Breaking News

BigTv News

ಜಿಲ್ಲಾ ಕ್ರೀಡಾಂಗಣದ ಕಾಮಗಾರಿ ಮೂರು ವರ್ಷಗಳಲ್ಲಿ ಪೂರ್ಣಗೊಳ್ಳಲಿದೆ: ಸಚಿವ ಸತೀಶ ಜಾರಕಿಹೊಳಿ

ಬೆಳಗಾವಿ: ಕ್ರೀಡಾಪಟುಗಳಿಗೆ ಅಗತ್ಯವಿರುವ ಎಲ್ಲ ಆಧುನಿಕ ಸೌಲಭ್ಯ ಒಳಗೊಂಡ ಜಿಲ್ಲಾ ಕ್ರೀಡಾಂಗಣದ ಕಾಮಗಾರಿ ಮೂರು ವರ್ಷಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಇಲ್ಲಿನ ರಾಮತೀರ್ಥ ನಗರದಲ್ಲಿ ನೂತನ ಜಿಲ್ಲಾ ಕ್ರೀಡಾಂಗಣ ನಿರ್ಮಾಣಕ್ಕೆ ಸೋಮವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಆವರಣ ಗೋಡೆ ನಿರ್ಮಾಣ, ನೆಲ ಸಮತಟ್ಟುಗೊಳಿಸುವುದು ಸೇರಿದಂತೆ ಮೊದಲ ಹಂತದ ಕಾಮಗಾರಿಗಳು ಒಂದು ವರ್ಷದೊಳಗೆ ಪೂರ್ಣಗೊಳ್ಳಲಿವೆ ಎಂದರು. ಸದ್ಯ ಇರುವ ಜಿಲ್ಲಾ ಕ್ರೀಡಾಂಗಣದ ಲೀಸ್‌ …

Read More »

ಕೃಷ್ಣಾ ನದಿಗೆ ಹಾರಿ ಯುವತಿ ಆತ್ಮಹತ್ಯೆ: ಶವಕ್ಕಾಗಿ ಶೋಧ

ಮುದ್ದೇಬಿಹಾಳ: ತಾಲೂಕಿನ ಚಟ್ಟಿಹಾಳ ಗ್ರಾಮದ ಯುವತಿ ಬಾಲವ್ವ ಕಮರಿ ಕೃಷ್ಣಾ ನದಿಗೆ ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇತ್ತೀಚೆಗೆ ನಡೆದಿದೆ ಎಂದು ವರದಿ ತಿಳಿಸಿದೆ. ಆಕೆಯ ಶವಕ್ಕಾಗಿ ಪೊಲೀಸರು, ಅಗ್ನಿಶಾಮಕ ದಳದ ತಂಡ ಹಾಗೂ ನುರಿತ ಈಜುಗಾರರೊಂದಿಗೆ ಶೋಧ ಕಾರ್ಯ ಮುಂದುವರೆಸಿದ್ದಾರೆ ಎಂದು ತಿಳಿದು ಬಂದಿದೆ. ಸೆಪ್ಟೆಂಬರ್ 14 ರಂದೇ ಯುವತಿ ನದಿಗೆ ಹಾರಿದ್ದಾಳೆ ಎಂದು ಮೂಲಗಳು ತಿಳಿಸಿವೆ. ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. …

Read More »

ಮಹಿಳೆಯರಿಗೆ ಸಬ್ಸಿಡಿಯಲ್ಲಿ ಉದ್ಯೋಗಿನಿ ಯೋಜನೆಯಡಿ 3 ಲಕ್ಷ ಸಾಲ ಸೌಲಭ್ಯ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವದ ಯೋಜನೆಯಡಿ ಮಹಿಳೆಯರನ್ನು ಆರ್ಥಿಕ ಸಬಲೀಕರಿಸುವಂತ ಉದ್ಯೋಗಿನಿ ಯೋಜನೆ ಕೂಡ ಒಂದಾಗಿದೆ. ಈ ಯೋಜನೆಯಡಿ ಎಸ್ಸಿ, ಎಸ್ಟಿ, ಸಾಮಾನ್ಯ ವರ್ಗದ ಮಹಿಳೆಯರಿಗೆ 3 ಲಕ್ಷದವರೆಗೆ ಸಬ್ಸಿಡಿ ಸಹಿತ ಸಾಲಸೌಲಭ್ಯವನ್ನು ನೀಡಲಾಗುತ್ತದೆ. ನಿರುದ್ಯೋಗಿಗಳು ಸ್ವಯಂ ಉದ್ಯೋಗಿಗಳಾಗಲು ಮತ್ತು ಸ್ವಾವಲಂಬಿಗಳಾಗಲು ಸಹಾಯ ಮಾಡಲು ಕರ್ನಾಟಕ ಸರ್ಕಾರ ಸಾಕಷ್ಟು ಕಲ್ಯಾಣ ಯೋಜನೆಗಳನ್ನು ಪ್ರಾರಂಭಿಸಿದೆ. 2015-2016 ರಲ್ಲಿ, ಕರ್ನಾಟಕ ಸರ್ಕಾರವು ರಾಜ್ಯದ ಮಹಿಳೆಯರಿಗಾಗಿ ವಿಶೇಷವಾಗಿ ಉದ್ಯೋಗಿನಿ ಯೋಜನೆಯನ್ನು ಪ್ರಾರಂಭಿಸಿತು. ಉದ್ಯೋಗಿನಿ ಯೋಜನೆಯು …

Read More »

ಶೀಘ್ರದಲ್ಲಿ ಒಂದು ರಾಷ್ಟ್ರ ಒಂದು ಚುನಾವಣೆ ಜಾರಿಗೆ ತರಲಾಗುವುದು: ಪ್ರಧಾನಿ ಮೋದಿ

ನವದೆಹಲಿ: ಸಂಸತ್ತಿನ ಕಾರಿಡಾರ್ ಗಳಲ್ಲಿ ದೀರ್ಘಕಾಲದಿಂದ ಚರ್ಚೆಯಲ್ಲಿರುವ ಒಂದು ದೇಶ ಒಂದು ಚುನಾವಣೆಯ ಕಲ್ಪನೆಯನ್ನು ನರೇಂದ್ರ ಮೋದಿ ಸರ್ಕಾರದ ಪ್ರಸ್ತುತ ಅಧಿಕಾರಾವಧಿಯಲ್ಲಿ ಜಾರಿಗೆ ತರಲಾಗುವುದು ಎಂದು ಮೂಲಗಳು ತಿಳಿಸಿವೆ. ಪ್ರಧಾನಿ ನರೇಂದ್ರ ಮೋದಿ ಅವರು ಈ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಇದನ್ನು ಉಲ್ಲೇಖಿಸಿದ್ದರು ಮತ್ತು ಇದನ್ನು ಜಾರಿಗೆ ತರಲು ಸರ್ಕಾರ ಬದ್ಧವಾಗಿದೆ ಎಂದು ಮೂಲಗಳು ತಿಳಿಸಿವೆ. ಸರ್ಕಾರ ಈಗಾಗಲೇ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು …

Read More »

ಕರ್ನಾಟಕದಲ್ಲಿ ಭೂ ಸುಧಾರಣೆ ಯೋಜನೆಗಳನ್ನು ಜಾರಿಗೆ ತರಲು 11 ನಗರಗಳ ಆಯ್ಕೆ

ಬೆಂಗಳೂರು: ಕರ್ನಾಟಕವು 11 ಸಣ್ಣ ನಗರಗಳು ಮತ್ತು ಪಟ್ಟಣಗಳನ್ನು ನಗರ ಭೂ ಸುಧಾರಣೆಗಳನ್ನು ಜಾರಿಗೆ ತರಲು ಆಯ್ಕೆ ಮಾಡಿದೆ. ಇದಕ್ಕಾಗಿ ಕೇಂದ್ರ ಸರ್ಕಾರವು ಹಣಕಾಸಿನ ಪ್ರೋತ್ಸಾಹವನ್ನು ನೀಡುತ್ತದೆ ಮತ್ತು ಇದು ಸಂಪೂರ್ಣ ಮಾಲೀಕತ್ವವನ್ನು ನೀಡುವ ಆಸ್ತಿ ಶೀರ್ಷಿಕೆಗಳನ್ನು ನೀಡುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಪುನರಾರಂಭಿಸಬಹುದು ಎಂದು ಡಿಎಚ್‌ ವರದಿ ಮಾಡಿದೆ. ಸುಧಾರಣೆಗಳು ಪ್ರಾದೇಶಿಕ ಮ್ಯಾಪಿಂಗ್ ಅನ್ನು ಬಳಸಿಕೊಂಡು ಭೂ ದಾಖಲೆಗಳ ಡಿಜಿಟಲೀಕರಣ ಮತ್ತು ಆಸ್ತಿ ದಾಖಲೆ ಆಡಳಿತಕ್ಕಾಗಿ ಐಟಿ ಆಧಾರಿತ ವ್ಯವಸ್ಥೆಯನ್ನು …

Read More »

ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಕನಿಷ್ಠ ಉಷ್ಣಾಂಶ ಕುಸಿತ

ಬೆಂಗಳೂರು: ಕರ್ನಾಟಕದಲ್ಲಿ ಚಳಿಯ ವಾತಾವರಣ ಹಲವು ಭಾಗಗಳಲ್ಲಿ ಶುರುವಾಗಿದೆ. ಸಾಧಾರಣ ಮಳೆ ಅಲ್ಲಲ್ಲಿ ಆಗಿರುವುದು ಬಿಟ್ಟರೆ ಮಳೆ ಪ್ರಮಾಣವೂ ಕಡಿಮೆಯಾಗುತ್ತಿದೆ. ಉತ್ತರ ಕರ್ನಾಟಕದ ವಿಜಯಪುರ, ಬೀದರ್‌, ಕಲಬುರಗಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕನಿಷ್ಠ ಉಷ್ಣಾಂಶದಲ್ಲಿ ಕುಸಿತ ಕಂಡು ಬಂದು ಬೆಳ್ಳಂಬೆಳಿಗ್ಗೆ ಚಳಿ ವಾತಾವರಣವಿತ್ತು. ಹಾಸನ, ಮಂಡ್ಯ, ದಾವಣಗೆರೆ ಸಹಿತ ಹಲವು ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶದಲ್ಲಿ ಏರಿಕೆಯಾಗಿದೆ ಬಿರು ಬಿಸಿಲಿನ ವಾತಾವರಣ ಮುಂದುವರಿದಿದೆ. ಬೆಂಗಳೂರಿನಲ್ಲೂ ಬಿಸಿಲಿನ ಸನ್ನಿವೇಶವೂ ಇದೆ. ಸೋಮವಾರದಂದು ಕರ್ನಾಟಕದ …

Read More »

4 ನೇ ಜಾಗತಿಕ ಮರುಬಳಕೆ ಇಂಧನ ಹೂಡಿಕೆದಾರರ ಸಮಾವೇಶ ಉದ್ಘಾಟಿಸಿದ ಪ್ರಧಾನಿ ಮೋದಿ

ಗಾಂಧಿನಗರ್: ಇಪ್ಪತ್ತೊಂದನೇ ಶತಮಾನದಲ್ಲಿ ಭಾರತವೇ ಪ್ರಧಾನ ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ಸೋಮವಾರ ಹೇಳಿದ್ದಾರೆ. ನಾಲ್ಕನೇ ಜಾಗತಿಕ ಮರುಬಳಕೆ ಇಂಧನ ಹೂಡಿಕೆದಾರರ ಸಭೆಯನ್ನು (ರೀ ಇನ್ವೆಸ್ಟ್) ಉದ್ಘಾಟಿಸಿದ ಬಳಿಕ ಭಾಷಣ ಮಾಡಿದ ಮೋದಿ, ಭಾರತ ಅಗ್ರಸ್ಥಾನಕ್ಕೆ ಏರುವುದಷ್ಟೇ ಅಲ್ಲ, ಆ ಸ್ಥಾನ ಉಳಿಸಿಕೊಳ್ಳುವುದು ಹೇಗೆ ಎನ್ನುವ ಅಂಶಗಳತ್ತ ಗಮನಿಸಲಾಗುತ್ತಿದೆ ಎಂದಿದ್ದಾರೆ. ಮುಂದಿನ ಸಹಸ್ರ ವರ್ಷಗಳಿಗೆ ಭಾರತದಲ್ಲಿ ಈಗ ತಳಹದಿ ನಿರ್ಮಿಸಲಾಗುತ್ತಿದೆ ಎಂದೂ ಪ್ರಧಾನಿ ವಿವರಿಸಿದ್ದಾರೆ. ಭಾರತವನ್ನು ವಿಶ್ವದ ಅತಿದೊಡ್ಡ …

Read More »

ರಾಜ್ಯದಲ್ಲಿ ಖಾಲಿ ಇರುವ 2.5 ಲಕ್ಷ ಸರ್ಕಾರಿ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು: ಪ್ರಿಯಾಂಕ್ ಖರ್ಗೆ

ಬೆಂಗಳೂರು: ರಾಜ್ಯದಲ್ಲಿ ಒಟ್ಟು 2.5 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇದ್ದು ಹಂತಹಂತವಾಗಿ ತುಂಬಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ನಗರಾಭಿವೃದ್ದಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಗತ್ಯ ಕ್ರಮ ವಹಿಸಲಾಗುವುದು ಎಂದ ಸಚಿವರು ತಮ್ಮ ಸರ್ಕಾರ ಬಂದ ಮೇಲೆ ಈ ಬಗ್ಗೆ ಹೆಚ್ಚಿನ ಆದ್ಯತೆ …

Read More »

ದೇಶಾದ್ಯಂತ ಪಿಎಂಎವೈ-ಜಿ 10 ಲಕ್ಷ ಫಲಾನುಭವಿಗಳಿಗೆ ಮೊದಲ ಕಂತಿನ ಹಣ ಬಿಡುಗಡೆ: ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ದೇಶದಾದ್ಯಂತ ಸುಮಾರು 10 ಲಕ್ಷ ಫಲಾನುಭವಿಗಳಿಗೆ ಪಿಎಂಎವೈ-ಜಿ(ಪ್ರಧಾನ ಮಂತ್ರಿ ಆವಾಸ್ ಯೋಜನೆ-ಗ್ರಾಮೀಣ್) ಮೊದಲ ಕಂತನ್ನು ನಾಳೆ ಬಿಡುಗಡೆ ಮಾಡಲಿದ್ದಾರೆ. ಸೆಪ್ಟೆಂಬರ್ 17 ರಂದು ಒಡಿಶಾದ ಭುವನೇಶ್ವರಕ್ಕೆ ತಮ್ಮ ಒಂದು ದಿನದ ಭೇಟಿಯ ಸಂದರ್ಭದಲ್ಲಿ ಪಿಎಂಎವೈ-ಯು 2.0 ರ ಕಾರ್ಯಾಚರಣೆಯ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಿದ್ದಾರೆ. ಮೋದಿ ಅವರು ವಿವಿಧ ರಾಜ್ಯಗಳ 10 ಲಕ್ಷ ಫಲಾನುಭವಿಗಳಿಗೆ ಮಂಜೂರಾತಿ ಪತ್ರಗಳನ್ನು ವಿತರಿಸಲಿದ್ದಾರೆ. 14 ರಾಜ್ಯಗಳ ಪಿಎಂಎವೈ-ಜಿ ಫಲಾನುಭವಿಗಳ …

Read More »

ಬೆಳಗಾವಿಯಲ್ಲಿ ವಂದೇ ಭಾರತ್‌ ರೈಲು ಉದ್ಘಾಟನೆ

ಬೆಳಗಾವಿ: ಬೆಳಗಾವಿಗೆ ಇಂದು ವಂದೇ ಭಾರತ್ ರೈಲು ಉದ್ಘಾಟನಾ ಮಾಡುತ್ತಿದ್ದು, ಕೆಲ ದಿನಗಳ ನಂತರ ಮತ್ತೊಂದು ರೈಲು ಬೆಳಗಾವಿಗೆ ಬರಲಿದೆ ಅಂತಾ ಕೇಂದ್ರ ರೈಲ್ವೆ ಸಚಿವ ವಿ. ಸೋಮಣ್ಣ ಹೇಳಿದರು. ವಂದೇ ಭಾರತ ರೈಲ್ವೆ ಉದ್ಘಾಟನೆಗೂ ಮುನ್ನ ಬೆಳಗಾವಿಯಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ 7 ರೈಲು ಉದ್ಘಾಟನಾ ಮಾಡಲಿದ್ದಾರೆ. ಸಂಜೆ ನಾಲ್ಕು ಗಂಟೆಗೆ ಕೊಲ್ಹಾಪುರ ಪುಣೆ ರೈಲು ಉದ್ಘಾಟನೆ ನಂತರ ಬೆಳಗಾವಿಯಲ್ಲಿ ಪುಣೆಯಿಂದ ವಂದೇ …

Read More »