ಬೆಂಗಳೂರು: ಅಕ್ಟೋಬರ್ 23, 24 ಮತ್ತು 25ರಂದು ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ಕಿತ್ತೂರು ವಿಜಯ ಉತ್ಸವ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ ಮುಂಭಾಗ ಕಿತ್ತೂರು ವಿಜಯ ಜ್ಯೋತಿ ಯಾತ್ರೆಗೆ ಚಾಲನೆ ನೀಡಿದರು ಇದೇ ವೇಳೆ ಕಿತ್ತೂರು ಉತ್ಸವದ ಪೋಸ್ಟರ್ ಬಿಡುಗಡೆ ಮಾಡಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, 1824ರಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟಿಷರೊಂದಿಗೆ ಹೋರಾಡಿ ವಿಜಯಶಾಲಿಯಾದರು. ಈ …
Read More »ಸ್ವಚ್ಛ ಭಾರತ ಅಭಿಯಾನದ 10ನೇ ವರ್ಷಾಚರಣೆ
ನವದೆಹಲಿ: ಸ್ವಚ್ಛತೆಯನ್ನು ಜನ ಆಂದೋಲನವನ್ನಾಗಿ ಮಾಡಿದ ರಾಷ್ಟ್ರದ ಉತ್ಸಾಹಕ್ಕೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ನಮಸ್ಕರಿಸಿದರು ಮತ್ತು ನಿರಂತರ ಪ್ರಯತ್ನಗಳಿಂದ ಮಾತ್ರ ನಾವು ಭಾರತವನ್ನು ಸ್ವಚ್ಚಗೊಳಿಸಬಹುದು ಎಂದು ಹೇಳಿದರು. ಸ್ವಚ್ಛ ಭಾರತ ಅಭಿಯಾನದ 10ನೇ ವರ್ಷಾಚರಣೆ ಅಂಗವಾಗಿ ನವದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ, ಇಂತಹ ಪ್ರಯತ್ನಗಳು ಅಭಿಯಾನವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುತ್ತವೆ. ಕಳೆದ 10 ವರ್ಷಗಳಲ್ಲಿ, ಕೋಟ್ಯಂತರ ಭಾರತೀಯರು ಈ ಮಿಷನ್ ಅನ್ನು ತಮ್ಮ ವೈಯಕ್ತಿಕ ಗುರಿಯಾಗಿಸಿಕೊಂಡಿದ್ದಾರೆ. ಒಂದು …
Read More »ಸಿಎಂ ಸಿದ್ದರಾಮಯ್ಯ ಯಾವುದೇ ಕ್ಷಣದಲ್ಲಾದರೂ ರಾಜೀನಾಮೆ ಕೊಡಬಹುದು: ಬಿ ವೈ ವಿಜಯೇಂದ್ರ
ಬೆಂಗಳೂರು: ಅಧಿಕಾರಕ್ಕಾಗಿ ತೊಡೆ ತಟ್ಟುವ ಸ್ವಪಕ್ಷೀಯರನ್ನು ಸುಮ್ಮನಾಗಿಸಲು ಸೈಟ್ ಹಿಂತಿರುಗಿಸುವ ಈ ರಾಜಕೀಯ ನಾಟಕ ಮಾಡುತ್ತಿದ್ದಾರೆ, ಮುಖ್ಯಮಂತ್ರಿಗಳು ಯಾವುದೇ ಕ್ಷಣದಲ್ಲಿ ರಾಜೀನಾಮೆ ಕೊಡಬಹುದು ಇದು ಕೆಲವೇ ಗಂಟೆಗಳಲ್ಲಿ ಆದರೂ ಅಚ್ಚರಿಯಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು. ಹೈಕೋರ್ಟ್ ತೀರ್ಪು, ಜನಪ್ರತಿನಿಧಿಗಳ ಕೋರ್ಟಿನ ಆದೇಶದ ಬಳಿಕ ನಿನ್ನೆ ಇ.ಡಿ. ಕೇಸು ದಾಖಲಾಗಿದೆ. ರಾಜ್ಯಪಾಲರು ದೆಹಲಿಯ ಕೈಗೊಂಬೆ ಎನ್ನುತ್ತಿದ್ದ ಸಿದ್ದರಾಮಯ್ಯನವರು ನಿವೇಶನ ವಾಪಸ್ ನೀಡುತ್ತಿರುವುದು ಕಾನೂನಿನ ಕುಣಿಕೆಯಿಂದ ಪಾರಾಗುವ …
Read More »ರಾಜ್ಯಾದ್ಯಂತ ನಾಳೆ ಪಿಎಸ್ಐ ಪರೀಕ್ಷೆ: ಕೆಇಎಯಿಂದ ಸಕಲ ಸಿದ್ಧತೆ
ಬೆಂಗಳೂರು : ಇದೆ ಅಕ್ಟೊಬರ್ 3 ರಂದು ರಾಜ್ಯಾದ್ಯಂತ 402 ಪಿಎಸ್ಐ ನೇಮಕಾತಿ ಪರೀಕ್ಷೆ ನಡೆಯುತ್ತಿದ್ದು, ಈಗಾಗಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಪರೀಕ್ಷೆಯಲ್ಲಿ ಯಾವುದೇ ರೀತಿಯಾದಂತಹ ಅಕ್ರಮ ನಡೆಯದಂತೆ ಕೆಇಎ ಕಠಿಣ ಕ್ರಮ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಒಟ್ಟು 163 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು, ಪ್ರತಿಯೊಂದು ಪರೀಕ್ಷಾ ಕೇಂದ್ರಗಳಲ್ಲೂ ಪರೀಕ್ಷಾ ಅಕ್ರಮ ತಡೆಯಲು ವೆಬ್ ಕಾಸ್ಟಿಂಗ್, ಜಾಮರ್ ಅಳವಡಿಸಲಾಗಿದೆ. ಅದರಲ್ಲೂ ಪ್ರಮುಖವಾಗಿ ಬೆಂಗಳೂರು, ವಿಜಯಪುರ, …
Read More »ವೈಮಾನಿಕ ದಾಳಿಯಲ್ಲಿ ಇಸ್ರೇಲ್ ನ ಫೈಟರ್ ಜೆಟ್ ಗಳನ್ನು ನಾಶಪಡಿಸಿದ ಇರಾನ್
ಟೆಲ್ ಅವೀವ್: ಗಾಝಾ ಮೇಲಿನ ವೈಮಾನಿಕ ದಾಳಿಯಲ್ಲಿ ಇಸ್ರೇಲ್ ಬಳಸಿದ ಬೃಹತ್ ಕ್ಷಿಪಣಿ ದಾಳಿಯಲ್ಲಿ ಇರಾನ್ 30, 5 ನೇ ತಲೆಮಾರಿನ ಇಸ್ರೇಲ್ ಎಫ್ -35 ಫೈಟರ್ ಜೆಟ್ ಗಳನ್ನು ಸಂಪೂರ್ಣವಾಗಿ ನಾಶಪಡಿಸಿದೆ ಎಂದು ವರದಿಗಳು ತಿಳಿಸಿವೆ. ರೋಶ್ ಹಶನಾ (ಯಹೂದಿ ಹೊಸ ವರ್ಷ) ಮುನ್ನಾದಿನದಂದು, ಇಸ್ರೇಲ್ ಬೃಹತ್ ಕ್ಷಿಪಣಿ ದಾಳಿಯನ್ನು ಎದುರಿಸಿತು, ಇರಾನ್ನಿಂದ 400 ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಉಡಾಯಿಸಿತು, ಇದು ದೇಶಾದ್ಯಂತ ಸೈರನ್ಗಳನ್ನು ಬಾರಿಸಿತು. ಕ್ಷಿಪಣಿಗಳನ್ನು …
Read More »ಅ.3 ರಂದು ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನೆ
ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2024ಕ್ಕೆ ಕ್ಷಣಗಣನೆ ಆರಂಭಗೊಂಡಿದ್ದು, ಅಕ್ಟೋಬರ್ 3ಕ್ಕೆ ದಸರಾ ಉದ್ಘಾಟನೆಯಾಗಲಿದೆ. ಬೆಳಿಗ್ಗೆ 9.15ರಿಂದ 9.40 ರೊಳಗಿನ ವೃಶ್ಚಿಕ ಲಗ್ನದಲ್ಲಿ ದಸರಾ ಉದ್ಘಾಟನೆಯಾಗಲಿದೆ. ಅಕ್ಟೋಬರ್ 3ರಂದು ಅರಮನೆ ಆವರಣದಲ್ಲಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಆಗುತ್ತದೆ. ಅಕ್ಟೋಬರ್ 3 ರಿಂದ 11ರವರೆಗೂ ಅರಮನೆಯಲ್ಲಿ ಖಾಸಗಿ ದರ್ಬಾರ್ ನಡೆಯಲಿದೆ. ಅಕ್ಟೋಬರ್ 12ರ ಶನಿವಾರ ಜಂಬೂ ಸವಾರಿ ನಡೆಯಲಿದೆ. ಮಧ್ಯಾಹ್ನ 1.41 ರಿಂದ 2.10ರ ನಡುವೆ ಶುಭ …
Read More »ಪಿಎಸ್ಐ ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಲು ಜಿಲ್ಲಾಧಿಕಾರಿ ಸೂಚನೆ
ವಿಜಯಪುರ: ಪಿಎಸ್ಐ ಸ್ಪರ್ಧಾತ್ಮಕ ಪರೀಕ್ಷೆಯು ಜಿಲ್ಲೆಯ ಒಟ್ಟು 11 ಕೇಂದ್ರಗಳಲ್ಲಿ ಅಕ್ಟೋಬರ್ 3ರಂದು ಜರುಗಲಿದ್ದು, ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳಿಗೆ ಸೂಚಿಸಿದರು. ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಪಿ.ಎಸ್.ಐ ಸ್ಪರ್ಧಾತ್ಮಕ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಒಟ್ಟು 4,920 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಬೆಳಿಗ್ಗೆ 10.30ರಿಂದ 12ರ ವರೆಗೆ ಪತ್ರಿಕೆ-1 ಹಾಗೂ ಮಧ್ಯಾಹ್ನ 12-30ರಿಂದ ಮಧ್ಯಾಹ್ನ …
Read More »ಕೇಂದ್ರದ ರಾಜ್ಯ ವಿಪತ್ತು ನಿಧಿಯಿಂದ 14 ಪ್ರವಾಹ ಪೀಡಿತ ರಾಜ್ಯಗಳಿಗೆ 5858 ಕೋಟಿ ರೂ. ಬಿಡುಗಡೆ
ನವದೆಹಲಿ: ಕೇಂದ್ರ ಗೃಹ ಸಚಿವಾಲಯವು 14 ಪ್ರವಾಹ ಪೀಡಿತ ರಾಜ್ಯಗಳಿಗೆ ರಾಜ್ಯ ವಿಪತ್ತು ನಿರ್ವಹಣಾ ನಿಧಿಯಿಂದ (ಎಸ್ಡಿಆರ್ಎಫ್) ಕೇಂದ್ರ ಸರ್ಕಾರದ ಪಾಲು ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ (ಎನ್ಡಿಆರ್ಎಫ್) ಮುಂಗಡವಾಗಿ 5,858.60 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದೆ. ಪ್ರವಾಹ ಪೀಡಿತ ರಾಜ್ಯಗಳಾದ ಅಸ್ಸಾಂ, ಮಿಜೋರಾಂ, ಕೇರಳ, ತ್ರಿಪುರಾ, ನಾಗಾಲ್ಯಾಂಡ್, ಗುಜರಾತ್, ಆಂಧ್ರಪ್ರದೇಶ, ತೆಲಂಗಾಣ ಮತ್ತು ಮಣಿಪುರ ರಾಜ್ಯಗಳಿಗೆ ಸ್ಥಳದಲ್ಲೇ ಹಾನಿಯನ್ನು ನಿರ್ಣಯಿಸಲು ಅಂತರ ಸಚಿವಾಲಯದ ಕೇಂದ್ರ ತಂಡಗಳನ್ನು ಕಳುಹಿಸಲಾಗಿದೆ. …
Read More »ರೈತರಿಂದ ಖರೀದಿಸುವ ಹಾಲಿನ ದರ 90 ಪೈಸೆ ಕಡಿತ
ಶಿವಮೊಗ್ಗ: ರೈತರಿಂದ ಖರೀದಿಸುವ ಹಾಲಿನ ದರವನ್ನು ಪ್ರತಿ ಲೀಟರ್ ಗೆ 90 ಪೈಸೆಯಷ್ಟು ಕಡಿತಗೊಳಿಸಲಾಗಿದೆ. ಶಿಮುಲ್ ಆಡಳಿತ ಮಂಡಳಿ ಸಭೆಯಲ್ಲಿ ಈ ಕುರಿತಾಗಿ ನಿರ್ಧಾರ ಕೈಗೊಳ್ಳಲಾಗಿದೆ. ಅ. 1ರಿಂದಲೇ ಪರಿಷ್ಕೃತ ದರ ಜಾರಿಗೆ ಬಂದಿದೆ. ಶಿವಮೊಗ್ಗ ಹಾಲು ಒಕ್ಕೂಟದ ಆಡಳಿತ ಮಂಡಳಿ ಸಭೆಯಲ್ಲಿ ರೈತರಿಂದ ಖರೀದಿ ಮಾಡುವ ಪ್ರತಿ ಲೀಟರ್ ಹಾಲಿನ ದರವನ್ನು 90 ಪೈಸೆ ಕಡಿತ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ. ಈ ಮೊದಲು ಲೀಟರ್ ಹಾಲಿಗೆ 32.99 ರೂಪಾಯಿ …
Read More »ಹಿರಿಯ ನಾಗರಿಕರ ಮಾಶಾಸನ ಹೆಚ್ಚಳಕ್ಕೆ ಕ್ರಮ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ 50 ಲಕ್ಷಕ್ಕೂ ಹೆಚ್ಚು ಹಿರಿಯ ನಾಗರಿಕರಿಗೆ ಮಾಸಾಶನ (ವೃದ್ಧಾಪ್ಯ ವೇತನ) ನೀಡಲಾಗುತ್ತಿದೆ. ಅವರ ಮಾಸಾಶನ ಹೆಚ್ಚಳದ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ನಗರದಲ್ಲಿ ಆಯೋಜಿಸಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಸಮಾರಂಭದಲ್ಲಿ ಹಿರಿಯ ನಾಗರಿಕರಿಗೆ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು. ವೇದಿಕೆಯಲ್ಲಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಮಾಸಾಶನ ಹೆಚ್ಚಿಸಬೇಕೆಂಬ ಹಿರಿಯ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





