Breaking News

BigTv News

ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು: ಗಂಡನ ಮರಣದ ನಂತರ ಅವನ ಆಸ್ತಿಯ ಮೇಲೆ ಹೆಂಡತಿಗೆ ಸಂಪೂರ್ಣ ಹಕ್ಕಿಲ್ಲ

ನವದೆಹಲಿ : ಗಂಡನ ಅಸ್ತಿಗೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಗಂಡನ ಮರಣದ ನಂತರ ಅವನ ಆಸ್ತಿಯ ಮೇಲೆ ಹೆಂಡತಿಗೆ ಸಂಪೂರ್ಣ ಹಕ್ಕಿಲ್ಲ ಎಂದು ಹೈಕೋರ್ಟ್ ಹೇಳಿದೆ. ಗಂಡನ ಮರಣದ ನಂತರ, ಹಿಂದೂ ಮಹಿಳೆ ಅವನ ಆಸ್ತಿಯ ಲಾಭವನ್ನು ಪಡೆಯಬಹುದು, ಆದರೆ ಅವಳು ಗಂಡನ ಆಸ್ತಿಯ ಮೇಲೆ ಸಂಪೂರ್ಣ ಹಕ್ಕು ಹೊಂದಿರುವುದಿಲ್ಲ ಎಂದು ತಿಳಿಸಿದೆ. ನ್ಯಾಯಮೂರ್ತಿ ಪ್ರತಿಭಾ ಎಂ. ಸಿಂಗ್ ಅವರು, ಸ್ವಂತದ ಯಾವುದೇ ಆದಾಯವಿಲ್ಲದ ಹಿಂದೂ …

Read More »

ರೈತರಿಗೆ ಸಿಹಿಸುದ್ದಿ: ಮುಂಗಾರು, ಹಿಂಗಾರು ಎರಡು ಬೆಳೆಗೆ ನೀರು ಪೂರೈಕೆಗೆ ಸಿಎಂ ಘೋಷಣೆ

ಕೊಪ್ಪಳ: ತುಂಗಭದ್ರಾ ಜಲಾಶಯದ ಅಚ್ಚುಕಟ್ಟು ಪ್ರದೇಶಗಳಲ್ಲಿ ಮುಂಗಾರು ಬೆಳೆ ಬೆಳೆದಿರುವ ರೈತರಿಗೆ ಸಿಎಂ ಸಿದ್ದರಾಮಯ್ಯ ಅವರು ಹಿಂಗಾರು ಬೆಳೆಯ ಸಿಹಿಸುದ್ದಿ ನೀಡಿದ್ದಾರೆ. ಇಂದು ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಲು ಮುನಿರಾಬಾದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಿದ್ದಾರೆ. ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ತುಂಗಭದ್ರಾ ಜಲಾಶಯ ಮತ್ತೆ ತುಂಬಿದೆ. ಮುಂಗಾರು ಮತ್ತು ಹಿಂಗಾರು ಎರಡು ಬೆಳೆಗೆ ನೀರು ಸಿಗುತ್ತದೆ ಎಂದು ಘೋಷಿಸಿದರು. ಈ ಮೂಲಕ ಈ …

Read More »

ಭೀಕರ ಬರ ಪರಿಸ್ಥಿತಿ: ಬರಿದಾಗ್ತಿದೆ ಅಮೆಜಾನ್ ನದಿ

ಬ್ರೆಜಿಲ್‌: ಬ್ರೆಜಿಲ್‌, ದಕ್ಷಿಣ ಅಮೇರಿಕಾ ಸೇರಿದಂತೆ ಕೆಲ ಕಡೆ ಬರ ಪರಿಸ್ಥಿತಿ ಭೀಕರವಾಗಿದೆ. ಬರ ಉಂಟಾದಾಗ ಮೊದಲು ಜಲ ಮೂಲಗಳು ಬತ್ತಿ ಹೋಗುತ್ತವೆ, ಅಲ್ಲಿನ ಜನ ಹನಿ ನೀರಿಗೂ ಒದ್ದಾಡುತ್ತಾರೆ. ಈಗ ಇಂತಹದ್ದೇ ಒಂದು ಬರ ಪರಿಸ್ಥಿತಿಯನ್ನು ಮತ್ತೊಂದು ನದಿ ಎದುರಿಸುತ್ತಿದೆ. ವಿಶ್ವದ ಅತಿದೊಡ್ಡ ನದಿ ಅನ್ನೋ ಹೆಗ್ಗಳಿಕೆ ಪಡೆದಿರುವ ಅಮೆಜಾನ್ ನದಿ ಬರಿದಾಗ್ತಿದೆ. ಅಮೆಜಾನ್ ನದಿಯ ಜಲಾನಯನ ಪ್ರದೇಶವು ಅತ್ಯಂತ ಕೆಟ್ಟ ಬರವನ್ನು ಅನುಭವಿಸುತ್ತಿದ್ದು, ಎಂದೂ ಕಂಡು ಕೇಳರಿಯದ …

Read More »

2 ಎ ಮೀಸಲಾತಿ ಕುರಿತು ಸರ್ಕಾರಕ್ಕೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಬಸವ ಜಯಮೃತ್ಯುಂಜಯ ಸ್ವಾಮೀಜಿ

ಬೆಳಗಾವಿ: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ವಿಚಾರವಾಗಿ ಸರಕಾರ ಮತ್ತು ಮುಖ್ಯಮಂತ್ರಿಗಳು ಶಾಸಕರ ಹಾಗೂ ಸ್ಚಾಮೀಜಿಗಳ ಮಾತಿಗೆ ಬೆಲೆ ಕೊಡಲಿಲ್ಲ. ಈಗ ವಕೀಲರ ಮೂಲಕ ಸರ್ಕಾರದ ಮೇಲೆ ಒತ್ತಡ ತರಲಾಗುತ್ತಿದೆ. ಮೀಸಲಾತಿ ಸಂಬಂಧ ಶೀಘ್ರದಲ್ಲೇ ಸಿಎಂ ಕಾನೂನು ತಜ್ಞರ ಜೊತೆಗೆ ಸಭೆ ನಡೆಸಬೇಕು ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಆಗ್ರಹಿಸಿದರು. ಬೆಳಗಾವಿಯಲ್ಲಿ ಪಂಚಮಸಾಲಿ ವಕೀಲರ ರಾಜ್ಯ ಮಟ್ಟದ ಸಮಾವೇಶದಲ್ಲಿ ಮಾತನಾಡಿದ ಅವರು, ಸಿಎಂ ಸಭೆಯ …

Read More »

ಮತ್ತಷ್ಟು ನಂದಿನಿ ತುಪ್ಪ ಪೂರೈಸುವಂತೆ ಕೆ ಎಂ ಎಫ್ ಗೆ ಟಿಟಿಡಿ ಮನವಿ

ಬೆಂಗಳೂರು: ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ತಂದಿರುವ ತಿರುಪತಿ ಲಡ್ಡು ಪ್ರಕರಣ ಇದೀಗ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ತಿರುಪತಿ ಲಡ್ಡು ತಯಾರಿಕೆಗೆ ಬಳಸುವ ತುಪ್ಪದಲ್ಲಿ ದನದ ಕೊಬ್ಬು, ಮೀನೆಣ್ಣೆ ಬೆರೆಕೆ ಮಾಡಿದ್ದು ಲ್ಯಾಬ್ ವರದಿಯಲ್ಲಿ ದೃಢಪಟ್ಟಿದೆ. ಇನ್ನು ಮತ್ತೊಂದೆಡೆ ಇದೀಗ ಕರ್ನಾಟಕದ ಕೆಎಂಎಫ್​​ ನಂದಿನಿ ತುಪ್ಪಕ್ಕೆ ಭಾರಿ ಡಿಮ್ಯಾಂಡ್​​ ಬಂದಿದೆ. ತಿರುಪತಿ ಲಡ್ಡು ವಿವಾದ ಬೆನ್ನಲ್ಲೇ ಮತ್ತಷ್ಟು ನಂದಿನಿ ತುಪ್ಪ ಪೂರೈಸುವಂತೆ ಕೆ ಎಂ ಎಫ್ ಗೆ ಟಿಟಿಡಿ ಇ-ಮೇಲ್​​​ …

Read More »

ವಕ್ಫ್ ಮಸೂದೆ ತಿದ್ದುಪಡಿ ಮೂಲಕ ವಕ್ಫ್ ಆಸ್ತಿಗಳ ನಿರ್ವಹಣೆ ಮತ್ತು ಸಂರಕ್ಷಣೆಗೆ ಮುಂದಾದ ಕೇಂದ್ರಸರ್ಕಾರ

ವಿಜಯಪುರ: ದೇಶಾದ್ಯಂತ ಇರುವ ವಕ್ಫ್ ಆಸ್ತಿಗಳು ದುರ್ಬಳಕೆಯಾಗುವುದನ್ನು ತಡೆಗಟ್ಟಲು ಕೇಂದ್ರ ಸರ್ಕಾರ ವಕ್ಫ್ ಮಸೂದೆಯನ್ನು ತಿದ್ದುಪಡಿ ಮಾಡುವ ಮೂಲಕ ವಕ್ಫ್ ಆಸ್ತಿಗಳ ನಿರ್ವಹಣೆ ಮತ್ತು ಸಂರಕ್ಷಣೆಗೆ ಮುಂದಾಗಿದೆ. ಈ ಮಧ್ಯೆ ರಾಜ್ಯದಲ್ಲಿ ಮೈಸೂರು ಭಾಗದಲ್ಲಿ ಒಂದಿಷ್ಟು ಹೊರತುಪಡಿಸಿದರೇ ಅತ್ಯಂತ ಹೆಚ್ಚು ವಕ್ಫ್ ಆಸ್ತಿ ಇರುವುದೇ ಉತ್ತರ ಕರ್ನಾಟಕ ಭಾಗದಲ್ಲಿ ಎಂಬುದು ಬೆಳಕಿಗೆ ಬಂದಿದೆ. ಈ ಪೈಕಿ ಅತಿ ಹೆಚ್ಚು ವಕ್ಫ್ ಆಸ್ತಿ ಹೊಂದಿರುವ ಕಲಬುರಗಿ ಜಿಲ್ಲೆ ಮೊದಲ ಸ್ಥಾನದಲ್ಲಿದ್ದರೆ, 2ನೇ …

Read More »

ಬ್ಯಾಂಕ್ ಠೇವಣಿದಾರರ ಹಣ ಮರಳಿಸಲು ಯತ್ನ: ಶಾಸಕ ರಮೇಶ ಜಾರಕಿಹೊಳಿ

ಗೋಕಾಕ: ಇಲ್ಲಿನ ಮಹಾಲಕ್ಷ್ಮಿ ಅರ್ಬನ್‌ ಕೋ ಆಪರೇಟಿವ್ ಬ್ಯಾಂಕ್‌ನಲ್ಲಿ ಠೇವಣಿ ಇಟ್ಟು ಮೋಸಹೋದವರಿಗೆ ಹಣ ಮರಳಿ ಕೊಡಿಸುವ ಯತ್ನ ಮಾಡಲಾಗುವುದು. ಆರ್.ಬಿ.ಐ. ಹಾಗೂ ರಾಜ್ಯ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಕಾನೂನಿನ ಚೌಕಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇನೆ ಎಂದು ಶಾಸಕ ರಮೇಶ ಜಾರಕಿಹೊಳಿ ಭರವಸೆ ನೀಡಿದರು. ₹74.87 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ಮಹಾಲಕ್ಷ್ಮಿ ಸಭಾಭವನದಲ್ಲಿ ನಡೆದ ಮಹಾಲಕ್ಷ್ಮಿ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್‌ ಠೇವಣಿದಾರರ ಸಭೆಯಲ್ಲಿ ಮಾತನಾಡಿದ ಅವರು, ಅಧಿಕಾರಿಗಳು …

Read More »

ಅಧಿಕಾರಿಗಳ ಎಡವಟ್ಟು: ಬೆಳಗಾವಿ ನಗರ ಪಾಲಿಕೆಗೆ 9 ಕೋಟಿ ರೂ. ನಷ್ಟ

ಬೆಳಗಾವಿ: ಬೆಳಗಾವಿ ನಗರದ ಓಲ್ಡ್ ಪಿಬಿ ರಸ್ತೆಯಿಂದ ಖಾನಾಪುರ ಸಂಪರ್ಕಿಸುವ ರಸ್ತೆಗೆ ಸ್ಮಾರ್ಟ್ ಸಿಟಿ ಯೋಜನೆಯಡಿ ಡಾಂಬರ್ ಹಾಕಿ ಅಭಿವೃದ್ಧಿಪಡಿಸಲಾಗಿತ್ತು. ಸವಾರರು ಕೂಡ ನೆಮ್ಮದಿಯಾಗಿ ಓಡಾಡುತ್ತಿದ್ದರು. ಆದರೆ, ಹಾಗೆ ರಸ್ತೆ ನಿರ್ಮಾಣವಾದ ಮೂರು ವರ್ಷದ ಬಳಿಕ ಇದೀಗ ಬಂದ್ ಆಗಿದೆ, ಮಾಲೀಕನ ಅನುಮತಿ ಪಡೆಯದೇ 9 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ್ದರಿಂದ ರಸ್ತೆ ಮತ್ತೆ ಮಾಲೀಕನ ಪಾಲಾಗಿದೆ. ಅಧಿಕಾರಿಗಳ ಅವಾಂತರದಿಂದ ಪಾಲಿಕೆಗೆ 9 ಕೋಟಿ ರೂ. ನಷ್ಟವಾಗಿದೆ. ಸದ್ಯ 9 ಕೋಟಿ …

Read More »

ವಿಶ್ವಸಂಸ್ಥೆಯ ಮಹಾ ಅಧಿವೇಶನದಲ್ಲಿ ಪ್ರಧಾನಿ ಮೋದಿ ನಾಳೆ ಭಾಷಣ

ನ್ಯೂಯಾರ್ಕ್‌: ಭಾರತೀಯ ಸಮುದಾಯದ ಕಾರ್ಯಕ್ರಮ ಹಾಗೂ ವಿಶ್ವಸಂಸ್ಥೆಯ ಅಧಿವೇಶನದಲ್ಲಿ ಪಾಲ್ಗೊಳ್ಳುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ನ್ಯೂಯಾರ್ಕ್‌ ತಲುಪಿದ್ದಾರೆ. ಅಮೆರಿಕ ಅಧ್ಯಕ್ಷ ಜೋ ಬೈಡನ್‌ ಅವರು ತಮ್ಮ ತವರು ಡೆಲವೇರ್‌ ರಾಜ್ಯದ ವಿಲ್ಮಿಂಗ್ಟನ್‌ನಲ್ಲಿ ಶನಿವಾರ ಆಯೋಜಿಸಿದ್ದ ಕ್ವಾಡ್‌ ಶೃಂಗ ಸಭೆ ಮುಕ್ತಾಯದ ಬಳಿಕ ಮೋದಿ, ನ್ಯೂಯಾರ್ಕ್‌ಗೆ ಬಂದಿದ್ದಾರೆ. ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ ಹಾಗೂ ಜಪಾನ್‌ ಪ್ರಧಾನಿ ಫುಮಿಯೊ ಕಿಶಿದಾ ಅವರೂ ಕ್ವಾಡ್‌ ಶೃಂಗ ಸಭೆಯಲ್ಲಿ ಹಾಜರಾಗಿದ್ದರು. …

Read More »

ಕೇಂದ್ರದ ಒಂದು ರಾಷ್ಟ್ರ, ಒಂದು ಚುನಾವಣೆ ವಿರುದ್ಧ ಇಂಡಿಯಾ ಮೈತ್ರಿ ಪಕ್ಷಗಳ ಬೆಂಬಲ ಕ್ರೂಢಿಕರಣ

ನವದೆಹಲಿ: ಮುಂಬರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮಂಡಿಸಲಾಗುವ ಕೇಂದ್ರದ ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆಯ ವಿರುದ್ಧ ಕಾಂಗ್ರೆಸ್ ತನ್ನ ನಿಲುವು ದೃಢಪಡಿಸುತ್ತಿದೆ ಮತ್ತು ಬೆಂಬಲ ಕ್ರೋಢೀಕರಿಸುತ್ತಿದೆ. ಕಾಂಗ್ರೆಸ್ ಮೂಲಗಳ ಪ್ರಕಾರ, ಎನ್ಡಿಎ ಲೋಕಸಭೆಯಲ್ಲಿ ಅಗತ್ಯ ಸಂಖ್ಯೆ ಬಲ ಹೊಂದಿಲ್ಲ. ಅಲ್ಲಿ ಒಂದು ರಾಷ್ಟ್ರ, ಒಂದು ಚುನಾವಣೆ ಯೋಜನೆಯನ್ನು ಜಾರಿಗೆ ಸಾಂವಿಧಾನಿಕ ತಿದ್ದುಪಡಿ ಮಂಡಿಸಲು ಮೂರನೇ ಎರಡರಷ್ಟು ಬಹುಮತದ ಅಗತ್ಯವಿದೆ. 543 ಸಂಖ್ಯಾಬಲದ ಲೋಕಸಭೆಯಲ್ಲಿ ಎನ್ಡಿಎ ಕೇವಲ 293 ಸದಸ್ಯರನ್ನು …

Read More »