ವಿಜಯಪುರ: ಜಿಲ್ಲೆಯಾದ್ಯಂತ ಸೋಮವಾರ ರಾತ್ರಿಯಿಡೀ ಸುರಿದ ಧಾರಕಾರ ಮಳೆಯ ಹಿನ್ನೆಲೆಯಲ್ಲಿ ಕೂಡಲೇ ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ್ದೇನೆ. ಎಲ್ಲ ತಾಲೂಕುಗಳ ತಹಸೀಲ್ದಾರರಿಂದ ಮಳೆಯ ಪ್ರಮಾಣ ಮತ್ತು ಅದರಿಂದ ಉಂಟಾಗಿರುವ ಆಸ್ತಿ ಪಾಸ್ತಿ ಹಾನಿಯ ಕುರಿತು ಕೂಡಲೇ …
Read More »ಹಂತ ಹಂತವಾಗಿ ರಾಜೀವ್ ವಿವಿ ರಾಮನಗರಕ್ಕೆ ಸ್ಥಳಾಂತರ: ಡಿಸಿಎಂ ಡಿಕೆಶಿ
ಬೆಂಗಳೂರು: ರಾಜೀವ್ ಗಾಂಧಿ ವೈದ್ಯಕೀಯ ವಿವಿಯನ್ನು ಹಂತ ಹಂತವಾಗಿ ರಾಮನಗರಕ್ಕೆ ಸ್ಥಳಾಂತರ ಹಾಗೂ ಕನಕಪುರ ಮೆಡಿಕಲ್ ಕಾಲೇಜಿಗೆ ಮೂಲಸೌಕರ್ಯ ಹೆಚ್ಚಿಸಿ ಎನ್ ಎಂ ಸಿ (ನ್ಯಾಷನಲ್ ಮೆಡಿಕಲ್ ಕಮಿಷನ್)ಗೆ ಮರು ಅರ್ಜಿ ಸಲ್ಲಿಸಲು ತೀರ್ಮಾನಿಸಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ರಾಮನಗರ ಹಾಗೂ ಕನಕಪುರ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆ ಹಾಗೂ ಕಾರ್ಯಾರಂಭ ಸಂಬಂಧ ವಿಧಾನಸೌಧದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್, ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್, …
Read More »ಶ್ರೀಲಂಕಾದ ನೂತನ ಪ್ರಧಾನಿಯಾಗಿ ಹರಿಣಿ ಅಮರಸೂರ್ಯ ಪ್ರಮಾಣ ವಚನ ಸ್ವೀಕಾರ
ಶ್ರೀಲಂಕಾ: ಶ್ರೀಲಂಕಾದ ನೂತನ ಪ್ರಧಾನಿಯಾಗಿ 54 ವರ್ಷದ ನ್ಯಾಷನಲ್ ಪೀಪಲ್ಸ್ ಪವರ್(ಎನ್ಪಿಪಿ) ಪಕ್ಷದ ನಾಯಕಿ ಹರಿಣಿ ಅಮರಸೂರ್ಯ ಅವರು ಮಂಗಳವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಶ್ರೀಲಂಕಾ ಅಧ್ಯಕ್ಷರಾಗಿ ಚುನಾಯಿತರಾದ ಅನುರಾ ಕುಮಾರ ದಿಸ್ಸಾನಾಯಕೆ ಅವರು ಹರಿಣಿ ಅಮರಸೂರ್ಯ ಅವರನ್ನು ಪ್ರಧಾನಿಯಾಗಿ ನೇಮಕ ಮಾಡಿದ್ದು, ಪ್ರಮಾಣ ವಚನ ಬೋಧಿಸಿದ್ದಾರೆ. ಮಾನವ ಹಕ್ಕುಗಳ ಕಾರ್ಯಕರ್ತೆ ಮತ್ತು ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕರಾಗಿದ್ದ ಹರಿಣಿ ಅಮರಸೂರ್ಯ ಅವರು 2000ನೇ ವರ್ಷದಲ್ಲಿ ಸಿರಿಮಾವೋ ಬಂಡಾರನಾಯಕೆ ನಂತರ ಪ್ರಧಾನಿ ಹುದ್ದೆ …
Read More »ಶೌಚಾಲಯಗಳ ನಿರ್ಮಾಣಕ್ಕೆ ಅನುದಾನ ಬಳಕೆ ಮಾಡದ 318 ಪಿಡಿಒಗಳ ಅಮಾನತಿಗೆ ಸೂಚನೆ
ಬೆಂಗಳೂರು: ನಿಗದಿತ ಅವಧಿಯ ಒಳಗೆ ಶೌಚಾಲಯಗಳ ನಿರ್ಮಾಣಕ್ಕೆ ಅನುದಾನ ಬಳಕೆ ಮಾಡದ 318 ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು (ಪಿಡಿಒ) ಅಮಾನತು ಮಾಡಲು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸೂಚಿಸಿದೆ. ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ವೈಯಕ್ತಿಕ ಶೌಚಾಲಯ ನಿರ್ಮಾಣ ಮಾಡಲು ಸಿಟಿಜನ್ ಪೋರ್ಟಲ್ ಮೂಲಕ ಸಲ್ಲಿಕೆಯಾದ ಬೇಡಿಕೆ ಆಧಾರದಲ್ಲಿ ಪ್ರತಿ ಪಂಚಾಯಿತಿವಾರು ಪಟ್ಟಿ ಸಿದ್ಧಪಡಿಸಲಾಗಿತ್ತು. ಎಲ್ಲ ಪಂಚಾಯಿತಿಗಳಿಂದ ಸಲ್ಲಿಕೆಯಾಗಿದ್ದ 4.85 ಲಕ್ಷ ಶೌಚಾಲಯಗಳಲ್ಲಿ 3.60 ಲಕ್ಷ ಶೌಚಾಲಯಗಳಿಗೆ …
Read More »ಕಲಬುರಗಿ ಜಿಲ್ಲೆಯಲ್ಲಿ ಹೊಸದಾಗಿ 7 ನಮ್ಮ ಕ್ಲಿನಿಕ್ ಗಳ ಮಂಜೂರು
ಕಲಬುರಗಿ: ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿನ ಸಾಮಾನ್ಯ ಜನರಿಗೆ ಉಚಿತ ಆರೋಗ್ಯ ಸೇವೆ ಒದಗಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಹೊಸದಾಗಿ ಏಳು ನಮ್ಮ ಕ್ಲಿನಿಕ್ ಗಳನ್ನು ಜಿಲ್ಲೆಗೆ ಮಂಜೂರು ಮಾಡಿದೆ. ಅವುಗಳಿಗೆ ಜಿಲ್ಲಾ ಆರೋಗ್ಯ ಅಧಿಕಾರಿಗಳು ಸ್ಥಳವನ್ನೂ ಗುರುತಿಸಿದ್ದಾರೆ. ಪ್ರಸ್ತುತ ನಗರ ವ್ಯಾಪ್ತಿಯಲ್ಲಿ ಶ್ರೀರಾಮ ನಗರ, ಸಂತ್ರಾಸವಾಡಿಯ ನಯಾ ಮೊಹಲ್ಲಾ, ಕಪನೂರ ಕೈಗಾರಿಕೆ ಪ್ರದೇಶ, ರಾಮಜಿ ನಗರ, ರಾಜಾಪೂರ, ಕೋಟನೂರ ಹಾಗೂ ಬಂಬೂ ಬಜಾರ್ ಸೇರಿ 7 …
Read More »ಯಲಹಂಕದಲ್ಲಿ ಮೊದಲ ಅನಿಲ ಆಧಾರಿತ ವಿದ್ಯುತ್ ಸ್ಥಾವರ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ವಿದ್ಯುತ್ ಸ್ವಾವಲಂಬನೆ ಸಾಧಿಸುವ ನಿಟ್ಟಿನಲ್ಲಿ 2030ಕ್ಕೆ ರಾಜ್ಯದಿಂದ 60 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಗುರಿ ಇಟ್ಟುಕೊಂಡಿದ್ದು, ಇದಕ್ಕಾಗಿ ವಿವಿಧ ಮೂಲಗಳಿಂದ ಉತ್ಪಾದನೆಯ ಕಾರ್ಯಯೋಜನೆ ರೂಪಿಸಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ಸ್ಥಾಪಿಸಿರುವ ರಾಜ್ಯದ ಮೊಟ್ಟ ಮೊದಲ 370 ಮೆಗಾವ್ಯಾಟ್ ಸಾಮರ್ಥ್ಯದ ಅನಿಲ ಆಧಾರಿತ ಯಲಹಂತ ಸಂಯುಕ್ತ ವಿದ್ಯುತ್ ಸ್ಥಾವರವನ್ನು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಇಂಧನ ಸಚಿವ ಕೆ.ಜೆ.ಜಾರ್ಜ್ ಜೊತೆಗೂಡಿ ಉದ್ಘಾಟಿಸಿ …
Read More »ಎನ್ ಎಸ್ ಐ ಸಿ ಬಹು ಕೌಶಲ್ಯ ಅಭಿವೃದ್ಧಿ ಕೇಂದ್ರ ಸ್ಥಾಪಿಸಲು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಮನವಿ
ನವದೆಹಲಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿಗೆ ಉದ್ಯಮದ ಬೇಡಿಕೆ ಆಧಾರಿತ ಎನ್ಎಸ್ಐಸಿ ಬಹು ಕೌಶಲ್ಯ ಅಭಿವೃದ್ಧಿ ಕೇಂದ್ರವನ್ನು ಮಂಜೂರು ಮಾಡುವಂತೆ ರಾಜ್ಯ ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ಕೇಂದ್ರದ ಸಣ್ಣ, ಮದ್ಯಮ ಕೈಗಾರಿಕೆ ಹಾಗೂ ಕಾರ್ಮಿಕ ಸಚಿವರಾದ ಶೋಭಾ ಕರಂದ್ಲಾಜೆ ಅವರಿಗೆ ಮನವಿ ಮಾಡಿದ್ದಾರೆ. ಮಂಗಳವಾರ ನವದೆಹಲಿಯ ಇಎಸ್ಐಸಿ ಭವನದಲ್ಲಿ ಕೇಂದ್ರದ ಸೂಕ್ಷ್ಮ ಮತ್ತು ಸಣ್ಣ ,ಮದ್ಯಮ ಕೈಗಾರಿಕೆ ಹಾಗೂ ಕಾರ್ಮಿಕ ಸಚಿವರಾದ ಶೋಭಾ ಕರಂದ್ಲಾಜೆ …
Read More »ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆ ಕುರಿತು ಸಮಿತಿ ರಚಿಸಿ ಸರ್ಕಾರ ಆದೇಶ
ಬೆಂಗಳೂರು: ಕರ್ನಾಟಕ ಸರ್ಕಾರ ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಗಳ ಕುರಿತು ಗಮನಹರಿಸಿದ್ದು, ವಿವಿಧ ಬೇಡಿಕೆಗಳನ್ನು ಶಿಕ್ಷಕರು ಸರ್ಕಾರದ ಮುಂದೆ ಇಟ್ಟಿದ್ದಾರೆ. ಆದ್ದರಿಂದ ಸರ್ಕಾರ ಈ ಕುರಿತು ಪರಿಶೀಲಿಸಿ ವರದಿ ನೀಡಲು ಸಮಿತಿಯನ್ನು ರಚಿಸಿ ಆದೇಶಿಸಿದೆ. ಒಂದು ತಿಂಗಳಿನಲ್ಲಿ ವರದಿ ಸಲ್ಲಿಸಬೇಕು ಎಂದು ಸಮಿತಿಗೆ ಗಡುವು ನಿಗದಿ ಮಾಡಲಾಗಿದೆ. ಈ ಕುರಿತು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಎಂ. ಎ. ಮಹಾಲಕ್ಷ್ಮಿ ಸರ್ಕಾರದ ಅಧೀನ ಕಾರ್ಯದರ್ಶಿ, ಶಾಲಾ ಶಿಕ್ಷಣ …
Read More »ಜಮ್ಮುಮತ್ತುಕಾಶ್ಮೀರದಲ್ಲಿ ಎರಡನೇ ಹಂತದ ಮತದಾನ: ಮುಂಜಾಗ್ರತಾ ಕ್ರಮವಾಗಿ ಬಿಗಿ ಭದ್ರತೆ
ಜಮ್ಮುಮತ್ತು ಕಾಶ್ಮೀರ: 10 ವರ್ಷಗಳ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿದ್ದು, ಈಗಾಗಲೇ ಮೊದಲ ಹಂತದಲ್ಲಿ 24 ಕ್ಷೇತ್ರಗಳಲ್ಲಿ ಶಾಂತಿಯುತವಾಗಿ ಮತದಾನ ನಡೆದಿದೆ. ಇದೀಗ ಎರಡನೇ ಹಂತದ ಚುನಾವಣೆ ನಾಳೆ (ಬುಧವಾರ) ನಡೆಯಲಿದ್ದು, ಮುಂಜಾಗ್ರತಾ ಕ್ರಮವಾಗಿ ಭಾರಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ರಜೌರಿ ಜಿಲ್ಲೆಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಎಲ್ಲಾ ವಾಹನಗಳನ್ನು ತಪಾಸಣೆ ಮಾಡಲಾಗುತ್ತಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಯಾವುದೇ ಅಹಿತಕರ ಘಟನೆ …
Read More »ಬೆಂಗಳೂರಿನಲ್ಲಿ ಸೆ.28 ರಂದು ನೂತನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಉದ್ಘಾಟನೆ
ಬೆಂಗಳೂರು: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸೆಪ್ಟೆಂಬರ್ 27 ರಂದು ತನ್ನ ವಾರ್ಷಿಕ ಮಹಾಸಭೆ ನಡೆಸಲಿದ್ದು, ಇದರ ಬೆನ್ನಲ್ಲೇ ಸೆಪ್ಟೆಂಬರ್ 28ರಂದು ಬೆಂಗಳೂರಿನಲ್ಲಿ ನೂತನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಅನ್ನು ಉದ್ಘಾಟನೆ ಮಾಡಲಿದೆ ಎಂಬುದು ಬೆಳವಣಿಗೆಗೆ ಹತ್ತಿರದ ಮೂಲಗಳಿಂದ ಖಾತ್ರಿಯಾಗಿದೆ. ನೂತನ ಅತ್ಯಾಧುನಿಕ ಕ್ರಿಕೆಟ್ ಅಕಾಡೆಮಿಯ ಉದ್ಘಾಟನೆಯನ್ನು ಬಿಸಿಸಿಐ ಖಾತ್ರಿ ಪಡಿಸಿದೆ. ಬಿಸಿಸಿಐ ಮಾಜಿ ಕಾರ್ಯದರ್ಶಿ ಜಯ ಶಾ ಈ ಕುರಿತಾಗಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ (ಕೆಎಸ್ಸಿಎ) …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





