ಚನ್ನಪಟ್ಟಣ : 2,069 ಅರ್ಜಿದಾರರಿಗೆ ನಿವೇಶನ, 2,300 ವಸತಿ ವಿತರಣೆ ಹಾಗೂ 200 ಕೋಟಿ ವೆಚ್ಚದ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸುವ ಮೂಲಕ ಚನ್ನಪಟ್ಟಣವನ್ನು ಚಿನ್ನದ ಪಟ್ಟಣ ಮಾಡುವ ಸಂಕಲ್ಪಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಚಾಲನೆ ನೀಡಿದರು. ಯುವ ಜನ ಸೇವೆ ಮತ್ತು ಕ್ರೀಡಾ ಇಲಾಖೆ ವತಿಯಿಂದ ತಟ್ಟೆಕೆರೆಯ ಕುಡಿಯುವ ನೀರಿನ ಕಟ್ಟೆ ಬಳಿ ಸುಮಾರು ₹9 ಕೋಟಿ ವೆಚ್ಚದಲ್ಲಿ ಕ್ರೀಡಾಂಗಣ ಅಭಿವೃದ್ಧಿ ಕಾಮಗಾರಿ ಗುದ್ದಲಿ ಪೂಜೆ ಮೂಲಕ ಡಿಸಿಎಂ ತಮ್ಮ …
Read More »ದಸರಾ ಪ್ರಯುಕ್ತ 34 ರೈಲುಗಳಿಗೆ ಹೆಚ್ಚುವರಿ ಬೋಗಿ ಜೋಡಣೆ
ಬೆಂಗಳೂರು: ದಸರಾ ಹಬ್ಬದ ಪ್ರಯುಕ್ತ 34 ರೈಲುಗಳಿಗೆ ತಾತ್ಕಾಲಿಕ ಹೆಚ್ಚುವರಿ ಬೋಗಿಗಳ ಜೋಡಣೆ ಮಾಡಲಾಗಿದೆ. ಇದರಿಂದಾಗಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರಿಗೆ ಓಡಾಟಕ್ಕೆ ಅನುಕೂಲವಾಗಲಿದೆ. ದಸರಾ ಹಬ್ಬದ ಸಮಯದಲ್ಲಿ ಪ್ರಯಾಣಿಕರ ನಿರೀಕ್ಷಿತ ಹೆಚ್ಚುವರಿ ದಟ್ಟಣೆಯನ್ನು ಕಡಿಮೆಗೊಳಿಸಲು ನೈರುತ್ಯ ರೈಲ್ವೆಯು 34 ರೈಲುಗಳಿಗೆ ತಾತ್ಕಾಲಿಕವಾಗಿ ಹೆಚ್ಚುವರಿ ಬೋಗಿಗಳನ್ನು ಜೋಡಿಸಲು ನಿರ್ಧರಿಸಲಾಗಿದೆ ಎಂದು ನೈರುತ್ಯ ರೈಲ್ವೆ ತಿಳಿಸಿದೆ.
Read More »ಗೋದಾವರಿ ನದಿಯಲ್ಲಿ ಗ್ಯಾಸ್ ಪೈಪ್ಲೈನ್ ಒಡೆದು ಅನಿಲ ಸೋರಿಕೆ
ಅಮರಾವತಿ: ಆಂಧ್ರದ ಕೋನಸೀಮ ಜಿಲ್ಲೆಯಲ್ಲಿ ಗೋದಾವರಿ ನದಿಯಿಂದ ಅನಿಲ ಸೋರಿಕೆಯಾಗುತ್ತಿರುವುದು ಜನರನ್ನು ಭಯಭೀತರನ್ನಾಗಿಸಿದೆ. ಕಾಟ್ರೇನಿಕೋಣ ಮಂಡಲದ ಯಾಣಂ ದರ್ಯಾಲತಿಪ್ಪ ಮತ್ತು ಬಳುಸುತಿಪ್ಪ ನಡುವೆ ನದಿಯಲ್ಲಿ ಒಎನ್ಜಿಸಿ ಗ್ಯಾಸ್ ಪೈಪ್ಲೈನ್ ಹಾಕಿದೆ. ಆದರೆ ಸೆ.20 ರಂದು ರಾತ್ರಿಯಿಂದಲೇ ಗ್ಯಾಸ್ ಸೋರಿಕೆಯಾಗುತ್ತಿದ್ದು, ಇದುವರೆಗೂ ಅಧಿಕಾರಿಗಳು ಪತ್ತೆ ಮಾಡದ ಕಾರಣ ಸ್ಥಳೀಯರಲ್ಲಿ ಆತಂಕ ಎದುರಾಗಿದೆ. ನೀರಿನ ಮೇಲೆ ಬುಗ್ಗೆಯಂತೆ ಚಿಮ್ಮುತ್ತಿರುವ ಗ್ಯಾಸ್ ನದಿ ತಳಭಾಗದಲ್ಲಿ ಹಾಕಿರುವ ಪೀಪ್ ಒಡೆದಿರುವುದರಿಂದ ಬರುತ್ತಿದೆ. ಇದೀಗ ಗ್ಯಾಸ್ ಹೊತ್ತಿ …
Read More »ಬೆಂಗಳೂರಿನ ಯಲಹಂಕದಲ್ಲಿ ಕರ್ನಾಟಕದ ಮೊದಲ ಅನಿಲ ಆಧಾರಿತ ವಿದ್ಯುತ್ ಸ್ಥಾವರ ಉದ್ಘಾಟನೆಗೆ ಸಿದ್ಧ
ಬೆಂಗಳೂರು: ಕರ್ನಾಟಕದ ಮೊದಲ ಅನಿಲ ಆಧಾರಿತ ವಿದ್ಯುತ್ ಸ್ಥಾವರ ಬೆಂಗಳೂರಿನ ಯಲಹಂಕದಲ್ಲಿ ಉದ್ಘಾಟನೆಗೆ ಅಣಿಯಾಗಿದೆ. ಸುಮಾರು 370 ಮೆಗಾವ್ಯಾಟ್ ವಿದ್ಯುತ್ ಅನ್ನು ಅನಿಲ ಬಳಸಿ ಉತ್ಪಾದನೆ ಮಾಡುವ ಪ್ರಯೋಗ ಬಹುತೇಕ ಯಶಸ್ವಿಯಾಗಿದ್ದು, ಇನ್ನು ಎರಡು ದಿನದಲ್ಲಿ ಅಧಿಕೃತವಾಗಿ ವಿದ್ಯುತ್ ಉತ್ಪಾದನೆ ಶುರುವಾಗಲಿದೆ. ಯಲಹಂಕ ಕಂಬೈನ್ಡ್ ಸೈಕಲ್ ಪವರ್ ಪ್ಲಾಂಟ್ ಸೆಪ್ಟೆಂಬರ್ 24 ರಂದು ಯಲಹಂಕದಲ್ಲಿ ಕಾರ್ಯಾರಂಭ ಮಾಡಲು ನಿರ್ಧರಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಥಾವರವನ್ನು ಉದ್ಘಾಟಿಸಲಿದ್ದಾರೆ ಎಂದು ಇಂಧನ ಸಚಿವ …
Read More »ತಿರುಪತಿ ಲಡ್ಡು ವಿವಾದ: ಮಾಜಿ ಸಿಎಂ ಜಗನ್ ನಿವಾಸದ ಬಳಿ ಉದ್ರಿಕ್ತ ವಾತಾವರಣ
ಅಮರಾವತಿ: ವೈಸಿಪಿ ಸರ್ಕಾರದ ಅವಧಿಯಲ್ಲಿ ಶ್ರೀವೆಂಕಟೇಶ್ವರ ಸ್ವಾಮಿಯ ಲಡ್ಡು ಪ್ರಸಾದ ತಯಾರಿಕೆಗೆ ಬಳಸುತ್ತಿದ್ದ ತುಪ್ಪದಲ್ಲಿ ಕಲಬೆರಕೆಯಾಗಿರುವುದು ದೃಢಪಟ್ಟಿರುವುದರಿಂದ ಮಾಜಿ ಸಿಎಂ ಹಾಗೂ ವೈಸಿಪಿ ನಾಯಕ ಜಗನ್ ಮೋಹನ್ ರೆಡ್ಡಿ ವಿರುದ್ಧ ತೀವ್ರ ಟೀಕೆ ವ್ಯಕ್ತವಾಗುತ್ತಿದೆ. ಸೆ.22 ರಂದು ಶ್ರೀವೆಂಕಟೇಶ್ವರ ಸ್ವಾಮಿಯ ಭಕ್ತರು ಹಾಗೂ ಹಿಂದೂ ಧಾರ್ಮಿಕ ಸಂಘಟನೆಗಳು ಜಗನ್ ನಿವಾಸದ ಎದುರು ಆಕ್ರೋಶ ವ್ಯಕ್ತಪಡಿಸಿದರು. ಸಹಸ್ರಾರು ಮಂದಿ ಭಕ್ತರು ಸೇರಿದ್ದರಿಂದ ಉದ್ರಿಕ್ತ ವಾತಾವರಣ ನಿರ್ಮಾಣವಾಗಿತ್ತು, ತಾಡೆಪಲ್ಲಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಜಗನ್ …
Read More »ತುಂಗಭದ್ರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ
ವಿಜಯನಗರ: ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈತುಂಬಿಕೊಂಡಿರುವ ತುಂಗಭದ್ರಾ ಅಣೆಕಟ್ಟೆಗೆ ಬಾಗಿನ ಅರ್ಪಿಸಿದರು. ಅಣೆಕಟ್ಟೆ 19ನೇ ಕ್ರೆಸ್ಟ್ ಗೇಟ್ ಕೊಚ್ವಿಕೊಂಡು ಹೋಗಿ ಅಪಾರ ಪ್ರಮಾಣದ ನೀರು ಹರಿದು ಹೋಗಿದ್ದನ್ನು ಪರಿಶೀಲಿಸಲು ಆಗಸ್ಟ್.13 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಣೆಕಟ್ಟೆಗೆ ಆಗಮಿಸಿದ್ದರು, ತುಂಗಭದ್ರಾ ಅಣೆಕಟ್ಟು ಮತ್ತೆ ಮೈ ತುಂಬಿಕೊಳ್ಳುತ್ತದೆ. ಆಗ ನಾನೇ ಬಂದು ಬಾಗಿನ ಅರ್ಪಿಸುತ್ತೇನೆ ಎಂದು ಆಗಸ್ಟ್ 13 ರಂದು ಹೇಳಿದ್ದರು. ಮುಖ್ಯಮಂತ್ರಿಗಳ ಮಾತು ಮತ್ತು ಆಶಯ ಈಡೇರಿದ ಸಂಭ್ರಮದ …
Read More »ಚೀನಾ ಕ್ವಾಡ್ ಸದಸ್ಯ ರಾಷ್ಟ್ರಗಳನ್ನು ಪರೀಕ್ಷಿಸುತ್ತಿದೆ: ಅಮೆರಿಕ ಅಧ್ಯಕ್ಷ ಬೈಡನ್
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರು, ಚೀನಾ ಕ್ವಾಡ್ ಸದಸ್ಯ ರಾಷ್ಟ್ರಗಳನ್ನು ಪರೀಕ್ಷಿಸುತ್ತಿದೆ ಎಂದು ಹೇಳಿರುವುದು ಹಾಟ್ ಮೈಕ್ನಲ್ಲಿ ಸೆರೆಯಾಗಿದೆ. ಚೀನಾ ಶಕ್ತಿಶಾಲಿಯಾಗಿ ಹೊರಹೊಮ್ಮುತ್ತಿರುವುದನ್ನು ಅಮೆರಿಕ ಎಷ್ಟು ಗಂಭೀರವಾಗಿ ಪರಿಗಣಿಸಿದೆ ಎಂಬುದು ಇದರಿಂದ ಬಹಿರಂಗವಾಗಿದೆ. ಭಾರತದ ಪ್ರಧಾನಿ ನರೇಂದ್ರ ಮೋದಿ, ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಹಾಗೂ ಜಪಾನ್ ಪ್ರಧಾನಿ ಫುಮಿಯೊ ಕಿಶಿದಾ ಅವರು ಹಾಜರಿದ್ದ ಕ್ವಾಡ್ ಶೃಂಗ ಸಭೆಯಲ್ಲಿ ಬೈಡನ್ ಹೇಳಿಕೆ ಪ್ರಕಟವಾಗಿದೆ. ಚೀನಾ ಅಧ್ಯಕ್ಷ ಕ್ಸಿ …
Read More »ರಸ್ತೆ ಪಕ್ಕ ಮಲಗಿದ್ದ ಕಾರ್ಮಿಕರ ಮೇಲೆ ಹರಿದ ರೋಡ್ ರೋಲರ್: ಇಬ್ಬರು ದುರ್ಮರಣ
ಬ್ಯಾಡಗಿ: ಊಟ ಮಾಡಿ ರಸ್ತೆ ಪಕ್ಕದಲ್ಲಿ ಮಲಗಿದ್ದ ಕಾರ್ಮಿಕರ ಮೇಲೆ ರೋಡ್ ರೋಲರ್ ಹರಿದ ಪರಿಣಾಮ ಇಬ್ಬರು ಕಾರ್ಮಿಕರ ಸ್ಥಳದಲ್ಲೇ ದುರ್ಮರಣ ಹೊಂದಿದ ಘಟನೆ ಹಾವೇರಿಯಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದುರಸ್ತಿ ಕೆಲಸ ಮಾಡುತ್ತಿದ್ದ ಇಬ್ಬರು ಕಾರ್ಮಿಕರ ಮೇಲೆ ರೋಡ್ ರೋಲರ್ ಹರಿದಿದ್ದು, ಅವರು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲ್ಲೂಕಿನ ಮೋಟೆಬೆನ್ನೂರು ಬಳಿ ನಡೆದಿದೆ. ಅಳಲಗೇರಿ ಗ್ರಾಮದ ಸಿದ್ದು ಕಿಳ್ಳಿಕ್ಯಾತರ (24) ಮತ್ತು ಪ್ರೀತಮ ಕಿಳ್ಳಿಕ್ಯಾತರ (24) ಮೃತಪಟ್ಟವರು. …
Read More »ಕ್ವಾಡ್ ಮುಕ್ತ ಅಂತರ್ಗತ ಮತ್ತು ಸಮೃದ್ಧ ಇಂಡೋ ಪೆಸಿಫಿಕ್ ಗಾಗಿ ಬದ್ಧ: ಪ್ರಧಾನಿ ಮೋದಿ
ಡೆಲವೇರ್: ಕ್ವಾಡ್ ಉಚಿತ, ಮುಕ್ತ, ಅಂತರ್ಗತ ಮತ್ತು ಸಮೃದ್ಧ ಇಂಡೋ ಪೆಸಿಫಿಕ್ಗಾಗಿ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅಮೆರಿಕದ ಡೆಲವೇರ್ನಲ್ಲಿ ನಡೆದ ಕ್ವಾಡ್ ನಾಯಕರ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ಜಗತ್ತು ಉದ್ವಿಗ್ನತೆ ಮತ್ತು ಸಂಘರ್ಷದಿಂದ ಸುತ್ತುವರಿದಿರುವ ಸಮಯದಲ್ಲಿ ಕ್ವಾಡ್ ಶೃಂಗಸಭೆ ನಡೆಯುತ್ತಿದೆ ಮತ್ತು ಕ್ವಾಡ್ ದೇಶಗಳು ಹಂಚಿಕೆಯ ಪ್ರಜಾಪ್ರಭುತ್ವ ಮೌಲ್ಯಗಳ ಆಧಾರದ ಮೇಲೆ ಒಟ್ಟಾಗಿ ಕೆಲಸ ಮಾಡುವುದು ಇಡೀ ಮಾನವಕುಲಕ್ಕೆ ಬಹಳ ಮುಖ್ಯ ಎಂದು …
Read More »ಮಲಪ್ರಭಾ ಸಕ್ಕರೆ ಕಾರ್ಖಾನೆ ಅವ್ಯವಹಾರ: ತನಿಖೆಯನ್ನು ಸಿಬಿಐಗೆ ಒಪ್ಪಿಸಲು ರೈತ ಸಂಘಗಳ ಆಗ್ರಹ
ಎಂ.ಕೆ.ಹುಬ್ಬಳ್ಳಿ: ಇಲ್ಲಿನ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕೆಂದು ಆಗ್ರಹಿಸಿ ಕಾರ್ಖಾನೆ ಆವರಣದಲ್ಲಿ ರೈತ ಸಂಘಗಳ ಒಕ್ಕೂಟ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸಿದರು. ಅವ್ಯವಹಾರದ ಕುರಿತು ತನಿಖೆ ನಡೆಸಿ, ತಪ್ಪಿತಸ್ಥರ ಮೇಲೆ ಸೂಕ್ತ ಕಾನೂನು ಕ್ರಮಕೈಗೊಳ್ಳಲು ಸೆ.25ರಂದು ನಡೆಯಲಿರುವ ಕಾರ್ಖಾನೆ ವಾರ್ಷಿಕ ಮಹಾಸಭೆಯಲ್ಲಿ ಠರಾವು ಪಾಸ ಮಾಡಬೇಕೆಂದು ಆಗ್ರಹಿಸಿದರು, ತನಿಖೆ ನಡೆಸಲು ಹಾಲಿ ಅಥವಾ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಜಿಲ್ಲಾಧಿಕಾರಿ, ರೈತರು, ಲೆಕ್ಕ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





