Breaking News

BigTv News

ಭಾರೀ ಮಳೆ: ಸಿಡಿಲಬ್ಬರಕ್ಕೆ ಐವರು ಸ್ಥಳದಲ್ಲೇ ಸಾವು

ಯಾದಗಿರಿ: ಯಾದಗಿರಿ ಜಿಲ್ಲೆಯಾದ್ಯಂತ ಸೋಮವಾರ ಗುಡುಗು ಸಹಿತ ಭಾರೀ ಮಳೆ ಸುರಿದಿದ್ದು, ಸಿಡಿಲ ಅಬ್ಬರಕ್ಕೆ ಐದು ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಯಾದಗಿರಿ ತಾಲೂಕಿನ ಜನಕೇರ ತಾಂಡದಲ್ಲಿ ದುರ್ಘಟನೆ ನಡೆದಿದೆ. ಚೇನು (22) ಕಿಶನ್ (30) ಸುಮಿ ಬಾಯಿ (30) ಚನ್ನಪ್ಪ ತಂದೆ ನ್ಯಾಮು ಮೃತ ದುರ್ದೈವಿಗಳು. ಮೃತರೆಲ್ಲರು ಜೀ‌ನಕೇರ ತಾಂಡದ ನಿವಾಸಿಗಳು. ಜಮೀನು ಕೆಲಸಕ್ಕೆ ಹೋದಾಗ ಬಿರುಗಾಳಿ ಸಹಿತ ಮಳೆಗೆ ಗುಡಿಯಲ್ಲಿ ಕುಳಿತ್ತಿದ್ದ ವೇಳೆ ಅವಘಡ ಸಂಭವಿಸಿದೆ. …

Read More »

ಎಲ್ಲಾ ಮುಸ್ಲಿಂ ದೇಶಗಳು ಭಾರತದ ವಿರೋಧಿಗಳಲ್ಲ, ಕೆಲವು ದೇಶಗಳು ಉತ್ತಮ ಸ್ನೇಸಸಂಬಂಧ ಹೊಂದಿವೆ: ಸಚಿವ ಸತೀಶ ಜಾರಕಿಹೊಳಿ

ಚಿಕ್ಕೋಡಿ: ರಾಜ್ಯದ ಕೆಲವೆಡೆ ಈದ್ ಮಿಲಾದ್ ಮೆರವಣಿಗೆ ವೇಳೆ ಕಿಡಿಗೇಡಿಗಳು ಪ್ಯಾಲಿಸ್ತೇನ್ ಧ್ವಜ ಹಾರಿಸಿ, ಪ್ಯಾಲಿಸ್ತೇನ್ ಪರ ಘೋಷಣೆ ಕೂಗಿದ್ದರು. ಪಾಕಿಸ್ತಾನ, ಇರಾನ್ ಧ್ವಜವನ್ನೂ ಹಾರಿಸಿದ್ದಾರೆ ಎನ್ನಲಾಗಿತ್ತು. ಇದೀಗ ಪ್ಯಾಲಿಸ್ತೇನ್ ಧ್ವಜ ಹಾರಾಟದ ಕುರಿತಂತೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ. ನಮ್ಮ ವಿರೋಧಿ ದೇಶದ ಧ್ವಜ ಹಾರಾಡಿದ್ರೆ ಕ್ರಮ ಕೈಗೊಳ್ಳಬಹುದು. ಆದರೆ ಎಲ್ಲಾ ಮುಸ್ಲಿಂ ಕಂಟ್ರಿಗಳೂ ಭಾರತ ದೇಶದ ವಿರೋಧಿಗಳಲ್ಲ. ಭಾರತದ ಜೊತೆಗೆ ಕೆಲವು ಮುಸ್ಲಿಂ ದೇಶಗಳು ಸ್ನೇಹ …

Read More »

ಭಾರೀ ಮಳೆ: ಜನಜೀವನ ಅಸ್ತವ್ಯಸ್ತ

ವಿಜಯಪುರ: ಜಿಲ್ಲೆಯಲ್ಲಿ ಸೋಮವಾರ ರಾತ್ರಿ ಸತತವಾಗಿ 5 ಗಂಟೆಗೂ ಅಧಿಕ ಕಾಲ ಭಾರೀ ಮಳೆ ಸುರಿದಿದೆ. ಜನಜೀವನ ಅಸ್ತವ್ಯಸ್ತಗೊಂಡು, ಮನೆ ಅಂಗಡಿಗಳಿಗೆ ಮಳೆ ನೀರು ನುಗ್ಗಿ ಪರದಾಡುವಂತಾಗಿದೆ. ಹಳ್ಳ ಕೊಳ್ಳಗಳು ತುಂಬಿದ್ದು, ತಿಕೋಟಾ ತಾಲೂಕಿನ ಕಳ್ಳಕವಟಗಿ ಗ್ರಾಮದ ಸಂಗಮನಾಥ ದೇವಸ್ಥಾನ ಜಲಾವೃತಗೊಂಡಿದೆ. ಸೋಮವಾರ ರಾತ್ರಿ 8 ಗಂಟೆ ಸುಮಾರಿಗೆ ಆರಂಭವಾದ ಮಳೆ ಇಡೀ ರಾತ್ರಿ ಸತತವಾಗಿ ಅಬ್ಬರಿಸಿತು. ನಗರದಲ್ಲಿ ಜೋರು ಮಳೆ ಸುರಿದರೆ, ಜಿಲ್ಲೆಯ ವಿವಿಧೆಡೆ ಗುಡುಗು ಸಹಿತವಾಗಿ ಸುರಿಯಿತು. …

Read More »

ಮಾನವೀಯತೆ ಯಶಸ್ಸು ಸಾಮೂಹಿಕ ಶಕ್ತಿಯಲ್ಲಿದೆ ಹೊರತು ಯುದ್ಧಭೂಮಿಯಲ್ಲಿಲ್ಲ: ಪ್ರಧಾನಿ ಮೋದಿ

ನ್ಯೂಯಾರ್ಕ್: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನ್ಯೂಯಾರ್ಕ್‌ನಲ್ಲಿ ನಡೆದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮಾತನಾಡಿದ್ದಾರೆ. 79ನೇ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧಿವೇಶನದಲ್ಲಿ ಮಾತನಾಡಿದ ಪಿಎಂ ನರೇಂದ್ರ ಮೋದಿ, ಮಾನವೀಯತೆಯ ಯಶಸ್ಸು ನಮ್ಮ ಸಾಮೂಹಿಕ ಶಕ್ತಿಯಲ್ಲಿದೆಯೇ ಹೊರತು ಯುದ್ಧಭೂಮಿಯಲ್ಲಿ ಇಲ್ಲ. ಜಾಗತಿಕ ಶಾಂತಿ ಮತ್ತು ಅಭಿವೃದ್ಧಿಗಾಗಿ ಜಾಗತಿಕ ಸಂಸ್ಥೆಗಳಲ್ಲಿನ ಸುಧಾರಣೆಗಳು ಮುಖ್ಯ ಎಂದು ಮೋದಿ ಹೇಳಿದ್ದಾರೆ. ಮೂರು ದಿನಗಳ ಭೇಟಿಗಾಗಿ ಅಮೇರಿಕಾದಲ್ಲಿರುವ ಪ್ರಧಾನಿ ಮೋದಿ ಅವರು ತಮ್ಮ ದ್ವಿಪಕ್ಷೀಯ ಮಾತುಕತೆಯ …

Read More »

ತಾಲೂಕಿನ ವಿವಿಧೆಡೆ ಮಳೆ: ರೈತರ ಮೊಗದಲ್ಲಿ ಮಂದಹಾಸ

ಅಫಜಲಪುರ: ತಾಲ್ಲೂಕಿನ ವಿವಿಧೆಡೆ ಅಲ್ಲಲ್ಲಿ ಧಾರಾಕಾರ ಮಳೆ ಆಗಿದ್ದು ಮುಂಗಾರು ಹಂಗಾಮಿನ ಬೆಳೆಗಳಿಗೆ ಅನುಕೂಲವಾಗಿದೆ. ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿರುವ ತೊಗರಿ, ಹತ್ತಿ ಮತ್ತು ಮೆಕ್ಕೆಜೋಳ, ಶೇಂಗಾ ಬೆಳೆಗಳಿಗೆ ಮಳೆ ಅವಶ್ಯಕತೆ ಇತ್ತು. ಮಳೆ ಬಂದಿರುವುದು ಒಳ್ಳೆಯದಾಗಿದೆ ಎಂದು ರೈತರು ಹರ್ಷ ವ್ಯಕ್ತಪಡಿಸಿದರು. ಮಾಶಾಳದ ರೈತರಾದ ಸಂತೋಷ ಗಂಜಿ, ಚಂದ್ರಶೇಖರ್ ಕರ್ಜಿಗಿ ಮತ್ತು ಚಂದ್ರರಾಮ ಬಳಗೊಂಡೆ ಮಳೆ ಬಗ್ಗೆ ಮಾಹಿತಿ ನೀಡಿ, ಮಳೆಗಾಲ ಆರಂಭವಾಗಿ ಮೂರು ತಿಂಗಳು ಕಳೆಯುತ್ತಾ ಬಂದರೂ …

Read More »

ದೇವಸ್ಥಾನಗಳ ನಿರ್ವಹಣೆಗೆ ಸೂಕ್ತ ಕಾನೂನು ರಚನೆಯಾಗಬೇಕು: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ 1.80 ಲಕ್ಷ ದೇವಸ್ಥಾನಗಳಿದ್ದು, ಇದರಲ್ಲಿ 34 ಸಾವಿರ ದೇವಸ್ಥಾನಗಳು ಮಾತ್ರ ಮುಜರಾಯಿ ಇಲಾಖೆ ಅಧೀನದಲ್ಲಿವೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ದೇವಸ್ಥಾನಗಳನ್ನು ಮುಜರಾಯಿ ಇಲಾಖೆ ಅಧೀನದಿಂದ ಹೊರಗೆ ಇಡಬೇಕು. ಸ್ವಾತಂತ್ರ್ಯ ಪೂರ್ವದಲ್ಲಿ ಇದ್ದ ರೀತಿಯಲ್ಲಿ ಸರ್ಕಾರದ ಅಧೀನದಿಂದ ದೇವಸ್ಥಾನಗಳನ್ನು ಹೊರಗಿಡಬೇಕು ಎಂಬ ಮಠಾಧೀಶರ ಆಗ್ರಹಕ್ಕೆ ಅವರು ಈ ರೀತಿ ಪ್ರತಿಕ್ರಿಯಿಸಿದರು. ನಮ್ಮ ರಾಜ್ಯದಲ್ಲಿ ಯಾವುದೇ ಮಠಗಳು ಸರ್ಕಾರದ ಅಧೀನದಲ್ಲಿ ಇಲ್ಲ. …

Read More »

ಕೋಲ್ಕತ್ತಾದಲ್ಲಿ ಹೊಸ ಸೆಮಿಕಂಡಕ್ಟರ್‌ ಘಟಕ ಸ್ಥಾಪನೆ

ನವದೆಹಲಿ: ಭಾರತದೊಂದಿಗೆ ಬಾಂಧವ್ಯವನ್ನು ಬಲಪಡಿಸಲು ಅಮೆರಿಕ ಉತ್ಸುಕವಾಗಿದೆ ಎಂದು ಸೂಚಿಸಿರುವ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅಮೆರಿಕದ ರಕ್ಷಣಾ ಸಂಸ್ಥೆ ಜನರಲ್ ಅಟಾಮಿಕ್ಸ್‌ನಿಂದ 31 ದೀರ್ಘಾವಧಿಯ ಎಂಕ್ಯೂ-9ಬಿ ಸಶಸ್ತ್ರ ಡ್ರೋನ್‌ಗಳ ಖರೀದಿ ಪ್ರಗತಿ ಹಾಗೂ ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ಹೊಸ ಸೆಮಿಕಂಡಕ್ಟರ್ ಘಟಕ ಸ್ಥಾಪನೆ ಕುರಿತು ಮಾತನಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಜೊತೆಗಿನ ಸಂವಾದದಲ್ಲಿ ಜೋ ಬೈಡನ್, ದ್ವಿಪಕ್ಷೀಯ ರಕ್ಷಣಾ ಸಹಕಾರ ಮತ್ತು ವಿಲಿಟರಿ ನಂಟನ್ನು ಹೆಚ್ಚಿಸುವ ಮಾರ್ಗಗಳು ಸೇರಿದಂತೆ …

Read More »

ಬೆಂಗಳೂರಿನಲ್ಲಿ ರಿಯಾಯಿತಿ ದರದಲ್ಲಿ ಈರುಳ್ಳಿ ಮಾರಾಟ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ತರಕಾರಿ ಬೆಲೆ ಏರಿಕೆ ಆಗಿದ್ದರ ಮಧ್ಯೆ ಈರುಳ್ಳಿ ಪ್ರಿಯರಿಗೆ ಇಲ್ಲೊಂದು ಸಿಹಿ ಸುದ್ದಿ ಸಿಕ್ಕಿದೆ, ಈರುಳ್ಳಿ ಕೆ.ಜಿ. ಚಿಲ್ಲರೆ ಬೆಲೆ 55 ರಿಂದ 65 ರೂಪಾಯಿವರೆಗೆ ಇದೆ. ಫ್ರೆಶೋದಲ್ಲಿ ಕೆ.ಜಿ. ಈರುಳ್ಳಿಗೆ 79 ರೂಪಾಯಿ ಇದೆ. ಇದೆಲ್ಲ ಗಮನಿಸಿರುವ ಕೇಂದ್ರ ಸರ್ಕಾರ ಸಾರ್ವಜನಿಕರಿಗೆ ಅನುಕೂಲವಾಗಲೆಂದು ಇಂದಿನಿಂದ ರಿಯಾಯಿತಿ ದರದಲ್ಲಿ ಈರುಳ್ಳಿ ಮಾರಾಟ ಮಾಡುತ್ತಿದೆ. ಬೆಂಗಳೂರಿನಿಂದ ಇಂದಿನಿಂದ ಮೊಬೈಲ್ ವ್ಯಾನ್ ಮೂಲಕ ಕೇಂದ್ರ ಸರ್ಕಾರ ರಿಯಾಯಿತಿ ದರಕ್ಕೆ …

Read More »

ರೇಷ್ಮೆ ಬೆಳೆ ದೇಶದ ಜಿಡಿಪಿ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ: ಕೇಂದ್ರ ಸಚಿವ ಎಚ್ ಡಿ ಕೆ

ಮೈಸೂರು: ಭಾರತದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಇಂದು ಉದ್ಯಮವಾಗಿ ಬೆಳೆದಿದ್ದು, ದೇಶದ ಜಿಡಿಪಿ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಕೇಂದ್ರ ಸರ್ಕಾರದ ಮಾನ್ಯ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್. ಡಿ. ಕುಮಾರಸ್ವಾಮಿ ತಿಳಿಸಿದರು. ಮೈಸೂರಿನಲ್ಲಿ ಕೇಂದ್ರ ರೇಷ್ಮೆ ಮಂಡಳಿಯ ವತಿಯಿಂದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಆಯೋಜಿಸಲಾಗಿದ್ದ ಕೇಂದ್ರ ರೇಷ್ಮೆ ಮಂಡಳಿಯ ಪ್ಲಾಟಿನಮ್ ಜುಬಿಲಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, …

Read More »

ಸಿಡಿಲು ಬಡಿದು ನಾಲ್ವರು ಸಾವು

ಯಾದಗಿರಿ: ತಾಲ್ಲೂಕಿನ ಜಿನಕೇರಾ ತಾಂಡಾದಲ್ಲಿ ಸಿಡಿಲು ಬಡಿದು ನಾಲ್ವರು ಸಾವನ್ನಪ್ಪಿರುವ ದುರ್ಘಟನೆ ಸೋಮವಾರ ನಡೆದಿದೆ. ಕಿಶನ್‌ ನಾಮಣ್ಣ ಜಾಧವ (33), ಚನ್ನಪ್ಪ ನಾಮಣ್ಣ ಜಾಧವ (24), ಸುನಿಬಾಯಿ ರಾಠೋಡ (30), ನೇನು ನಿಂಗಪ‍್ಪ ಜಾಧವ (18) ಸಾವನ್ನಪ್ಪಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ತಾಂಡಾದ ಜಮೀನಿನಲ್ಲಿ ಈರುಳ್ಳಿ ಸಸಿ ನಾಟಿ ಮಾಡುತ್ತಿರುವ ವೇಳೆ ಮಳೆ ಬಂದಿದ್ದರಿಂದ ಇದರಿಂದ ತಪ್ಪಿಸಿಕೊಳ್ಳಲು ಜಮೀನಿನಲ್ಲಿರುವ ದುರುಗಮ್ಮ ದೇವಸ್ಥಾನದಲ್ಲಿ ಆಶ್ರಯ ಪಡೆದಿದ್ದಾರೆ. ಈ ವೇಳೆ ಸಿಡಿಲು …

Read More »