ಕೊಪ್ಪಳ: ಮೊದಲನೇ ಬಾರಿಗೆ ಮೆಕ್ಕೆಜೋಳಕ್ಕೆ ಬಂಪರ್ ಬೆಲೆ ಬಂದಿದ್ದು, ರೈತರ ಮುಖದಲ್ಲಿ ಸಂತಸವನ್ನು ತಂದಿದೆ. ಕೋಳಿಯ ಆಹಾರ ಸೇರಿದಂತೆ ಕೆಲವು ಉದ್ಯಮಗಳಿಗೆ ಮಾತ್ರವೇ ಸೀಮಿತವಾಗಿದ್ದ ಮೆಕ್ಕೆಜೋಳದಿಂದ ಈಗ ಎಥೆನಾಲ್ ಉತ್ಪಾದನೆಯನ್ನು ಮಾಡಲಾಗುತ್ತಿದ್ದು, ಇದರ ಪರಿಣಾಮವಾಗಿ ಮೆಕ್ಕೆಜೋಳಕ್ಕೆ ಬೇಡಿಕೆ ಹೆಚ್ಚಳವಾಗಿದೆ. ಒಂದು ಕ್ವಿಂಟಲ್ ಮೆಕ್ಕೆಜೋಳವು ಕೊಪ್ಪಳ ಮಾರುಕಟ್ಟೆಯಲ್ಲಿ 2,950 ರೂಪಾಯಿಗೆ ಮಾರಾಟವಾಗಿದ್ದು, ಈ ಹಿಂದೆ ಇದ್ದ ಎಲ್ಲಾ ದಾಖಲೆಗಳನ್ನು ಹಿಂದಿಕ್ಕಿದೆ. ಮೆಕ್ಕೆಜೋಳಕ್ಕೆ ಬೆಂಬಲದ ಬೆಲೆಯನ್ನು ನೀಡುವಂತೆ ರೈತರು ಒತ್ತಾಯಿಸುತ್ತಿದ್ದರು. ಪ್ರಸ್ತುತ ಕೇಂದ್ರ …
Read More »ಗ್ರಾಮ ಪಂಚಾಯತಿಗಳಲ್ಲಿ 15 ನೇ ಹಣಕಾಸು ಯೋಜನೆಯ ಕ್ರಿಯಾ ಯೋಜನೆ ತಯಾರಿಸಲು ಮಾರ್ಗಸೂಚಿ ಪ್ರಕಟ
ಬೆಂಗಳೂರು: ಗ್ರಾಮ ಪಂಚಾಯಿತಿಗಳಲ್ಲಿ 2024-25 ನೇ ಸಾಲಿನ 15 ನೇ ಹಣಕಾಸು ಯೋಜನೆಯ ಕ್ರಿಯಾ ಯೋಜನೆ ತಯಾರಿಸಲು ಮಾರ್ಗಸೂಚಿ ಪ್ರಕಟಿಸಿದೆ. ಶೇ.60ರ ನಿರ್ಬಂಧಿತ ಅನುದಾನದಲ್ಲಿ ಗ್ರಾಮಾಂತರ ಪ್ರದೇಶದ ನೈರ್ಮಲೀಕರಣ, ಬಯಲು ಬಹಿರ್ದೆಸೆ ಮುಕ್ತ, ಕುಡಿಯುವ ನೀರು ಸರಬರಾಜು, ಮಳೆ ನೀರು ಕೊಯ್ಲು ಮತ್ತು ನೀರು ಮರು ಬಳಕಗೆ ಸಂಬಂಧಿಸಿದಂತಹ ಕೆಲಸ ಕಾರ್ಯಗಳಿಗೆ ಬಳಕೆ ಆದ್ಯತೆ ನೀಡಲು ಗ್ರಾಮ ಪಂಚಾಯಿತಿಗಳಿಗೆ ನಿರ್ದೇಶನ ನೀಡಲಾಗಿದೆ. ಕೇಂದ್ರ ಸರ್ಕಾರದ ಪತ್ರದ ಪ್ರಕಾರ ಶೇ.60ರಷ್ಟು ಅನುದಾನ …
Read More »ಮಹಾರಾಷ್ಟ್ರ ವಿಧಾನಸಭಾ ಚುನಾವಣೆ: ಚುನಾವಣಾ ಆಯೋಗದಿಂದ ಸಕಲ ಸಿದ್ಧತೆ
ಮುಂಬಯಿ: ಮಾಹಾರಾಷ್ಟ್ರ ವಿಧಾನಸಭೆಗೆ ಚುನಾವಣೆ ನಡೆಸಲು ಚುನಾವಣಾ ಆಯೋಗ ಸಕಲ ಸಿದ್ಧತೆಗಳನ್ನು ನಡೆಸುತ್ತಿದ್ದು, ಶನಿವಾರ(ಸೆ.28) ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮಹತ್ವದ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ರಾಜೀವ್ ಕುಮಾರ್ ಅವರು ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಿಂಗ್ ಸಂಧು ಅವರ ಸಮ್ಮುಖದಲ್ಲಿ ವಿಧಾನಸಭೆ ಚುನಾವಣೆಗೆ ಮುನ್ನ ಚುನಾವಣೆ ಸಿದ್ಧತೆಗಳ ಕುರಿತು ಮಹಾರಾಷ್ಟ್ರದ ಉನ್ನತ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದರು. ಮಹಾರಾಷ್ಟ್ರದಲ್ಲಿ ನಡೆಯಲಿರುವ ಮುಂಬರುವ ವಿಧಾನಸಭಾ ಚುನಾವಣೆಯ …
Read More »ಮಹಾನಗರ ಪಾಲಿಕೆಯಲ್ಲಿ 2127 ಪೌರ ಕಾರ್ಮಿಕರನ್ನು ಕಾಯಂಗೊಳಿಸಿದ ಸರ್ಕಾರ: ಸಚಿವ ರಹೀಂಖಾನ್
ಬೀದರ್ : ಪೌರ ಕಾರ್ಮಿಕರ ಬಹು ದಿನಗಳ ಬೇಡಿಕೆಗೆ ಸ್ಪಂದಿಸಿ ರಾಜ್ಯ ಸರ್ಕಾರ ರಾಜ್ಯದ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಮಹಾನಗರ ಪಾಲಿಕೆಗಳು ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ನೇರ ಪಾವತಿಗೆ ಒಳಪಟ್ಟ 2127 ಪೌರ ಕಾರ್ಮಿಕರನ್ನು ಕಾಯಂಗೊಳಿಸಿದೆ ಎಂದು ಪೌರಾಡಳಿತ ಹಾಗೂ ಹಜ್ ಸಚಿವ ರಹೀಂಖಾನ್ ತಿಳಿಸಿದರು. ರಾಜ್ಯ ಪೌರ ನೌಕರರ ಸಂಘದಿಂದ ನಗರದ ಜನವಾಡ ರಸ್ತೆಯಲ್ಲಿರುವ ಝೀರಾ ಕನ್ವೆನ್ಷನ್ ಹಾಲ್ನಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ …
Read More »ಜಮ್ಮುಮತ್ತುಕಾಶ್ಮೀರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವುದು ನಿಶ್ಚಿತ: ಪ್ರಧಾನಿ ಮೋದಿ ವಿಶ್ವಾಸ
ಶ್ರೀನಗರ: ಅಕ್ಟೋಬರ್ 1ರಂದು ನಡೆಯಲಿರುವ 3ನೇ ಹಂತದ ವಿಧಾನಸಭಾ ಚುನಾವಣೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಇಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣಾ ರ್ಯಾಲಿಯನ್ನು ನಡೆಸಿದರು. ಈ ವೇಳೆ ಅವರು ಕಾಂಗ್ರೆಸ್, ಅದರ ಮಿತ್ರರಾಷ್ಟ್ರ ನ್ಯಾಷನಲ್ ಕಾನ್ಫರೆನ್ಸ್ ಮತ್ತು ಮೆಹಬೂಬಾ ಮುಫ್ತಿ ನೇತೃತ್ವದ ಪಿಡಿಪಿ ವಿರುದ್ಧ ಟೀಕಾಪ್ರಹಾರ ಮಾಡಿದ್ದಾರೆ. ಹಾಗೇ, ಮೊದಲ ಎರಡು ಹಂತದ ಮತದಾನದ ನಂತರ ಬಿಜೆಪಿ ಜಮ್ಮು ಮತ್ತು ಕಾಶ್ಮೀರದಲ್ಲಿ ಮೊದಲ ಬಾರಿಗೆ ಪೂರ್ಣ ಬಹುಮತದೊಂದಿಗೆ ಸರ್ಕಾರ …
Read More »ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ದಿಗೆ ವಿಶೇಷ ಒತ್ತು ನೀಡಲಾಗುವುದು: ಸಚಿವ ಬೋಸರಾಜು
ರಾಯಚೂರು: ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗುವುದು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಬೋಸರಾಜು ತಿಳಿಸಿದರು. ಸ್ಥಳೀಯ ಕೇಂದ್ರ ಬಸ್ ನಿಲ್ದಾಣದ ಹತ್ತಿರವಿರುವ ಐತಿಹಾಸಿಕ ಕೋಟೆ ಮೆಕ್ಕಾ ದರವಾಜಾದಲ್ಲಿ ಜಿಲ್ಲಾಡಳಿತ, ಜಿಪಂ, ಪ್ರವಾಸೋದ್ಯಮ ಇಲಾಖೆ, ನಗರಾಭಿವೃದ್ಧಿ ಪ್ರಾಧಿಕಾರ, ಶಿಕ್ಷಣ ಇಲಾಖೆ, ಪುರಾತತ್ವ ಸಂಗ್ರಹಾಲಯಗಳ ಮತ್ತು ಪರಂಪರೆ ಇಲಾಖೆ ಹಾಗೂ ನಗರಸಭೆ ರಾಯಚೂರು ಇವರುಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಪ್ರವಾಸೋದ್ಯಮ …
Read More »ಚಿತ್ರದುರ್ಗ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರಿಗೆ ಅತ್ಯುತ್ತಮ ಕಂದಾಯ ಪ್ರಶಸ್ತಿ ಪ್ರದಾನ
ಚಿತ್ರದುರ್ಗ: ರಾಜ್ಯ ಸರ್ಕಾರದ ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವಜನಿಕರಿಗೆ ಅತ್ಯುತ್ತಮ ರೀತಿಯಲ್ಲಿ ತಲುಪಿಸಿರುವ ಚಿತ್ರದುರ್ಗ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರಿಗೆ ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಬೆಂಗಳೂರಿನ ವಿಕಾಸಸೌಧದಲ್ಲಿ ನಡೆದ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಹಾಗೂ ಅಭಿನಂದನಾ ಸಭೆಯಲ್ಲಿ ಕಂದಾಯ ಇಲಾಖೆ ಸಚಿವ ಕೃಷ್ಣಭೈರೇಗೌಡ ಹಾಗೂ ಪ್ರಧಾನ ಕಾರ್ಯದರ್ಶಿ ರಶ್ಮಿ ವಿ ಮಹೇಶ್ ಅವರು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರಿಗೆ ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ-2024ರ …
Read More »ಹರಿಯಾಣ ವಿಧಾನಸಭಾ ಚುನಾವಣೆ: ಪ್ರಣಾಳಿಕೆಯನ್ನು ಪ್ರಕಟಿಸಿದ ಕಾಂಗ್ರೆಸ್
ಚಂಡೀಗಢ: ಹರಿಯಾಣ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವು ಶನಿವಾರ ತನ್ನ ಪ್ರಣಾಳಿಕೆ ಪ್ರಕಟಿಸಿದೆ. ಉಚಿತ ವಿದ್ಯುತ್, ಉಚಿತ ವೈದ್ಯಕೀಯ ಚಿಕಿತ್ಸೆ, ಮಹಿಳೆಯರಿಗೆ ಆರ್ಥಿಕ ನೆರವು, ರೈತರಿಗೆ ಬೆಂಬಲ ಬೆಲೆ ಖಾತರಿ ಮತ್ತು ರಾಜ್ಯದಲ್ಲಿ ಜಾತಿ ಗಣತಿ ನಡೆಸುವುದು ಸೇರಿದಂತೆ ತನ್ನ ಯಶಸ್ಸಿನ ಮಾದರಿಯನ್ನು ಇಲ್ಲಿನ ಚುನಾವಣೆ ಪ್ರಣಾಳಿಕೆಯಲ್ಲೂ ಸೇರಿಸಲಾಗಿದೆ. ಕಾಂಗ್ರೆಸ್ ಮುಖಂಡ ಭೂಪಿಂದರ್ ಸಿಂಗ್ ಹೂಡಾ, ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಹರಿಯಾಣ ಪ್ರದೇಶ ಕಾಂಗ್ರೆಸ್ …
Read More »ಮೋದಿ ಅವರತ್ತ ಬೆರಳು ತೋರಿ ನಗೆಪಾಟಲಿಗೆ ಗುರಿಯಾಗ್ಬೇಡಿ, ಸುಮ್ಮನೆ ರಾಜೀನಾಮೆ ನೀಡಿ: ಪ್ರಲ್ಹಾದ ಜೋಶಿ
ನವದೆಹಲಿ: ಶುದ್ಧ ಹಸ್ತ, ಶ್ರಮಜೀವಿ ಆಗಿರುವ ಪ್ರಧಾನಿ ನರೇಂದ್ರ ಮೋದಿ ಅವರತ್ತ ಬೆರಳು ತೋರುವ ಯಾವುದೇ ನೈತಿಕತೆ ಸಿದ್ದರಾಮಯ್ಯ ಅವರಿಗಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಿಎಂಗೆ ತಿರುಗೇಟು ನೀಡಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಹುದ್ದೆಯನ್ನು 2500 ಕೋಟಿ ರೂಪಾಯಿಗೆ ಬಿಜೆಪಿ ಮಾರಿಕೊಂಡಿದ್ದು, ಪ್ರಧಾನಿ ಮೋದಿ ಅವರಿಗೆ ಭ್ರಷ್ಟಾಚಾರದ ವಿರುದ್ಧ ಮಾತನಾಡುವ ಹಕ್ಕಿಲ್ಲ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಟ್ವೀಟ್ ಗೆ ಪ್ರಲ್ಹಾದ ಜೋಶಿ ಸಹ ಖಡಕ್ ಆಗಿಯೇ ಟ್ವೀಟ್ …
Read More »ಬೆಳಗಾವಿ ವಿಭಜನೆ ಕುರಿತು ದಸರಾ ಹಬ್ಬದ ನಂತರ ಸಿಎಂ ಗೆ ಮನವಿ ಪತ್ರ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಳಗಾವಿ: ಭೌಗೋಳಿಕವಾಗಿ ಮತ್ತು ಜನಸಂಖ್ಯೆ ದೃಷ್ಟಿಯಿಂದ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ವಿಭಜನೆಯಾಗದ ಹೊರತು, ಅಭಿವೃದ್ಧಿ ಸಾಧ್ಯವಿಲ್ಲ. ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಶಾಸಕರೊಂದಿಗೆ ಚರ್ಚಿಸಿ ದಸರಾ ಹಬ್ಬದ ನಂತರ ಮುಖ್ಯಮಂತ್ರಿ ಮತ್ತು ಕಂದಾಯ ಸಚಿವರಿಗೆ ಮನವಿ ಪತ್ರ ಕೊಡುತ್ತೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಹೇಳಿದರು. ಬೆಳಗಾವಿಯಲ್ಲಿ ಮಾತನಾಡಿದ ಅವರು, ಯಾವುದನ್ನು ಹೊಸ ಜಿಲ್ಲೆ ಮಾಡಬೇಕೆಂದು ನಾನು ಹೇಳುವುದಿಲ್ಲ. ಆದರೆ, ಬೆಳಗಾವಿಯನ್ನು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





