Breaking News

BigTv News

ಎನ್ ಪಿ ಕೆ ರಸಗೊಬ್ಬರ ಮೇಲೆ ಸಹಾಯಧನ ನೀಡಲು ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ

ನವದೆಹಲಿ : ಕೇಂದ್ರ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಎನ್ ಪಿಕೆ ರಸಗೊಬ್ಬರಗಳಿಗೆ ಸಹಾಯಧನ ನೀಡಲು ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಬುಧವಾರ ನಡೆದ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಧಾರಗಳನ್ನು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಪ್ರಕಟಿಸಿದರು. ಪ್ರಧಾನಿ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ಸಚಿವ ಸಂಪುಟವು ರೈತರಿಗೆ ಅನುಕೂಲವಾಗುವಂತೆ ಒಂದರ ನಂತರ ಒಂದರಂತೆ ಯೋಜನೆಗಳನ್ನು ಅನುಮೋದಿಸಿದೆ ಎಂದು ಹೇಳಿದರು. ಎನ್‌ಪಿಕೆ ರಸಗೊಬ್ಬರಗಳಿಗೆ (ಸಾರಜನಕ, …

Read More »

ಪಿಎಂ ವಿಶ್ವಕರ್ಮ ಯೋಜನೆ ಅನುಷ್ಠಾನಕ್ಕೆ ಸೂಚನೆ: ವಿ.ಸೋಮಣ್ಣ

ತುಮಕೂರು: ಸಮಾಜದಲ್ಲಿ ಧ್ವನಿ ಇಲ್ಲದ ವಿಶ್ವಕರ್ಮ ಸಮುದಾಯವನ್ನು ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಗೆ ಆದ್ಯತೆ ಮೇರೆಗೆ ಪರಿಗಣಿಸುವಂತೆ ಕೇಂದ್ರ ಜಲಶಕ್ತಿ, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಸಲಹೆ ನೀಡಿದರು. ಯೋಜನೆ ಅನುಷ್ಠಾನದಲ್ಲಿ ಲೋಪ ಕಂಡುಬಂದರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು. ವಿಶ್ವಕರ್ಮ ಸಮುದಾಯವು ಹಿಂದೂ ಧರ್ಮಕ್ಕೆ ನೀಡಿರುವ ಕೊಡುಗೆ ಸ್ಮರಣೀಯ. ವಿಶ್ವದ ಯಾವುದೇ ಕೆತ್ತನೆ, ಕುಸುರಿ, ಆಭರಣಗಳಲ್ಲಿ ವಿಶ್ವಕರ್ಮ ಸಮುದಾಯದವರ ಸ್ಪರ್ಶ ಕಾಣಬಹುದಾಗಿದೆ. ವಿಶ್ವಕರ್ಮರ ಸ್ಪರ್ಶವಿಲ್ಲದ ಗುಡಿ …

Read More »

ಜಮ್ಮುಮತ್ತುಕಾಶ್ಮೀರದಲ್ಲಿ ಕಾಂಗ್ರೆಸ್ ಮೈತ್ರಿಕೂಟ ಗೆದ್ದರೆ ಭಯೋತ್ಪಾದನೆ ಹೆಚ್ಚಾಗುತ್ತದೆ: ಅಮಿತ್ ಶಾ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಮತ್ತು ಕಾಂಗ್ರೆಸ್ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಭಯೋತ್ಪಾದನೆ ಹೆಚ್ಚಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ರಾಂಬನ್‌ನಲ್ಲಿ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅಮಿತ್‌ ಶಾ, ಎನ್‌ಸಿ ನಾಯಕ ಒಮರ್ ಅಬ್ದುಲ್ಲಾ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ರಾಹುಲ್ ಗಾಂಧಿ ಮತ್ತು ಒಮರ್ ಅಬ್ದುಲ್ಲಾ ಅವರು ಸರ್ಕಾರವನ್ನು ರಚಿಸಿದರೆ ಜಮ್ಮು ಮತ್ತು ಕಾಶ್ಮೀರದಲ್ಲಿ ನಿರುದ್ಯೋಗ ಉಂಟಾಗುತ್ತದೆ. …

Read More »

ಕೇಂದ್ರ ಸರ್ಕಾರದಿಂದ ಒಂದು ದೇಶ ಒಂದು ಚುನಾವಣೆ ವರದಿಗೆ ಅನುಮೋದನೆ

ನವದೆಹಲಿ : ಒಂದು ದೇಶ, ಒಂದು ಚುನಾವಣೆ ವರದಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ದೆಹಲಿಯಲ್ಲಿ ನಡೆದ ಪ್ರಧಾನಿ ಮೋದಿ ನೇತೃತ್ವದ ಸಂಪುಟ ಸಭೆ ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಒಂದು ದೇಶ ಒಂದು ಚುನಾವಣೆ ವರದಿಗೆ ಅನುಮೋದನೆ ನೀಡಲಾಗಿದೆ. ಏಕಕಾಲದಲ್ಲಿ ಚುನಾವಣೆ ನಡೆಸುವ ಕುರಿತು ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯು ತನ್ನ ಸಮಗ್ರ ವರದಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು …

Read More »

ಭಾರತೀಯ ಬಾಹ್ಯಾಕಾಶ ನಿಲ್ದಾಣದ ಅಭಿವೃದ್ಧಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

ದೆಹಲಿ: ಚಂದ್ರಯಾನ ಮಿಷನ್‌ನ ಮೂರನೇ ಹಂತವನ್ನು ಯಶಸ್ವಿಯಾಗಿ ಚಂದ್ರನ ಮೇಲೆ ಲ್ಯಾಂಡರ್ ಮತ್ತು ರೋವರ್ ಇಳಿಸಿದ ನಂತರ ಅದರ ವಿಸ್ತರಣೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ. ಇದರೊಂದಿಗೆ, ಇದು ವೀನಸ್ (ಶುಕ್ರ) ಆರ್ಬಿಟರ್ ಮಿಷನ್, ಗಗನ್ಯಾನ್ ಮಿಷನ್‌ನ ಮುಂದಿನ ಕಾರ್ಯ, ಭಾರತೀಯ ಬಾಹ್ಯಾಕಾಶ ನಿಲ್ದಾಣದ ಅಭಿವೃದ್ಧಿ ಮತ್ತು ಮುಂದಿನ ಪೀಳಿಗೆಯ ಉಡಾವಣಾ ನೌಕೆ ಅಭಿವೃದ್ಧಿಗೂ ಅನುಮೋದನೆ ನೀಡಿದೆ. ಚಂದ್ರಯಾನ-4 ಎಂದು ಹೆಸರಿಸಲಾದ ಚಂದ್ರನ ಮಿಷನ್, ಚಂದ್ರನ ಮೇಲೆ …

Read More »

ಗಣಪತಿ ವಿಸರ್ಜನೆ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿ ಯುವಕನ ಪುಂಡಾಟ

ವಿಜಯಪುರ : ಗಣಪತಿ ವಿಸರ್ಜನೆ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬಂದಾಳ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಪರವಾನಿಗೆ ಹೊಂದಿದ್ದ ಪಿಸ್ತೂಲಿನಿಂದ ಗಾಳಿಯಲ್ಲಿ ಗುಂಡು ಹಾರಿಸಿದ ಯುವಕನನ್ನು ಪ್ರಶಾಂತ್ ಬಿರಾದಾರ ಎಂದು ಗುರುತಿಸಲಾಗಿದೆ. ಗಾಳಿಯಲ್ಲಿ ಗುಂಡು ಹಾರಿಸಿ ಪುಂಡಾಟ ಬರೆದ ಪ್ರಶಾಂತ್ ಬಿರಾದರ್ ನನ್ನು ಸದ್ಯ ಪೊಲೀಸರು ಬಂಧಿಸಿದ್ದಾರೆ. ಪರವಾನಿಗೆ ಹೊಂದಿದ್ದ ಪಿಸ್ತೂಲ್ ನಿಂದ ಪ್ರಶಾಂತ್ ಗುಂಡು ಹಾರಿಸಿದ್ದಾನೆ. ಗಣೇಶ ವಿಸರ್ಜನೆ …

Read More »

ಮಕ್ಕಳ ಸದೃಢ ಭವಿಷ್ಯಕ್ಕಾಗಿ ಎನ್ ಎಸ್ ಪಿ ಮಾತೃವಾತ್ಸಲ್ಯ ಯೋಜನೆ ಜಾರಿಗೆ

ಬೆಂಗಳೂರು: ಕೇಂದ್ರ ಸರ್ಕಾರ ಈ ಬಾರಿ ಬಜೆಟ್ ನಲ್ಲಿ ಘೋಷಿಸಿದ ಜನಪ್ರಿಯ ಯೋಜನೆಯಲ್ಲಿ ಎನ್‌ಎಸ್ ಪಿ ಮಾತೃವಾತ್ಸಲ್ಯ ಯೋಜನೆಯೂ ಒಂದು, ಈ ಯೋಜನೆಯನ್ವಯ ನಿಮ್ಮ ಮಕ್ಕಳ ಭವಿಷ್ಯ ಸದೃಢಗೊಳಿಸಬಹುದಾಗಿದೆ. ಯಾವುದೇ ಅಪ್ರಾಪ್ತ ವಯಸ್ಸಿನ ಮಕ್ಕಳ ಹೆಸರಿನಲ್ಲಿ ಅವರ ತಂದೆ ತಾಯಿ ಅಥವಾ ಪಾಲಕರು ಎನ್ ಎಸ್ ಪಿ ವಾತ್ಸಲ್ಯ ಖಾತೆ ಆರಂಭಿಸಬಹುದು. ಮಕ್ಕಳು ಪ್ರಾಪ್ತ ವಯಸ್ಸಿಗೆ ಅಂದರೆ 18 ವರ್ಷ ವಯಸ್ಸಿಗೆ ಬಂದ ಮೇಲೆ ಆ ಖಾತೆ ಎನ್ ಎಸ್ …

Read More »

ಕೇಂದ್ರ ಸರ್ಕಾರ: ಕಚ್ಚಾ ತೈಲದ ಮೇಲಿನ ತೆರಿಗೆ ಶೂನ್ಯಕ್ಕೆ ಇಳಿಕೆ

ನವದೆಹಲಿ: ಸೆ. 18 ರಿಂದ ಜಾರಿಗೆ ಬರುವಂತೆ ದೇಶೀಯವಾಗಿ ಉತ್ಪಾದಿಸುವ ಕಚ್ಚಾ ತೈಲದ ಮೇಲಿನ ತೆರಿಗೆಯನ್ನು ಸರ್ಕಾರ ಮಂಗಳವಾರ ಪ್ರತಿ ಟನ್ಗೆ ಶೂನ್ಯಕ್ಕೆ ಇಳಿಸಿದೆ. ತೆರಿಗೆಯನ್ನು ವಿಶೇಷ ಹೆಚ್ಚುವರಿ ಅಬಕಾರಿ ಸುಂಕ (ಎಸ್‌ಎಇಡಿ) ರೂಪದಲ್ಲಿ ವಿಧಿಸಲಾಗುತ್ತದೆ ಮತ್ತು ಎರಡು ವಾರಗಳಲ್ಲಿ ಸರಾಸರಿ ತೈಲ ಬೆಲೆಗಳ ಆಧಾರದ ಮೇಲೆ ಹದಿನೈದು ದಿನಗಳಿಗೊಮ್ಮೆ ಸೂಚಿಸಲಾಗುತ್ತದೆ. ಕಚ್ಚಾ ಪೆಟ್ರೋಲಿಯಂ ಮೇಲಿನ ತೆರಿಗೆಯನ್ನು ಪ್ರತಿ ಟನ್ಗೆ 1,850 ರೂ.ಗೆ ನಿಗದಿಪಡಿಸಿದಾಗ ಆಗಸ್ಟ್ 31 ರಿಂದ ಜಾರಿಗೆ …

Read More »

ಕಿತ್ತೂರು ಉತ್ಸವದಲ್ಲಿ ಮಹಿಳಾ ಕಲಿಗಳ ಕಾದಾಟ

ಬೆಳಗಾವಿ: ಮ್ಯಾಟ್‌ ಕುಸ್ತಿಯೇ ಜನಪ್ರಿಯವಾಗುತ್ತಿರುವ ಈ ಕಾಲಘಟ್ಟದಲ್ಲೂ, ಸಾಂಪ್ರದಾಯಿಕವಾಗಿ ಮಣ್ಣಿನ ಕಣದಲ್ಲಿ ಅಂತರರಾಷ್ಟ್ರೀಯ ಮಹಿಳಾ ಕುಸ್ತಿ ಪಂದ್ಯಾವಳಿ ಆಯೋಜನೆಗೆ ತಯಾರಿ ನಡೆದಿದೆ. ಈ ಬಾರಿ ಕಿತ್ತೂರು ಉತ್ಸವದಲ್ಲಿ ನಡೆಯಲಿರುವ ಪಂದ್ಯಾವಳಿಯಲ್ಲಿ ವಿದೇಶದ ಮಹಿಳಾ ಕಲಿಗಳು ಕಾದಾಟ ನಡೆಸಲಿದ್ದಾರೆ. ಪ್ರತಿವರ್ಷ ಅಕ್ಟೋಬರ್‌ 23 ರಿಂದ 25 ರವರೆಗೆ ಕಿತ್ತೂರು ಉತ್ಸವ ವೈಭವದಿಂದ ನೆರವೇರುತ್ತದೆ, ಕೊನೆಯ ದಿನದಂದು ರಾಷ್ಟ್ರಮಟ್ಟದ ಪುರುಷರು ಮತ್ತು ಮಹಿಳೆಯರ ಕುಸ್ತಿ ಪಂದ್ಯಾವಳಿ ನಡೆಯುತ್ತಿತ್ತು. ಕಳೆದ ವರ್ಷ ಮೊದಲ ಬಾರಿ …

Read More »

ಟ್ರ್ಯಾಕ್ಟರ್ ಗೆ ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ 7 ಮಂದಿಗೆ ಗಾಯ

ಹುಬ್ಬಳ್ಳಿ: ಟ್ರ್ಯಾಕ್ಟರ್ ಮತ್ತು ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿ ಏಳು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಹುಬ್ಬಳ್ಳಿ ತಾಲೂಕಿನ ನೂಲ್ವಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಟ್ರ್ಯಾಕ್ಟರ್ ನಲ್ಲಿದ್ದ ಆರು ಮಹಿಳೆಯರು ಸೇರಿದಂತೆ ಒಟ್ಟು ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಟ್ರ್ಯಾಕ್ಟರ್ ನಲ್ಲಿ ಕೂಲಿ ಕಾರ್ಮಿಕರು ಎಂದಿನಂತೆ ಜಮೀನು ಕೆಲಸಕ್ಕೆ ತೆರಳುತ್ತಿದ್ದ ವೇಳೆ ಹಿಬಂದಿಯಿಂದ ಬಂದ ಟ್ಯಾಂಕರ್ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ …

Read More »