Breaking News

BigTv News

ಗ್ಯಾರಂಟಿ ಯೋಜನೆಗಳ ವಿಚಾರದಲ್ಲಿ ತೋರುವ ಅಸಡ್ಡೆ ಮತ್ತು ಉದಾಸೀನವನ್ನು ಸಹಿಸುವುದಿಲ್ಲ: ಸಿಎಂ ಖಡಕ್ ವಾರ್ನಿಂಗ್

ಮೈಸೂರು : ಗ್ಯಾರಂಟಿ ಯೋಜನೆಗಳ ಫಲ ಜನರಿಗೆ ತಲುಪಿಸದಿದ್ದರೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್‌ ಎಚ್ಚರಿಕೆ ನೀಡಿದರು. ಜಿಲ್ಲಾಮಟ್ಟದ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಅವರು, ಈ ವಿಚಾರದಲ್ಲಿ ತೋರುವ ಅಸಡ್ಡೆ ಮತ್ತು ಉದಾಸೀನವನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಸರಕಾರ ವರ್ಷಕ್ಕೆ ಸುಮಾರು 56 ಸಾವಿರ ಕೋಟಿ ರೂ.ಗಳನ್ನು ಗ್ಯಾರಂಟಿಗಳಿಗಾಗಿ ವಿನಿಯೋಗಿಸುತ್ತಿದೆ. ಇಷ್ಟೂ ಹಣ ಜನರಿಗೆ ತಲುಪುವಂತೆ ಮಾಡಬೇಕು ಎಂದು ಸೂಚಿಸಿದರು. ದಸರಾ ನೆಪದಲ್ಲಿ …

Read More »

ಕರ್ನಾಟಕದಲ್ಲಿ ನೂರಾರು ರೈತರ ಆತ್ಮಹತ್ಯೆ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ಗಂಭೀರ ಆರೋಪ

ಹರಿಯಾಣ: ಕರ್ನಾಟಕದಲ್ಲಿನ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸೇರಿದಂತೆ ವಿಪಕ್ಷಗಳ ಆಡಳಿತದ ಸರ್ಕಾರಗಳ ವಿರುದ್ಧ ಪ್ರಧಾನಿ ಮೋದಿ ವಾಗ್ಧಾಳಿ ನಡೆಸಿದ್ದಾರೆ. ಕರ್ನಾಟಕದಲ್ಲಿ ನೂರಾರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಆದರೇ ಸಿದ್ಧರಾಮಯ್ಯ ಸರ್ಕಾರ ಮಾತ್ರ ತಲೆ ಕೆಡಿಸಿಕೊಳ್ಳುತ್ತಿಲ್ಲ ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ಗಂಭೀರ ಆರೋಪ ಮಾಡಿದ್ದಾರೆ. ಹರಿಯಾಣ ವಿಧಾನಸಭಾ ಚುನಾವಣೆ ಪ್ರಚಾರದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಪ್ರಸ್ತುತ ಕಾಂಗ್ರೆಸ್ ನ ಆಡಳಿತದಲ್ಲಿ ನೂರಾರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೇ …

Read More »

ಪೆಟ್ರೋಲ್, ಡೀಸೆಲ್ ನ್ನು ಸರಕು ಮತ್ತು ಸೇವಾ ತೆರಿಗೆ ವ್ಯಾಪ್ತಿಗೆ ತರಲು ರಾಜ್ಯಗಳ ಬೆಂಬಲ ಅಗತ್ಯ: ಕೇಂದ್ರ ಸಚಿವ ಹರ್ದೀಪ ಸಿಂಗ್

ಪುಣೆ: ಪೆಟ್ರೋಲ್‌ ಮತ್ತು ಡೀಸೆಲ್‌ ಅನ್ನು ಸರಕು ಮತ್ತು ಸೇವಾ ತೆರಿಗೆ ವ್ಯಾಪ್ತಿಯಡಿ ತರಲು ನಾನು ಉತ್ಸುಕನಾಗಿದ್ದೇನೆ. ಆದರೆ, ರಾಜ್ಯಗಳು ಇದಕ್ಕೆ ಸರ್ವಾನುಮತದಿಂದ ಬೆಂಬಲ ನೀಡಬೇಕಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ. ಪುಣೆ ಇಂಟರ್‌ನ್ಯಾಷನಲ್‌ ಸೆಂಟರ್‌ನಿಂದ ಆಯೋಜಿಸಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪೆಟ್ರೋಲ್‌ ಮತ್ತು ಡೀಸೆಲ್‌ ಅನ್ನು ಜಿಎಸ್‌ಟಿ ವ್ಯಾಪ್ತಿಗೆ ತರುವ ಬಗ್ಗೆ ನಾನು ಹಲವು ದಿನಗಳಿಂದ ಸಲಹೆ …

Read More »

ಕಾರ್ಮಿಕರಿಗೆ ಕೇಂದ್ರ ಸರ್ಕಾರದಿಂದ ವೇತನ ದರ ಹೆಚ್ಚಳ

ನವದೆಹಲಿ: ಕೇಂದ್ರ ಸರ್ಕಾರವು ಕಾರ್ಮಿಕರಿಗೆ ಕನಿಷ್ಠ ವೇತನ ದರಗಳನ್ನು ಹೆಚ್ಚಳ ಮಾಡಿದೆ. ವೇರಿಯಬಲ್ ಡಿಯರ್ನೆಸ್ ಅಲೋವೆನ್ಸ್ ಪರಿಷ್ಕರಣೆ ಮೂಲಕ ಕೇಂದ್ರ ಸರ್ಕಾರವು ಕನಿಷ್ಠ ವೇತನ ದರ ಹೆಚ್ಚಳ ಘೋಷಿಸಿದೆ. ಇದು ಅಕ್ಟೋಬರ್ 1, 2024 ರಿಂದ ಜಾರಿಗೆ ಬರಲಿದೆ. ಈ ಪರಿಷ್ಕರಣೆಯು ಕಾರ್ಮಿಕರಿಗೆ, ವಿಶೇಷವಾಗಿ ಅಸಂಘಟಿತ ವಲಯದಲ್ಲಿರುವವರಿಗೆ, ಆರ್ಥಿಕ ನಿರ್ವಹಣೆಗೆ ಸಹಕಾರಿಯಾಗಲಿದೆ. ಪರಿಷ್ಕೃತ ವೇತನವು ಕಟ್ಟಡ ಕಾರ್ಮಿಕರು, ಲೋಡಿಂಗ್ ಮತ್ತು ಅನ್‌ಲೋಡಿಂಗ್, ವಾಚ್ ಮತ್ತು ವಾರ್ಡ್, ಕಸ ಗುಡಿಸುವುದು, ಸ್ವಚ್ಛತೆ, …

Read More »

ಏಷ್ಯಾದ ಪ್ರಬಲ ರಾಷ್ಟ್ರಗಳ ಸೂಚ್ಯಂಕದಲ್ಲಿ ಮೂರನೇ ಸ್ಥಾನಕ್ಕೇರಿದ ಭಾರತ

ನವದೆಹಲಿ: ಏಷ್ಯಾದ ಪ್ರಬಲ ರಾಷ್ಟ್ರಗಳ ಸೂಚ್ಯಂಕದಲ್ಲಿ (ಏಷ್ಯಾ ಪವರ್ ಇಂಡೆಕ್ಸ್ ನಲ್ಲಿ) ಭಾರತವು ಜಪಾನ್ ಅನ್ನು ಹಿಂದಿಕ್ಕಿ ಮೂರನೇ ಸ್ಥಾನಕ್ಕೆ ಏರಿದೆ. ಕೇಂದ್ರ ಸರಕಾರದ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಈ ಮಾಹಿತಿಯನ್ನು ನೀಡಿದೆ. ಭಾರತದ ಬೆಳವಣಿಗೆಯ ದರದ ಬಗ್ಗೆ, ಆಸ್ಟ್ರೇಲಿಯಾ ಥಿಂಕ್ ಟ್ಯಾಂಕ್ ಲೋವಿ ಇನ್‌ಸ್ಟಿಟ್ಯೂಟ್, ಸಂಸ್ಥೆಯು 27 ದೇಶಗಳ ಆರ್ಥಿಕ ಪ್ರಗತಿಯನ್ನು ಪರಿಶೀಲಿಸಿ ಈ ಶ್ರೇಯಾಂಕದಲ್ಲಿ ಭಾರತವು ಮೂರನೇ ಅತಿದೊಡ್ಡ ಆರ್ಥಿಕತೆಯಾಗಿದೆ ಎಂದು ಪ್ರಕಟಿಸಿದೆ. ಈ ಮಾನದಂಡದ …

Read More »

ಜಮ್ಮುಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ಮರುಸ್ಥಾಪನೆ: ಪ್ರಧಾನಿ ಮೋದಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಪರಿವರ್ತಿಸುವ ನಿರ್ಧಾರವು ತಾತ್ಕಾಲಿಕ ಮತ್ತು ಬಿಜೆಪಿ ನೇತೃತ್ವದ ಸರ್ಕಾರವು ಈ ಪ್ರದೇಶಕ್ಕೆ ರಾಜ್ಯ ಸ್ಥಾನಮಾನವನ್ನು ಮರುಸ್ಥಾಪಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅಕ್ಟೋಬರ್ 1 ರಂದು ವಿಧಾನಸಭೆ ಚುನಾವಣೆಯ ಅಂತಿಮ ಹಂತದ ಪ್ರಚಾರದ ಮುಕ್ತಾಯಕ್ಕೆ ಒಂದು ದಿನ ಮೊದಲು ಜಮ್ಮುವಿನ ಹೃದಯಭಾಗದಲ್ಲಿರುವ ಎಂಎಎಂ ಕ್ರೀಡಾಂಗಣದಲ್ಲಿ ಬೃಹತ್ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಜಮ್ಮು ಮತ್ತು ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ …

Read More »

ಅ.2 ರಂದು ಗ್ರಾಮ ಪಂಚಾಯತಿಗಳಲ್ಲಿ ವಿಶೇಷ ಗ್ರಾಮ ಸಭೆ ನಡೆಸಲು ಸರ್ಕಾರ ಸುತ್ತೋಲೆ

ಬೆಂಗಳೂರು: ಗ್ರಾಮ ಪಂಚಾಯಿತಿಗಳಲ್ಲಿ ಅ.2ರಂದು ವಿಶೇಷ ಗ್ರಾಮ ಸಭೆ ಕರೆಯಲು ಸರ್ಕಾರ ಸುತ್ತೋಲೆ ಹೊರಡಿಸಿದೆ. ಜನರ ಯೋಜನೆ ಅಭಿಯಾನ ಅನುಷ್ಠಾನಕ್ಕೆ ಅ. 2ರಂದು ವಿಶೇಷ ಗ್ರಾಮ ಸಭೆ ನಡೆಸಬೇಕು. ಸಭೆಯಲ್ಲಿ 2025 -26ನೇ ಸಾಲಿನ ಸಮಗ್ರ ಸಹಭಾಗಿತ್ವ ವಾರ್ಷಿಕ ಕ್ರಿಯಾ ಯೋಜನೆ ಸಿದ್ಧಪಡಿಸಲು ಸೂಚಿಸಲಾಗಿದೆ. 232 ತಾಲೂಕುಗಳ ಆಯ್ದ ಗ್ರಾಮ ಪಂಚಾಯಿತಿಗಳಲ್ಲಿ ಭಾರತ ಸರ್ಕಾರದ ಪಂಚಾಯತ್ ರಾಜ್ ಮಂತ್ರಾಲಯದ ಸೂಚನೆ ಅನ್ವಯ ಸಭೆ ಆಯೋಜಿಸಲು ತಿಳಿಸಲಾಗಿದೆ. ಉನ್ನತ್ ಭಾರತ ಅಭಿಯಾನದಡಿ …

Read More »

ರಾಜ್ಯವ್ಯಾಪಿ ಗ್ರಾಮ ಆಡಳಿತ ಅಧಿಕಾರಿಗಳಿಂದ ಅನಿರ್ದಿಷ್ಟಾವಧಿ ಹೋರಾಟ

ಬೆಂಗಳೂರು: ಕಂದಾಯ ಇಲಾಖೆ ಆಡಳಿತದಲ್ಲಿ ಬಹುಮುಖ್ಯ ಪಾತ್ರ ವಹಿಸುತ್ತಿರುವ ಗ್ರಾಮ ಆಡಳಿತಾಧಿಕಾರಿಗಳು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರದ ವಿರುದ್ಧವೇ ತಿರುಗಿಬಿದ್ದಿದ್ದಾರೆ. ಅನ್ಯ ಇಲಾಖೆಗಳ ಕಾರ್ಯದೊತ್ತಡ ನಿವಾರಣೆ, ಸೇವಾಭದ್ರತೆ ಸೇರಿದಂತೆ ಹಲವು ಬೇಡಿಕೆ ಮುಂದಿಟ್ಟುಕೊಂಡು ಸೆ.26 ರಿಂದ ರಾಜ್ಯವ್ಯಾಪಿ ಅನಿರ್ದಿಷ್ಟ ಮುಷ್ಕರ ಆರಂಭಿಸಿದ್ದಾರೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಈಗಾಗಲೇ ಸಾಂಕೇತಿಕ ಪ್ರತಿಭಟನೆಗಳೂ ಆರಂಭವಾಗಿವೆ. ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರದ ಬಿಸಿ ಗ್ರಾಮೀಣ ಪ್ರದೇಶಗಳಿಗೂ ತಟ್ಟಿದ್ದು, ಅತ್ಯಗತ್ಯವಾದ ಜಾತಿ ಮತ್ತು ಆದಾಯ …

Read More »

ಗ್ರಾಮೀಣ ಭಾಗದಲ್ಲಿ ಬ್ಯಾಂಕ್ ಶಾಖೆಗಳನ್ನು ಪ್ರಾರಂಭಿಸಲು ಮುಂದಾಗಬೇಕು: ಸಂಸದ ಜಗದೀಶ ಶೆಟ್ಟರ್‌

ಬೆಳಗಾವಿ: ಸರ್ಕಾರಿ ಪ್ರಾಯೋಜಿತ ಯೋಜನೆಗಳನ್ನು ಸಮರ್ಪಕ ಅನುಷ್ಠಾನಗೊಳಿಸಬೇಕು. ಗ್ರಾಮೀಣ ಭಾಗದಲ್ಲಿ ಬ್ಯಾಂಕ್‌ ಶಾಖೆಗಳನ್ನು ಪ್ರಾರಂಭಿಸಲು ಮುಂದಾಗಬೇಕು ಎಂದು ಸಂಸದ ಜಗದೀಶ ಶೆಟ್ಟರ್‌ ಲೀಡ್‌ ಬ್ಯಾಂಕುಗಳ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಬ್ಯಾಂಕರುಗಳ ಸಭೆಯಲ್ಲಿ ಮಾತನಾಡಿದ ಅವರು, ಗ್ರಾಮೀಣರಿಗೆ ಬ್ಯಾಂಕಿಂಗ್‌ ವ್ಯವಹಾರಗಳ ಅರಿವು ಮೂಡಿಸಬೇಕು.ಈ ಬಗ್ಗೆ ಮುಂದಿನ ಸಭೆಯಲ್ಲಿ ಪ್ರಗತಿ ಪರಿಶೀಲನೆ ಮಾಡಲಾಗುವುದು ಎಂದರು. ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ಶಿಂಧೆ ಮಾತನಾಡಿ, ಬ್ಯಾಂಕುಗಳಲ್ಲಿ ಬಹುದಿನದಿಂದ …

Read More »

ತಮಿಳುನಾಡು ರಾಜಕೀಯದಲ್ಲಿ ಮಹತ್ವದ ಬದಲಾವಣೆ: ಅಪ್ಪ ಸಿಎಂ, ಪುತ್ರ ಡಿಸಿಎಂ

ತಮಿಳುನಾಡು: ತಮಿಳುನಾಡು ರಾಜಕೀಯದಲ್ಲಿ ಹೊಸ ಹಾಗೂ ಮಹತ್ವದ ಬದಲಾವಣೆ ಆಗಿದ್ದು, ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರ ಪುತ್ರ ಹಾಗೂ ತಮಿಳುನಾಡಿನ ಸಚಿವ ಉದಯನಿಧಿ ಸ್ಟಾಲಿನ್ ಅವರನ್ನು ಉಪ ಮುಖ್ಯಮಂತ್ರಿಯಾಗಿ ನೇಮಕ ಮಾಡಲಾಗಿದೆ. ಈ ಮೂಲಕ ಡಿಎಂಕೆಯ (ದ್ರಾವಿಡ್‌ ಮುನ್ನೇತ್ರ ಕಳಗಂ) ಉತ್ತಾರಧಿಕಾರಿಯನ್ನು ಮುನ್ನೆಲೆಗೆ ತರುತ್ತಿದ್ದಾರೆ ಎನ್ನುವ ಚರ್ಚೆ ಜೋರಾಗಿದೆ. ಇದೀಗ ಅಪ್ಪ ಮುಖ್ಯಮಂತ್ರಿ ಹಾಗೂ ಮಗ ಅದೇ ಸರ್ಕಾರದ ಉಪ ಮುಖ್ಯಮಂತ್ರಿಯಾಗಿರುವ ಅಪರೂಪದ ರಾಜಕೀಯಕ್ಕೆ ತಮಿಳುನಾಡು ಸಾಕ್ಷಿಯಾಗಿದೆ. ತಮಿಳುನಾಡು …

Read More »