Breaking News

BigTv News

ಜಾರ್ಖಂಡ್‌ನಲ್ಲಿ ಹಿಂದೂಗಳ, ಆದಿವಾಸಿಗಳ ಜನಸಂಖ್ಯೆ ಕುಸಿತ: ಪ್ರಧಾನಿ ಮೋದಿ

ಹಜಾರಿಬಾಗ್: ಜಾರ್ಖಂಡ್ ನಲ್ಲಿ ಹಿಂದೂಗಳು ಮತ್ತು ಆದಿವಾಸಿಗಳ ಜನಸಂಖ್ಯೆ ಕ್ಷೀಣಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಎಚ್ಚರಿಸಿದ್ದಾರೆ ಮತ್ತು ಜೆಎಂಎಂ ನೇತೃತ್ವದ ಸಮ್ಮಿಶ್ರ ಸರ್ಕಾರವು ರಾಜ್ಯದ ಅಸ್ಮಿತೆ, ಸಂಸ್ಕೃತಿ ಮತ್ತು ಪರಂಪರೆಯನ್ನು ಬಲಿಕೊಟ್ಟು ಒಳನುಸುಳುವವರನ್ನ ಬೆಂಬಲಿಸುವ ಮೂಲಕ ಅಪಾಯಕಾರಿ ವೋಟ್ ಬ್ಯಾಂಕ್ ರಾಜಕೀಯದಲ್ಲಿ ತೊಡಗಿದೆ ಎಂದು ಆರೋಪಿಸಿದರು. ಮತಿ, ಬೇಟಿ, ರೊಟ್ಟಿ (ಭೂಮಿ, ಮಗಳು, ಬ್ರೆಡ್) ರಕ್ಷಿಸಲು ಅಂತಹ ಶಕ್ತಿಗಳನ್ನು ಹೊರಹಾಕುವ ಸಮಯ ಇದು ಎಂದು ಅವರು ಪ್ರತಿಪಾದಿಸಿದರು. …

Read More »

ಕರ್ನಾಟಕದಲ್ಲಿ ಗಾಂಧೀಜಿ ಭೇಟಿ ನೀಡಿದ ಸ್ಥಳಗಳಲ್ಲಿ ಸ್ಮಾರಕಗಳ ನಿರ್ಮಾಣ: ಸಚಿವ ಎಚ್ ಕೆ ಪಾಟೀಲ್

ಬೆಂಗಳೂರು: ಮಹಾತ್ಮ ಗಾಂಧೀಜಿ ಅವರು ಕರ್ನಾಟಕದ ಸುಮಾರು 50 ಸ್ಥಳಗಳಿಗೆ ವಿವಿಧ ಸಂದರ್ಭದಲ್ಲಿ ಭೇಟಿ ನೀಡಿದ್ದಾರೆ ಅವರು ಭೇಟಿ ನೀಡಿದ್ದ ಸ್ಥಳಗಳಲ್ಲಿ ಗಾಂಧೀಜಿ ಅವರ ಸ್ಮಾರಕಗಳನ್ನು ನಿರ್ಮಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ತಿಳಿಸಿದರು. ಕರ್ನಾಟಕ ಗಾಂಧೀ ಸ್ಮಾರಕ ನಿಧಿಯು ಗಾಂಧಿ ಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಮಹಾತ್ಮ ಗಾಂಧೀಜಿ ಅವರ 155ನೇ ಜನ್ಮಜಯಂತಿ ವಿಶ್ವ ಅಹಿಂಸಾ ದಿನಾಚರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಗಾಂಧೀಜಿ …

Read More »

ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 16 ಸಾವಿರ ಹುದ್ದೆಗಳ ಭರ್ತಿಗೆ ಅಧಿಸೂಚನೆ: ಕನ್ನಡದಲ್ಲೆ ಪರೀಕ್ಷೆ ಬರೆಯಲು ಅವಕಾಶ

ದಾವಣಗೆರೆ: ರೈಲ್ವೆ ಇಲಾಖೆಯಲ್ಲಿ ಒಟ್ಟು 12 ಲಕ್ಷ ಹುದ್ದೆಗಳಿದ್ದು 15 ಲಕ್ಷ ಜನರು ಪಿಂಚಣಿ ಪಡೆಯುತ್ತಿದ್ದಾರೆ, ಖಾಲಿ ಇರುವ 16 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಈ ಪರೀಕ್ಷೆಯನ್ನು ಕನ್ನಡದಲ್ಲಿಯೇ ಬರೆಯಲು ಆದೇಶ ನೀಡಲಾಗಿದ್ದು ನಮ್ಮ ರಾಜ್ಯದ ಯುವಕರು ಇದರ ಉಪಯೋಗ ಪಡೆದುಕೊಳ್ಳಬೇಕು ಎಂದು ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು. ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಹಾಗೂ ಕಂದಾಯ ಇಲಾಖೆ …

Read More »

ಬಟ್ಟೆ ಒಗೆಯುವ ವೇಳೆ ನದಿ ನೀರಿನ ರಭಸಕ್ಕೆ ಕೊಚ್ಚಿ ಹೋದ ಮಹಿಳೆ

ಚಿಂಚೋಳಿ: ಮಹಿಳೆಯೊಬ್ಬರು ‌ಬಟ್ಟೆ ಒಗೆಯುವಾಗ‌ ‌ನದಿ ನೀರಿನ ಪ್ರವಾಹಕ್ಕೆ ಕೊಚ್ಚಿ ಹೋದ ಘಟನೆ ತಾಲೂಕಿನ ಕರ್ಚಖೇಡ ಗ್ರಾಮದಲ್ಲಿ ನಡೆದಿದೆ. ಕರ್ಚಖೇಡ ಗ್ರಾಮದ ಬುಜ್ಜಮ ಜರಣಪ್ಪ ಯಂಪಳ್ಳಿ(35) ಮುಲ್ಲಾಮಾರಿ‌ ನದಿ ನೀರಿನ ರಭಸಕ್ಕೆ ‌ಕೊಚ್ಚಿ ಹೋದ ಮಹಿಳೆ. ಅ.1ರ ಮಂಗಳವಾರ ರಾತ್ರಿ ತಾಲೂಕಿನಲ್ಲಿ ಬಿರುಸಿನ ಮಳೆಯಿಂದಾಗಿ ನದಿಯಲ್ಲಿ ನೀರು ರಭಸದಿಂದ ಹರಿಯುತ್ತಿರುವ ಕಾರಣ ಮಹಿಳೆಯ ಶವ ಇನ್ನೂ ಪತ್ತೆಯಾಗಿಲ್ಲ. ಚಿಂಚೋಳಿ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಮತ್ತು ಸುಲೇಪೇಟ‌ ಪೊಲೀಸ್ ಠಾಣೆಯ ಪೊಲೀಸರು …

Read More »

ಸ್ವಚ್ಛ ಭಾರತ ಪರಿಕಲ್ಪನೆ ಗಾಂಧೀಜಿಯವರ ಆಶಯವಾಗಿತ್ತು: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಬೆಂಗಳೂರು : ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸ್ವಚ್ಛ ಭಾರತ ಪರಿಕಲ್ಪನೆಯನ್ನು ನನಸು ಮಾಡಿದ್ದಾರೆ ಪ್ರಧಾನಿ ಮೋದಿ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಪ್ರತಿಪಾದಿಸಿದರು. ಬುಧವಾರ ಗಾಂಧಿ ಜಯಂತಿ ಪ್ರಯುಕ್ತ ಬೆಂಗಳೂರಿನ ಯಶವಂತಪುರದ ಸಂವಿಧಾನ ವೃತ್ತದಲ್ಲಿ ಬಿಜೆಪಿ ಎಸ್‍ಸಿ ಮೋರ್ಚಾ ಆಯೋಜಿಸಿದ್ದ ಸೇವಾ ಪಾಕ್ಷಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸ್ವಚ್ಛ ಭಾರತ ಪರಿಕಲ್ಪನೆ ಗಾಂಧಿಯವರ ಆಶಯವಾಗಿತ್ತು. ದೇಶಾದ್ಯಂತ 12 ಕೋಟಿಗೂ ಅಧಿಕ …

Read More »

ಜಾರ್ಖಂಡ್‌ನಲ್ಲಿ ಗ್ರಾಮ ಉತ್ಕರ್ಷ್ ಅಭಿಯಾನಕ್ಕೆ ಚಾಲನೆ ನೀಡಿದ ಪ್ರಧಾನಿ ಮೋದಿ

ರಾಂಚಿ: ಸುಮಾರು 80,000 ಕೋಟಿ ರೂಪಾಯಿ ವೆಚ್ಚದಲ್ಲಿ ಧರ್ತಿ ಆಬ ಜಂಜಾಟಿಯ ಗ್ರಾಮ ಉತ್ಕರ್ಷ್ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಈ ಯೋಜನೆಯು ಸುಮಾರು 63,000 ಬುಡಕಟ್ಟು ಜನರಿರುವ ಹಳ್ಳಿಗಳ ಅಭಿವೃದ್ಧಿಗೆ ಒಳಪಡಲಿದೆ 5 ಕೋಟಿಗೂ ಹೆಚ್ಚು ಜನರಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ಅವರು ಹೇಳಿದ್ದಾರೆ. ಈ ಯೋಜನೆಯು ಭಗವಾನ್ ಬಿರ್ಸಾ ಮುಂಡಾ ಭೂಮಿಯಿಂದ ಪ್ರಾರಂಭವಾಗುತ್ತಿರುವುದಕ್ಕೆ ನನಗೆ ಸಂತೋಷವಾಗಿದೆ ಎಂದು ಮೋದಿ ಹೇಳಿದ್ದಾರೆ. ಪ್ರಧಾನಿ ಮೋದಿ ಅವರು …

Read More »

ಕೆ ಆರ್ ಐ ಡಿ ಎಲ್ ಕಾಮಗಾರಿಗಳ ಪ್ರಕ್ರಿಯೆಗೆ ಗಾಂಧಿ ಸಾಕ್ಷಿ ಕಾಯಕ 2.0 ತಂತ್ರಾಂಶ ಅಭಿವೃದ್ದಿ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಕೆಆರ್‌ಐಡಿಎಲ್ (ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮ) ನಿರ್ವಹಿಸುವ ಕಾಮಗಾರಿಗಳ ಪ್ರಗತಿಯೂ ಸೇರಿದಂತೆ ಎಲ್ಲ ಪ್ರಕ್ರಿಯೆಗಳನ್ನು ಪಾರದರ್ಶಕವಾಗಿ ನಡೆಸಲು ಗಾಂಧಿ ಸಾಕ್ಷಿ ಕಾಯಕ 2.0 (ವರ್ಕ್ ಮಾನಿಟರಿಂಗ್ ಸಿಸ್ಟಂ) ತಂತ್ರಾಂಶ ಅಭಿವೃದ್ಧಿಪಡಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು. ಈ ತಂತ್ರಾಂಶವನ್ನು ಬುಧವಾರ ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ಕೆಆರ್‌ಐಡಿಎಲ್ ನಿರ್ವಹಿಸುವ ಕಾಮಗಾರಿಗಳ ಸಂಪೂರ್ಣ ಮಾಹಿತಿಗಳು, ಕಾಮಗಾರಿಗಳನ್ನು ವಹಿಸುವ ಇಲಾಖೆಗಳಿಂದ ಬಿಡುಗಡೆಯಾಗುವ ಅನುದಾನದ …

Read More »

ಯುಪಿಯಲ್ಲಿ ಮುಖ್ಯಮಂತ್ರಿ ಯುವ ಉದ್ಯಮಿ ವಿಕಾಸ ಅಭಿಯಾನ ಜಾರಿಗೆ ತರಲು ನಿರ್ಧಾರ

ಲಕ್ನೋ: ರಾಜ್ಯದ ಯುವಕರಿಗೆ ಸ್ವಯಂ ಉದ್ಯೋಗ ಅವಕಾಶಗಳನ್ನು ಒದಗಿಸುವ ಉದ್ದೇಶದಿಂದ ಯೋಗಿ ಸರ್ಕಾರ ಮುಖ್ಯಮಂತ್ರಿ ಯುವ ಉದ್ಯಮಿ ವಿಕಾಸ ಅಭಿಯಾನ (ಮುಖ್ಯಮಂತ್ರಿ ಯುವ) ವನ್ನು ಜಾರಿಗೆ ತರಲು ನಿರ್ಧರಿಸಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧ್ಯಕ್ಷತೆಯಲ್ಲಿ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಈ ಪ್ರಸ್ತಾವನೆಗೆ ಅನುಮೋದನೆ ನೀಡಲಾಯಿತು. ರಾಜ್ಯದ ಆರ್ಥಿಕತೆಯಲ್ಲಿ ಎಂಎಸ್‌ಎಂಇ ವಲಯದ ಮಹತ್ವದ ಕೊಡುಗೆಯನ್ನು ಗಮನದಲ್ಲಿಟ್ಟುಕೊಂಡು ಈ ಯೋಜನೆಯನ್ನು ಪ್ರಾರಂಭಿಸಲಾಗಿದೆ. ಮಂತ್ರಿ ಮಂಡಳ ಸಭೆಯಲ್ಲಿ ಒಟ್ಟು 25 ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ …

Read More »

ಜಪಾನ್ ನ ನೂತನ ಪ್ರಧಾನಿಯಾಗಿ ಶಿಗೆರು ಇಶಿಬಾ ನೇಮಕ: ಪ್ರಧಾನಿ ಮೋದಿ ಅಭಿನಂದನೆ

ನವದೆಹಲಿ: ಜಪಾನ್ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಶಿಗೆರು ಇಶಿಬಾ ಅವರನ್ನು ಪ್ರಧಾನಿ ನರೇಂದ್ರ ಮೋದಿ ಬುಧವಾರ ಅಭಿನಂದಿಸಿದ್ದಾರೆ. ಪ್ರಧಾನಿ ಶಿಗೆರು ಇಶಿಬಾ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು, ಭಾರತ ಜಪಾನ್ ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ಮತ್ತು ಇಂಡೋ ಪೆಸಿಫಿಕ್ ಮತ್ತು ಅದರಾಚೆ ಶಾಂತಿ ಮತ್ತು ಸಮೃದ್ಧಿಯನ್ನು ಉತ್ತೇಜಿಸಲು ನಿಮ್ಮೊಂದಿಗೆ ನಿಕಟವಾಗಿ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ ಎಂದು ಅಭಿನಂದಿಸಿದ್ದಾರೆ. ಹಗರಣಗಳು ತಮ್ಮ ಸರ್ಕಾರವನ್ನು ಕಾಡಿದ …

Read More »

ಸ್ವಚ್ಛತಾ ಅಭಿಯಾನದ ಅಂಗವಾಗಿ ಸಾರಿಗೆ ನೌಕರರಿಂದ ಸ್ವಯಂ ಪ್ರೇರಿತ ಸ್ವಚ್ಛತಾ ಕಾರ್ಯಕ್ರಮ

ಹುಬ್ಬಳ್ಳಿ: ಸ್ವಚ್ಚತಾ ಅಭಿಯಾನದ ಅಂಗವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಚತೆಯ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಸಿಬ್ಬಂದಿಗಳಿಂದ ಗೋಕುಲ ರಸ್ತೆಯಲ್ಲಿರುವ ಬಸ್ ನಿಲ್ದಾಣದಲ್ಲಿ ಸ್ವಯಂಪ್ರೇರಿತ ಸ್ವಚ್ಛತಾ ಕಾರ್ಯಕ್ರಮ ಕೈಗೊಳ್ಳಲಾಯಿತು. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹುಬ್ಬಳ್ಳಿ ಗ್ರಾಮಾಂತರ ವಿಭಾಗದ ಎಲ್ಲಾ 5 ಡಿಪೊಗಳು ಹಾಗೂ ಬಸ್ ನಿಲ್ದಾಣಗಳಲ್ಲಿ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 2 ರವರೆಗೆ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಅದರ …

Read More »