Breaking News

BigTv News

ಲಿಂಗಸುಗೂರು ತಾಲೂಕಿನಲ್ಲಿ ನಿರ್ವಹಣೆ ನಿರ್ಲಕ್ಷ್ಯದಿಂದ ತಾಂಡಾಗಳಿಗೆ ಕಲುಷಿತ ನೀರು ಪೂರೈಕೆ

ಲಿಂಗಸುಗೂರು: ಕೆಲ ವರ್ಷಗಳಿಂದ ಕಲುಷಿತ ನೀರು ಪೂರೈಕೆ ಮಾಡಲಾಗುತ್ತಿದೆ ಎಂದು ತಾಲ್ಲೂಕಿನ ಗೊರೆಬಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೊರೆಬಾಳ ತಾಂಡಾ 1 ಮತ್ತು 2ರ ನಿವಾಸಿಗಳು ಆರೋಪಿಸಿದ್ದಾರೆ. 15 ವರ್ಷಗಳ ಹಿಂದೆ ತಾಂಡಾಗಳಿಗೆ ಶುದ್ಧ ಮತ್ತು ಸಮರ್ಪಕ ಕುಡಿಯುವ ನೀರು ಪೂರೈಸಲು ಮೇಲ್ಮಟ್ಟದ ಜಲಸಂಗ್ರಹಗಾರ ನಿರ್ಮಿಸಲಾಗಿದೆ. ನಾಲ್ಕು ವರ್ಷಗಳಿಂದ ನಿರ್ವಹಣೆ ನಿರ್ಲಕ್ಷ್ಯದಿಂದ ಕಲುಷಿತ ನೀರು ಪೂರೈಕೆ ಆಗುತ್ತಿರುವ ಕುರಿತು ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಪರ್ಯಾಯ ವ್ಯವಸ್ಥೆಗೆ ಮುಂದಾಗಿಲ್ಲ ಎಂಬ ದೂರುಗಳು …

Read More »

ರಸ್ತೆ ನಿರ್ಮಾಣಕ್ಕೆ 22 ಎಕರೆ ಭೂಮಿಯನ್ನು ಬಿಬಿಎಂಪಿಗೆ ನೀಡಲು ರಕ್ಷಣಾ ಇಲಾಖೆ ಒಪ್ಪಿಗೆ: ಡಿಸಿಎಂ ಡಿಕೆಶಿ

ಬೆಂಗಳೂರು : ರಸ್ತೆ ನಿರ್ಮಾಣಕ್ಕಾಗಿ ಬರೋಬ್ಬರಿ 22 ಎಕರೆ ಜಾಗವನ್ನು ಬಿಬಿಎಂಪಿಗೆ ಬಿಟ್ಟುಕೊಡಲು ರಕ್ಷಣಾ ಇಲಾಖೆ ತೀರ್ಮಾನಿಸಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಬೆಂಗಳೂರಿನ ಎಎಸ್​​ಸಿ ಸೆಂಟರ್ ಮತ್ತು ಕಾಲೇಜಿನ ಕಮಾಂಡೆಂಟ್ ಲೆಫ್ಟನೆಂಟ್ ಜನರಲ್ ಬಸಂತ್ ಕುಮಾರ್ ರೆಪ್ಸ್ವಾಲ್ ಅವರೊಂದಿಗೆ ಇಂದು ಡಿಕೆಶಿ ಅವರು ವಿಧಾನಸೌಧದಲ್ಲಿ ಸಮಾಲೋಚನೆ ನಡೆಸಿದರು. ಬಳಿಕ ಮಾತನಾಡಿದ ಅವರು, ಲೋವರ್ ಆಗರಂನಿಂದ ಸರ್ಜಾಪುರವರೆಗೆ ರಸ್ತೆ ಅಗಲೀಕರಣಕ್ಕಾಗಿ 12.34 ಎಕರೆ ಜಮೀನನ್ನು ರಕ್ಷಣಾ ಇಲಾಖೆ ಬಿಬಿಎಂಪಿಗೆ ನೀಡಿದೆ. …

Read More »

ಭಾರತದ ವೀಟೊ ಅಧಿಕಾರಕ್ಕಾಗಿ ಬೆಂಬಲ ಘೋಷಿಸಿದ ನಾಲ್ಕು ರಾಷ್ಟ್ರಗಳು

ನವದೆಹಲಿ: ಯುನೈಟೆಡ್ ಸ್ಟೇಟ್ಸ್, ರಷ್ಯಾ, ಫ್ರಾನ್ಸ್ ಮತ್ತು ಯುನೈಟೆಡ್ ಕಿಂಗ್ಡಮ್ ಭಾರತದ ವೀಟೋ ಅಧಿಕಾರಕ್ಕಾಗಿ ತಮ್ಮ ಬೆಂಬಲವನ್ನು ಘೋಷಿಸಿವೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತದ ಖಾಯಂ ಸದಸ್ಯತ್ವವನ್ನು ಈ ದೇಶಗಳು ಬೆಂಬಲಿಸುತ್ತಿವೆ. ಈ ಬೆಂಬಲದ ಹಿಂದಿನ ಪ್ರಾಥಮಿಕ ಕಾರಣವೆಂದರೆ ಭಾರತದ ಬೆಳೆಯುತ್ತಿರುವ ಜಾಗತಿಕ ಪಾತ್ರ ಮತ್ತು ಪ್ರಾದೇಶಿಕ ಸ್ಥಿರತೆಯನ್ನು ಉತ್ತೇಜಿಸುವ ಸಾಮರ್ಥ್ಯ. ವರದಿಯ ಪ್ರಕಾರ, ಭಾರತದ ವೀಟೋ ಅಧಿಕಾರವು ಭದ್ರತಾ ಮಂಡಳಿಯಲ್ಲಿ ಹೆಚ್ಚು ಸಮತೋಲಿತ ಮತ್ತು ಪರಿಣಾಮಕಾರಿ ನಿರ್ಧಾರ ತೆಗೆದುಕೊಳ್ಳುವ …

Read More »

ಗೃಹಲಕ್ಷ್ಮೀ ಯೋಜನೆಯ ಎರಡು ತಿಂಗಳ ಹಣ ಶೀಘ್ರವೇ ಬಿಡುಗಡೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ಗೃಹಲಕ್ಷ್ಮಿ ಯೋಜನೆಯ ಜುಲೈ ಕಂತಿನ ಹಣ ಬಿಡುಗಡೆಯ ಪ್ರಕ್ರಿಯೆ ನಡೆಯುತ್ತಿದ್ದು, ಇದಾದ ಕೆಲ ದಿನಗಳಲ್ಲೇ ಆಗಸ್ಟ್ ತಿಂಗಳ ಹಣವೂ ಬಿಡುಗಡೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಇದು ನಿರಂತರ ಪ್ರಕ್ರಿಯೆ. ಸರ್ಕಾರ ಯಾವುದೇ ಕಾರಣಕ್ಕೂ ಪಂಚ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಮಾತೇ ಇಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು. ‌ಗೃಹಲಕ್ಷ್ಮಿ ಹಣವನ್ನು ಕಾಯುತ್ತಿರುವ ಲಕ್ಷಾಂತರ ಮಹಿಳೆಯರಿಗೆ ಈ ತಿಂಗಳು ಮುಗಿಯುವ ಮುನ್ನವೇ …

Read More »

ಆರ್ಥಿಕ ಪ್ರಗತಿಯಲ್ಲಿ ಗಮನಾರ್ಹ ಸಾಧನೆ: ಯು ಎನ್ ಎಸ್ ಸಿ ಯಲ್ಲಿ ಖಾಯಂ ಸದಸ್ಯತ್ವ ಪಡೆಯಲು ಭಾರತ ಅರ್ಹ ಎಂದ ಭೂತಾನ್

ನ್ಯೂಯಾರ್ಕ್‌: ಆರ್ಥಿಕ ಪಗ್ರತಿಯಲ್ಲಿ ಗಮನಾರ್ಹ ಸಾಧನೆ ತೋರುತ್ತಿರುವ ಮತ್ತು ಜಾಗತಿಕ ನಾಯಕತ್ವ ವಹಿಸುತ್ತಿರುವ ಭಾರತವು ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ (ಯುಎನ್‌ಎಸ್‌ಸಿ) ಕಾಯಂ ಸದಸ್ಯತ್ವ ಪಡೆಯಲು ಅರ್ಹವಾಗಿದೆ ಎಂದು ಭೂತಾಪ್‌ ಪ್ರಧಾನಿ ಶೆರಿಂಗ್‌ ಟೊಬಗೆ ಹೇಳಿದ್ದಾರೆ. ತೀರಾ ಹಿಂದುಳಿದ ದೇಶಗಳ (ಎಲ್‌ಡಿಸಿ) ಕೆಟಗರಿಯಿಂದ ಪ್ರಗತಿಯತ್ತ ಮುನ್ನಡೆಯಲು ಭೂತಾನ್‌ಗೆ ಭಾರತ ನೀಡಿದ ನೆರವು ಮತ್ತು ಸ್ನೇಹಕ್ಕಾಗಿ, ಟೊಬಗೆ ಕೃತಜ್ಞತೆ ಸಲ್ಲಿಸಿದ್ದಾರೆ. ವಿಶ್ವಸಂಸ್ಥೆಯ ಮಹಾ ಅಧಿವೇಶನದ 79ನೇ ಸಭೆಯಲ್ಲಿ ಮಾತನಾಡಿದ ಅವರು, ವಿಶ್ವಸಂಸ್ಥೆಯು ಪ್ರಸ್ತುತ …

Read More »

ಸೇತುವೆ ಸುರಕ್ಷತೆ ಕುರಿತ ಅಂತರರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ

ಬೆಂಗಳೂರು: ದೇಶದಾದ್ಯಂತ ಸೇತುವೆಗಳು ಕುಸಿದ ಹಲವು ಪ್ರಕರಣಗಳು ನಡೆದಿವೆ. ಆ ಸೇತುವೆ ನಿರ್ಮಾಣಕ್ಕಾಗಿ ವಿಸ್ತೃತ ಯೋಜನಾ ವರದಿ (ಡಿಪಿಆರ್‌) ಸಿದ್ಧಪಡಿಸಿದ ಸಿಬ್ಬಂದಿಯಿಂದ ಲೋಪವಾಗಿದ್ದು, ಸೇತುವೆ ಕುಸಿಯಲು ಆ ಸಿಬ್ಬಂದಿಯೇ ಕಾರಣ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಹೇಳಿದರು. ರಾಜ್ಯ ಲೋಕೋಪಯೋಗಿ ಇಲಾಖೆ, ಇಂಡಿಯನ್‌ ರೋಡ್‌ ಕಾಂಗ್ರೆಸ್‌, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಮತ್ತು ಅಂತರರಾಷ್ಟ್ರೀಯ ರೋಡ್‌ ಕಾಂಗ್ರೆಸ್‌ ಜಂಟಿಯಾಗಿ ನಗರದಲ್ಲಿ …

Read More »

ವಿಧಾನಮಂಡಲದ ವಿವಿಧ ಸ್ಥಾಯಿ ಸಮಿತಿಗಳ ರಚನೆ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ವಿಧಾನಮಂಡಲದ ವಿವಿಧ ಸ್ಥಾಯಿ ಸಮಿತಿಗಳ ರಚನೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ವಿಧಾನಮಂಡಲದ/ವಿಧಾನಸಭೆಯ ವಿವಿಧ ಸ್ಥಾಯಿ ಸಮಿತಿಗಳಿಗೆ ಸದಸ್ಯರುಗಳು ನಾಮನಿರ್ದೇಶನ ಹೊಂದಿರುತ್ತಾರೆಂದು ಆದೇಶದಲ್ಲಿ ತಿಳಿಸಿರುತ್ತಾರೆ. ಕರ್ನಾಟಕ ವಿಧಾನಸಭೆಯ ಕಾರ್ಯವಿಧಾನ ಮತ್ತು ನಡವಳಿಕೆ ನಿಯಮ 211(2)ರ ಮೇರೆಗೆ, ಮಾನ್ಯ ಸಭಾಧ್ಯಕ್ಷರು ಶ್ರೀ ಸಿ.ಸಿ. ಪಾಟೀಲ್ ಅವರನ್ನು ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಿರುತ್ತಾರೆ ಎಂದು ಸುತ್ತೋಲೆ ಹೊರಡಿಸಲಾಗಿದೆ.

Read More »

ವೆಂಕಟೇಶ ಬುಳ್ಳಾ ಅತ್ಯುತ್ತಮ ಜಿಲ್ಲಾ ವಿಪತ್ತು ಸಲಹೆಗಾರ ಪ್ರಶಸ್ತಿಯನ್ನು ಸ್ವೀಕಾರ

ಬೆಂಗಳೂರು : ವಿಕಾಸಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರಿಂದ ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿನ ವಿಪತ್ತು ನಿರ್ವಹಣಾ ಕೋಶದ ಸಲಹೆಗಾರ ವೆಂಕಟೇಶ ಬುಳ್ಳಾ ಅತ್ಯುತ್ತಮ ಜಿಲ್ಲಾ ವಿಪತ್ತು ಸಲಹೆಗಾರ ಪ್ರಶಸ್ತಿಯನ್ನು ಸ್ವೀಕರಿಸಿದರು.

Read More »

ಭಾರತೀಯ ಸೇನೆಯ ಫಿರಂಗಿ ದಳದ ಸಾಮರ್ಥ್ಯ ಹೆಚ್ಚಳ

ನವದೆಹಲಿ: ಚೀನಾ ಗಡಿಯಲ್ಲಿ ನಿಯೋಜನೆಗೊಂಡಿರುವ ಭಾರತೀಯ ಸೇನೆಯ ಫಿರಂಗಿ ದಳವು ಅತ್ಯಾಧುನಿಕ ಯುದ್ಧ ಸಾಮಗ್ರಿಗಳನ್ನು ಹೊಂದುವ ಮೂಲಕ ತನ್ನ ಸಾಮರ್ಥ್ಯ ಹೆಚ್ಚಿಸುತ್ತಿದೆ. ರಾಷ್ಟ್ರೀಯ ಭದ್ರತೆಗೆ ಎದುರಾಗಿರುವ ಸವಾಲುಗಳನ್ನು ಮನಗಂಡು ಫಿರಂಗಿ ದಳದ ಸಾಮರ್ಥ್ಯವನ್ನು ಹೆಚ್ಚಿಸಲು ವಿವಿಧ ಯುದ್ಧ ಸಲಕರಣೆಗಳನ್ನು ಖರೀದಿಸಲಾಗುತ್ತಿದೆ ಎಂದು ಸೇನೆಯ ಫಿರಂಗಿ ದಳದ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅದೋಷ್ ಕುಮಾರ್ ತಿಳಿಸಿದ್ದಾರೆ. ಫಿರಂಗಿ ದಳವನ್ನು ನಾವು ಹಿಂದೆಂದೂ ಕಾಣದಂತಹ ವೇಗದಲ್ಲಿ ಅಧುನೀಕರಣಗೊಳಿಸುತ್ತಿದ್ದೇವೆ ಎಂದು ಆರ್ಟಿಲರಿ ರೆಜಿಮೆಂಟ್‌ನ (ಫಿರಂಗಿ …

Read More »

ಯಾದಗಿರಿಯಲ್ಲಿ ಪ್ರವಾಸಿ ತಾಣಗಳಿಗೆ ಸೂಕ್ತ ಸೌಲಭ್ಯದ ಕೊರತೆ

ಯಾದಗಿರಿ: ಜಿಲ್ಲೆಯ 6 ತಾಲ್ಲೂಕುಗಳಲ್ಲಿ ಪ್ರಾಗೈತಿಹಾಸಿಕ, ಐತಿಹಾಸಿಕ ಪ್ರವಾಸಿ ತಾಣಗಳಿದ್ದು, ನಿರ್ಲಕ್ಷ್ಯಕ್ಕೆ ಒಳಗಾಗಿವೆ. ಪ್ರವಾಸಿ ತಾಣಗಳಿಗೆ ಸೂಕ್ತ ಸೌಲಭ್ಯ ಇಲ್ಲದಿರುವುದು ದೊಡ್ಡ ಕೊರತೆಯಾಗಿದೆ. ಕೃಷ್ಣಾ ಮತ್ತು ಭೀಮಾ ನದಿಗಳು ಜಿಲ್ಲೆಯಲ್ಲಿ ಹರಿಯುತ್ತಿವೆ. ಯಾದಗಿರಿ ತಾಲ್ಲೂಕಿನ ಹತ್ತಿಕುಣಿ, ಸೌದಗಾರ್‌ ಬಳಿ ಎರಡು ಚಿಕ್ಕ ಜಲಾಶಯಗಳಿವೆ. ನಾರಾಯಣಪುರದಲ್ಲಿ ದೊಡ್ಡ ಜಲಾಶಯವಿದೆ. ಕೋಟೆ ಸೇರಿದಂತೆ ಬೆಟ್ಟಗುಡ್ಡಗಳಿಂದ ಆವೃತ್ತವಾಗಿರುವ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶಗಳಿವೆ. ಆದರೆ, ಅವುಗಳನ್ನು ಜನರಿಗೆ ಪ್ರವಾಸಿ ತಾಣವಾಗಿ ರೂಪಿಸಿ ಅವುಗಳಿಂದ ಆದಾಯ …

Read More »