Breaking News

BigTv News

ಮುಡಾ ಪ್ರಕರಣದಲ್ಲಿ ವಿಪಕ್ಷ ನಾಯಕರು ಹುಚ್ಚರ ರೀತಿ ಆಡುತ್ತಿದ್ದಾರೆ: ಸಚಿವ ಭೋಸರಾಜು

ರಾಯಚೂರು: ಮುಡಾ ಪ್ರಕರಣದಲ್ಲಿ ವಿಪಕ್ಷ ನಾಯಕರು ಹುಚ್ಚರ ರೀತಿ ಆಡುತ್ತಿದ್ದಾರೆ ಅವರ ಮಾತುಗಳಿಗೆ ಅರ್ಥವಿದೆಯೇ ಎಂದು ಸಣ್ಣ ನೀರಾವರಿ ಮತ್ತು ವಿಜ್ಞಾ‌ನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಭೋಸರಾಜು ದೂರಿದರು. ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿ, ಸಿದ್ದರಾಮಯ್ಯರನ್ನು ಸಿಎಂ‌ ಸ್ಥಾನದಿಂದ ಇಳಿಸಿದರೆ ಕಾಂಗ್ರೆಸ್ ದುರ್ಬಲವಾಗುತ್ತಿದೆ ಎಂಬ ಲೆಕ್ಕಾಚಾರದಲ್ಲಿದ್ದಾರೆ. ಆದರೆ,‌ ನಮ್ಮದು ಸಂಪೂರ್ಣ ಜನಾಶೀರ್ವಾದದಿಂದ ಬಂದ ಸರ್ಕಾರ 135 ಸ್ಥಾನ ಪಡೆದು ಅಧಿಕಾರಕ್ಕೆ ಬಂದ ಯಾವುದೇ ಪಕ್ಷಗಳು ಇತ್ತೀಚೆಗೆ ಬಂದಿಲ್ಲ. ಸಿಎಂ …

Read More »

ಧಾರಾಕಾರ ಮಳೆಗೆ ಪಗಲಾಪುರ ಸೇತುವೆ ಕುಸಿತ: ದುರಸ್ತಿಗೆ ಆಗ್ರಹ

ಯಾದಗಿರಿ: ಗುರುವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ತಾಲ್ಲೂಕಿನ ಪಗಲಾಪುರ ಸೇತುವೆ ಮತ್ತೆ ಕುಸಿದಿದ್ದು, ಕೂಡಲೇ ದುರಸ್ತಿ ಮಾಡುವಂತೆ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಆಗ್ರಹಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಜಿಲ್ಲಾ ಕೇಂದ್ರದಿಂದ ಸುಮಾರು 3 ಕಿ.ಮೀ.ಅಂತರದಲ್ಲಿರುವ ಕೊಯಿಲೂರ ಪಗಲಾಪುರ ಪ್ರಮುಖ ಗ್ರಾಮೀಣ ರಸ್ತೆ ಇದಾಗಿದ್ದು, ಆಗಸ್ಟ್ ಮೊದಲನೇ ವಾರ ಸುರಿದ ಭಾರಿ ಮಳೆಯಿಂದ ಸೇತುವೆ ಮೇಲೆ ನೀರು ಹರಿದು ಸಂಚಾರ ಅಸ್ತವ್ಯಸ್ತವಾಗಿತ್ತು. ತಕ್ಷಣ ಹೊಸ …

Read More »

ಕೃಷಿ ಭಾಗ್ಯ ಯೋಜನೆಯಡಿ ವಿವಿಧ ಘಟಕಗಳ ಸಹಾಯಧನಕ್ಕೆ ಅರ್ಜಿ ಆಹ್ವಾನ

ಕೊಪ್ಪಳ: 2024-25 ನೇ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಯಡಿ ಅನುಷ್ಠಾನಗೊಳಿಸುತ್ತಿದ್ದು ರೈತರು ತಮ್ಮ ಜಮೀನುಗಳಲ್ಲಿ ಕೃಷಿ ಹೊಂಡಗಳನ್ನು ನಿರ್ಮಿಸಿಕೊಂಡು ಮಳೆ ನೀರನ್ನು ಸಂಗ್ರಹಿಸಿ ಬೆಳೆಗಳ ಸಂದಿಗ್ಧ ಹಂತದಲ್ಲಿ ರಕ್ಷಣಾತ್ಮಕ ನೀರಾವರಿ ಒದಗಿಸುವುದು ಯೋಜನೆಯ ಉದ್ದೇಶವಾಗಿದೆ. ಪ್ರತಿಯೊಬ್ಬ ಫಲಾನುಭವಿಗೆ ಘಟಕಗಳನ್ನು ಪ್ಯಾಕೇಜ್ ರೂಪದಲ್ಲಿ ಕಡ್ಡಾಯವಾಗಿ ಅನುಷ್ಠಾನ ಮಾಡುವುದು, ರೈತ ಭಾಂದವರು ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದು. ಮೊದಲು ಅರ್ಜಿ ಸಲ್ಲಿಸಿದವರಿಗೆ ಮೊದಲ ಆದ್ಯತೆ ನೀಡಲಾಗುವುದು ಅರ್ಜಿಯ …

Read More »

ದಾಳಿಗೆ ಪ್ರಚೋದಿಸಿದರೆ ಪರಮಾಣು ದಾಳಿ ಮೂಲಕ ದಕ್ಷಿಣ ಕೊರಿಯಾದ ಸರ್ವನಾಶ: ಕಿಮ್ ಜಾಂಗ್ ಉನ್

ಸಿಯೋಲ್‌: ಉತ್ತರ ಕೊರಿಯಾದ ನಾಯಕ ಕಿಮ್ ಜಾಂಗ್ ಉನ್ ಅವರು ಅಣ್ವಸ್ತ್ರಗಳನ್ನು ಬಳಸಲು ಪ್ರಯತ್ನಿಸಿದರೆ ಅವರ ಸರ್ಕಾರ ಅಂತ್ಯವಾಗಲಿದೆ ಎಂದು ದಕ್ಷಿಣ ಕೊರಿಯಾದ ನಾಯಕ ಹೇಳಿಕೆ ನೀಡಿದ ಬೆನ್ನಲ್ಲೇ, ದಾಳಿಗೆ ಪ್ರಚೋದಿಸಿದರೆ ಪರಮಾಣು ದಾಳಿ ಮೂಲಕ ದಕ್ಷಿಣ ಕೊರಿಯಾವನ್ನು ಸರ್ವನಾಶ ಮಾಡಬೇಕಾಗುತ್ತದೆ ಎಂದು ಕಿಮ್‌ ಗುಡುಗಿದ್ದಾರೆ. ಉತ್ತರ ಮತ್ತು ದಕ್ಷಿಣ ಕೊರಿಯಾಗಳ ಮಧ್ಯೆ ಇಂತಹ ವಾಗ್ವಾದ ಹೊಸದೇನಲ್ಲ, ಆದರೆ ಈ ಹೇಳಿಕೆಗಳು ಉತ್ತರ ಕೊರಿಯಾದಲ್ಲಿ ಪರಮಾಣು ಅಣ್ವಸ್ತ್ರ ಇರುವ ಬಗ್ಗೆ …

Read More »

ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ 18ನೇ ಕಂತಿನ ಹಣ ನಾಳೆ ಬಿಡುಗಡೆ: ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 18ನೇ ಕಂತಿನ ಬಿಡುಗಡೆಗೆ 9 ಕೋಟಿಗೂ ಅಧಿಕ ರೈತರು ಕಾಯುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನಾಳೆ ಶನಿವಾರ (ಅ. 5) 18ನೇ ಕಂತಿನ ಹಣ ಬಿಡುಗಡೆ ಮಾಡುತ್ತಿದ್ದಾರೆ. ಮಹಾರಾಷ್ಟ್ರಕ್ಕೆ ಪ್ರಧಾನಿ ನಾಳೆ ಭೇಟಿ ನೀಡಲಿದ್ದು ಅಂದೇ ಪಿಎಂ ಕಿಸಾನ್ ಹಣ ಬಿಡುಗಡೆ ಹಾಗೂ ಇತರ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. 9.4 ಕೋಟಿ ಫಲಾನುಭವಿ ರೈತರ ಖಾತೆಗಳಿಗೆ ತಲಾ 2,000 ರೂ ಸಿಗಲಿದೆ. …

Read More »

ಕಲ್ಯಾಣ ಕರ್ನಾಟಕ ಭಾಗದ ಶೈಕ್ಷಣಿಕ ಗುಣಮಟ್ಟ ಅಭಿವೃದ್ದಿಗೆ ಶಿಕ್ಷಣ ತಜ್ಞರ ಸಮಿತಿ ರಚನೆ

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಶೈಕ್ಷಣಿಕ ಗುಣಮಟ್ಟ ಹಾಗೂ ಫಲಿತಾಂಶ ಹೆಚ್ಚಳದ ನಿಟ್ಟಿನಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ (ಕೆಕೆಆರ್ ಡಿಬಿ) ಮಂಡಳಿ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಶಿಕ್ಷಣ ತಜ್ಞರ ಸಮಿತಿ ರಚಿಸಲಾಗಿದೆ. ಶಿಕ್ಷಣ ತಜ್ಞ ಡಾ. ಗುರುರಾಜ ಕರ್ಜಗಿ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿ ರಚಿಸಲಾಗಿದ್ದು, ಮಂಡಳಿಯಲ್ಲಿ ತಜ್ಞರ ಪ್ರಥಮ ಸಭೆ ನಡೆದು ಸಮಗ್ರವಾಗಿ ಸಮಾಲೋಚಿಸಲಾಯಿತು ಎಂದು ಸಭೆ ನಂತರ ಮಂಡಳಿ ಅಧ್ಯಕ್ಷ ಡಾ.‌ಅಜಯಸಿಂಗ್ ಪತ್ರಿಕಾಗೋಷ್ಠಿ ಯಲ್ಲಿ ತಿಳಿಸಿದರು. ಸಭೆಯಲ್ಲಿ …

Read More »

ಗ್ರಾ.ಪಂ ಪಿಡಿಒ ಕಾರ್ಯದರ್ಶಿಗಳಿಂದ ತೀವ್ರಗೊಂಡ ಅನಿರ್ದಿಷ್ಟಾವಧಿ ಹೋರಾಟ

ಬೆಂಗಳೂರು: ಇಲಾಖೆಗಳಲ್ಲಿ ಆಗುತ್ತಿರುವ ತಾರತಮ್ಯ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗ್ರಾಮ ಪಂಚಾಯಿತಿ ಪಿಡಿಓಗಳು ಹಾಗೂ ಕಾರ್ಯದರ್ಶಿಗಳು ನಡೆಸುತ್ತಿರುವ ಹೋರಾಟ ತೀವ್ರಗೊಂಡಿದೆ. ನಗರದ ಫ್ರೀಡಂಫಾರ್ಕ್‌ನಲ್ಲಿ ರಾಜ್ಯದ ನಾನಾಕಡೆಯಿಂದ ಬಂದಿರುವ ಸಾವಿರಾರು ಮಂದಿ ಸರ್ಕಾರದ ಧೋರಣೆಯನ್ನು ಕಟುವಾಗಿ ಟೀಕಿಸಿದ್ದು, ನಮ ಭಾವನೆಗಳಿಗೆ ಮತ್ತು ಬೇಡಿಕೆಗಳಿಗೆ ಸ್ಪಂದಿಸದ ಹೊರತು ಹೋರಾಟ ನಿಲ್ಲುವುದಿಲ್ಲ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ನಮದು ಶಾಂತಿಯುತ ಹೋರಾಟ ನಮ್ಮ ಹಕ್ಕಿನ ಬೇಡಿಕೆಯಾಗಿದ್ದು, ಇದನ್ನು ಸಹಾನುಭೂತಿಯಿಂದ ಕೇಳಿಸಿಕೊಳ್ಳದೆ ಇಲಾಖೆ …

Read More »

ಒಳ ಮೀಸಲಾತಿ ಕುರಿತು ಸಂಪುಟದಲ್ಲಿ ಚರ್ಚಿಸಿ ತೀರ್ಮಾನಿಸಲಾಗುವುದು: ಸಿಎಂ ಸಿದ್ದರಾಮಯ್ಯ

ಕೊಪ್ಪಳ: ಒಳಮೀಸಲಾತಿ ವಿಚಾರದ ಬಗ್ಗೆ ಸುಪ್ರೀಂಕೋರ್ಟ್ ತೀರ್ಪು ನೀಡಿದ್ದು, ಸಚಿವ ಸಂಪುಟದಲ್ಲಿ ಹಾಗೂ ಪಕ್ಷದ ಹೈಕಮಾಂಡ್ ಜೊತೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ತಾಲ್ಲೂಕಿನ ಗಿಣಗೇರಿ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹಿಂದುಳಿದ ವರ್ಗಗಳ ಆಯೋಗದ ವರದಿ ನವೆಂಬರ್ 1ರಂದು ಅನುಷ್ಠಾನಕ್ಕೆ ತರಬೇಕು ಎನ್ನುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ ಜಾತಿ ಗಣತಿ ವರದಿ ಸ್ವೀಕಾರ …

Read More »

ದೇಶದ ಆಹಾರ ಭದ್ರತೆಗೆ 1 ಲಕ್ಷ ಕೋಟಿ ವೆಚ್ಚದ ಯೋಜನೆಗೆ ಅನುಮೋದನೆ: ಪ್ರಧಾನಿ ಮೋದಿ

ನವದೆಹಲಿ: ರೈತರ ಆದಾಯ ಹೆಚ್ಚಳದೊಂದಿಗೆ, ದೇಶದ ಆಹಾರ ಭದ್ರತೆಯನ್ನು ಖಾತರಿ ಪಡಿಸಿಕೊಳ್ಳುವ 1 ಲಕ್ಷ ಕೋಟಿ ವೆಚ್ಚದ ಯೋಜನೆ, ಕಾರ್ಮಿಕ ಕಲ್ಯಾಣ ಸಂಬಂಧಿತ ಪ್ರಸ್ತಾವಗಳು, ಖಾದ್ಯ ತೈಲ ಉತ್ಪಾದನೆ ಉತ್ತೇಜಿಸುವ ಮಿಷನ್‌ ಸೇರಿದಂತೆ ಹಲವು ಪ್ರಮುಖ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟ ಅನುಮೋದನೆ ನೀಡಿದೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಪ್ರಧಾನ ಮಂತ್ರಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ (ಪಿಎಂ-ಆರ್‌ಜೆವಿವೈ) ಹಾಗೂ ಕೃಷಿ ಯೋನ್ನತಿ …

Read More »

ಸಾಮಾಜಿಕ ಆರ್ಥಿಕ ಗಣತಿ ವರದಿ ಆದಷ್ಟು ಬೇಗ ಜಾರಿಯಾಗಲಿ: ಬಸವರಾಜ ರಾಯರಡ್ಡಿ

ಕೊಪ್ಪಳ: ಸಿಎಂ ಸಿದ್ದರಾಮಯ್ಯ ಅವರು ಹಿಂದೆ ನಮ್ಮದೆ ಸರ್ಕಾರದಲ್ಲಿ ಸಮೀಕ್ಷೆ ಮಾಡಿಸಿದ ಸಾಮಾಜಿಕ, ಆರ್ಥಿಕ ಗಣತಿ ವರದಿ ಜಾರಿ ಮಾಡಲಿ, ಇದೇ ವಾರದಲ್ಲಿ ಸಚಿವ ಸಂಪುಟದಲ್ಲಿ ಒಪ್ಪಿಗೆ ಪಡೆದು ನವೆಂಬರ್ 01 ರಂದು ಅನುಷ್ಠಾನ ಮಾಡಲಿ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿದರು. ಕೊಪ್ಪಳ ತಾಲೂಕಿನ ಗಿಣಗೇರಾ ವಿಮಾನ ನಿಲ್ದಾಣದ ಬಳಿ ಮಾತನಾಡಿದ ಅವರು, ರಾಜ್ಯದಲ್ಲಿ ಅನವಶ್ಯಕ ವಿಚಾರ ಚರ್ಚೆ ಆಗುತ್ತಿವೆ. ಅವೆಲ್ಲ ನಿಲ್ಲಬೇಕು. ಕರ್ನಾಟಕ ಸಂಸ್ಕಾರ …

Read More »