Breaking News

BigTv News

ಹೈಕೋರ್ಟ್ ತೀರ್ಪು ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಕೇರಳ ಪ್ರವಾಸ

ಬೆಂಗಳೂರು : ಮುಡಾ ಹಗರಣ ಸಂಬಂಧ ಹೈಕೋರ್ಟ್ ಆದೇಶ ಹೊರ ಬೀಳುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಕೇರಳ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಕೇರಳಕ್ಕೆ ತೆರಳಲಿರುವ ಸಿಎಂ ಸಿದ್ದರಾಮಯ್ಯ, ಕೇರಳದ ಮಲಪುರಂ ಜಿಲ್ಲೆಯಲ್ಲಿ ನಡೆಯಲಿರುವ ಆರ್ಯಧನ್ ಪ್ರಶಸ್ತಿ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ. ಪ್ರಾಸಿಕ್ಯೂಷನ್ ಗೆ ಅನುಮತಿ ಪ್ರಶ್ನಿಸಿದ್ದ ಸಿಎಂ ಸಿದ್ದರಾಮಯ್ಯ ಅರ್ಜಿಯನ್ನು ವಜಾಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಹಾಗೂ ರಾಜ್ಯಪಾಲರ ನಿರ್ಧಾರ ಸರಿ ಇದೆ ಎಂದು ಹೈಕೋರ್ಟ್ ತೀರ್ಪು ಪ್ರಕಟಿಸಿದೆ.

Read More »

ಭಾರತದಲ್ಲಿ ನ್ಯಾಷನಲ್ ಸೆಕ್ಯೂರಿಟಿ ಸೆಮಿಕಂಡಕ್ಟರ್ ಫ್ಯಾಬ್ರಿಕೇಶನ್ ಘಟಕ ಸ್ಥಾಪನೆ

ನವದೆಹಲಿ: ಅಮೆರಿಕದ ಸಹಭಾಗಿತ್ವದಲ್ಲಿ ಭಾರತದಲ್ಲಿ ನ್ಯಾಷನಲ್ ಸೆಕ್ಯೂರಿಟಿ ಸೆಮಿಕಂಡಕ್ಟರ್ ಫ್ಯಾಬ್ರಿಕೇಶನ್ ಘಟಕ ಸ್ಥಾಪನೆ ಆಗಲಿದೆ. ಶಕ್ತಿ ಹೆಸರಿನ ಈ ಫ್ಯಾಬ್ ಯೂನಿಟ್ 2025 ರಿಂದ ಕಾರ್ಯಾರಂಭ ಮಾಡುವ ಸಾಧ್ಯತೆ ಇದೆ. ಇದು ಭಾರತದ ಮೊದಲ ಸೆಕ್ಯೂರಿಟಿ ಸೆಮಿಕಂಡಕ್ಟರ್ ಫ್ಯಾಬ್ ಯೂನಿಟ್ ಆಗಲಿದೆ. ಇಂಡಿಯಾ ಸೆಮಿಕಂಡಕ್ಟರ್ ಮಿಷನ್ ಈ ಯೋಜನೆ ಮುನ್ನಡೆಸಲಿದೆ. ಭಾರತ್ ಸೆಮಿ, ಥರ್ಡ್ ಐ ಟೆಕ್ ಯುಎಸ್ ಸ್ಪೇಸ್ ಫೋರ್ಸ್ ಸಂಸ್ಥೆಗಳ ಸಹಭಾಗಿತ್ವದಲ್ಲಿ ಯೂನಿಟ್ ರೂಪುಗೊಳ್ಳಲಿದೆ. ಈ ಘಟಕದಲ್ಲಿ …

Read More »

ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಉರ್ದು ಕಡ್ಡಾಯ: ಆದೇಶಕ್ಕೆ ರಾಜ್ಯಾದ್ಯಂತ ಭಾರೀ ವಿರೋಧ

ಬೆಂಗಳೂರು: ಕರ್ನಾಟಕ ಸರ್ಕಾರವು ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಂಗನವಾಡಿ ಕೇಂದ್ರಗಳ ಶಿಕ್ಷಕರ ಹುದ್ದೆಗೆ ಉರ್ದು ಭಾಷೆ ಕಡ್ಡಾಯ ಮಾಡಿರುವುದು ವಿವಾದಕ್ಕೆ ಕಾರಣವಾಗಿದೆ. ಸರ್ಕಾರದ ನಡೆ ಖಂಡಿಸಿ ಕನ್ನಡ ಪರ ಸಂಘಟನೆಗಳು ಹಾಗೂ ಬಿಜೆಪಿ ಮುಖಂಡರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಉರ್ದು ಭಾಷೆ ಕಡ್ಡಾಯಗೊಳಿಸಿರುವ ನಿರ್ಧಾರದ ಬಗ್ಗೆ ವಿರೋಧ ಪಕ್ಷ ಬಿಜೆಪಿ ಟೀಕಿಸಿದ್ದು, ಇದು ಕಾಂಗ್ರೆಸ್ ಸರ್ಕಾರದ ಮುಸ್ಲಿಂ ತುಷ್ಟೀಕರಣ ಎಂದು ಆರೋಪಿಸಿದೆ, ಇದಕ್ಕೆ ಕನ್ನಡ ಸಂಘಟನೆಗಳು ಹೋರಾಟ ಮಾಡುವುದಾಗಿ …

Read More »

ಹರಿಣಿ ಅಮರಸೂರ್ಯ ಶ್ರೀಲಂಕಾದ ನೂತನ ಪ್ರಧಾನಿಯಾಗಿ ನೇಮಕ

ಶ್ರೀಲಂಕಾ: ಶ್ರೀಲಂಕಾದ ನೂತನ ಅಧ್ಯಕ್ಷ ಅನುರಾ ಕುಮಾರ ದಿಸ್ಸಾನಾಯಕೆ ಅವರು ರಾಷ್ಟ್ರದ ನೂತನ ಪ್ರಧಾನಿಯಾಗಿ ಹರಿಣಿ ಅಮರಸೂರ್ಯ ಅವರನ್ನು ಮಂಗಳವಾರ ನೇಮಕ ಮಾಡಿದ್ದಾರೆ. ಶನಿವಾರ ನಡೆದ ಚುನಾವಣೆಯಲ್ಲಿ ದಿಸ್ಸಾನಾಯಕೆ ಅಧ್ಯಕ್ಷರಾಗಿ ಆಯ್ಕೆಯಾದರು. ವಿಶ್ವವಿದ್ಯಾಲಯದ ಉಪನ್ಯಾಸಕ ಅಮರಸೂರ್ಯ ಅವರು 2020ರಲ್ಲಿ ನ್ಯಾಷನಲ್ ಪೀಪಲ್ಸ್ ಪವರ್ ಅಧಿಕಾರಕ್ಕೆ ಬಂದಾಗಿನಿಂದ ಸಂಸತ್ತಿನ ಸದಸ್ಯರಾಗಿದ್ದಾರೆ. ಅವರು ಶ್ರೀಲಂಕಾದ ಇತಿಹಾಸದಲ್ಲಿ ಮೂರನೇ ಮಹಿಳಾ ಪ್ರಧಾನಿಯಾದರು ಪ್ರಧಾನ ಮಂತ್ರಿಯಾಗಿ, ನ್ಯಾಯಾಂಗ, ಶಿಕ್ಷಣ, ಕೈಗಾರಿಕೆಗಳು, ವಿಜ್ಞಾನ ಮತ್ತು ತಂತ್ರಜ್ಞಾನ ಸೇರಿದಂತೆ …

Read More »

ಪುಣೆ ವಿಮಾನ ನಿಲ್ದಾಣಕ್ಕೆ ಮರುನಾಮಕರಣ: ಜಗದ್ಗುರು ಸಂತ ತುಕಾರಾಂ ಮಹಾರಾಜ್ ಹೆಸರಿಡಲು ನಿರ್ಧಾರ

ಮುಂಬೈ: ಪುಣೆ ವಿಮಾನ ನಿಲ್ದಾಣಕ್ಕೆ ಜಗದ್ಗುರು ಸಂತ ತುಕಾರಾಂ ಮಹಾರಾಜ್ ವಿಮಾನ ನಿಲ್ದಾಣ ಎಂದು ಮರುನಾಮಕರಣ ಮಾಡುವಂತೆ ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ. ಪುಣೆಯ ಲೋಹೆಗಾಂವ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಜಗದ್ಗುರು ಸಂತ ತುಕಾರಾಂ ಮಹಾರಾಜ್ ಪುಣೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಯನ್ನು ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ ಅನುಮೋದಿಸಿದೆ. ಇದಕ್ಕೂ ಮೊದಲು ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಪುಣೆ ಅಂತರಾಷ್ಟ್ರೀಯ …

Read More »

ಸಿದ್ದರಾಮಯ್ಯ ರಾಜೀನಾಮೆ ಅಗತ್ಯವಿಲ್ಲ: ಸಿಎಂ ಪರ ನಿಂತ ಕಾಂಗ್ರೆಸ್ ಹೈಕಮಾಂಡ್

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ(ಮುಡಾ) ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಕ್ರಿಮಿನಲ್ ಪ್ರಕರಣದ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಹೈಕೋರ್ಟ್‌ ಪುರಸ್ಕರಿಸಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಕೀಯವಾಗಿ ಹಿನ್ನಡೆ ಅನುಭವಿಸಿದ್ದಾರೆ. ಸಿದ್ದರಾಮಯ್ಯ ಅವರ ರಾಜೀನಾಮೆಗೂ ವಿರೋಧ ಪಕ್ಷಗಳ ಒತ್ತಡ ತೀವ್ರವಾಗಿದೆ. ಆದರೆ, ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ಅವಶ್ಯಕತೆ ಇಲ್ಲ ಹಾಗೂ ಅವರ ಹಿಂದೆ ಬಲವಾಗಿ ನಿಲ್ಲುವುದಾಗಿ ಕಾಂಗ್ರೆಸ್‌ ಪಕ್ಷ ಸ್ಪಷ್ಟ ಪಡಿಸಿದೆ. ಕಾಂಗ್ರೆಸ್‌ ಹೈಕಮಾಂಡ್ …

Read More »

ಕಸ್ತೂರಬಾ ವಸತಿ ಶಾಲೆಯಲ್ಲಿ ಉಪಹಾರ ಸೇವಿಸಿದ 10 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ರಾಯಚೂರು: ಕಸ್ತೂರಬಾ ವಸತಿ ಶಾಲೆಯಲ್ಲಿ ಉಪಹಾರ ಸೇವಿಸಿದ ಹತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಆಲ್ಕೊಡ ಗ್ರಾಮದಲ್ಲಿ ನಡೆದಿದೆ. ಉಪಹಾರ ಸೇವಿಸಿದ ಬಳಿಕ ಹತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ, ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನ ಅರಕೇರಾ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇಂದು ಬೆಳಗ್ಗೆ ನೀಡಿದ ಚಿತ್ರಾನ್ನ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ತಿಂಗಳ ಹಿಂದೆಯಷ್ಟೆ ಆಹಾರದಲ್ಲಿ ವಿಷ ಬೇರೆಸಿದ್ದ ಪ್ರಕರಣ ಮಾಸುವ ಮುನ್ನವೇ ಮತ್ತೊಂದು …

Read More »

ಉಪಚುನಾವಣೆ ಗೆಲ್ಲಲು ಬಿಜೆಪಿ ರಾಜ್ಯ ಕೋರ್ ಕಮೀಟಿ ಸಭೆ

ಬೆಂಗಳೂರು: ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಮುಂಬರುವ ಉಪ ಚುನಾವಣೆಗೆ ಸಂಬಂಧಿಸಿ ವಿಸ್ತ್ರತವಾಗಿ ಚರ್ಚೆ ನಡೆಸಿದ್ದೇವೆ ಎಂದು ರಾಜ್ಯ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಚನ್ನಪಟ್ಟಣ, ಸೊಂಡೂರು ಮತ್ತು ಶಿಗ್ಗಾಂವಿ ಉಪ ಚುನಾವಣೆ ಯಾವುದೇ ಸಮಯದಲ್ಲಿ ಘೋಷಣೆ ಆಗಬಹುದು. 3 ಉಪ ಚುನಾವಣೆಗಳನ್ನು ಸವಾಲಾಗಿ ಸ್ವೀಕರಿಸಿ, ಗೆಲ್ಲುವ ದೃಷ್ಟಿಯಿಂದ ವಿಶೇಷ ಪ್ರಯತ್ನ …

Read More »

ಯಾವ ತನಿಖೆಗೂ ಹಿಂಜರಿಯುವುದಿಲ್ಲ, ಸತ್ಯಕ್ಕೆ ಜಯ ಸಿಗಲಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಹೈಕೋರ್ಟ್ ಆದೇಶದ ಅಂಶಗಳನ್ನು ಮಾಧ್ಯಮದ ಮೂಲಕ ತಿಳಿದುಕೊಂಡಿದ್ದೇನೆ, ಆದೇಶ ಪ್ರತಿ ಪಡೆದು ಓದಿದ ಬಳಿಕ‌ ಪ್ರತಿಕ್ರಿಯೆ ನೀಡುತ್ತೇನೆ. ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ. ಕಾನೂನು ಅಡಿ ಅಂತಹ ತನಿಖೆಗೆ ಅವಕಾಶ ಇದೆಯೋ ಇಲ್ಲವೋ ಎಂಬ ಬಗ್ಗೆ ತಜ್ಞರ ಜೊತೆ ಸಮಾಲೋಚಿಸುತ್ತೇನೆ, ಕಾನೂನು ತಜ್ಞರ ಜೊತೆ ಚರ್ಚಿಸಿ ಹೋರಾಟದ ರೂಪುರೇಷೆ ನಿರ್ಧರಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯಪಾಲರ ಪ್ರಾಸಿಕ್ಯೂಷನ್ ಹೈಕೋರ್ಟ್ ಎತ್ತಿ ಹಿಡಿದ ಬಳಿಕ ಮೊದಲ ಪ್ರತಿಕ್ರಿಯೆ ನೀಡಿರುವ ಅವರು …

Read More »

ವಿಜಯಪುರದ ಬಿ ಎಲ್ ಡಿ ಇ ಆಸ್ಪತ್ರೆಯಲ್ಲಿ ಅಮೃತಧಾರೆ ತಾಯಿಹಾಲು ಕೇಂದ್ರ ಸ್ಥಾಪನೆ

ವಿಜಯಪುರ: ಜಿಲ್ಲೆಯ ಪ್ರತಿಷ್ಠಿತ ಬಿ.ಎಲ್.ಡಿ.ಇ ಆಸ್ಪತ್ರೆಯಲ್ಲಿ ಉಚಿತ ಹೆರಿಗೆ ಸೇವೆ ಜೊತೆಗೆ ಕಳೆದ ಸುಮಾರು ಒಂದೂವರೇ ವರ್ಷದಿಂದ ಅಮೃತಧಾರೆ ತಾಯಿಹಾಲು ಕೇಂದ್ರ ಸ್ಥಾಪನೆಯಾಗಿದ್ದು, ಹುಟ್ಟಿದ ಮಗುವಿಗೆ ಜೀವಾ ಮೃತವಾಗಿರುವ ತಾಯಿ ಎದೆ ಹಾಲು ವಂಚಿತ ಸಾವಿರಾರು ನವಜಾತ ಶಿಶುಗಳಿಗೆ ಬಿ.ಎಲ್.ಡಿ.ಇ ಉಚಿತವಾಗಿ ತಾಯಿ ಹಾಲು ಒದಗಿಸುವ ಮೂಲಕ ಕಾಮಧೇನುವಿನಂತೆ ಸಮಾಜಮುಖಿ ಸೇವೆಗೈಯುತ್ತಿದೆ. ಕಳೆದ ಒಂದೂವರೇ ವರ್ಷಗಳ ಹಿಂದೆ ಆರಂಭಿಸಲಾದ ಸುಸಜ್ಜಿತ ಅಮೃತಧಾರೆ ತಾಯಿ ಹಾಲಿನ ಭಂಡಾರದಿಂದ ಇಲ್ಲಿಯವರೆಗೂ 1800 ಕ್ಕೂ …

Read More »