ಕಲಬುರಗಿ: ಹತ್ತು ವರ್ಷಗಳ ನಂತರ ಸೆ. 17 ರಂದು ಕಲಬುರಗಿಯಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿಗೆ ಪೂರಕವಾಗುವ ಪ್ರಮುಖ ಕಾರ್ಯಗಳಿಗೆ ಆದ್ಯತೆ ವಹಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕಲ್ಯಾಣ ಕರ್ನಾಟಕ ಉತ್ಸವ ಹಾಗೂ ಸಂಪುಟ ಸಭೆಯಲ್ಲಿ ಪಾಲ್ಗೊಳ್ಳಲು ಸೋಮವಾರ (ಸೆ.16) ಆಗಮಿಸಿದ ಅವರು ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಕಕ ಸಮಗ್ರ ಅಭಿವೃದ್ಧಿ ನಿಟ್ಟಿನಲ್ಲಿ ಪ್ರಮುಖವಾಗಿ ಕಕ ಭಾಗಕ್ಕೆ ಪ್ರತ್ಯೇಕ ಸಚಿವಾಲಯ …
Read More »ಪ್ರಧಾನಿ ಮೋದಿ ಹುಟ್ಟುಹಬ್ಬಕ್ಕೆ 13 ವರ್ಷದ ವಿದ್ಯಾರ್ಥಿನಿಯಿಂದ ಭಾವಚಿತ್ರ ಚಿತ್ರಿಸಿ ವಿಶ್ವದಾಖಲೆ
ಚೆನ್ನೈ: 13 ವರ್ಷದ ಶಾಲಾ ವಿದ್ಯಾರ್ಥಿ ಪ್ರೀಸ್ಲಿ ಶೆಕಿನಾ ಅವರು 800 ಕೆಜಿ ಧಾನ್ಯ ಬಳಸಿ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರವನ್ನು ನಿರಂತರ 12 ಗಂಟೆಗಳ ಕಾಲ ಚಿತ್ರಿಸುವ ಮೂಲಕ ವಿಶ್ವದಾಖಲೆ ನಿರ್ಮಿಸಿದ್ದಾರೆ. ನಾಳೆ (ಸೆ. 17 ) ರಂದು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಸಂದರ್ಭದಲ್ಲಿ ಅವರು ವಿಶ್ವದ ಅತಿದೊಡ್ಡ ಚಿತ್ರವನ್ನು ಅನಾವರಣಗೊಳಿಸಿದ್ದಾರೆ. ಪ್ರೀಸ್ಲಿ ಶೆಕಿನಾ ತನ್ನ ಪೋಷಕರಾದ ಪ್ರತಾಪ್ ಸೆಲ್ವಂ ಮತ್ತು ಸಂಕೀರಾಣಿ ಅವರೊಂದಿಗೆ …
Read More »ಮಹಿಳಾ ಕ್ರೀಡಾಪಟುಗಳ ವಸತಿ ನಿಲಯಕ್ಕೆ ಭೇಟಿ ನೀಡಿದ ಸಚಿವ ಸತೀಶ ಜಾರಕಿಹೊಳಿ
ಬೆಳಗಾವಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸರ್ಕಾರಿ ಕ್ರೀಡಾ ಶಾಲೆ ಮತ್ತು ಮಹಿಳಾ ಕ್ರೀಡಾಪಟುಗಳ ವಸತಿ ನಿಲಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ನಗರದಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸರ್ಕಾರಿ ಕ್ರೀಡಾ ಶಾಲೆ ಮತ್ತು ಮಹಿಳೆ ಕ್ರೀಡಾಪಟುಗಳ ವಸತಿ ನಿಲಯಕ್ಕೆ ಸಚಿವರು ದಿಢೀರ್ ಭೇಟಿ ನೀಡಿ, ವಸತಿ ನಿಲಯಗಳ ಸುತ್ತಲಿನ ಪರಿಸರ, ಅಡುಗೆ ಕೋಣೆ, ಡೈನಿಂಗ್ಹಾಲ್, ವಿಶ್ರಾಂತಿ …
Read More »ದೇಶದ ಮುಸ್ಲಿಂ ಬಾಂಧವರಿಗೆ ಈದ್ ಮಿಲಾದ್ ಶುಭಾಶಯ ಕೋರಿದ ರಾಷ್ಟ್ರಪತಿ ಮುರ್ಮು ಪ್ರಧಾನಿ ಮೋದಿ
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಈದ್-ಎ-ಮಿಲಾದ್-ಉನ್-ನಬಿ ಸಂದರ್ಭದಲ್ಲಿ ಮುಸ್ಲಿಂ ಬಾಂಧವರಿಗೆ ಶುಭಾಶಯಗಳನ್ನು ತಿಳಿಸಿದರು. ಅರೇಬಿಕ್ ಪದವಾದ ಮೌಲಿದ್ ಎಂದೂ ಕರೆಯಲ್ಪಡುವ ಈದ್-ಎ-ಮಿಲಾದ್-ಉನ್-ನಬಿ ಪ್ರವಾದಿ ಮುಹಮ್ಮದ್ ಅವರ ಜನನ ಮತ್ತು ಮರಣ ಎರಡನ್ನೂ ನೆನಪಿಸುತ್ತದೆ. ಇಸ್ಲಾಮಿಕ್ ಚಾಂದ್ರಮಾನ ಕ್ಯಾಲೆಂಡರ್ನ ಮೂರನೇ ತಿಂಗಳಾದ ರಬಿ-ಉಲ್-ಅವ್ವಾಲ್ನಲ್ಲಿ ಆಚರಿಸಲಾಗುವ ಈ ದಿನವನ್ನು ಅದರ ದ್ವಂದ್ವ ಪ್ರಾಮುಖ್ಯತೆಯಿಂದಾಗಿ ಆಚರಣೆಗಳಿಂದ ಗುರುತಿಸಲಾಗಿದೆ. ಪ್ರವಾದಿ ಮುಹಮ್ಮದ್ ಅವರು ಸಮಾನತೆಯನ್ನು ಆಧರಿಸಿದ ಸಮಾಜಕ್ಕೆ ಮಾದರಿಯಾಗಿದ್ದಾರೆ …
Read More »ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಬಿಜೆಪಿ ವತಿಯಿಂದ ಸೆ.17 ರಂದು ಸೇವಾ ಪಾಕ್ಷಿಕ ಆಚರಣೆ
ಬೆಂಗಳೂರು : ರಾಜ್ಯ ಬಿಜೆಪಿ ವತಿಯಿಂದ ಸೆ. 17ರಿಂದ ಸೇವಾ ಪಾಕ್ಷಿಕವನ್ನು ಆಚರಿಸಲಾಗುವುದು ಎಂದು ಬಿಜೆಪಿ ಯ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಅವರು ತಿಳಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಳೆ (ಸೆ.17) ದೇಶದ ಪ್ರಧಾನಿ, ಪ್ರಪಂಚ ಕಂಡ ಅದ್ಭುತ ನಾಯಕ ನರೇಂದ್ರ ಮೋದಿಯವರ ಜನ್ಮದಿನ, ಇದೇ 25ರಂದು ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಹುಟ್ಟು ಹಬ್ಬ, …
Read More »ನೂತನ ಅಂತಾರಾಷ್ಟ್ರೀಯ ಕಂಟೈನರ್ ಟರ್ಮಿನಲ್ ನ್ನು ಉದ್ಘಾಟಿಸಿದ ಪ್ರಧಾನಿ ಮೋದಿ
ಚೆನ್ನೈ: ತಮಿಳುನಾಡಿನ ತೂತುಕುಡಿ ಬಂದರಿನಲ್ಲಿ ನೂತನ ಅಂತಾರಾಷ್ಟ್ರೀಯ ಕಂಟೈನರ್ ಟರ್ಮಿನಲ್ ಅನ್ನು ಪ್ರಧಾನಿ ನರೇಂದ್ರ ಮೋದಿಯವರು ಇಂದು ಉದ್ಘಾಟಿಸಿದರು. ಬಳಿಕ ಮಾತನಾಡಿದ ಪ್ರಧಾನಿ, ಎರಡು ವರ್ಷಗಳ ಹಿಂದೆ ನಾನು ವಿ.ಓ. ಚಿದಂಬರನಾರ್ ಪೋರ್ಟ್ಗೆ ಸಂಬಂಧಿಸಿದ ಹಲವಾರು ಯೋಜನೆಗಳನ್ನು ಪ್ರಾರಂಭಿಸಿದ್ದು ನನಗೆ ನೆನಪಿದೆ. ಆ ಸಮಯದಲ್ಲಿ ಈ ಬಂದರಿನ ಸರಕು ನಿರ್ವಹಣೆ ಸಾಮರ್ಥ್ಯವನ್ನು ಹೆಚ್ಚಿಸಲು ಅನೇಕ ಕೆಲಸಗಳನ್ನು ಪ್ರಾರಂಭಿಸಲಾಯಿತು. ಫೆಬ್ರವರಿಯಲ್ಲಿ ನಾನು ತೂತುಕುಡಿಗೆ ಬಂದಾಗ ಅನೇಕ ಬಂದರು ಸಂಬಂಧಿತ ಕೆಲಸಗಳು ಪ್ರಾರಂಭವಾದವು. …
Read More »ಸೆ.17 ರಂದು ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ: ನಿಷೇಧಾಜ್ಞೆ ಜಾರಿ
ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಸೆಪ್ಟೆಂಬರ್ 17ರ ಮಂಗಳವಾರ ಸಚಿವ ಸಂಪುಟ ಸಭೆ ನಡೆಯಲಿದೆ. ಕಲಬುರಗಿ ಮಿನಿ ವಿಧಾನಸೌಧದಲ್ಲಿ ನಡೆಯುವ ಸಚಿವ ಸಂಪುಟ ಸಭೆಗೆ ಜಿಲ್ಲಾಡಳಿತ, ನಗರ ಪೊಲೀಸರು ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ. ಸಿದ್ದರಾಮಯ್ಯ ಸೋಮವಾರ ಸಂಜೆಯೇ ಕಲಬುರಗಿ ನಗರಕ್ಕೆ ಆಗಮಿಸಿ, ವಾಸ್ತವ್ಯ ಹೂಡಲಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ಸಂಪುಟ ಸಭೆಯಲ್ಲಿ ಯಾವ ಯಾವ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಕಾದು ನೋಡಬೇಕಿದೆ. ಮಂಗಳವಾರ ಕಲಬುರಗಿ ನಗರದ …
Read More »ರಾಜ್ಯದಲ್ಲಿ ಹೊಸ ಪ್ರವಾಸೋದ್ಯಮ ನೀತಿ ಜಾರಿ: ಸಿಎಂ ಸಿದ್ದರಾಮಯ್ಯ
ಬೆಂಗಳೂರು : ರಾಜ್ಯದಲ್ಲಿ ಹೊಸ ಪ್ರವಾಸೋದ್ಯಮ ನೀತಿ ಜಾರಿಗೊಳಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ರಾಜ್ಯದಲ್ಲಿ ಹೊಸ ಪ್ರವಾಸೋದ್ಯಮ ನೀತಿ ಜಾರಿಗೊಳಿಸಲಾಗುವುದು, ಪ್ರವಾಸೋದ್ಯಮ ಅಭಿವೃದ್ಧಿಗೆ ಎಷ್ಟು ಹಣ ಖರ್ಚಾಗುತ್ತದೋ ಅಷ್ಟನ್ನು ಭರಿಸಲು ನಾವು ತಯಾರಾಗಿದ್ದೇವೆ ಎಂದು ಮುಖ್ಯಮಂತ್ರಿಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಪ್ರಾಕೃತಿಕ ಸೌಂದರ್ಯವಿರುವ ಪ್ರವಾಸಿ ತಾಣಗಳನ್ನು ಅಭಿವೃದ್ಧಿ ಮಾಡುತ್ತೇವೆ. ಕೇಂದ್ರ ಸರ್ಕಾರಕ್ಕೆ ತೆರಿಗೆ ಪಾವತಿಸುವಲ್ಲಿ ಕರ್ನಾಟಕ ರಾಜ್ಯವು ಎರಡನೇ ಸ್ಥಾನದಲ್ಲಿದೆ. ಹೀಗಾಗಿ ಪ್ರವಾಸೋದ್ಯಮದಿಂದ ಬರುವ ಆದಾಯದಿಂದ …
Read More »ಹಳೆ ವೈಷಮ್ಯದ ಹಿನ್ನಲೆ ಎರಡು ಗುಂಪುಗಳ ನಡುವೆ ಗಲಾಟೆ: ಓರ್ವ ಸಾವು, 8 ಮಂದಿಗೆ ಗಂಭೀರ ಗಾಯ
ರಾಯಚೂರು: ಜಿಲ್ಲೆಯಲ್ಲಿ ಹಳೆಯ ವೈಷಮ್ಯದ ಹಿನ್ನಲೆಯಲ್ಲಿ ಅಂತ್ಯಸಂಸ್ಕಾರದ ವೇಳೆಯಲ್ಲೇ ಎರಡು ಗುಂಪುಗಳ ನಡುವೆ ಗಲಾಟೆಯಾಗಿದೆ. ಈ ಗಲಾಟೆಯಲ್ಲಿ ಕೈಕೈ ಮಿಲಾಯಿಸಿ ಎರಡು ಗುಂಪುಗಳು ಬಡಿದಾಡಿಕೊಂಡ ಪರಿಣಾಮ, ಓರ್ವ ಸಾವನ್ನಪ್ಪಿ, 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಯಚೂರು ತಾಲ್ಲೂಕಿನ ಮಿರ್ಜಾಪುರ ಗ್ರಾಮದಲ್ಲಿ ಹಳೆಯ ವೈಷಮ್ಯದ ಹಿನ್ನಲೆಯಲ್ಲಿ 2 ಗುಂಪುಗಳ ನಡುವೆ ಗಲಾಟೆಯಾಗಿದೆ. ಗಲಾಟೆಯಲ್ಲಿ ಭೀಮೇಶ ನಾಯಕ(38) ಎಂಬುವರು ಸಾವನ್ನಪ್ಪಿದ್ದಾರೆ. ರಾಮಲಮ್ಮ, ಅಲಾರಿ ನಾಯಕ್, ದೋಳಯ್ಯ ಸೇರಿದಂತೆ 8 ಮಂದಿ ಹೊಡೆದಾಟದಲ್ಲಿ ಗಂಭೀರವಾಗಿ …
Read More »ವಿಶ್ವ ಪ್ರಜಾಪ್ರಭುತ್ವ ದಿನಾಚರಣೆ: ಮಾನವ ಸರಪಳಿ ರಚನೆಯಲ್ಲಿ ರಾಜ್ಯಕ್ಕೆ ಧಾರವಾಡ ಜಿಲ್ಲೆ ಪ್ರಥಮ
ಧಾರವಾಡ: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಬೀದರನಿಂದ ಚಾಮರಾಜನಗರದ ವರೆಗೆ ರಾಜ್ಯದ 31 ಜಿಲ್ಲೆಗಳನ್ನು ಒಳಗೊಂಡಿರುವ ಅತಿ ಉದ್ದದ ಮಾನವ ಸರಪಳಿಯನ್ನು ರಚಿಸಲಾಯಿತು. ಜಿಲ್ಲೆಯ ಧಾರವಾಡ ತಾಲೂಕಿನ ತೇಗೂರದಿಂದ ಮಾವಿನಕೊಪ್ಪ ಗ್ರಾಮದ ವರಗೆ ಅಂದಾಜು 55 ಕಿಲೋ ಮೀಟರ್ ಉದ್ಧದ ಮಾನವ ಸರಪಳಿಯನ್ನು ನಿರ್ಮಿಸಲಾಗಿತ್ತು. ಇದರಲ್ಲಿ ಪ್ರತಿ ಮೀಟರಗೆ ಒಬ್ಬರಂತೆ ಸುಮಾರು 60 ಸಾವಿರ ಜನ ಹಾಗೂ ರಾಷ್ಟ್ರೀಯ ಹೆದ್ದಾರಿ, ನಗರ ಪ್ರದೇಶದಲ್ಲಿ ಡಬಲ್ ಲೈನ್ ಮಾಡಲಾಗಿತ್ತು. ಮಾನವ ಸರಪಳಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





