Breaking News

BigTv News

ಬೆಂಗಳೂರಿನಲ್ಲಿ ದೇಶದ ಮೊದಲ ಬುಲೆಟ್ ಟ್ರೇನ್ ನಿರ್ಮಾಣ

ಬೆಂಗಳೂರು: ದೇಶದಲ್ಲಿ ಓಡಾಡಲಿರುವ ಮೊದಲ ಬುಲೆಟ್ ಟ್ರೈನ್ ಬೆಂಗಳೂರಿನಲ್ಲೇ ತಯಾರಾಗಲಿದೆ ಎಂದು ತಿಳಿದುಬಂದಿದೆ. ಎಂಟು ಬೋಗಿಗಳ ಎರಡು ರೈಲುಗಳನ್ನು ನಿರ್ಮಿಸಲು ಕೇಂದ್ರ ಸರ್ಕಾರಿ ಸ್ವಾಮ್ಯದ ಬಿಇಎಂಎಲ್​ ಮಾತ್ರ ಬಿಡ್ ಸಲ್ಲಿಸಿದೆ. ಹೀಗಾಗಿ ಬುಲೆಟ್‌ ಟ್ರೇನ್‌ ತಯಾರಿಕೆಯಲ್ಲಿ ಬೆಂಗಳೂರು ಪ್ರಮುಖ ಪಾತ್ರ ವಹಿಸಲಿದೆ. ಬೆಂಗಳೂರು, ಮೈಸೂರು ಮತ್ತು ಕೆಜಿಎಫ್​ನಲ್ಲಿ ಘಟಕಗಳನ್ನು ಹೊಂದಿರುವ ಬಿಇಎಂಎಲ್‌ನ ಪರಿಪೂರ್ಣ ಘಟಕ ಬೆಂಗಳೂರು, ಬುಲೆಟ್‌ ಟ್ರೇನ್‌ ತಯಾರಿಕೆಗೆ ಅಗತ್ಯವಾದ ಮೂಲಸೌಲಭ್ಯಗಳನ್ನು ಹೊಂದಿದೆ. ಇಂಟಿಗ್ರಲ್ ಕೋಚ್ ಫ್ಯಾಕ್ಟರಿ (ಐಸಿಎಫ್​) …

Read More »

ಪಿಎಂ ಸೂರ್ಯಘರ್ ಯೋಜನೆಯಡಿ ಕೇಂದ್ರ ಸರ್ಕಾರದಿಂದ ಭರ್ಜರಿ ಸಬ್ಸಿಡಿ

ನವದೆಹಲಿ: ಸೌರ ವಿದ್ಯುತ್ ಬಳಕೆ ಉತ್ತೇಜಿಸುವ ಮೂಲಕ ಉಚಿತ ವಿದ್ಯುತ್ ಹಾಗೂ ಆದಾಯ ಮೂಲ ನೀಡುವ ಮಹತ್ವಾಕಾಂಕ್ಷಿ ಪ್ರಧಾನಿ ಸೂರ್ಯ ಘರ್ ಯೋಜನೆ ಬಂದಂತಹ ಪ್ರತಿ ತಿಂಗಳು 300 ಯುನಿಟ್ ಉಚಿತ ವಿದ್ಯುತ್ ಮೂಲಕ ಬರೋಬ್ಬರಿ 1 ಕೋಟಿ ಮನೆಗೆ ಸೌಲಭ್ಯ ಒದಗಿಸುವ ಈ ಯೋಜನೆ ಲಾಭವನ್ನು ಸುಲಭವಾಗಿ ಪಡೆಯಲು ಸಾಧ್ಯವಿದೆ. ಮನೆಯ ಮೇಲೆ ಸೌರಫಲಕ ಅಳವಡಿಸುವ ಮೂಲಕ ಉಚಿತ ವಿದ್ಯುತ್ ಹಾಗೂ ಹೆಚ್ಚುವರಿ ವಿದ್ಯುತ್ ಮಾರಾಟ ಮಾಡಿ ಅದರಿಂದಲೂ …

Read More »

ಪೊಲೀಸ್ ಹುದ್ದೆಗಳ ವಯೋಮಿತಿ 27 ರಿಂದ 33 ವರ್ಷಕ್ಕೆ ಏರಿಕೆ: ಸಿಎಂ ಸಿದ್ದರಾಮಯ್ಯ ಘೋಷಣೆ

ಮೈಸೂರು : ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸಿಎಂ ಸಿದ್ದರಾಮಯ್ಯ ಭರ್ಜರಿ ಸಿಹಿಸುದ್ದಿ ನೀಡಿದ್ದು, ಪೊಲೀಸ್ ಕಾನ್‌ಸ್ಟೆಬಲ್ ಹುದ್ದೆಗಳಿಗೆ ವಯೋಮಿತಿಯನ್ನು 27 ರಿಂದ 33 ವರ್ಷಕ್ಕೆ ಏರಿಸಬೇಕೆಂಬ ಬೇಡಿಕೆ ಇದ್ದು, ಒಂದು ಬಾರಿಯ ತೀರ್ಮಾನ ಕೈಗೊಳ್ಳುವಂತೆ ಗೃಹ ಸಚಿವರಿಗೆ ತಿಳಿಸಿದ್ದೇನೆ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ,ಪೊಲೀಸ್ ಕಾನ್‌ಸ್ಟೆಬಲ್ ಹುದ್ದೆಗಳಿಗೆ ವಯೋಮಿತಿಯನ್ನು 27 ರಿಂದ 33 ವರ್ಷಕ್ಕೆ ಏರಿಸಬೇಕೆಂಬ ಬೇಡಿಕೆ ಇದ್ದು, ಒಂದು ಬಾರಿಯ ತೀರ್ಮಾನ ಕೈಗೊಳ್ಳುವಂತೆ ಗೃಹ ಸಚಿವರಿಗೆ …

Read More »

ಕ್ವಾಡ್‌ ಶೃಂಗಸಭೆಯಲ್ಲಿ ಭಾಗವಹಿಸಲು ಅಮೇರಿಕಾ ತೆರಳಿದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ಮೋದಿ ಅವರು ಅಮೆರಿಕಕ್ಕೆ ತೆರಳಿದ್ದು, ನಾಲ್ಕನೇ ಕ್ವಾಡ್ ಲೀಡರ್ಸ್ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಹಾಗೂ ಸೆಪ್ಟೆಂಬರ್ 23ರಂದು ನ್ಯೂಯಾರ್ಕ್​​​​ನಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾಷಣ ಮಾಡಲಿದ್ದಾರೆ. ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರ ತವರೂರು ವಿಲ್ಮಿಂಗ್ಟನ್‌ನಲ್ಲಿ ಕ್ವಾಡ್ ಶೃಂಗಸಭೆ ಸಭೆಯನ್ನು ಆಯೋಜಿಸಲಾಗಿದೆ. ಪ್ರಧಾನಿ ಮೋದಿ ಅವರು ಇಂದಿನಿಂದ (ಸೆ.21) ಅಮೆರಿಕ ಪ್ರವಾಸದಲ್ಲಿದ್ದಾರೆ. ಇಂದು ಅಮೆರಿಕಕ್ಕೆ ತೆರಳಿದ್ದು, ನಾಲ್ಕನೇ ಕ್ವಾಡ್ ಲೀಡರ್ಸ್ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಹಾಗೂ ಸೆಪ್ಟೆಂಬರ್ 23ರಂದು ನ್ಯೂಯಾರ್ಕ್​​​​ನಲ್ಲಿ …

Read More »

ಚಿತ್ತಾಪುರ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ 218 ಕೋಟಿ ರೂ.ಅನುದಾನ

ಚಿತ್ತಾಪುರ: ತಾಲ್ಲೂಕಿನ ದಂಡೋತಿ ಗ್ರಾಮದ ಹತ್ತಿರ ಹರಿಯುತ್ತಿರುವ ಕಾಗಿಣಾ ನದಿಗೆ ಹೊಸದಾಗಿ ಸೇತುವೆ ನಿರ್ಮಾಣ ಮಾಡಬೇಕು ಎನ್ನುವ ದಶಕದ ಬೇಡಿಕೆಗೆ, ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಪ್ರಯತ್ನಕ್ಕೆ ಹಾಗೂ ರಾಜ್ಯ ಸರ್ಕಾರದಿಂದ ಕೊನೆಗೂ ಮನ್ನಣೆ ಸಿಕ್ಕಿದೆ. ವಿವಿಧ ಅಭಿವೃದ್ಧಿ ಕಾಮಗಾರಿಗೆ ಒಟ್ಟು ₹ 218 ಕೋಟಿ ಅನುದಾನಕ್ಕೆ ಅನುಮೋದನೆ ದೊರೆತಿದೆ. ಕಲ್ಯಾಣ ಕರ್ನಾಟಕ ಉತ್ಸವ ದಿನ ಕಲಬುರಗಿ ನಗರದ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ …

Read More »

5 ತಿಂಗಳಲ್ಲಿ 597 ಕೆ.ಜಿ ಚಿನ್ನ ಉತ್ಪಾದಿಸಿದ ಹಟ್ಟಿ ಚಿನ್ನದ ಗಣಿ

ಹಟ್ಟಿಚಿನ್ನದಗಣಿ: ಪ್ರಸಕ್ತ ಆರ್ಥಿಕ ವರ್ಷದ ಮೊದಲ 5 ತಿಂಗಳಲ್ಲಿ ಹಟ್ಟಿಚಿನ್ನದಗಣಿ ಕಂಪನಿ 613.686 ಕೆಜಿ ಗುರಿ ಪೈಕಿ 597.772 ಕೆಜಿ ಚಿನ್ನ ಉತ್ಪಾದಿಸಿದೆ. ಪ್ರತಿ ಟನ್ ಅದಿರಿನಲ್ಲಿ 2.23 ಗ್ರಾಂ ಉತ್ಪಾದನೆ ಗುರಿ ಹೊಂದಿದ್ದು, 2.74 ಗ್ರಾಂ. ಹಳದಿ ಲೋಹ ಉತ್ಪಾದನೆಯಾಗಿದೆ. ಏಪ್ರಿಲ್‌ನಲ್ಲಿ 118, ಮೇ 90, ಜೂನ್ 110, ಜುಲೈ 150, ಅಗಸ್ಟ್‌ನಲ್ಲಿ 127 ಕೆಜಿ ಚಿನ್ನ ಉತ್ಪಾದನೆಯಾಗಿದೆ. ಜುಲೈನಲ್ಲಿ 133 ಕೆ.ಜಿ ಚಿನ್ನ ಉತ್ಪಾದನೆ ಗುರಿ ಹೊಂದಲಾಗಿತ್ತು. …

Read More »

ಕಾರ್ಮಿಕರ ಕ್ಷೇಮಾಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದ ಸರ್ಕಾರ

ಹೊಸಪೇಟೆ: ಸರ್ಕಾರ ಕಾರ್ಮಿಕರ ಕ್ಷೇಮಾಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಅಸಂಘಟಿತ ಕಾರ್ಮಿಕರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಇದರ ಮುಖ್ಯ ಉದ್ದೇಶವಾಗಿದೆ ಎಂದು ವಿಜಯನಗರ ಉಪ ವಿಭಾಗದ ಕಾರ್ಮಿಕ ಅಧಿಕಾರಿ ಸೂರಪ್ಪ ಡೊಂಬಲಮತ್ತೂರ ತಿಳಿಸಿದ್ದಾರೆ. ಕಾರ್ಮಿಕರ ಕುಟುಂಬದಲ್ಲಿ ಜನನದಿಂದ ಹಿಡಿದು ಮರಣದ ವರೆಗೆ ಹಲವು ಯೋಜನೆಗಳಿದ್ದು, ಅದರ ಬಗ್ಗೆ ಮಾಹಿತಿ ಪಡೆದು ಅನುದಾನ ಪಡೆದುಕೊಳ್ಳಬೇಕು ಎಂದು ಅವರು ಸಲಹೆ ನೀಡಿದ್ದಾರೆ. ಕಾರ್ಮಿಕರಾಗಿ ಸೇವೆ ಸಲ್ಲಿಸುತ್ತಿರುವ ವ್ಯಕ್ತಿ …

Read More »

ಸೆ.29 ರಿಂದ ಅಖಿಲ ಭಾರತ ಕಬ್ಬು ಬೆಳೆಗಾರರ ಸಂಘದ ರಾಷ್ಟ್ರೀಯ ಸಮಿತಿ ಸಭೆ

ಮಂಡ್ಯ: ಕಲಬುರಗಿಯಲ್ಲಿ ಅಖಿಲ ಭಾರತ ಕಬ್ಬು ಬೆಳೆಗಾರರ ಸಂಘದ ರಾಷ್ಟ್ರೀಯ ಸಮಿತಿ ಸಭೆ ಹಾಗೂ ಕಬ್ಬು ಬೆಳೆಗಾರರ ರಾಜ್ಯ ಸಮ್ಮೇಳನವು ಸೆ.29, 30 ರಂದು ನಡೆಯಲಿದೆ ಎಂದು ಸಂಘದ ರಾಜ್ಯ ಸಂಚಾಲಕ ಎನ್.ಎಲ್.ಭರತ್‌ರಾಜ್ ಹೇಳಿದರು. ಪಂಜಾಬ್, ಹರಿಯಾಣ, ತೆಲಂಗಾಣ, ಆಂಧ್ರಪ್ರದೇಶ, ಮಧ್ಯಪ್ರದೇಶ, ಉತ್ತರಾಖಂಡ್, ಮಹಾರಾಷ್ಟ್ರ, ತಮಿಳುನಾಡು, ಬಿಹಾರ, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಂದ ಕಬ್ಬು ಬೆಳೆಗಾರರ ಸಂಘದ ರಾಷ್ಟ್ರ ಮಟ್ಟದ ಮುಖಂಡರು ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಕಬ್ಬು ಬೆಳೆಗಾರರ ಸ್ಥಿತಿಗತಿ, ಮುಂದಿನ …

Read More »

ವಿಜಯನಗರದಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ಶಾಸಕರಿಂದ ಸಚಿವ ಎಂ.ಬಿ.ಪಾಟೀಲ್ ಗೆ ಮನವಿ

ಹೊಸಪೇಟೆ : ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ,‌ ವಿಜಯನಗರ ವಿಧಾನಸಭಾ ಕ್ಷೇತ್ರದ ಶಾಸಕ ಎಚ್. ಆರ್.ಗವಿಯಪ್ಪ ಅವರು ಇಂದು ಬೆಂಗಳೂರಿನಲ್ಲಿ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಅವರನ್ನು ಭೇಟಿ ಮಾಡಿ ಚರ್ಚಿಸಿದರು. ವಿಜಯನಗರ ಜಿಲ್ಲೆಯು ಪ್ರಾಕೃತಿಕವಾಗಿ ತನ್ನದೇ ವಿಶೇಷತೆಯನ್ನು ಹೊಂದಿದ್ದು, ಜಾಗತಿಕವಾಗಿ ಹೆಸರುವಾಸಿಯಾಗಿದೆ. ಪ್ರತಿ ದಿನ ಹಂಪಿಗೆ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಅಗಮಿಸುತ್ತಾರೆ. ಅಲ್ಲದೆ, ಹಂಪಿ ಸುತ್ತಲೂ ಪ್ರಸಿದ್ಧ ಧಾರ್ಮಿಕ ತಾಣಗಳಿವೆ. ಹಾಗಾಗಿ ವಿಜಯನಗರ ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ನಿರ್ಮಾಣದ …

Read More »

ಕೈಕೊಟ್ಟ ಮಳೆ: ಭೂಮಿಯಲ್ಲೆ ಒಣಗುತ್ತಿರುವ ರಾಗಿ ಪೈರು

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕಳೆದ ಎರಡು ಮೂರು ವಾರಗಳಿಂದ ಮಳೆ ಬಾರದೇ ಇರುವುದರಿಂದ ಬಿತ್ತನೆ ಮಾಡಿರುವ ಬೆಳೆಗಳು ತೇವಾಂಶದ ಕೊರತೆಯಿಂದ ರಾಗಿ ಪೈರು ಭೂಮಿಯಲ್ಲಿ ಒಣಗುತ್ತಿರುವುದು ಒಂದು ಕಡೆಯಾದರೆ ಬಿತ್ತನೆ ಮಾಡಬೇಕಾಗಿರುವ ರೈತರು ಮಳೆರಾಯನಿಗಾಗಿ ಕಾಯ್ದು ಕುಳಿತಿದ್ದು ರೈತರನ್ನು ಮತ್ತಷ್ಟು ಆತಂಕಕ್ಕೆ ದೂಡುವಂತೆ ಮಾಡಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲೂಕುಗಳಲ್ಲಿ ರಾಗಿ ಪ್ರಮುಖ ಬೆಳೆಯಾಗಿದೆ. ಕಳೆದ ಎರಡು ಮೂರು ವಾರಗಳಿಂದ ಮಳೆ ಬರದೇ ಇರುವುದರಿಂದ ರೈತರು ಸಾಕಷ್ಟು …

Read More »