Breaking News

BigTv News

ಈಶಾನ್ಯ ಭಾರತದ ಮೂರು ರಾಜ್ಯಗಳಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಪ್ರವಾಸ

ಬೆಂಗಳೂರು: ಈಶಾನ್ಯ ಭಾರತದ ಮೂರು ರಾಜ್ಯಗಳಲ್ಲಿ ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಅವರು ನಿನ್ನೆಯಿಂದ ಮೂರು ದಿನಗಳ ಪ್ರವಾಸ ಕೈಗೊಂಡಿದ್ದಾರೆ. ನಿನ್ನೆ ರಾತ್ರಿಯೇ ಬೆಂಗಳೂರಿನಿಂದ ನಾಗಾಲ್ಯಾಂಡ್‌ ರಾಜ್ಯದ ಧೀಮಾಪುರಕ್ಕೆ ತೆರಳಿದ್ದಾರೆ. ನಾಗಲ್ಯಾಂಡ್‌ ಮುಖ್ಯಮಂತ್ರಿ ನಿಪ್ಯು ರಿಯುಜು ಅವರು, ಧೀಮಾಪುರದಲ್ಲಿ ಕುಮಾರಸ್ವಾಮಿ ಹಾಗೂ ಅವರ ಪತ್ನಿ ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಅವರನ್ನು ಸ್ವಾಗತಿಸಿ ದಂಪತಿಗೆ ಭೋಜನ ಕೂಟ ಏರ್ಪಡಿದ್ದರು. ಬಳಿಕ ಆ ರಾಜ್ಯದ …

Read More »

ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಪ್ರಮಾಣವಚನ ಸ್ವೀಕಾರ

ನವದೆಹಲಿ: ಆಮ್ ಆದ್ಮಿ ಪಕ್ಷದ ನಿಯೋಜಿತ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಬಳಿಕ ಆತಿಶಿ ಇಂದು ದೆಹಲಿಯ ಅತ್ಯಂತ ಕಿರಿಯ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ ನಿವಾಸ್ ನಲ್ಲಿ ಮಂತ್ರಿಮಂಡಲದ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಿತು. ಕಲ್ಕಾಜಿ ಕ್ಷೇತ್ರವನ್ನ ಪ್ರತಿನಿಧಿಸುವ ಮತ್ತು ನಿರ್ಗಮನ ದೆಹಲಿ ಕ್ಯಾಬಿನೆಟ್ ನಲ್ಲಿ ಏಕೈಕ ಮಹಿಳಾ ಸಚಿವರಾಗಿರುವ ಅತಿಶಿ ಅವರನ್ನ ಸೆಪ್ಟೆಂಬರ್ 17 ರಂದು ನಡೆದ ಪಕ್ಷದ ಶಾಸಕರ ಸಭೆಯಲ್ಲಿ ಎಎಪಿ ಶಾಸಕರು ಮುಖ್ಯಮಂತ್ರಿ ಸ್ಥಾನಕ್ಕೆ …

Read More »

ನಾಳೆ ಕೊಪ್ಪಳ ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಪ್ರವಾಸ

ಕೊಪ್ಪಳ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸೆಪ್ಟೆಂಬರ್ 22ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಹೊರಟು ಬೆಳಗ್ಗೆ 10.50ಕ್ಕೆ ಕೊಪ್ಪಳ ಜಿಲ್ಲೆಯ ಗಿಣಿಗೇರಾ ಏರ್‍ಸ್ಟ್ರೀಪ್‍ಗೆ ಆಗಮಿಸುವರು. ಅಲ್ಲಿಂದ 10.55ಕ್ಕೆ ನಿರ್ಗಮಿಸಿ ಬೆಳಗ್ಗೆ 11.15ಕ್ಕೆ ವಿಜಯನಗರ ಜಿಲ್ಲೆಯ ಹೊಸಪೇಟೆಯ ತುಂಗಭದ್ರಾ ಜಲಾಶಯಕ್ಕೆ ಆಗಮಿಸಿ ಜಲಸಂಪನ್ಮೂಲ ಇಲಾಖೆ ಕರ್ನಾಟಕ ನೀರಾವರಿ ನಿಗಮ ನಿಯಮಿತದಿಂದ ಹಮ್ಮಿಕೊಂಡಿರುವ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಸಮರ್ಪಣೆ ಮಾಡುವರು. ಬೆಳಗ್ಗೆ 11.45ಕ್ಕೆ …

Read More »

ರಿಚಾರ್ಜ್ ದರ ಹೆಚ್ಚಳ: ಲಕ್ಷಾಂತರ ಗ್ರಾಹಕರನ್ನು ಕಳೆದುಕೊಂಡ ಜಿಯೋ, ಏರ್ಟೆಲ್, ವೋಡಾಫೋನ್

ನವದೆಹಲಿ: ಇತ್ತೀಚೆಗೆ ರೀಚಾರ್ಜ್ ದರಗಳನ್ನು ಗಣನೀಯವಾಗಿ ಹೆಚ್ಚಿಸಿದ್ದ ರಿಲಾಯನ್ಸ್ ಜಿಯೋ, ಭಾರ್ತಿ ಏರ್ಟೆಲ್, ವೊಡಾಫೋನ್ ಐಡಿಯಾ ಸಂಸ್ಥೆಗಳು ಕಳೆದ ತಿಂಗಳಲ್ಲಿ ಬಹಳಷ್ಟು ಗ್ರಾಹಕರನ್ನು ಕಳೆದುಕೊಂಡಿವೆ. ಕಡಿಮೆ ದರಕ್ಕೆ 4ಜಿ ಸರ್ವಿಸ್ ಆಪರೇಟ್ ಮಾಡುತ್ತಿರುವ ಬಿಎಸ್ಸೆನ್ನೆಲ್ ಕಡೆಗೆ ಇವರೆಲ್ಲರೂ ವಲಸೆ ಹೋಗಿರುವಂತೆ ತೋರುತ್ತಿದೆ. ಆಗಷ್ಟನಲ್ಲಿ ಬಿಎಸ್ಸೆನ್ನೆಲ್ ಮಾತ್ರವೇ ಗ್ರಾಹಕರ ಬಳಗ ಹೆಚ್ಚಿಸಿಕೊಂಡಿರುವುದು, ಟೆಲಿಕಾಂ ನಿಯಂತ್ರಕ ಸಂಸ್ಥೆಯಾದ ಟ್ರಾಯ್, ಕಳೆದ ತಿಂಗಳ ದತ್ತಾಂಶ ಬಿಡುಗಡೆ ಮಾಡಿದೆ.2024ರ ಜುಲೈ ತಿಂಗಳಲ್ಲಿ ಭಾರ್ತಿ ಏರ್ಟೆಲ್ ಅತಿಹೆಚ್ಚು …

Read More »

ತುಂಗಭದ್ರ ಜಲಾಶಯಕ್ಕೆ ನಾಳೆ ಸಿಎಂ ಬಾಗಿನ ಅರ್ಪಣೆ

ಕೊಪ್ಪಳ: ಗೇಟ್‌ ಹಾನಿಯಾದ ಬಳಿಕ ಮತ್ತೆ ತುಂಬಿದ ತುಂಗಭದ್ರಾ ಜಲಾಶಯಕ್ಕೆ ನಾಳೆ ಭಾನುವಾರ (ಸೆ. 22) ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳೊಂದಿಗೆ ಬಾಗಿನ ಅರ್ಪಿಸಲಿದ್ದಾರೆ. ಕೊಪ್ಪಳ, ರಾಯಚೂರು,ಬಳ್ಳಾರಿ ಹಾಗೂ ನೆರೆಯ ಆಂಧ್ರಪ್ರದೇಶ ಕಡಪಾ, ಕರ್ನೂಲು ಜಿಲ್ಲೆಗಳ ರೈತರ ಜೀವನಾಡಿಯಾಗಿರುವ ತುಂಗಭದ್ರಾ ನದಿಗೆ ಹೊಸಪೇಟೆ ಕೊಪ್ಪಳ ಮಧ್ಯೆ ಇರುವ ಜಲಾಶಯದ 19ನೇ ಕ್ರಸ್ಟ್‌ಗೇಟು ಸುಮಾರು ಒಂದು ತಿಂಗಳ ಹಿಂದೆ ಕಿತ್ತು ಹೋಗಿ ಅಪಾರ ಪ್ರಮಾಣದ ನೀರು ವ್ಯರ್ಥವಾಗಿ …

Read More »

ಕಳ್ಳರ ಜೊತೆ ಕೈಜೋಡಿಸಿ ಖದೀಮನಾದ ಪೊಲೀಸ್

ಬಳ್ಳಾರಿ: ಪೊಲೀಸಪ್ಪನೇ ಕಳ್ಳರ ಜೊತೆ ಕೈ ಜೋಡಿಸಿ ಖದೀಮನಾದ ಕತೆ ಬಳ್ಳಾರಿಯಲ್ಲಿ ನಡೆದಿದೆ. ಬಳ್ಳಾರಿಯ ಬ್ರೂಸ್‌ಪೇಟೆ ಠಾಣೆಯ ಹೆಡ್ ಕಾನ್ಸ್ಟೇಬಲ್ ಮೆಹಬೂಬ್ ಪಾಷಾ ಎಂಬುವವರು ಕಳ್ಳರ ಜೊತೆ ಕೈ ಜೋಡಿಸಿ ಲಕ್ಷ ಲಕ್ಷ ನುಂಗಿದ್ದಾರೆ. ಈ ಖದೀಮ ಕಳ್ಳರು ಕದ್ದ ಮಾಲಲ್ಲೇ ತನಗೂ ಪಾಲು ಪಡೆದು ಬಳಿಕ ಪ್ರಕರಣವನ್ನು ಮುಚ್ಚಿಹಾಕಲು ಪೊಲೀಸ್ ಯತ್ನಿಸುತ್ತಿದ್ದ. ಸೆ.12ರಂದು ಬೆಳಗಿನ ಜಾವ ರಾಯದುರ್ಗಾ ಬಸ್ ನಿಲ್ದಾಣದ ಕಡೆಗೆ ಸ್ಕೂಟರ್‌ನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಕಾರದ ಪುಡಿ …

Read More »

ಕೃಷಿ ಕ್ಷೇತ್ರದಲ್ಲಿ ಅಭಿವೃದ್ಧಿಗೆ ಒತ್ತು ನೀಡಿ ರೈತರಿಗೆ ಅನುಕೂಲ ಕಲ್ಪಿಸಬೇಕು: ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ

ಧಾರವಾಡ: ಕೃಷಿ ಕ್ಷೇತ್ರದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿಗೆ ಒತ್ತು ನೀಡಬೇಕು, ರೈತರಿಗೆ ಅನುಕೂಲ ಕಲ್ಪಿಸಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ಕೃಷಿ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿರುವ ಕೃಷಿ ಮೇಳದಲ್ಲಿ ಬೀಜ ಮೇಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕೃಷಿ ಕ್ಷೇತ್ರದಲ್ಲಿ ಆಮೂಲಾಗ್ರ ಬದಲಾವಣೆಗಳನ್ನು ತರಲು ಸರ್ಕಾರ ಪ್ರಯತ್ನಿಸುತ್ತಿದೆ. ಕೃಷಿ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಹೆಚ್ಚು ಅನುದಾನ ಮೀಸಲಿಡಲಾಗಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರ ಖಾತೆಗಳಿಗೆ ₹3.05 ಲಕ್ಷ …

Read More »

ತಿರುಪತಿ ಲಡ್ಡುಗೆ ಕೋಲಾರದಿಂದ ನಂದಿನಿ ತುಪ್ಪ ರವಾನೆ

ಕೋಲಾರ: ಲಡ್ಡು ತಯಾರಿಕೆಯಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಕೆ ವಿಚಾರ ಸಂಬಂಧ ಮಾತನಾಡಿದ ಕೋಲಾರ ಚಿಕ್ಕಬಳ್ಳಾಪುರ ಹಾಲು ಒಕ್ಕೂಟ ಅಧ್ಯಕ್ಷ್ಯ ಕೆ.ವೈ.ನಂಜೇಗೌಡ, ಇನ್ಮುಂದೆ ಕೆಎಂಎಫ್ ನಿಂದ ತುಪ್ಪ ರವಾನೆ ಮಾಡಲಾಗುತ್ತದೆ ಅಂತ ಹೇಳಿದ್ದಾರೆ. ನಮ್ಮಲ್ಲಿಂದ ತುಪ್ಪ ರವಾನೆ ನಿಂತಾಗ ಲಡ್ಡು ಪ್ರಸಾದದ ರುಚಿ ಇಳಿಕೆಯಾಗಿತ್ತು. ಈಗ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಬಳಕೆಯಿಂದ ಭಕ್ತರ ಭವನೆಗೆ ಧಕ್ಕೆಯಾಗಿದೆ. ಹೀಗಾಗಿ ಹೆಚ್ಚಿನ ಪ್ರಮಾಣದಲ್ಲಿ ಕೋಲಾರದಿಂದ ತುಪ್ಪ ರವಾನಿಸಲಾಗುತ್ತೆ ಅಂತ ಅವರು …

Read More »

ಶಿವಸಾಗರ ಸಕ್ಕರೆ ಕಾರ್ಖಾನೆಯಿಂದ ಅನ್ಯಾಯ: ರೈತರಿಂದ ಪ್ರತಿಭಟನೆ

ರಾಮದುರ್ಗ: ತಾಲ್ಲೂಕಿನ ಶಿವಸಾಗರ ಸಕ್ಕರೆ ಕಾರ್ಖಾನೆಯನ್ನು ಷೇರುದಾರರ ಹಿತ ಕಾಯದೆ ಎನ್‍ಸಿಎಲ್‍ಟಿ ಹರಾಜು ಹಾಕಿ ಷೇರುದಾರರು, ರೈತರು ಮತ್ತು ನೌಕರರಿಗೆ ಅನ್ಯಾಯ ಮಾಡಿದೆ ಎಂದು ಆರೋಪಿಸಿ ಉತ್ತರ ಕರ್ನಾಟಕ ರೈತ ಮತ್ತು ಕಬ್ಬು ಬೆಳೆಗಾರರ ಸಂಘ ಮತ್ತು ಷೇರುದಾರರು ಉಪವಾಸ ಸತ್ಯಾಗ್ರಹ ನಡೆಸಿದರು. ಜಿಲ್ಲಾಧಿಕಾರಿ ಇಲ್ಲವೇ ಸಕ್ಕರೆ ಆಯುಕ್ತರು ಸ್ಥಳಕ್ಕೆ ಆಗಮಿಸಿ ಪರಿಹಾರ ಒದಗಿಸುವ ತನಕ ಉಪವಾಸ ಸತ್ಯಾಗ್ರಹ ನಡೆಸಲಾಗುವುದು. ನೀರು, ಊಟ ಸೇವಿಸುವುದಿಲ್ಲ ಎಂದು ನೂರಾರು ಷೇರುದಾರರು ಹಾಗೂ …

Read More »

ವಿಶ್ವಸಂಸ್ಥೆಯ ಶೃಂಗಸಭೆಯಲ್ಲಿ ಭಾರತದ ಅಭಿವೃದ್ಧಿಯನ್ನು ಪ್ರದರ್ಶಿಸಲಿರುವ ಪ್ರಧಾನಿ ಮೋದಿ

ನವದೆಹಲಿ: ಮುಂದಿನ ವಾರ ವಿಶ್ವಸಂಸ್ಥೆಯಲ್ಲಿ ನಡೆಯಲಿರುವ ಭವಿಷ್ಯದ ಹೆಗ್ಗುರುತು ಶೃಂಗಸಭೆಗೆ ಭಾರತದ ದೇಶೀಯ ಅಭಿವೃದ್ಧಿಯ ಉದಾಹರಣೆಯ ಸಂದೇಶವನ್ನು ಪ್ರಧಾನಿ ನರೇಂದ್ರ ಮೋದಿ ತರಲಿದ್ದಾರೆ ಎಂದು ದೇಶದ ರಾಯಭಾರಿ ತಿಳಿಸಿದ್ದಾರೆ. ಅವರ ಸಂದೇಶವು ನಮ್ಮ ದೇಶೀಯ ಅಭಿವೃದ್ಧಿಯ ಕಥೆಗೆ ಭಾರತದ ಉದಾಹರಣೆಯಾಗಲಿದೆ ಎಂದು ನಾನು ಭಾವಿಸುತ್ತೇನೆ ಎಂದು ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿ ಪಾರ್ವತನೇನಿ ಹರೀಶ್ ಪಿಟಿಐಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಹೇಳಿದರು. ಡೆಲಾವೇರ್ನ ವಿಲ್ಮಿಂಗ್ಟನ್ನಲ್ಲಿ ಯುಎಸ್ ಅಧ್ಯಕ್ಷ ಜೋ ಬೈಡನ್ …

Read More »