ಬೆಳಗಾವಿ: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ವಿಚಾರವಾಗಿ ಸರಕಾರ ಮತ್ತು ಮುಖ್ಯಮಂತ್ರಿಗಳು ಶಾಸಕರ ಹಾಗೂ ಸ್ಚಾಮೀಜಿಗಳ ಮಾತಿಗೆ ಬೆಲೆ ಕೊಡಲಿಲ್ಲ. ಈಗ ವಕೀಲರ ಮೂಲಕ ಸರ್ಕಾರದ ಮೇಲೆ ಒತ್ತಡ ತರಲಾಗುತ್ತಿದೆ. ಮೀಸಲಾತಿ ಸಂಬಂಧ ಶೀಘ್ರದಲ್ಲೇ ಸಿಎಂ ಕಾನೂನು ತಜ್ಞರ ಜೊತೆಗೆ ಸಭೆ ನಡೆಸಬೇಕು ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಆಗ್ರಹಿಸಿದರು. ಬೆಳಗಾವಿಯಲ್ಲಿ ಪಂಚಮಸಾಲಿ ವಕೀಲರ ರಾಜ್ಯ ಮಟ್ಟದ ಸಮಾವೇಶದಲ್ಲಿ ಮಾತನಾಡಿದ ಅವರು, ಸಿಎಂ ಸಭೆಯ …
Read More »ಮತ್ತಷ್ಟು ನಂದಿನಿ ತುಪ್ಪ ಪೂರೈಸುವಂತೆ ಕೆ ಎಂ ಎಫ್ ಗೆ ಟಿಟಿಡಿ ಮನವಿ
ಬೆಂಗಳೂರು: ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ತಂದಿರುವ ತಿರುಪತಿ ಲಡ್ಡು ಪ್ರಕರಣ ಇದೀಗ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ತಿರುಪತಿ ಲಡ್ಡು ತಯಾರಿಕೆಗೆ ಬಳಸುವ ತುಪ್ಪದಲ್ಲಿ ದನದ ಕೊಬ್ಬು, ಮೀನೆಣ್ಣೆ ಬೆರೆಕೆ ಮಾಡಿದ್ದು ಲ್ಯಾಬ್ ವರದಿಯಲ್ಲಿ ದೃಢಪಟ್ಟಿದೆ. ಇನ್ನು ಮತ್ತೊಂದೆಡೆ ಇದೀಗ ಕರ್ನಾಟಕದ ಕೆಎಂಎಫ್ ನಂದಿನಿ ತುಪ್ಪಕ್ಕೆ ಭಾರಿ ಡಿಮ್ಯಾಂಡ್ ಬಂದಿದೆ. ತಿರುಪತಿ ಲಡ್ಡು ವಿವಾದ ಬೆನ್ನಲ್ಲೇ ಮತ್ತಷ್ಟು ನಂದಿನಿ ತುಪ್ಪ ಪೂರೈಸುವಂತೆ ಕೆ ಎಂ ಎಫ್ ಗೆ ಟಿಟಿಡಿ ಇ-ಮೇಲ್ …
Read More »ವಕ್ಫ್ ಮಸೂದೆ ತಿದ್ದುಪಡಿ ಮೂಲಕ ವಕ್ಫ್ ಆಸ್ತಿಗಳ ನಿರ್ವಹಣೆ ಮತ್ತು ಸಂರಕ್ಷಣೆಗೆ ಮುಂದಾದ ಕೇಂದ್ರಸರ್ಕಾರ
ವಿಜಯಪುರ: ದೇಶಾದ್ಯಂತ ಇರುವ ವಕ್ಫ್ ಆಸ್ತಿಗಳು ದುರ್ಬಳಕೆಯಾಗುವುದನ್ನು ತಡೆಗಟ್ಟಲು ಕೇಂದ್ರ ಸರ್ಕಾರ ವಕ್ಫ್ ಮಸೂದೆಯನ್ನು ತಿದ್ದುಪಡಿ ಮಾಡುವ ಮೂಲಕ ವಕ್ಫ್ ಆಸ್ತಿಗಳ ನಿರ್ವಹಣೆ ಮತ್ತು ಸಂರಕ್ಷಣೆಗೆ ಮುಂದಾಗಿದೆ. ಈ ಮಧ್ಯೆ ರಾಜ್ಯದಲ್ಲಿ ಮೈಸೂರು ಭಾಗದಲ್ಲಿ ಒಂದಿಷ್ಟು ಹೊರತುಪಡಿಸಿದರೇ ಅತ್ಯಂತ ಹೆಚ್ಚು ವಕ್ಫ್ ಆಸ್ತಿ ಇರುವುದೇ ಉತ್ತರ ಕರ್ನಾಟಕ ಭಾಗದಲ್ಲಿ ಎಂಬುದು ಬೆಳಕಿಗೆ ಬಂದಿದೆ. ಈ ಪೈಕಿ ಅತಿ ಹೆಚ್ಚು ವಕ್ಫ್ ಆಸ್ತಿ ಹೊಂದಿರುವ ಕಲಬುರಗಿ ಜಿಲ್ಲೆ ಮೊದಲ ಸ್ಥಾನದಲ್ಲಿದ್ದರೆ, 2ನೇ …
Read More »ಬ್ಯಾಂಕ್ ಠೇವಣಿದಾರರ ಹಣ ಮರಳಿಸಲು ಯತ್ನ: ಶಾಸಕ ರಮೇಶ ಜಾರಕಿಹೊಳಿ
ಗೋಕಾಕ: ಇಲ್ಲಿನ ಮಹಾಲಕ್ಷ್ಮಿ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ನಲ್ಲಿ ಠೇವಣಿ ಇಟ್ಟು ಮೋಸಹೋದವರಿಗೆ ಹಣ ಮರಳಿ ಕೊಡಿಸುವ ಯತ್ನ ಮಾಡಲಾಗುವುದು. ಆರ್.ಬಿ.ಐ. ಹಾಗೂ ರಾಜ್ಯ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಕಾನೂನಿನ ಚೌಕಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇನೆ ಎಂದು ಶಾಸಕ ರಮೇಶ ಜಾರಕಿಹೊಳಿ ಭರವಸೆ ನೀಡಿದರು. ₹74.87 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ಮಹಾಲಕ್ಷ್ಮಿ ಸಭಾಭವನದಲ್ಲಿ ನಡೆದ ಮಹಾಲಕ್ಷ್ಮಿ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ಠೇವಣಿದಾರರ ಸಭೆಯಲ್ಲಿ ಮಾತನಾಡಿದ ಅವರು, ಅಧಿಕಾರಿಗಳು …
Read More »ಅಧಿಕಾರಿಗಳ ಎಡವಟ್ಟು: ಬೆಳಗಾವಿ ನಗರ ಪಾಲಿಕೆಗೆ 9 ಕೋಟಿ ರೂ. ನಷ್ಟ
ಬೆಳಗಾವಿ: ಬೆಳಗಾವಿ ನಗರದ ಓಲ್ಡ್ ಪಿಬಿ ರಸ್ತೆಯಿಂದ ಖಾನಾಪುರ ಸಂಪರ್ಕಿಸುವ ರಸ್ತೆಗೆ ಸ್ಮಾರ್ಟ್ ಸಿಟಿ ಯೋಜನೆಯಡಿ ಡಾಂಬರ್ ಹಾಕಿ ಅಭಿವೃದ್ಧಿಪಡಿಸಲಾಗಿತ್ತು. ಸವಾರರು ಕೂಡ ನೆಮ್ಮದಿಯಾಗಿ ಓಡಾಡುತ್ತಿದ್ದರು. ಆದರೆ, ಹಾಗೆ ರಸ್ತೆ ನಿರ್ಮಾಣವಾದ ಮೂರು ವರ್ಷದ ಬಳಿಕ ಇದೀಗ ಬಂದ್ ಆಗಿದೆ, ಮಾಲೀಕನ ಅನುಮತಿ ಪಡೆಯದೇ 9 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ್ದರಿಂದ ರಸ್ತೆ ಮತ್ತೆ ಮಾಲೀಕನ ಪಾಲಾಗಿದೆ. ಅಧಿಕಾರಿಗಳ ಅವಾಂತರದಿಂದ ಪಾಲಿಕೆಗೆ 9 ಕೋಟಿ ರೂ. ನಷ್ಟವಾಗಿದೆ. ಸದ್ಯ 9 ಕೋಟಿ …
Read More »ವಿಶ್ವಸಂಸ್ಥೆಯ ಮಹಾ ಅಧಿವೇಶನದಲ್ಲಿ ಪ್ರಧಾನಿ ಮೋದಿ ನಾಳೆ ಭಾಷಣ
ನ್ಯೂಯಾರ್ಕ್: ಭಾರತೀಯ ಸಮುದಾಯದ ಕಾರ್ಯಕ್ರಮ ಹಾಗೂ ವಿಶ್ವಸಂಸ್ಥೆಯ ಅಧಿವೇಶನದಲ್ಲಿ ಪಾಲ್ಗೊಳ್ಳುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ನ್ಯೂಯಾರ್ಕ್ ತಲುಪಿದ್ದಾರೆ. ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರು ತಮ್ಮ ತವರು ಡೆಲವೇರ್ ರಾಜ್ಯದ ವಿಲ್ಮಿಂಗ್ಟನ್ನಲ್ಲಿ ಶನಿವಾರ ಆಯೋಜಿಸಿದ್ದ ಕ್ವಾಡ್ ಶೃಂಗ ಸಭೆ ಮುಕ್ತಾಯದ ಬಳಿಕ ಮೋದಿ, ನ್ಯೂಯಾರ್ಕ್ಗೆ ಬಂದಿದ್ದಾರೆ. ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ ಹಾಗೂ ಜಪಾನ್ ಪ್ರಧಾನಿ ಫುಮಿಯೊ ಕಿಶಿದಾ ಅವರೂ ಕ್ವಾಡ್ ಶೃಂಗ ಸಭೆಯಲ್ಲಿ ಹಾಜರಾಗಿದ್ದರು. …
Read More »ಕೇಂದ್ರದ ಒಂದು ರಾಷ್ಟ್ರ, ಒಂದು ಚುನಾವಣೆ ವಿರುದ್ಧ ಇಂಡಿಯಾ ಮೈತ್ರಿ ಪಕ್ಷಗಳ ಬೆಂಬಲ ಕ್ರೂಢಿಕರಣ
ನವದೆಹಲಿ: ಮುಂಬರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮಂಡಿಸಲಾಗುವ ಕೇಂದ್ರದ ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆಯ ವಿರುದ್ಧ ಕಾಂಗ್ರೆಸ್ ತನ್ನ ನಿಲುವು ದೃಢಪಡಿಸುತ್ತಿದೆ ಮತ್ತು ಬೆಂಬಲ ಕ್ರೋಢೀಕರಿಸುತ್ತಿದೆ. ಕಾಂಗ್ರೆಸ್ ಮೂಲಗಳ ಪ್ರಕಾರ, ಎನ್ಡಿಎ ಲೋಕಸಭೆಯಲ್ಲಿ ಅಗತ್ಯ ಸಂಖ್ಯೆ ಬಲ ಹೊಂದಿಲ್ಲ. ಅಲ್ಲಿ ಒಂದು ರಾಷ್ಟ್ರ, ಒಂದು ಚುನಾವಣೆ ಯೋಜನೆಯನ್ನು ಜಾರಿಗೆ ಸಾಂವಿಧಾನಿಕ ತಿದ್ದುಪಡಿ ಮಂಡಿಸಲು ಮೂರನೇ ಎರಡರಷ್ಟು ಬಹುಮತದ ಅಗತ್ಯವಿದೆ. 543 ಸಂಖ್ಯಾಬಲದ ಲೋಕಸಭೆಯಲ್ಲಿ ಎನ್ಡಿಎ ಕೇವಲ 293 ಸದಸ್ಯರನ್ನು …
Read More »ಕೇಂದ್ರ ಸಚಿವ ಎಚ್ ಡಿ ಕೆ ಈಶಾನ್ಯ ರಾಜ್ಯಗಳ ಭೇಟಿ: ಸಿಮೆಂಟ್ ಕಾರ್ಖಾನೆಗೆ ಭೇಟಿ ನೀಡಿ ಪರಿಶೀಲನೆ
ನವದೆಹಲಿ: ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕೈಗೊಂಡಿರುವ ಈಶಾನ್ಯ ರಾಜ್ಯಗಳ ಪ್ರವಾಸದ ಭಾಗವಾಗಿ ಶನಿವಾರದಂದು ನಾಗಾಲ್ಯಾಂಡ್ ಮತ್ತು ಅರುಣಾಚಲ ಪ್ರದೇಶ ರಾಜ್ಯಗಳಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಕೇಂದ್ರದ ಸಚಿವರು ನಾಗಾಲ್ಯಾಂಡ್ ರಾಜ್ಯದಲ್ಲಿರುವ ಧೀಮಾಪುರದ ಕೇಂದ್ರದ ಭಾರೀ ಕೈಗಾರಿಕೆ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಭಾರತೀಯ ಸಿಮೆಂಟ್ ಕಾರ್ಪೊರೇಷನ್ ಆಡಳಿತದ ಬೋಕಾಜನ್ ಸಿಮೆಂಟ್ ಕಾರ್ಖಾನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೇಂದ್ರ ಸಚಿವರಾದ …
Read More »ಕೃಷಿ ನೀರಾವರಿ ಪಂಪ್ಸೆಟ್ ಆಧಾರ್ ಜೋಡಣೆಗೆ ಸೆ.23 ಕೊನೆಯ ದಿನ
ಬೆಂಗಳೂರು : ಕೃಷಿ ನೀರಾವರಿ ಪಂಪ್ಸೆಟ್ ಬಳಕೆದಾರರು ತಮ್ಮ ನೀರಾವರಿ ಪಂಪ್ಸೆಟ್ನ ವಿದ್ಯುತ್ ಆರ್.ಆರ್.ಸಂಖ್ಯೆಗೆ ಕಡ್ಡಾಯವಾಗಿ ಆಧಾರ್ ಸಂಖ್ಯೆಯನ್ನು ಜೋಡಣೆಗೆ ಸೆ.23 ರ ನಾಳೆಯೇ ಕೊನೆಯ ದಿನವಾಗಿದೆ. ಆದ್ದರಿಂದ ಹೆಸ್ಕಾಂಗಳು 10 ಹೆಚ್ಪಿ ಪಂಪ್ ಸೆಟ್ ಹೊಂದಿರುವ ರೈತರ ಆಧಾರ್ ಸಂಖ್ಯೆ ಸಂಗ್ರಹ ಮಾಡುತ್ತಿದೆ. ಹಾಲಿ ಇರುವ ಕೃಷಿ ಪಂಪ್ಸೆಟ್ನ ವಾರಸುದಾರರು ಮರಣ ಹೊಂದಿದ್ದಲ್ಲಿ ಪ್ರಸ್ತುತ ಪಹಣಿಯಲ್ಲಿರುವ ಆಧಾರ್ ಕಾರ್ಡ್, ಮೊಬೈಲ್ ಸಂಖ್ಯೆ, ಹಿಂದಿನ ವಾರಸುದಾರರ ಮರಣ ಪ್ರಮಾಣ ಪತ್ರ, …
Read More »ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಕಾರ್ಮಿಕ ಸೇವೆ ಒದಗಿಸುವ ಸೊಸೈಟಿ ವಿಸ್ತರಣೆ: ರಾಜ್ಯ ಸರ್ಕಾರದಿಂದ ನಿರ್ಧಾರ
ಬೆಂಗಳೂರು: ಹೊರಗುತ್ತಿಗೆ ಕಾರ್ಮಿಕರ ಸೇವೆಗಳನ್ನು ಒದಗಿಸುವ ಸೊಸೈಟಿಯನ್ನು ರಾಜ್ಯದ ಎಲ್ಲ ಜಿಲ್ಲೆಗಳಿಗೂ ವಿಸ್ತರಿಸುವ ಮಹತ್ವದ ನಿರ್ಧಾರಕ್ಕೆ ಕಾರ್ಮಿಕ ಇಲಾಖೆ ಮುಂದಾಗಿದೆ. ಈ ಕುರಿತು ಸಚಿವ ಸಂತೋಷ್ ಲಾಡ್ ಮಾಹಿತಿ ನೀಡಿದ್ದು, ಪ್ರಸ್ತುತ ಕಲಬುರ್ಗಿ ವಿಭಾಗದ ಬೀದರ್ ಜಿಲ್ಲೆಯಲ್ಲಿ ಮಾತ್ರ ಈ ಮಾದರಿ ಅನುಷ್ಠಾನದಲ್ಲಿತ್ತು. ಈಗ ಇತರ ಮೂರು ವಿಭಾಗಗಳ ಮೈಸೂರು, ಧಾರವಾಡ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಈ ಸೊಸೈಟಿ ರಚಿಸಲು ಪ್ರಸ್ತಾವನೆ ಕೇಳಲಾಗಿದೆ ಎಂದು ತಿಳಿಸಿದ್ದಾರೆ. ಆಯಾ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





