಷ್ಟ್ರದ ವಾಶಿಮ್‌ನಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಫಲಾನುಭವಿಗಳ ಬ್ಯಾಂಕ್‌ ಖಾತೆಗೆ ನೇರ ನಗದು ವರ್ಗಾವಣೆಗೆ (ಡಿಬಿಟಿ) ಚಾಲನೆ ನೀಡಲಿದ್ದಾರೆ ಎಂದು ಕೇಂದ್ರ ಸರ್ಕಾರ ಶುಕ್ರವಾರ ತಿಳಿಸಿದೆ. ಕಿಸಾನ್ ಸಮ್ಮಾನ್ ಯೋಜನೆಯ 18ನೇ ಕಂತಿನ …

Read More »

ಹರಿಯಾಣದ 90 ವಿಧಾನಸಭಾ ಕ್ಷೇತ್ರಗಳಿಗೆ ಇಂದು ಮತದಾನ

ಚಂಡೀಗಢ: ಭಾರೀ ಕುತೂಹಲ ಮೂಡಿಸಿದ್ದ ಹರಿಯಾಣದ ವಿಧಾನಸಭಾ ಚುನಾವಣಾ ಕದನ ಮಹತ್ವದ ಘಟ್ಟ ತಲುಪಿದ್ದು ಇಂದು ಹರಿಯಾಣದ ಎಲ್ಲಾ 90 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದೆ. ಇಂದು ಒಂದೇ ಹಂತದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ 90 ಶಾಸಕರನ್ನು ಆಯ್ಕೆ ಮಾಡಲು 2 ಕೋಟಿಗೂ ಹೆಚ್ಚು ಮತದಾರರು ತಮ್ಮ ಹಕ್ಕು ಚಲಾಯಿಸಲು ಮುಂದಾಗಿದ್ದು, ಬೆಳಗ್ಗೆ 7 ಗಂಟೆಗೆ ಆರಂಭಗೊಂಡಿರುವ ಮತದಾನ ಪ್ರಕ್ರಿಯೆ ಸಂಜೆ 6 ಗಂಟೆಯವರೆಗೆ ನಡೆಯಲಿದೆ. ಆಡಳಿತಾರೂಢ …

Read More »

ಗುಡುಗು ಸಹಿತ ಮಳೆ: ಸಿಡಿಲು ಬಡಿದು ರೈತ ಸಾವು

ಮಸ್ಕಿ: ತಾಲ್ಲೂಕಿನ ಬಳಗಾನೂರು ಗ್ರಾಮದಲ್ಲಿ ಶುಕ್ರವಾರ ಸಂಜೆ ಸಿಡಿಲು ಬಡಿದು ರೈತರೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಮಲ್ಲಪ್ಪ (54) ಎಂದು ಗುರುತಿಸಲಾಗಿದೆ. ಶುಕ್ರವಾರ ಸಂಜೆ ಬಳಗಾನೂರು ಸುತ್ತಮುತ್ತ ಗುಡುಗು ಸಹಿತ ಮಳೆಯಾಗಿದೆ. ಹೊಲದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ಮಲ್ಲಪ್ಪ ಮಳೆ ಬಂದಿದ್ದರಿಂದ ಮರದ ಕೆಳಗೆ ನಿಂತಿದ್ದರು. ಇದೇ ಸಂದರ್ಭದಲ್ಲಿ ಮರಕ್ಕೆ ಸಿಡಿಲು ಅಪ್ಪಳಿಸಿದ್ದು, ಮಲ್ಲಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಕಂದಾಯ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಬಳಗಾನೂರು ಠಾಣೆಯಲ್ಲಿ …

Read More »

ವಕ್ಫ್ ತಿದ್ದುಪಡಿ ಮಸೂದೆ ಜಾರಿಗೆ: ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸಲು ಕೇಂದ್ರ ಸರ್ಕಾರ ಬದ್ಧ

ನಾಗಪುರ: ಮುಂಬರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ವಕ್ಫ್ ತಿದ್ದುಪಡಿ ಮಸೂದೆಯನ್ನು ತರುವ ಮೂಲಕ ಮುಸ್ಲಿಂ ಸಮುದಾಯದೊಳಗಿನ ಅಂಚಿನಲ್ಲಿರುವ ವರ್ಗಗಳ ಹಕ್ಕುಗಳನ್ನು ರಕ್ಷಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಕೇಂದ್ರ ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಹೇಳಿದರು. ಅವರು ನಾಗ್ಪುರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಕಾಯ್ದೆಯ ಹಿಂದಿನ ಉದ್ದೇಶವನ್ನು ವಿವರಿಸಿದ ಸಚಿವರು, ಬೆರಳೆಣಿಕೆಯಷ್ಟು ಶ್ರೀಮಂತ ಮುಸ್ಲಿಮರು ವಕ್ಫ್‌ ನಲ್ಲಿರುವ ಪ್ರಮುಖ ಆಸ್ತಿಗಳನ್ನು ವಶಪಡಿಸಿಕೊಂಡಿದ್ದಾರೆ. ಮುಸ್ಲಿಂ ಸಮುದಾಯದ ಇತರ ಅಂಚಿನಲ್ಲಿರುವ …

Read More »

ಪಿಡಿಒಗಳಿಂದ ಅನಿರ್ದಿಷ್ಟಾವಧಿ ಮುಷ್ಕರ: ರಾಜ್ಯಾದ್ಯಂತ ಗ್ರಾ.ಪಂ. ಸೇವೆ ಸ್ಥಗಿತ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಅಧಿಕಾರಿಗಳ ಹಾಗೂ ನೌಕರರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ರಾಜ್ಯಾದ್ಯಂತ ಸೇವೆಯನ್ನು ಸ್ಥಗಿತಗೊಳಿಸಿ ಫ್ರೀಡಂ ಪಾರ್ಕ್‌ನಲ್ಲಿ ಕ‌ರ್ನಾಟಕ ರಾಜ್ಯ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಹಾಗೂ ಸಂಬಂಧಪಟ್ಟ ಸಂಘಟನೆಗಳು ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿವೆ. ಪಂಚಾಯತ್‌ಗಳ ಜನಸಂಖ್ಯೆ ಎರಡರಿಂದ ಮೂರು ಪಟ್ಟು ಹೆಚ್ಚಾಗಿದೆ ಆದರೆ ಸಿಬಂದಿ ಸಂಖ್ಯೆ ಮಾತ್ರ 30 ವರ್ಷಗಳ ಹಿಂದಿನ ಜನಸಂಖ್ಯೆಯ ಅನುಪಾತದಲ್ಲಿದೆ. ಸಿಬ್ಬಂದಿ ಕೊರತೆಯಿಂದ ಹೆಚ್ಚುವರಿ ಹೊರೆ ಬೀಳುತ್ತಿದೆ ದಿನದಿಂದ ದಿನಕ್ಕೆ …

Read More »

ರೈತರಿಂದ ಖರೀದಿಸುವ ಹಾಲಿನ ದರ ಕಡಿತ: 5 ತಿಂಗಳಿಂದ ಬಿಡುಗಡೆಯಾಗದ ಸಹಾಯಧನ

ಬೆಂಗಳೂರು: ಹಾಲು ಒಕ್ಕೂಟಗಳು ರೈತರಿಗೆ ನೀಡುವ ಹಾಲು ಖರೀದಿ ದರ ಕಡಿತಗೊಳಿಸಲಾಗಿದೆ ಮೊದಲೇ ಸಂಕಷ್ಟದಲ್ಲಿರುವ ಹೈನು ಉತ್ಪಾದಕರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಒಕ್ಕೂಟಗಳು ನಷ್ಟದಲ್ಲಿರುವ ಕಾರಣ ದರ ಕಡಿತ ಅನಿವಾರ್ಯವೆಂದು ಆಡಳಿತ ಮಂಡಳಿಗಳು ಹೇಳಿವೆ ಪಶು ಆಹಾರ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಇದೇ ಸಂದರ್ಭದಲ್ಲಿ ಹಾಲಿನ ದರ ಕಡಿತ ಮಾಡಿರುವುದು ಹಾಲು ಉತ್ಪಾದಕರಿಗೆ ಬರೆ ಎಳೆದಂತಾಗಿದೆ. ಅಲ್ಲದೆ, ಕಳೆದ ಐದು ತಿಂಗಳಿನಿಂದ ಸರ್ಕಾರ ನೀಡುವ ಸಹಾಯಧನವೂ ರೈತರಿಗೆ …

Read More »

ಕಲ್ಯಾಣ ಕರ್ನಾಟಕ ಭಾಗದ ಶೈಕ್ಷಣಿಕ ಗುಣಮಟ್ಟ ಸುಧಾರಿಸಲು ತಜ್ಞರ ಸಮಿತಿ ರಚನೆ

ಕಲಬುರಗಿ: ಸತತವಾಗಿ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಹಿಂದುಳಿಯುತ್ತಿರುವ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಶಿಕ್ಷಣ ತಜ್ಞ ಗುರುರಾಜ ಕರಜಗಿ ನೇತೃತ್ವದಲ್ಲಿ ಆರು ಜನ ತಜ್ಞರ ಸಮಿತಿಯನ್ನು ರಚಿಸಲಾಗಿದೆ ಎಂದು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಅಧ್ಯಕ್ಷ ಡಾ.ಅಜಯ್ ಸಿಂಗ್ ತಿಳಿಸಿದರು. ಮಂಡಳಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರಜಗಿ ಅವರೊಂದಿಗೆ ಅಜೀಂ ಪ್ರೇಮ್‌ಜಿ ಪ್ರತಿಷ್ಠಾನದ ಡಾ. ರುದ್ರೇಶ್, ಹಿರೇಮಠ ಸ್ವಾಮೀಜಿ, ಬಳ್ಳಾರಿಯ ಫಾದರ್ ಫ್ರಾನ್ಸಿಸ್, ಬೀದರ್‌ನ …

Read More »

ರಾಜ್ಯದ ದೊಡ್ಡ ಜಿಲ್ಲೆಗಳು, ತಾಲೂಕುಗಳನ್ನು ವಿಂಗಡಿಸಬೇಕು: ಸಂಸದ ಜಗದೀಶ ಶೆಟ್ಟರ್‌

ಬೆಳಗಾವಿ: ಕರ್ನಾಟಕದಲ್ಲಿ ಬಳ್ಳಾರಿ ಜಿಲ್ಲೆಯು ವಿಭಜನೆಗೊಂಡು ಹೊಸ ಜಿಲ್ಲೆಯಾದ ವಿಜಯನಗರ ಮೂರು ವರ್ಷಗಳ ಹಿಂದಷ್ಟೇ ಅಸ್ತಿತ್ವಕ್ಕೆ ಬಂದಿದೆ. ಇದರ ಬೆನ್ನಲ್ಲೆ ಮೊನ್ನೆಯಷ್ಟೇ ರಾಜ್ಯದ ದೊಡ್ಡ ಜಿಲ್ಲೆ ಬೆಳಗಾವಿಯನ್ನು ವಿಭಜಿಸಬೇಕು ಎಂಬ ಮಾತು ಕೇಳಿ ಬಂದಿತ್ತು. ಇದೀಗ ರಾಜ್ಯದ ದೊಡ್ಡ ದೊಡ್ಡ ಜಿಲ್ಲೆಗಳು, ತಾಲೂಕುಗಳನ್ನು ವಿಂಗಡಣೆ ಮಾಡಬೇಕು ಎಂಬ ಮಾತು ಬಿಜೆಪಿ ಸಂಸದರಿಂದಲೇ ಕೇಳಿ ಬಂದಿದೆ. ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಅವರು, ಬೆಳಗಾವಿ ಜಿಲ್ಲೆಯ …

Read More »