Breaking News

BigTv News

ಅಮೆರಿಕದಲ್ಲಿ ಸೆಮಿಕಂಡಕ್ಟರ್ ಕಂಪನಿಗಳ ಮುಖ್ಯಸ್ಥರ ಜತೆ ಸಚಿವ ಎಂ ಬಿ ಪಾಟೀಲ್ ಮಾತುಕತೆ

ಅಮೆರಿಕ: ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ ಅವರು ಅಮೆರಿಕದಲ್ಲಿ ಸೆಮಿ ಕಂಡಕ್ಟರ್ ಉದ್ಯಮದ ಜಾಗತಿಕ ಪ್ರಮುಖ ಕಂಪನಿಗಳ ಮುಖ್ಯಸ್ಥರ ಜೊತೆ ಸರಣಿ ಮಾತುಕತೆ ನಡೆಸಿದ್ದಾರೆ. ರಾಜ್ಯದಲ್ಲಿ ವೇಗವಾಗಿ ವಿಸ್ತರಿಸುತ್ತಿರುವ ಸೆಮಿಕಂಡಕ್ಟರ್ ಕ್ಷೇತ್ರದಲ್ಲಿ ಅಮೆರಿಕದ ಕಂಪನಿಗಳ ಜೊತೆಗೆ ಹೆಚ್ಚಿನ ಸಹಯೋಗದ ಅವಕಾಶಗಳನ್ನು ಸಚಿವರು ಚರ್ಚಿಸಿದ್ದಾರೆ. ಸೆಮಿಕಂಡಕ್ಟರ್ ಅಭಿವೃದ್ಧಿ ಕೇಂದ್ರವಾಗಿ ಹೊರಹೊಮ್ಮುವ ರಾಜ್ಯದ ಮಹತ್ವಾಕಾಂಕ್ಷೆ ಸಾಕಾರಗೊಳ್ಳುವುದಕ್ಕೆ ಈ ಭೇಟಿಯು ನೆರವಾಗಲಿದೆ. ಕರ್ನಾಟಕದ ಸೆಮಿಕಂಡಕ್ಟರ್ ಉದ್ದಿಮೆಗೆ ಚೇತರಿಕೆ ನೀಡುವ ಉದ್ದೇಶದಿಂದ, …

Read More »

ಪ್ರಧಾನಿ ಮೋದಿಯವರೊಂದಿಗೆ ದ್ವಿಪಕ್ಷೀಯ ಸಭೆಯಲ್ಲಿ ಪಾಲ್ಗೊಂಡ ಜಮೈಕಾ ಪ್ರಧಾನಿ

ನವದೆಹಲಿ: ಜಮೈಕಾದ ಪ್ರಧಾನಿ ಆಂಡ್ರ್ಯೂ ಹೋಲ್ನೆಸ್ ಭಾರತಕ್ಕೆ ಭೇಟಿ ನೀಡಿದ್ದು, ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದ್ವಿಪಕ್ಷೀಯ ಸಭೆಯಲ್ಲಿ ಪಾಲ್ಗೊಂಡರು. ಸಭೆಯ ನಂತರ ಹೋಲ್ನೆಸ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಇಂದಿನ ಚರ್ಚೆಗಳ ಫಲಿತಾಂಶವು ಉಸೇನ್ ಬೋಲ್ಟ್‌ಗಿಂತಲೂ ವೇಗವಾಗಿ ನಮ್ಮ ಸಂಬಂಧವನ್ನು ವೇಗಗೊಳಿಸುತ್ತದೆ ಈ ಮೂಲಕ ನಾವು ಹೊಸ ಎತ್ತರವನ್ನು ತಲುಪುತ್ತೇವೆ ಎಂದು ಹೇಳಿದರು ಪ್ರಾದೇಶಿಕ, ಜಾಗತಿಕ ಸಮಸ್ಯೆಗಳನ್ನು ಚರ್ಚಿಸಿದ್ದೇವೆ ಮತ್ತು ಎಲ್ಲಾ ವಿವಾದಗಳನ್ನು …

Read More »

ನೂತನ ಗ್ರಾಮ ಪಂಚಾಯತಿ ಕಟ್ಟಡ ಉದ್ಘಾಟಿಸಿದ ಶಾಸಕ ವಿಜಯಾನಂದ ಕಾಶಪ್ಪನವರ

ಬಾಗಲಕೋಟ: ಜಿಲ್ಲೆಯ ಹುನಗುಂದ ತಾಲೂಕಿನ ಬಿಸಲದಿನ್ನಿ ಗ್ರಾಮದ ನೂತನ ಗ್ರಾಮ ಪಂಚಾಯತ್ ಕಟ್ಟಡವನ್ನು ಶಾಸಕ ವಿಜಯಾನಂದ ಕಾಶಪ್ಪನವರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ನಮ್ಮ ಸರಕಾರ ಸ್ಥಳೀಯ ಸಂಸ್ಥೆಗಳಿಗೆ ಅನುದಾನ ನೀಡುವಲ್ಲಿ ತಾರತಮ್ಯ ಅನುಸರಿಸಿಲ್ಲ, ಗ್ಯಾರಂಟಿ ಯೋಜನೆಗಳನ್ನು ಕಾರ್ಯರೂಪಕ್ಕೆ ತಂದ ರೀತಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತಿ ಅಧಿಕಾರಿಗಳು, ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Read More »

ಹಿರಿಯ ನಾಗರಿಕರಿಗಾಗಿ ಆರೋಗ್ಯ ವಿಮೆ ಯೋಜನೆ ಜಾರಿಗೊಳಿಸಲು ಅಗತ್ಯ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು: ಹಿರಿಯ ನಾಗರಿಕರ ಜೀವನಾನುಭವ, ಅವರ ಸಹನೆ, ಸಾಮರ್ಥ್ಯ ನಮ್ಮೆಲ್ಲರಿಗೂ ಪ್ರೇರಣದಾಯಕ. ಹಿರಿಯ ನಾಗರಿಕರು ಅಶಕ್ತರಲ್ಲ ಸಶಕ್ತರು. ಹಿರಿಯರನ್ನು ಗೌರವಿಸುವುದು ಪೋಷಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಹಿರಿಯ ನಾಗರಿಕರಿಗಾಗಿ ಆರೋಗ್ಯ ವಿಮೆ ಯೋಜನೆಯನ್ನು ಜಾರಿಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ …

Read More »

ಕೇಂದ್ರ ಸರ್ಕಾರಿ ನೌಕರರಿಗೆ ರಸ್ತೆ ಮೈಲೇಜ್ ಭತ್ಯೆ ಹೆಚ್ಚಿಸಿ ಆದೇಶ

ನವದೆಹಲಿ : ಈ ವರ್ಷದ ಆರಂಭದಲ್ಲಿ ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇಕಡಾ 50 ಕ್ಕೆ ಹೆಚ್ಚಿಸಿದ ನಂತರ, 13 ಭತ್ಯೆಗಳನ್ನು ಸ್ವಯಂಚಾಲಿತವಾಗಿ ಅಸ್ತಿತ್ವದಲ್ಲಿರುವ ದರಗಳಿಗಿಂತ 25% ರಷ್ಟು ಪರಿಷ್ಕರಿಸಲಾಗಿದೆ. ಈಗ, ಅರ್ಹ ಫಲಾನುಭವಿಗಳಿಗೆ ಮತ್ತೊಂದು ಭತ್ಯೆಯನ್ನು ಪರಿಷ್ಕರಿಸಲಾಗಿದೆ. ಭಾರತದಲ್ಲಿನ ಕೇಂದ್ರ ಸರ್ಕಾರಿ ನೌಕರರು ಅವರು ಬಳಸುವ ಸಾರಿಗೆ ಪ್ರಕಾರ ಮತ್ತು ಅವರು ವಾಸಿಸುವ ನಗರದ ಆಧಾರದ ಮೇಲೆ ರಸ್ತೆ ಮೈಲೇಜ್ ಭತ್ಯೆ (ಆರ್‌ಎಂಎ) ಪಡೆಯಲು ಅರ್ಹರಾಗಿರುತ್ತಾರೆ. ಹೆಚ್ಚುವರಿಯಾಗಿ, ವಿಭಿನ್ನ …

Read More »

ಜಮ್ಮುಮತ್ತು ಕಾಶ್ಮೀರದಲ್ಲಿ ಮೊದಲ ಬಾರಿಗೆ ವಾಲ್ಮೀಕಿ ಸಮುದಾಯದವರಿಂದ ಮತ ಚಲಾವಣೆ

ಶ್ರೀನಗರ:‌ ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನದ 370ನೇ ವಿಧಿಯ ಅಡಿಯಲ್ಲಿ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದು ಮಾಡಿದ ನಂತರ ಇದೇ ಮೊದಲ ಬಾರಿಗೆ ವಾಲ್ಮೀಕಿ ಸಮುದಾಯದ ಸದಸ್ಯರು ಮಂಗಳವಾರ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಮಾಡುವ ಮೂಲಕ ತಮ್ಮ ಹಕ್ಕು ಚಲಾಯಿಸಿದರು ವಾಲ್ಮೀಕಿ ಸಮುದಾಯದವರನ್ನು 1957ರಲ್ಲಿ ಪಂಜಾಬ್‌ನ ಗುರುದಾಸ್‌ಪುರ ಜಿಲ್ಲೆಯಿಂದ ಜಮ್ಮು ಕಾಶ್ಮೀರಕ್ಕೆ ಸ್ವಚ್ಛತಾ ಕೆಲಸಕ್ಕಾಗಿ ಕರೆತರಲಾಗಿತ್ತು. ಮೊದಲ ಬಾರಿಗೆ ಹಕ್ಕು ಚಲಾಯಿಸಿ ಹಲವರು ಸಂತಸ ವ್ಯಕ್ತಪಡಿಸಿದರು. ನನ್ನ 45 ವರ್ಷಗಳ …

Read More »

ಪ್ರೀಮೆಟ್ರಿಕ್ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನ ರೂ.750 ರಿಂದ 1750ಕ್ಕೆ ಹೆಚ್ಚಳ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದ ಪ್ರೀ ಮೆಟ್ರಿಕ್ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ವಿದ್ಯಾರ್ಥಿ ವೇತನವನ್ನು ರೂ.750ರಿಂದ ರೂ.1,750ಕ್ಕೆ ಹೆಚ್ಚಳ ಮಾಡಲಾಗಿದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ಈ ಬಗ್ಗೆ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಮಾತನಾಡಿದ ಅವರು, ನಮ್ಮ ಸಂವಿಧಾನ ಜಾರಿಯಾಗುವ ಮೊದಲೇ ಮೈಸೂರು ರಾಜ್ಯದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಆಡಳಿತದಲ್ಲಿ ಮೀಸಲಾತಿಯನ್ನು ಜಾರಿಗೆ ತರಲಾಗಿತ್ತು. 1960 ರಲ್ಲಿ ನಾಗೇಗೌಡ ಸಮಿತಿ ರಚನೆಯಾಯಿತು. ದೇವರಾಜ ಅರಸು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಹಾವನೂರು ಆಯೋಗ ರಚಿಸಲಾಯಿತು. …

Read More »

ಬೆಂಗಳೂರಿನಲ್ಲಿ ಅ.4 ರಿಂದ ಗ್ರಾ.ಪಂ ನೌಕರರ ಮುಷ್ಕರ: ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಬಲ ಘೋಷಣೆ

ಬೆಂಗಳೂರು : ಅ.4 ರಿಂದ ನಡೆಯಲಿರುವ ಗ್ರಾ. ಪಂ ನೌಕರರ ಮುಷ್ಕರಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಬಲ ಘೋಷಣೆ ಮಾಡಿದೆ. ದಿ. 04-10-2024 ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಹಮ್ಮಿಕೊಂಡಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎಲ್ಲಾ ವೃಂದ ಸಂಘಗಳು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟದ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಹೋರಾಟಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಬೆಂಬಲ ಸೂಚಿಸಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ …

Read More »

ಲೋಳಸೂರ ಸೇತುವೆ ನಿರ್ಮಾಣಕ್ಕೆ ಶೀಘ್ರ ಕಾಮಗಾರಿ ಆರಂಭ: ಸಚಿವ ಸತೀಶ ಜಾರಕಿಹೊಳಿ

ಗೋಕಾಕ: ಜತ್ತ- ಜಾಂಬೋಟಿ ಅಂತರರಾಜ್ಯ ಹೆದ್ದಾರಿ ಭಾಗವಾದ, ಇಲ್ಲಿನ ಲೋಳಸೂರ ಸೇತುವೆ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಈಗಾಗಲೇ ₹40 ಕೋಟಿ ಬಿಡುಗಡೆ ಮಾಡಿದ್ದು, ಶೀಘ್ರ ಕಾಮಗಾರಿ ಆರಂಭಿಸಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಘಟಪ್ರಭಾ ಪ್ರವಾಹದಲ್ಲಿ ಪದೇಪದೇ ಮುಳುಗಡೆಯಾಗುವ ಸೇತುವೆ ಹಾಗೂ ಹೊಸ ಸೇತುವೆಯ ನೀಲನಕ್ಷೆಯನ್ನು ಪರಿಶೀಲಿಸಿ ಅವರು ಮಾತನಾಡಿದರು. ಬಹಳ ಹಳೆಯದಾದ ಈ ಸೇತುವೆ ಪ್ರತಿ ಮಳೆಗಾಲದಲ್ಲೂ ಮುಳುಗುತ್ತದೆ. ಆಗ ಅಂತರರಾಜ್ಯ ವಾಹನ ಸಂಚಾರ ಬಂದ್‌ …

Read More »

ಮುಂದಿನ ವರ್ಷದೊಳಗೆ ರಾಜ್ಯದ ಎಲ್ಲ ಗ್ರಾಮ ಆಡಳಿತಾಧಿಕಾರಿಗಳಿಗೂ ಟ್ಯಾಬ್ ವಿತರಣೆ: ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು: ಮುಂದಿನ ವರ್ಷದೊಳಗೆ ರಾಜ್ಯದ ಎಲ್ಲ ಗ್ರಾಮ ಆಡಳಿತ ಅಧಿಕಾರಿಗಳಿಗೂ ಟ್ಯಾಬ್‌ ವಿತರಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದರು. ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಅಧ್ಯಕ್ಷರು, ಕಾರ್ಯಾಧ್ಯಕ್ಷರು ಮತ್ತು ಪದಾಧಿಕಾರಿಗಳು ವಿಕಾಸಸೌಧದಲ್ಲಿ ಭೇಟಿ ಮಾಡಿ ವಿವಿಧ ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರ ಸಲ್ಲಿಸಿದ ಸಂದರ್ಭದಲ್ಲಿ ಈ ಭರವಸೆ ನೀಡಿದರು. ಗ್ರಾಮ ಆಡಳಿತ ಅಧಿಕಾರಿಗಳಿಗೆ ಮೊಬೈಲ್ ಅಥವಾ ಲ್ಯಾಪ್‌ಟಾಪ್‌ ನೀಡಬೇಕು ಎಂಬ ಬೇಡಿಕೆ ಇದೆ. ಕ್ಷೇತ್ರಗಳಲ್ಲಿ ಕೆಲಸ ಮಾಡುವ ಅಧಿಕಾರಿಗಳಿಗೆ …

Read More »