ಹಳೇಬೀಡು: ಗ್ರಾಮೀಣ ಸಮಸ್ಯೆಗಳಿಗೆ ಸ್ಪಂದಿಸುವುದರ ಜೊತೆಗೆ ಸಮರ್ಪಕವಾಗಿ ಸಂಪನ್ಮೂಲಗಳ ಬಳಕೆ ಮಾಡಿಕೊಂಡು ಮುನ್ನಡೆಯುತ್ತಿರುವುದರಿಂದ ಮಾದಿಹಳ್ಳಿ ಹೋಬಳಿಯ ಇಬ್ಬಿಡು ಗ್ರಾಮ ಪಂಚಾಯಿತಿಗೆ 2023-24ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರ ದೊರಕಿದೆ. ಸತತ ಎರಡನೇ ಬಾರಿಗೆ ಈ ಗೌರವಕ್ಕೆ ಪಾತ್ರವಾಗಿದೆ. ಅ.2ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪ್ರಶಸ್ತಿ ನಾಮಫಲಕ, ಪ್ರಮಾಣಪತ್ರ ಹಾಗೂ ₹5 ಲಕ್ಷ ಬಹುಮಾನ ಒಳಗೊಂಡಿದೆ. 16 ಹಳ್ಳಿಗಳನ್ನು ಹೊಂದಿರುವ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ …
Read More »ಸಿಎಂ ಅಧ್ಯಕ್ಷತೆಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕುರಿತು ಪೂರ್ವಭಾವಿ ಸಭೆ
ಬೆಂಗಳೂರು: ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ 2024ನೇ ಸಾಲಿನ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕುರಿತಂತೆ ಪೂರ್ವಭಾವಿ ಸಭೆ ನಡೆಸಲಾಯಿತು. ಈ ಸಂದರ್ಭದಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ, ಕೆ.ಎನ್.ರಾಜಣ್ಣ, ಶಾಸಕರುಗಳಾದ ರಘುಮೂರ್ತಿ, ಡಾ.ಶ್ರೀನಿವಾಸ್, ಬಸವನಗೌಡ ದದ್ದಲ್, ಬಿ.ಎಂ.ನಾಗರಾಜು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರು ಉಪಸ್ಥಿತರಿದ್ದರು.
Read More »ತೋಟಗಾರಿಕೆ ಇಲಾಖೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ
ಚಿತ್ರದುರ್ಗ: ತೋಟಗಾರಿಕೆ ಇಲಾಖೆಯಡಿ ಚಿತ್ರದುರ್ಗ ತಾಲ್ಲೂಕಿನ ರೈತರಿಗೆ 2024-25ನೇ ಸಾಲಿಗೆ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದ್ದು, ಯೋಜನೆಗಳಲ್ಲಿ ಸಹಾಯಧನ ಪಡೆಯಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅ.15 ಕೊನೆಯ ದಿನವಾಗಿದೆ. ತೋಟಗಾರಿಕೆ ಇಲಾಖೆಯಡಿ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಮಿಷನ್ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ (ಹನಿ ನೀರಾವರಿ ಯೋಜನೆ), ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ, ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಗಳಿಗೆ ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದು. …
Read More »ಆಂಧ್ರ ಪ್ರದೇಶದಲ್ಲಿ ಎನ್ ಡಿ ಎ ಸರ್ಕಾರದಿಂದ ಹೊಸ ಮದ್ಯದ ನೀತಿ ಪ್ರಕಟ
ಅಮರಾವತಿ: ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನೇತೃತ್ವದ ಎನ್ಡಿಎ ಸರ್ಕಾರ ಹೊಸ ಮದ್ಯ ನೀತಿಯನ್ನು ಪ್ರಕಟಿಸಿದೆ. ಹರಿಯಾಣ ಮತ್ತು ಇತರೆ ರಾಜ್ಯಗಳ ಮಾದರಿಯಲ್ಲಿ ಖಾಸಗಿ ಚಿಲ್ಲರೆ ವ್ಯಾಪಾರಿಗಳಿಗೆ ಮದ್ಯ ಮಾರಾಟ ಅವಕಾಶ ಮಾಡಿಕೊಟ್ಟಿದ್ದು, ಇದರಿಂದ ರಾಜ್ಯ ಸರ್ಕಾರವು 5,500 ಕೋಟಿ ಆದಾಯ ಗಳಿಸುವ ನಿರೀಕ್ಷೆ ಹೊಂದಿದೆ ಎಂದು ಮೂಲಗಳು ತಿಳಿಸಿವೆ. ಇತರ ರಾಜ್ಯಗಳಲ್ಲಿ ಇರುವ ಉತ್ತಮ ಅಬಕಾರಿ ನೀತಿಯನ್ನು ಕೂಲಂಕಷವಾಗಿ ಪರಿಶೀಲನೆ ನಡೆಸಿದ ಬಳಿಕ ಹೊಸ ಮದ್ಯ ನೀತಿಯನ್ನು ಜಾರಿಗೆ …
Read More »ಹರಿಯಾಣ ವಿಧಾನಸಭಾ ಚುನಾವಣೆ: ಗ್ಯಾರಂಟಿ ಯೋಜನೆಗಳ ಕುರಿತು ರಾಹುಲ್ ಗಾಂಧಿ ಭರವಸೆ
ಚಂಡೀಗಢ: ನಾವು ಅಧಿಕಾರಕ್ಕೆ ಬಂದರೆ 1200 ರೂ.ಗೆ ಮಾರಾಟವಾಗುತ್ತಿರುವ ಎಲ್ಪಿಜಿ, ಪ್ರತಿ ಗ್ಯಾಸ್ ಸಿಲಿಂಡರ್ಗೆ ಕೇವಲ 500 ರೂ.ಗೆ ಲಭ್ಯವಾಗಲಿದೆ ಎಂದು ಕಾಂಗ್ರೆಸ್ ಸಂಸದ ಮತ್ತು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ. ಹರಿಯಾಣದ ಬಹದ್ದೂರ್ಗಢದಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಹರಿಯಾಣದ ರೈತರಿಗೆ ಕನಿಷ್ಠ ಬೆಂಬಲ ಬೆಲೆಯನ್ನೂ ನೀಡುತ್ತೇವೆ. ಹರಿಯಾಣದ ಜನರು ಸೇನೆಗೆ ಸೇರುತ್ತಿದ್ದರು, ಆದರೆ ನರೇಂದ್ರ ಮೋದಿ ಅವರು ಅಗ್ನಿವೀರ್ ಯೋಜನೆ ತರುವ …
Read More »ನಾನು ಆತ್ಮಸಾಕ್ಷಿಯಾಗಿ ಕೆಲಸ ಮಾಡುತ್ತೇನೆ, ರಾಜೀನಾಮೆ ನೀಡುವ ಅಗತ್ಯವಿಲ್ಲ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ನಾನು ಅತ್ಮಸಾಕ್ಷಿಯಾಗಿ ಕೆಲಸ ಮಾಡುತ್ತೇನೆ ರಾಜಿನಾಮೆ ನೀಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದರು. ಈ ಕುರಿತು ಮಂಗಳವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನನ್ನ ಪತ್ನಿ ಸ್ವತಂತ್ರವಾಗಿ ತೀರ್ಮಾನ ತೆಗೆದುಕೊಂಡಿದ್ದಾರೆ. ಪತ್ರ ಬರೆದಿರುವ ಕುರಿತು ನನಗೆ ಯಾವುದೇ ಮಾಹಿತಿಯಿಲ್ಲ. ಅವರ ಸಹೋದರ ಮಲ್ಲಿಕಾರ್ಜುನ ಸ್ವಾಮಿಯವರು ಜಮೀನಿನ ಮಾಲೀಕರಾಗಿದ್ದರು. ಉಡುಗೊರೆ ರೂಪದಲ್ಲಿ ನನ್ನ ಪತ್ನಿಗೆ 3 ಎಕರೆ 16 ಗುಂಟೆ ಜಮೀನು ನೀಡಿದ್ದರು. ಅದನ್ನು ಮುಡಾದವರು ಒತ್ತುವರಿ ಮಾಡಿಕೊಂಡು …
Read More »ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಪ್ರಚಾರದ ಭಾಗವಾಗಿ ಲಾಪತಾ ಲೇಡೀಸ್ ಅಭಿಯಾನ ಪ್ರಾರಂಭ
ಮಹಾರಾಷ್ಟ್ರ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಕಾವು ಹೆಚ್ಚಾಗುತ್ತಿದ್ದು, ಇದರ ನಡುವೆ ವಿವಿಧ ಪಕ್ಷಗಳು ಭಿನ್ನವಾಗಿ ಪ್ರಚಾರ ನಡೆಸುತ್ತಿವೆ. ಇದೀಗ ಕಾಂಗ್ರೆಸ್ ಪಕ್ಷವು ವಿಧಾನಸಭೆ ಚುನಾವಣೆ ಪ್ರಚಾರದ ಭಾಗವಾಗಿ ಲಾಪತಾ ಲೇಡೀಸ್ ಎನ್ನುವ ಅಭಿಯಾನವನ್ನು ಪ್ರಾರಂಭಿಸಿದೆ. ಈ ಅಭಿಯಾನದ ಮೂಲಕ ಮಹಾರಾಷ್ಟ್ರ ಸಮ್ಮಿಶ್ರ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಮುಂದಾಗಿದೆ. ಅಲ್ಲದೇ ಮಹಾರಾಷ್ಟ್ರದಲ್ಲಿ ಮಹಿಳೆಯರ ರಕ್ಷಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಬೃಹತ್ ಅಭಿಯಾನವನ್ನು ಪ್ರಾರಂಭಿಸಿದೆ. ಮಹಾರಾಷ್ಟ್ರ ವಿಧಾನಸಭೆ ಚುನಾವಣಾ ದಿನಾಂಕ ಇನ್ನು ಕೆಲವೇ ದಿನಗಳಲ್ಲಿ …
Read More »ರಾಜ್ಯ ಸರ್ಕಾರದಿಂದ ಬಿಪಿಎಲ್ ಮಾನದಂಡಗಳ ಪರಿಶೀಲನೆಗೆ ಸಮಿತಿ ರಚನೆ
ಬೆಂಗಳೂರು : ಬಿಪಿಎಲ್ ಮಾನದಂಡಗಳ ಪರಿಶೀಲನೆಗೆ ರಾಜ್ಯ ಸರ್ಕಾರದಿಂದ ಸಮಿತಿ ರಚನೆ ಮಾಡಲಾಗಿದೆ. ಬಿಪಿಎಲ್ ಕುಟುಂಬಗಳಿಗೆ ಪಡಿತರ ಚೀಟಿ ವಿತರಣಾ ಮಾನದಂಡ ಪರಿಶೀಲನೆಗೆ ಕರ್ನಾಟಕ ಆಡಳಿತ ಸುಧಾರಣಾ ಆಯೋಗವು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತರ ನೇತೃತ್ವದಲ್ಲಿ ಉಪ ಸಮಿತಿಯನ್ನು ರಚನೆ ಮಾಡಿದೆ. ಬಿಪಿಎಲ್ ಮಾನದಂಡಗಳ ಪರಿಶೀಲನೆಗೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯೂ ಆಗಿರುವ ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಉಪ ಸಮಿತಿ ರಚಿಸಲಾಗಿದೆ ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ …
Read More »ಪ್ರಧಾನಿ ಮೋದಿ ಇಸ್ರೇಲ್ ಪ್ರಧಾನಿ ನೆತನ್ಯಾಹು ಜೊತೆ ದೂರವಾಣಿ ಕರೆ ಮೂಲಕ ಮಹತ್ವದ ಮಾತುಕತೆ
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಮತ್ತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ದೂರವಾಣಿ ಕರೆ ಮೂಲಕ ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯನ್ನ ಉದ್ದೇಶಿಸಿ ಮಾತನಾಡಿದರು, ಅಲ್ಲಿ ಪಶ್ಚಿಮ ಏಷ್ಯಾದಲ್ಲಿ ಶಾಂತಿಯನ್ನ ಶೀಘ್ರವಾಗಿ ಪುನಃಸ್ಥಾಪಿಸುವ ಪ್ರಯತ್ನಗಳಿಗೆ ಭಾರತ ತನ್ನ ಬೆಂಬಲವನ್ನ ವ್ಯಕ್ತಪಡಿಸಿತು. ಪಶ್ಚಿಮ ಏಷ್ಯಾದಲ್ಲಿನ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಪ್ರಧಾನಿ ನೆತನ್ಯಾಹು ಅವರೊಂದಿಗೆ ಮಾತನಾಡಿದ್ದೇನೆ. ಭಯೋತ್ಪಾದನೆಗೆ ನಮ್ಮ ಜಗತ್ತಿನಲ್ಲಿ ಸ್ಥಾನವಿಲ್ಲ, ಪ್ರಾದೇಶಿಕ ಉಲ್ಬಣವನ್ನ ತಡೆಗಟ್ಟುವುದು ಮತ್ತು ಎಲ್ಲಾ ಒತ್ತೆಯಾಳುಗಳ ಸುರಕ್ಷಿತ …
Read More »ತಮ್ಮ ಸಂಪುಟದೊಂದಿಗೆ ರಾಜೀನಾಮೆ ನೀಡಿದ ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ
ಟೋಕಿಯೊ: ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಅವರು ತಮ್ಮ ಸಂಪುಟದೊಂದಿಗೆ ರಾಜೀನಾಮೆ ನೀಡಿದ್ದು, ಇಂದು ಕ್ಯಾಬಿನೆಟ್ ಸಭೆ ನಡೆಸಿದ ಕಿಶಿದಾ ಅವರು ಚರ್ಚೆ ನಡೆಸಿ ನಂತರ ಸಂಪುಟ ಸಚಿವರೊಂದಿಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಮುಖ್ಯ ಕ್ಯಾಬಿನೆಟ್ ಕಾರ್ಯದರ್ಶಿ ಯೋಶಿಮಾಸಾ ಹಯಾಶಿ ಘೋಷಿಸಿದ್ದಾರೆ. ತಮ್ಮ ಉತ್ತರಾಧಿಕಾರಿ ಶಿಗೆರು ಇಶಿಬಾ ಅವರು ಅಧಿಕಾರ ವಹಿಸಿಕೊಳ್ಳಲು ದಾರಿ ಮಾಡಿಕೊಟ್ಟದ್ದಾರೆ. ಈಗಾಗಲೆ ಲಿಬರಲ್ ಡೆಮಾಕ್ರಟಿಕ್ ಪಕ್ಷದ ನಾಯಕಿಯಾಗಿ ಇಶಿಬಾ ಆಯ್ಕೆಯಾಗಿದ್ದು ಸಂಸತ್ತಿನ ಮತದಾನದ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





