Breaking News

BigTv News

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನೌಕರರ ಒಕ್ಕೂಟದಿಂದ ಅ.4 ರಿಂದ ಅನಿರ್ದಿಷ್ಟಾವಧಿ ಹೋರಾಟ

ಬೆಂಗಳೂರು: ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯತ್ ಸೇವೆಗಳಲ್ಲಿ ಭಾರೀ ವ್ಯತ್ಯಯವಾಗುವ ಸಾಧ್ಯತೆ ಇದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ಒಕ್ಕೂಟದ ವತಿಯಿಂದ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಕ್ಟೋಬರ್ 4 ರಿಂದ ಅನಿರ್ದಿಷ್ಟಾವಧಿ ಹೋರಾಟಕ್ಕೆ ನಿರ್ಧರಿಸಿದೆ. ರಾಜ್ಯಾದ್ಯಂತ ಗ್ರಾಮ ಪಂಚಾಯತ್ ಸೇವೆಗಳನ್ನು ನಿಲ್ಲಿಸಿ ಹೋರಾಟಕ್ಕೆ ಸಜ್ಜಾಗಿದ್ದಾರೆ. ಆರ್‌ಡಿಪಿಆರ್‌ ಇಲಾಖೆಯ ಸುಮಾರು 11 ವೃಂದಗಳು ಸೇರಿ ಬೃಹತ್ ಹೋರಾಟ ನಡೆಸಲಿದ್ದಾರೆ. ಅಧಿಕಾರಿಗಳು …

Read More »

ಕಪ್ಪತ್ತಗುಡ್ಡ ರಕ್ಷಣೆಗೆ ಬೃಹತ್ ಪ್ರಮಾಣದ ಪಾದಯಾತ್ರೆ

ಹುಬ್ಬಳ್ಳಿ: ಉತ್ತರ ಕರ್ನಾಟಕದ ಜನರ ದಶಕಗಳ ಬೇಡಿಕೆ ಬೇಡಿಕೆಯಾಗಿಯೇ ಉಳಿದಿದೆ, ಇದರೊಂದಿಗೆ ದಕ್ಷಿಣ‌ ಕಾಶೀ ಎಂದೇ ಕರೆಸಿಕೊಳ್ಳುವ ಕಪ್ಪತ್ತಗುಡ್ಡ ರಕ್ಷಣೆಯ ಬಗ್ಗೆ ಸರ್ಕಾರದ ನಿರ್ಲಕ್ಷ್ಯ ವಿರುದ್ಧ ಹುಬ್ಬಳ್ಳಿಯಿಂದ ಬೃಹತ್ ಪಾದಯಾತ್ರೆ ಆರಂಭವಾಗಿದೆ. ಗುರುವಾರ ಚೆನ್ನಮ್ಮ ವೃತ್ತದಲ್ಲಿ ಪಾದಯಾತ್ರೆಗೆ ಚಾಲನೆ ನೀಡಲಾಗಿದೆ. ಇಂದು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ ಬಣದ ನೇತೃತ್ವದಲ್ಲಿ ಮುಖಂಡತ್ವದಲ್ಲಿ ರಾಜ್ಯ ಸಮಿತಿ ಮತ್ತು ಉತ್ತರ ಕರ್ನಾಟಕ ಹಾಗೂ ಬೆಳಗಾವಿ ವಿಭಾಗದ ಪದಾಧಿಕಾರಿಗಳು, …

Read More »

ಉತ್ತರಪ್ರದೇಶದಲ್ಲಿ ಮಳೆ ಅನಾಹುತ: ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಉತ್ತರಪ್ರದೇಶ: ಯುಪಿಯಲ್ಲಿ ಮಳೆ ಅನಾಹುತ ಮಾಡುತ್ತಿದ್ದು, ಪ್ರಯಾಗರಾಜ್ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿದೆ. ಗಂಗಾ-ಯಮುನಾ ನದಿಯ ನೀರಿನ ಮಟ್ಟ ದಿಢೀರ್ ಏರಿಕೆಯಾಗಿರುವುದರಿಂದ ನದಿ ತೀರದ ಪ್ರದೇಶಗಳು ಮುಳುಗಡೆಯಾಗಿವೆ. ಗಾಜಿಯಾಬಾದ್-ನೋಯ್ಡಾ ಸೇರಿದಂತೆ ಆಗ್ರಾದಲ್ಲಿ ಗುರುವಾರ ಬೆಳಗ್ಗೆಯಿಂದ ಮಳೆ ಸುರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಆಗ್ರಾದಲ್ಲಿ 12ನೇ ತರಗತಿವರೆಗೆ ಶಾಲಾ ಕಾಲೇಜುಗಳನ್ನು ಮುಚ್ಚಲಾಗಿದೆ. ಇಟಾಹ್ ಮತ್ತು ಮಥುರಾದಲ್ಲಿ  ಮಳೆಯಿಂದಾಗಿ ಶಾಲೆಗಳನ್ನು  ಮುಚ್ಚಲಾಗಿದೆ, ಇಟಾಹ್ ಮತ್ತು ಮಥುರಾದಲ್ಲಿಯೂ 1 ರಿಂದ 12 ನೇ ತರಗತಿಯವರೆಗೆ …

Read More »

ಜಿಲ್ಲೆಯಲ್ಲಿ ಉದ್ದು ಮತ್ತು ಸೋಯಾಬಿನ್ ಖರೀದಿಗೆ 80 ಕೇಂದ್ರಗಳು: ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಬೀದರ್: ಪ್ರಸಕ್ತ ಸಾಲಿಗೆ ಕೇಂದ್ರ ಸರ್ಕಾರವು ಘೋಷಿಸಿರುವ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಬೀದರ್‌ ಜಿಲ್ಲೆಯಲ್ಲಿ ಒಟ್ಟು 80 ಖರೀದಿ ಕೇಂದ್ರಗಳಲ್ಲಿ ಉದ್ದು ಮತ್ತು ಸೋಯಾಬೀನ್‌ ಖರೀದಿಸಲಾಗುವುದು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದ್ದಾರೆ. ಕೇಂದ್ರದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಉದ್ದು ಮತ್ತು ಸೋಯಾಬೀನ್ ಕಾಳುಗಳನ್ನು ಎಂಎಸ್‌ಪಿ ದರದಲ್ಲಿ ರೈತರಿಂದ ಖರೀದಿಸಲಾಗುವುದು. ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಪ್ರತಿ ಕ್ವಿಂಟಲ್‌ ಉದ್ದು ₹7,400, ಸೋಯಾಬೀನ್ ಪ್ರತಿ ಕ್ವಿಂಟಲ್‌ ₹4,892 ದರದಲ್ಲಿ …

Read More »

ವರ್ಲ್ಡ್ ಇನ್ವೆಸ್ಟಬಲ್ ಮಾರ್ಕೆಟ್ ಇಂಡೆಕ್ಸ್​ನಲ್ಲಿ ಚೀನಾವನ್ನು ಹಿಂದಿಕ್ಕಿದ ಭಾರತ

ನವದೆಹಲಿ: ವಿಶ್ವದ ಅತಿದೊಡ್ಡ ಸ್ಟಾಕ್ ಮಾರ್ಕೆಟ್ ಬೆಂಚ್​ಮಾರ್ಕ್​ಗಳಲ್ಲಿ ಒಂದೆನಿಸಿದ ಎಂಎಸ್​ಸಿಐನ ಆಲ್ ಕಂಟ್ರಿ ವರ್ಲ್ಡ್ ಇನ್ವೆಸ್ಟಬಲ್ ಮಾರ್ಕೆಟ್ ಇಂಡೆಕ್ಸ್​ನಲ್ಲಿ ಭಾರತದ ಷೇರು ಮಾರುಕಟ್ಟೆ ಚೀನಾವನ್ನು ಹಿಂದಿಕ್ಕಿದೆ. ಈ ಇಂಡೆಕ್ಸ್ ಪೈಪೋಟಿಯಲ್ಲಿ ಚೀನಾವನ್ನು ಭಾರತ ಮೀರಿಸಿದ್ದು ಇದೇ ಮೊದಲು. ಮಾರ್ಗನ್ ಸ್ಟಾನ್ಲಿ ಕ್ಯಾಪಿಟಲ್ ಇಂಟರ್​ನ್ಯಾಷನಲ್​ನ ಈ ಇನ್ವೆಸ್ಟಬಲ್ ಮಾರ್ಕೆಟ್ ಇಂಡೆಕ್ಸ್​ನಲ್ಲಿ (ಎಂಎಸ್​ಸಿಐ ಎಸಿಡಬ್ಲ್ಯುಐ ಐಎಂಐ) ಭಾರತೀಯ ಷೇರುಗಳ ವೈಟೇಜ್ ಅಥವಾ ತೂಕ ಶೇ. 2.35ಕ್ಕೆ ಏರಿದೆ. ಇದೇ ವೇಳೆ ಬುಧವಾರ ದಿನಾಂತ್ಯದಲ್ಲಿ …

Read More »

ಕೇಂದ್ರ ರೈಲ್ವೆ ಸಚಿವರನ್ನು ಭೇಟಿಯಾದ ಸಂಸದ ಜಗದೀಶ ಶೆಟ್ಟರ್‌

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ 06 ಹೊಸ ವಂದೇ ಭಾರತ್ ರೈಲು ಸಂಚಾರ ಕಾರ್ಯಾಚರಣೆಗೆ ಹಸಿರು ನಿಶಾನೆ ತೋರಿಸಿದರು. ಇದೇ ವೇಳೆ ಬೆಂಗಳೂರಿನಿಂದ ಹುಬ್ಬಳ್ಳಿ ಮಾರ್ಗವಾಗಿ ಸಂಚರಿಸಿ ಧಾರವಾಡಕ್ಕೆ ಕೊನೆಗೊಳ್ಳುವ ವಂದೇ ಭಾರತ್ ರೈಲನ್ನು ಬೆಳಗಾವಿ ವಿಸ್ತರಣೆಗೆ ಸಂಸದ ಜಗದೀಶ್ ಶೆಟ್ಟರ್ ಮನವಿ ಮಾಡಿದ್ದರು. ಇದೀಗ ಮತ್ತೆ ಅದೇ ವಿಚಾರವಾಗಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ್ದು, ಮಹತ್ವದ ಚರ್ಚೆ ನಡೆಸಿದ್ದಾರೆ. ಹೊಸ ವಂದೇ ಭಾರತ್ ರೈಲುಗಳ ಪೈಕಿ …

Read More »

ಹರಿಯಾಣ ವಿಧಾನಸಭಾ ಚುನಾವಣೆ: ಬಿಜೆಪಿಯಿಂದ ಉಚಿತ ಯೋಜನೆಗಳ ಪ್ರಣಾಳಿಕೆ ಬಿಡುಗಡೆ

ಹರಿಯಾಣ: ರಾಜಕೀಯ ಪಕ್ಷಗಳು ಚುನಾವಣೆ ಪ್ರಣಾಳಿಕೆ ಬಿಡುಗಡೆ ಮಾಡುವ ಮೂಲಕ ಹರಿಯಾಣದಲ್ಲಿ ವಿಧಾನಸಭಾ ಚುನಾವಣೆ ಕಾವು ಹೆಚ್ಚಾಗಿದೆ. ನಿನ್ನೆಯಷ್ಟೇ ಕಾಂಗ್ರೆಸ್ ಪಕ್ಷ ಚುನಾವಣೆ ಪ್ರಣಾಳಿಕೆಯಲ್ಲಿ ಉಚಿತ ಯೋಜನೆಗಳ ಭರವಸೆ ನೀಡಿದೆ. ಇದನ್ನು ವಿರೋಧಿಸಿತ್ತಿದ್ದ ಬಿಜೆಪಿಯು ಸಹ ಉಚಿತ ಯೋಜನೆಗಳು ಇರುವ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಬಿಜೆಪಿ ಹಿರಿಯ ನಾಯಕ ಕೇಂದ್ರ ಆರೋಗ್ಯ ಸಚಿವ ಜೆ.ಪಿ ನಡ್ಡಾ ಅವರು ಇಂದು ಗುರುವಾರ ಹರಿಯಾಣದ ರೋಹ್ತಕ್‌ನಲ್ಲಿ ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದರು. …

Read More »

ಧಾರವಾಡ ಕೇಂದ್ರ ಕಾರಾಗೃಹ ಭದ್ರತೆಗಾಗಿ ನಾಲ್ಕು ವೀಕ್ಷಣಾ ಗೋಪುರ ನಿರ್ಮಾಣ

ಧಾರವಾಡ: ನಗರದ ಕೇಂದ್ರ ಕಾರಾಗೃಹದಲ್ಲಿ ಭದ್ರತೆ, ನಿಗಾ ನಿಟ್ಟಿನಲ್ಲಿ ಸುತ್ತ ನಾಲ್ಕು ವೀಕ್ಷಣಾ ಗೋಪುರ ನಿರ್ಮಾಣ ಕೈಗೆತ್ತಿಕೊಳ್ಳಲಾಗಿದ್ದು, ಕಾಮಗಾರಿ ಶೇ 75ರಷ್ಟು ಮುಗಿದಿದೆ. ಜೈಲು ಭಾಗದಲ್ಲಿ ಕಣ್ಗಾವಲಿಗೆ ಒಳಭಾಗದಲ್ಲಿ 55 ಹಾಗೂ ಸುತ್ತ(ಹೊರ ವಲಯ) 10 ಒಟ್ಟು 65 ಸಿ.ಸಿ ಟಿವಿ ಕ್ಯಾಮೆರಾಗಳಿವೆ. ಒಂದು ಕೋಟಿ ವೆಚ್ಚದಲ್ಲಿ ಗೋಪುರಗಳು ನಿರ್ಮಾಣವಾಗಲಿವೆ. ಗೋಪುರದ ಎತ್ತರ 30 ಅಡಿ ಕಾಂಪೌಂಡ್‌ ಸುತ್ತಲಿನ ಚಲನವಲನಗಳ ಮೇಲೆ ನಿಗಾ ಇಡಲು, ಹೊರಗಿನಿಂದ ಜೈಲು ಭಾಗದೊಳಕ್ಕೆ ಯಾರಾದರೂ …

Read More »

ರಾಜ್ಯದಲ್ಲಿ ಮುಂದಿನ 5-6 ದಿನ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮಳೆ ನಿರೀಕ್ಷೆಯಲ್ಲಿರುವ ಜನರಿಗೆ ಸಿಹಿ ಸುದ್ದಿಯೊಂದನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆ ಮುಂದುವರೆದಿದ್ದು, ಮುಂದಿನ 5-6 ದಿನವೂ ಹಲವೆಡೆ ಮಳೆ ಬೀಳುವ ಮುನ್ಸೂಚನೆಯನ್ನು ನೀಡಲಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮೋಡ ಮುಸುಕಿದ ವಾತಾವರಣವಿರಲಿದ್ದು, ಗುಡುಗು, ಗಾಳಿ ಸಹಿತ ಮಳೆ ಬೀಳುವ ಸಾಧ್ಯತೆ ಇದೆ. ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕಲಬುರಗಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಹೆಚ್ಚಿನ …

Read More »

ಕಳಸಾ ಬಂಡೂರಿ ನಾಲಾ ಯೋಜನೆ ಕುರಿತು ಪ್ರಧಾನಿ ಮೋದಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಅನುಮೋದನೆ ಒದಗಿಸಿಕೊಡುವಂತೆ ಮಂಡಳಿಯ ಅಧ್ಯಕ್ಷರೂ ಆಗಿರುವ ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಸೆಪ್ಟೆಂಬರ್ 18ರಂದು ಪತ್ರ ಬರೆದಿರುವ ಸಿದ್ದರಾಮಯ್ಯ, ಪ್ರಧಾನಿಗೆ ಜನ್ಮದಿನದ (ಮೋದಿ ಜನ್ಮದಿನ ಸೆಪ್ಟೆಂಬರ್ 17ರಂದು) ಶುಭಾಶಯವನ್ನೂ ಕೋರಿದ್ದಾರೆ. ಉತ್ತರ ಕರ್ನಾಟಕದ ಕುಡಿಯುವ ನೀರಿನ ಅಗತ್ಯತೆಗಳನ್ನು ಪೂರೈಸಲು ನಿರ್ಣಾಯಕವಾಗಿರುವ ಕಳಸಾ ಬಂಡೂರಿ ನಾಲಾ ತಿರುವು ಯೋಜನೆಯು ಪರಿಸರ, ಅರಣ್ಯ ಮತ್ತು ಹವಾಮಾನ …

Read More »