Breaking News

BigTv News

ಕೇಂದ್ರ ಸರ್ಕಾರದಿಂದ ವಾಹನ ಸವಾರರಿಗೆ ಸಿಹಿಸುದ್ದಿ: ಶೀಘ್ರವೇ ಪೆಟ್ರೋಲ್, ಡೀಸೆಲ್ ಬೆಲೆ 20ರೂ. ಇಳಿಕೆ

ನವದೆಹಲಿ : ವಾಹನ ಸವಾರರಿಗೆ ಕೇಂದ್ರ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಕೆಲವೇ ತಿಂಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ 20 ರೂಪಾಯಿ ಇಳಿಕೆಯಾಗುವ ಸಾಧ್ಯತೆ ಇದೆ. ಏಕೆಂದರೆ ಬಹುಬೇಗ ಜನರು ಪೆಟ್ರೋಲ್ ಅವಲಂಬಿತರಾಗುವಂತೆ ಮಾಡಲು ಸರ್ಕಾರ ಮುಂದಾಗಿದೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಕೂಡ ಈ ಬಗ್ಗೆ ಘೋಷಣೆ ಮಾಡಿದ್ದಾರೆ. ದೇಶದ ಬಹುತೇಕ ಪೆಟ್ರೋಲ್ ಪಂಪ್‌ಗಳಲ್ಲಿ ಶೀಘ್ರದಲ್ಲೇ ಎಥೆನಾಲ್ ಮಿಶ್ರಿತ ಪೆಟ್ರೋಲ್ ಲಭ್ಯವಾಗಲಿದೆ ಎಂದು ಸಾರಿಗೆ ಸಚಿವ ನಿತಿನ್ …

Read More »

ಮಹಾರಾಷ್ಟ್ರದ ಗುಡ್ಡಾಪುರದಲ್ಲಿ ಕರ್ನಾಟಕ ಸುವರ್ಣ ಸಂಭ್ರಮ 50ರ ಕಾರ್ಯಕ್ರಮ

ಗುಡ್ಡಾಪುರ: ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ತ ತಾಲೂಕಿನ ಗುಡ್ಡಾಪುರದಲ್ಲಿ ಕನ್ನಡ ಸಂಭ್ರಮ ಮನೆ ಮಾಡಿದೆ ಕರ್ನಾಟಕ ಸುವರ್ಣ ಸಂಭ್ರಮ 50ರ ಕಾರ್ಯಕ್ರಮ ಎಲ್ಲೆಲ್ಲೂ ಕನ್ನಡದ ಘಮಲು ಪಸರಿಸಿದೆ. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಗುಡ್ಡಾಪುರ ದಾನಮ್ಮದೇವಿ ದೇವಸ್ಥಾನ ಟ್ರಸ್ಟ್, ಮಹಾರಾಷ್ಟ್ರದ ಕನ್ನಡಪರ ಶೈಕ್ಷಣಿಕ, ಸಾಂಸ್ಕೃತಿಕ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಗುಡ್ಡಾಪುರದ ದಾನಮ್ಮ ದೇವಿ ದೇವಸ್ಥಾನದ ಆವರಣದಲ್ಲಿ ಕರ್ನಾಟಕ ಸುವರ್ಣ ಸಂಭ್ರಮ 50ರ ನಿಮಿತ್ತ …

Read More »

70 ಸಾವಿರ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಸಿದ್ಧಪಡಿಸುವ ಅಡುಗೆ ಮನೆಗೆ ಸಚಿವ ಕೃಷ್ಣ ಬೈರೇಗೌಡ ಚಾಲನೆ

ಬೆಂಗಳೂರು: ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಸಿದ್ಧಪಡಿಸಲು ಬೆಂಗಳೂರಿನ ಬ್ಯಾಟರಾಯನಪುರ ವ್ಯಾಪ್ತಿಯ ಚಿಕ್ಕಜಾಲದಲ್ಲಿ ಹೊಸ ಅಡುಗೆ ಮನೆ ಉದ್ಘಾಟನೆಗೊಂಡಿದೆ, ಅಕ್ಷಯ ಪಾತ್ರ ಫೌಂಡೇಶನ್ ಹಾಗೂ ರಾಜ್ಯ ಸರ್ಕಾರ ಸಹಯೋಗದಲ್ಲಿ ನಿರ್ಮಿಸಿರುವ ಈ ವಿಶಾಲ ಹಾಗೂ ಸುಸಜ್ಜಿತ ಅಡುಗೆ ಮನೆಗೆ ಸಚಿವ ಕೃಷ್ಣಬೈರೇಗೌಡ ಅವರು ಚಾಲನೆ ನೀಡಿದರು. ಇದು ಅಕ್ಷಯ ಪಾತ್ರ ಫೌಂಡೇಷನ್ ಆರಂಭಿಸಿರುವ 75ನೇ ಅಡಿಗೆ ಮನೆ ಈ ಬಗ್ಗೆ ಮಾಹಿತಿ ನೀಡಿದ ಸಚಿವ ಕೃಷ್ಣಬೈರೇಗೌಡ, ಇದೀಗ ಬ್ಯಾಟರಾಯನಪುರ ಕ್ಷೇತ್ರದಲ್ಲಿ …

Read More »

ನವರಾತ್ರಿ ಮೊದಲ ದಿನವೇ ಬಳ್ಳಾರಿಗೆ ತೆರಳಲು ಸಿದ್ಧತೆ: ಜನಾರ್ಧನ ರೆಡ್ಡಿ

ಬೆಂಗಳೂರು: ಗಂಗಾವತಿಯ ಶಾಸಕ ಹಾಗೂ ಬಿಜೆಪಿ ನಾಯಕ ಗಾಲಿ ಜನಾರ್ದನ ರೆಡ್ಡಿ ಅವರಿಗೆ ಬಳ್ಳಾರಿ ಪ್ರವೇಶಕ್ಕೆ ವಿಧಿಸಿದ್ದ ನಿರ್ಬಂಧವನ್ನು ಇಂದು ಸುಪ್ರೀಂ ಕೋರ್ಟ್‌ ತೆರವುಗೊಳಿಸಿದೆ. ಇದರ ಬೆನ್ನಲ್ಲೇ ರೆಡ್ಡಿ ಅವರು ನವರಾತ್ರಿಯ ಮೊದಲ ದಿನವೇ ಬಳ್ಳಾರಿಗೆ ತೆರಳಲು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಅವರು, ಸುಪ್ರೀಂ ಕೋರ್ಟ್‌ ತೀರ್ಪು ಖುಷಿ ತಂದಿದೆ. ನವರಾತ್ರಿ ಮೊದಲ ದಿನ ನಾನು ಬಳ್ಳಾರಿಗೆ ಭೇಟಿ ನೀಡಿ, ದುರ್ಗಾ ಮಾತೆಯ ಆಶೀರ್ವಾದ ಪಡೆಯುತ್ತೇನೆ. …

Read More »

ಸ್ವಚ್ಛತಾ ಕಾರ್ಯದಲ್ಲಿ ತೊಡಗಿರುವ ಕಾರ್ಮಿಕರ ಪೈಕಿ ಶೇ.92 ರಷ್ಟು ಎಸ್ಸಿ, ಎಸ್ಟಿ, ಒಬಿಸಿ ಸಮುದಾಯದವರು: ಕೇಂದ್ರ ಸರ್ಕಾರ

ನವದೆಹಲಿ: ನಗರ ಪ್ರದೇಶಗಳಲ್ಲಿ ಚರಂಡಿಗಳು, ಸೆಪ್ಟಿಕ್‌ ಟ್ಯಾಂಕ್‌ಗಳನ್ನು ಸ್ವಚ್ಛಗೊಳಿಸುವ ಕಾರ್ಮಿಕರ ಪೈಕಿ ಶೇ.92 ಮಂದಿ ಎಸ್‌ಸಿ, ಎಸ್‌ಟಿ, ಒಬಿಸಿ ಸಮುದಾಯಕ್ಕೆ ಸೇರಿದವರು. ಚರಂಡಿ ಸ್ವತ್ಛಗೊಳಿಸುವಂಥ ಅಪಾಯಕಾರಿ ಕೆಲಸದಲ್ಲಿ ತೊಡಗಿರುವವರ ಬಗ್ಗೆ ಇದೇ ಮೊದಲ ಬಾರಿಗೆ ಸರಕಾರ ಸಂಗ್ರಹಿಸಿದ ದತ್ತಾಂಶದಲ್ಲಿ ಈ ವಿಚಾರ ಬಹಿರಂಗಗೊಂಡಿದೆ. 29 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 3 ಸಾವಿರ ನಗರ ಸ್ಥಳೀಯ ಸಂಸ್ಥೆಗಳಿಂದ ದತ್ತಾಂಶಗಳನ್ನು ಸರಕಾರ ಸಂಗ್ರಹಿಸಿದೆ. 38,000 ಕಾರ್ಮಿಕರ ಪೈಕಿ ಶೇ.91ರಷ್ಟು ಮಂದಿ ಎಸ್‌ಸಿ, …

Read More »

ಉತ್ತರ ಪ್ರದೇಶದಲ್ಲಿ ಭತ್ತ ಖರೀದಿ ಪ್ರಕ್ರಿಯೆ ಆರಂಭ: 4 ಸಾವಿರ ಭತ್ತ ಖರೀದಿ ಕೇಂದ್ರಗಳ ಸ್ಥಾಪನೆ

ಉತ್ತರ ಪ್ರದೇಶ: ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರವು ಅಕ್ಟೋಬರ್ 1 ರಿಂದ ಪಶ್ಚಿಮ ಉತ್ತರ ಪ್ರದೇಶದಲ್ಲಿ ಭತ್ತ ಖರೀದಿಯನ್ನು ಪ್ರಾರಂಭಿಸಲು ಸಜ್ಜಾಗಿದೆ. ಹರ್ದೋಯಿ, ಲಖಿಂಪುರ್ ಖೇರಿ ಮತ್ತು ಸೀತಾಪುರದಂತಹ ಜಿಲ್ಲೆಗಳಲ್ಲಿ ಖರೀದಿ ಪ್ರಕ್ರಿಯೆ ಪ್ರಾರಂಭವಾಗಲಿದ್ದು, ನವೆಂಬರ್ 1 ರಿಂದ ಲಕ್ನೋ ವಿಭಾಗದ ಇತರ ಪ್ರದೇಶಗಳಾದ ಲಕ್ನೋ, ರಾಯ್ ಬರೇಲಿ ಮತ್ತು ಉನ್ನಾವೋಗಳಿಗೆ ವಿಸ್ತರಿಸಲಿದೆ. ರಾಜ್ಯ ಸರ್ಕಾರವು ಈ ಪ್ರಕ್ರಿಯೆಯನ್ನು ಸುಗಮಗೊಳಿಸಲು 4,000 ಭತ್ತ ಖರೀದಿ ಕೇಂದ್ರಗಳನ್ನು ಸ್ಥಾಪಿಸಿದ್ದು, …

Read More »

ಕೊಪ್ಪಳದ ಹುಲಿಗೆಮ್ಮ ದೇವಿ ದೇವಸ್ಥಾನಕ್ಕೆ ಮೂಲ ಸೌಕರ್ಯದ ಕೊರತೆ

ಕೊಪ್ಪಳ: ಹೆಸರಾಂತ ಧಾರ್ಮಿಕ ಕ್ಷೇತ್ರಗಳಲ್ಲಿ ವರ್ಷಕ್ಕೊಮ್ಮೆಯೋ ಅಥವಾ ವಿಶೇಷ ಸಂದರ್ಭದಲ್ಲಿಯೋ ಲಕ್ಷಾಂತರ ಭಕ್ತರು ಒಂದೆಡೆ ಸೇರುವುದು ಸಹಜ. ಆದರೆ ಕೊಪ್ಪಳ ತಾಲ್ಲೂಕಿನ ಹುಲಿಗಿಯಲ್ಲಿರುವ ಹುಲಿಗೆಮ್ಮ ದೇವಿ ದರ್ಶನಕ್ಕೆ ವಾರಕ್ಕೆ ಎರಡು ಬಾರಿ ಹಾಗೂ ಪ್ರತಿ ಹುಣ್ಣಿಮೆಗೂ ಲಕ್ಷಾಂತರ ಭಕ್ತರು ಬರುವುದು ಸಾಮಾನ್ಯವಾಗಿದೆ. ಕರ್ನಾಟಕ, ಆಂಧ್ರ ಮತ್ತು ಮಹಾರಾಷ್ಟ್ರ ರಾಜ್ಯಗಳಿಂದ ಸಾಕಷ್ಟು ಭಕ್ತರನ್ನು ಹೊಂದಿರುವ ಉತ್ತರ ಕರ್ನಾಟಕದ ಶಕ್ತಿ ದೇವತೆ ಎಂದೇ ಹೆಸರಾದ ಹುಲಿಗಿಗೆ ದೊಡ್ಡಮಟ್ಟದಲ್ಲಿ ಭಕ್ತ ಸಮೂಹವಿದೆ. ಪ್ರತಿ ತಿಂಗಳು …

Read More »

ಜನಾರ್ಧನ ರೆಡ್ಡಿಗೆ ಬಳ್ಳಾರಿ ಪ್ರವೇಶಕ್ಕೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್

ಬಳ್ಳಾರಿ: ಬಳ್ಳಾರಿ ಗಣಿ ಧಣಿ ಜನಾರ್ದನ ರೆಡ್ಡಿ ಅಕ್ರಮಗಣಿಗಾರಿಕೆ ಪ್ರಕರಣದಡಿ 2011 ರಲ್ಲಿ ಜೈಲು ಸೇರಿದ್ದರು. ಸುಮಾರು ನಾಲ್ಕು ವರ್ಷಗಳ ಕಾಲ ಸೆರೆವಾಸ ಅನುಭವಿಸಿದ ರೆಡ್ಡಿ, ಬಳಿಕ ಷರತ್ತುಬದ್ಧ ಜಾಮೀನು ಪಡೆದಿದ್ದರು. 2011 ರಿಂದ ಈವರಗೆ ತನ್ನೂರು ಬಳ್ಳಾರಿಗೆ ಮುಕ್ತ ಪ್ರವೇಶಕ್ಕೆ ರೆಡ್ಡಿಗೆ ಅವಕಾಶ ಇರಲಿಲ್ಲ. ಕೋರ್ಟ್ ಅನುಮತಿ ಪಡದೇ ರೆಡ್ಡಿ ಬಳ್ಳಾರಿಗೆ ಬರಬೇಕಿತ್ತು. ಸುಮಾರು 14 ವರ್ಷಗಳ ಕಾಲ ರೆಡ್ಡಿ ತನ್ನೂರನ್ನ ಬಿಟ್ಟು, ಹೈದರಾಬಾದ್, ಬೆಂಗಳೂರು, ಗಂಗಾವತಿಯಲ್ಲಿ ಜೀವನ …

Read More »

ಒಂದು ದೇಶ ಒಂದು ಚುನಾವಣೆ ಅನುಷ್ಠಾನಕ್ಕೆ ಮೂರು ಮಸೂದೆಗಳ ಮಂಡನೆಗೆ ಕೇಂದ್ರ ಸರ್ಕಾರ ಚಿಂತನೆ

ನವದೆಹಲಿ: ನರೇಂದ್ರ ಮೋದಿ ಸರ್ಕಾರದ ಮಹತ್ವಾಕಾಂಕ್ಷಿ ಒಂದು ದೇಶ, ಒಂದು ಚುನಾವಣೆ ತರಲು ಸಿದ್ಧತೆ ಮುಂದುವರೆದಿದ್ದು, ಒಂದು ದೇಶ ಒಂದು ಚುನಾವಣೆ ಅನುಷ್ಠಾನಕ್ಕೆ ದಾರಿ ಮಾಡಿಕೊಡುವ ಮೂರು ಮಸೂದೆಗಳ ಮಂಡನೆಗೆ ಕೇಂದ್ರ ಸರ್ಕಾರ ಮುಂದಾಗಿದೆ. ಪ್ರಮುಖ ಕಾರ್ಯಸೂಚಿಯಾದ ಒಂದು ದೇಶ ಒಂದು ಚುನಾವಣೆ ಅನುಷ್ಠಾನಕ್ಕೆ ದಾರಿ ಮಾಡಿಕೊಡುವ ಮೂರು ಮಸೂದೆಗಳ ಮಂಡನೆಗೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮುಂದಾಗಿದೆ. ಈ ಯೋಜನೆ ಅನುಷ್ಠಾನಕ್ಕಾಗಿ ಸಂವಿಧಾನದ ತಿದ್ದುಪಡಿಗೆ ಸಂಬಂಧಿಸಿದ ಎರಡು ಮಸೂದೆಗಳು …

Read More »

ಗ್ರಾಮ ಆಡಳಿತಾಧಿಕಾರಿಗಳ ಕೆಲಸದ ಹೊರೆ ಕಡಿಮೆಗೊಳಿಸಲು ಕ್ರಮ: ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು: ಗ್ರಾಮ ಆಡಳಿತ ಅಧಿಕಾರಿಗಳ ಕೆಲಸದ ಹೊರೆ ಕಡಿಮೆಗೊಳಿಸಲು ಕ್ರಮ ಕೈಗೊಳ್ಳುವುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಭರವಸೆ ನೀಡಿದರು. ಮುಷ್ಕರ ನಿರತ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಅಧ್ಯಕ್ಷರು, ಕಾರ್ಯಾಧ್ಯಕ್ಷರು ಪದಾಧಿಕಾರಿಗಳನ್ನು ವಿಕಾಸಸೌಧದ ಕಚೇರಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿ ಭರವಸೆ ನೀಡಿದರು. ಗ್ರಾಮ ಆಡಳಿತ ಅಧಿಕಾರಿಗಳಿಗೆ ಕೆಲಸದ ಹೊರೆ ಅಧಿಕವಾಗಿದೆ ಎಂಬುದರಲ್ಲಿ ಎರಡು ಮಾತಿಲ್ಲ. ಅವರ ಶ್ರಮವಿಲ್ಲದೆ ಬರ ಸಂದರ್ಭದಲ್ಲಿ ಫ್ರೂಟ್ ಮೂಲಕ ನೈಜ ದತ್ತಾಂಶಗಳನ್ನು ಪಡೆದು ರೈತರ …

Read More »