Breaking News

BigTv News

ಕೇಂದ್ರ ಸರ್ಕಾರದಿಂದ 3 ಲಕ್ಷ ಕೋಟಿ ರೂ. ಮೂಲಸೌಕರ್ಯ ಯೋಜನೆಗಳಿಗೆ ಅನುಮೋದನೆ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತನ್ನ ಮೂರನೇ ಅವಧಿಯ ಮೊದಲ 100 ದಿನಗಳನ್ನ ಪೂರೈಸಿದೆ. ಈ 100 ದಿನಗಳಲ್ಲಿ, ಮೋದಿ ಸರ್ಕಾರವು ಮೂಲಸೌಕರ್ಯಗಳ ಮೇಲೆ ತನ್ನ ಗಮನವನ್ನ ಉಳಿಸಿಕೊಂಡಿದೆ. ಈ ಅವಧಿಯಲ್ಲಿ ಮೋದಿ ಸರಕಾರವು 3 ಲಕ್ಷ ಕೋಟಿ ರೂ.ಗಳ ಮೂಲಸೌಕರ್ಯ ಸಂಬಂಧಿತ ಯೋಜನೆಗಳಿಗೆ ಅನುಮೋದನೆ ನೀಡಿದೆ. ಮೋದಿ ಸರ್ಕಾರದ ಮೂರನೇ ಅವಧಿಯ ಮೊದಲ 100 ದಿನಗಳಲ್ಲಿ 3 ಲಕ್ಷ ರೂಪಾಯಿ ಕೋಟಿ ಮೌಲ್ಯದ …

Read More »

ನೆಲಮಂಗಲ ಬಳಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ

ಬೆಂಗಳೂರು: ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಲ್ಲಿ ಎನ್ನುವ ಪ್ರಶ್ನೆಗೆ ಕೆಲವೇ ದಿನಗಳಲ್ಲಿ ಅಧಿಕೃತ ಉತ್ತರ ಸಿಗುವ ಸಾಧ್ಯತೆ ಇದೆ. ಡಾಬಸ್‌ಪೇಟೆ, ಕನಕಪುರ, ಮಾಗಡಿ, ದೊಡ್ಡಬಳ್ಳಾಪುರ, ಕನಕಪುರ, ವಸಂತನರಸಾಪುರ, ನೆಲಮಂಗಲ ಸೇರಿದಂತೆ ಹಲವು ಸ್ಥಳಗಳ ಹೆಸರು ಕೇಳಿಬಂದಿತ್ತು. ಇದೀಗ ನೆಲಮಂಗಲದ ಸಮೀಪ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದು ಬಹುತೇಕ ಖಚಿತವಾಗಿದೆ. ಬೆಂಗಳೂರು ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಂಬಂಧ 11ನೇ ಸುತ್ತಿನ ಸಭೆ ನಡೆದಿದೆ. ಐಡೆಕ್‌ ಸಂಸ್ಥೆ …

Read More »

ಮುಂಬೈ ದೆಹಲಿಯಲ್ಲಿ ಈರುಳ್ಳಿ ದರದಲ್ಲಿ ಇಳಿಕೆ

ನವದೆಹಲಿ: ರಿಯಾಯಿತಿ ದರದಡಿ ಈರುಳ್ಳಿ ಮಾರಾಟಕ್ಕೆ ಚಾಲನೆ ನೀಡಿರುವುದರಿಂದ ದೇಶದ ಪ್ರಮುಖ ನಗರಗಳ ವ್ಯಾಪ್ತಿಯ ಚಿಲ್ಲರೆ ಮಾರುಕಟ್ಟೆಯಲ್ಲಿ ಧಾರಣೆ ಇಳಿಕೆಯಾಗಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವಾಲಯ ತಿಳಿಸಿದೆ. ಕೇಂದ್ರ ಸರ್ಕಾರವು ಸೆಪ್ಟೆಂಬರ್‌ 5ರಂದು ದೆಹಲಿ ಮತ್ತು ಮುಂಬೈನಲ್ಲಿ ಪ್ರತಿ ಕೆ.ಜಿಗೆ ₹35 ದರದಲ್ಲಿ ಸಂಚಾರ ವಾಹನಗಳು, ಎನ್‌ಸಿಸಿಎಫ್‌ ಮತ್ತು ನಾಫೆಡ್‌ ಮೂಲಕ ಮಾರಾಟಕ್ಕೆ ಚಾಲನೆ ನೀಡಿತ್ತು. ಎರಡನೇ ಹಂತದಲ್ಲಿ ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಮಾರಾಟ ಆರಂಭಿಸುವುದಾಗಿ …

Read More »

ಪ್ರಧಾನಿ ಮೋದಿಯವರಿಂದ ಜಮ್ಮುಕಾಶ್ಮೀರ ಹಾಗೂ ಹರಿಯಾಣದಲ್ಲಿ ಚುನಾವಣಾ ಪ್ರಚಾರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಜಮ್ಮು ಮತ್ತು ಕಾಶ್ಮೀರ ಹಾಗೂ ಹರಿಯಾಣದಲ್ಲಿ ವಿಧಾನಸಭಾ ಚುನಾವಣಾ ಪ್ರಚಾರ ಮಾಡಲಿದ್ದಾರೆ. ಮೊದಲು ದೋಡಾಗೆ ತೆರಳುವ ಅವರು ನಂತರ ಹರಿಯಾಣದ ಕುರುಕ್ಷೇತ್ರದಲ್ಲಿ ಪ್ರಚಾರ ಮಾಡಲಿದ್ದಾರೆ ಎಂದು ಬಿಜೆಪಿ ತನ್ನ ಸಾಮಾಜಿಕ ಜಾಲ ತಾಣ ಎಕ್ಸನಲ್ಲಿ ವಿವರಗಳನ್ನು ಹಂಚಿಕೊಂಡಿದೆ. ಮೊದಲು ಜಮ್ಮು ಮತ್ತು ಕಾಶ್ಮೀರದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಲಿದ್ದಾರೆ. ಇದಾದ ಬಳಿಕ ಹರಿಯಾಣದ ಕುರುಕ್ಷೇತ್ರದಲ್ಲಿ ರ್ರ್ಯಾಲಿಯಲ್ಲಿ …

Read More »

ಕೇಂದ್ರ ಸರ್ಕಾರದ ಎನ್ ಪಿ ಎಸ್ ವಾತ್ಸಲ್ಯ ಯೋಜನೆಗೆ ನಿರ್ಮಲಾ ಸೀತಾರಾಮನ್ ರವರಿಂದ ಚಾಲನೆ

ನವದೆಹಲಿ: ಕೇಂದ್ರ ಸರ್ಕಾರದ ಎನ್‌ಪಿಎಸ್ ವಾತ್ಸಲ್ಯ ಯೋಜನೆಗೆ ಕೇಂದ್ರ ಹಣಕಾಸು ಮತ್ತು ಸಾಂಸ್ಥಿಕ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್, ಈ ತಿಂಗಳ 18 ರಂದು ಬೆಂಗಳೂರಿನಲ್ಲಿ ಚಾಲನೆ ನೀಡಲಿದ್ದಾರೆ. ಜೆ.ಸಿ. ರಸ್ತೆಯ ಕೆನರಾ ಬ್ಯಾಂಕ್ ಮುಖ್ಯ ಕಚೇರಿಯಲ್ಲಿ ಆಯೋಜಿಸಲಾಗುವ ಸಮಾರಂಭದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಪಾಲ್ಗೊಂಡು ಯೋಜನೆಯನ್ನು ಉದ್ಘಾಟಿಸಲಿದ್ದಾರೆ ಎಂದು ಕೆನರಾ ಬ್ಯಾಂಕ್ ಪ್ರಕಟಣೆ ತಿಳಿಸಿದೆ.

Read More »

ಸಾಂಬ್ರಾ ವಿಮಾನ ನಿಲ್ದಾಣವನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ ಮೇಲ್ದರ್ಜೆಗೇರಿಸಲು ಸಿದ್ಧತೆ: ಜಗದೀಶ ಶೆಟ್ಟರ್‌

ಬೆಳಗಾವಿ: ಸಾಂಬ್ರಾ ವಿಮಾನ ನಿಲ್ದಾಣವನ್ನು ಅಂತರರಾಷ್ಟ್ರೀಯ ವಿಮಾನ ನಿಲ್ದಾಣವಾಗಿ ಮೇಲ್ದರ್ಜೆಗೇರಿಸಲು ಅಗತ್ಯವಿರುವ ಎಲ್ಲ ಮೂಲಸೌಕರ್ಯ ಸಿದ್ಧಪಡಿಸಲಾಗುತ್ತಿದೆ ಎಂದು ಸಂಸದ ಜಗದೀಶ ಶೆಟ್ಟರ್‌ ಹೇಳಿದರು. ವಿಮಾನ ನಿಲ್ದಾಣದ ಅಭಿವೃದ್ಧಿ ಮತ್ತು ಅಂತರರಾಷ್ಟ್ರೀಯ ಮಟ್ಟಕ್ಕೆ ಮೇಲ್ದರ್ಜೆಗೆ ಏರಿಸುವ ಕುರಿತಾಗಿ, ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಭಾರತೀಯ ವಾಯುಪಡೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಹೊಸ ಟರ್ಮಿನಲ್ ಕಟ್ಟಡದ ಕಾಮಗಾರಿ …

Read More »

ಧಾರ್ಮಿಕ ದತ್ತಿ ಇಲಾಖೆಯಿಂದ ದ್ವಾರಕಾ ಯಾತ್ರೆಗೆ 15 ಸಾವಿರ ರೂ. ಸಹಾಯಧನ

ಬೆಂಗಳೂರು : ಧಾರ್ಮಿಕ ದತ್ತಿ ಇಲಾಖೆಯಿಂದ ಕರ್ನಾಟಕ ಭಾರತ್‌ ಗೌರವ್ ದ್ವಾರಕಾ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಅತ್ಯಂತ ಕಡಿಮೆ ವೆಚ್ಚದಲ್ಲಿ ದ್ವಾರಕಾ, ನಾಗೇಶ್ವರ, ಸೋಮನಾಥ ಹಾಗೂ ತ್ರಯಂಬಕೇಶ್ವರ ದೇವಾಲಯಗಳ ಭೇಟಿಗೆ ಅವಕಾಶ ಕಲ್ಪಿಸಲಾಗಿದೆ. ಈ ಪ್ಯಾಕೇಜ್‌ಗೆ ಒಟ್ಟು ₹30,000 ತಗುಲಲಿದ್ದು, ಈ ಪೈಕಿ ರಾಜ್ಯ ಸರ್ಕಾರದ ವತಿಯಿಂದ ಅಂದಾಜು ₹15,000 ಮೊತ್ತವನ್ನು ಭರಿಸಲಾಗುತ್ತದೆ ಎಂದು ದತ್ತಿ ಇಲಾಖೆ ತಿಳಿಸಿದೆ. ಯಾತ್ರಾರ್ಥಿಗಳು ಬುಕ್ಕಿಂಗ್‌ ಮೊತ್ತವಾಗಿ ₹15,000 ಅನ್ನು ಮಾತ್ರ ಪಾವತಿಸಬೇಕಾಗುತ್ತದೆ. …

Read More »

ಲಂಬ ಉಡ್ಡಯನದ ಕ್ಷಿಪಣಿ ಪರೀಕ್ಷೆ ಯಶಸ್ವಿ

ಒಡಿಶಾ: ಲಂಬ ಉಡ್ಡಯನದ ಕಡಿಮೆ ವ್ಯಾಪ್ತಿಯ, ನೆಲದಿಂದ ಆಗಸದ ಗುರಿಗೆ ದಾಳಿ ನಡೆಸುವ(ವಿಎಲ್‌-ಎಸ್‌ಆರ್‌ಎಸ್‌ಎಎಂ) ಕ್ಷಿಪಣಿಯ ಪರೀಕ್ಷೆಯು ಒಡಿಶಾ ಕರಾವಳಿಯ ಚಂಡೀಪುರದಲ್ಲಿನ ಪರೀಕ್ಷಾ ಕೇಂದ್ರದಲ್ಲಿ ಯಶಸ್ವಿಯಾಗಿ ನಡೆದಿದೆ. ಎರಡೂ ಪರೀಕ್ಷೆಗಳು ಯಶಸ್ಸು ಕಂಡಿವೆ ಎಂಬುದನ್ನು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ (ಡಿಆರ್‌ಡಿಒ) ಪ್ರಕಟಣೆಯು ತಿಳಿಸಿದೆ. ಎರಡೂ ಪರೀಕ್ಷೆಗಳಲ್ಲಿ ಈ ಕ್ಷಿಪಣಿಯು, ಸಮುದ್ರದ ಮಟ್ಟಕ್ಕೆ ಬಹಳ ಸನಿಹದಲ್ಲಿ ತೀವ್ರ ವೇಗದಿಂದ ಸಾಗುತ್ತಿದ್ದ ಗುರಿಯೊಂದನ್ನು ಯಶಸ್ವಿಯಾಗಿ ಧ್ವಂಸಗೊಳಿಸಿದೆ ಎಂದು ತಿಳಿಸಲಾಗಿದೆ. ನಿಖರವಾಗಿ ದಾಳಿ …

Read More »

ಹಿಂದಿ ದಿನಾಚರಣೆ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆಯಿಂದ‌ ಪ್ರತಿಭಟನೆ‌

ಬೀದರ್:‌ ಹಿಂದಿ ದಿನಾಚರಣೆ ಖಂಡಿಸಿ ನಗರದ ಜಿಲ್ಲಾಧಿಕಾರಿ‌ ಕಚೇರಿ ಎದುರು‌ ಶನಿವಾರ ಕರ್ನಾಟಕ ರಕ್ಷಣಾ ವೇದಿಕೆಯಿಂದ‌ ಪ್ರತಿಭಟನೆ‌ ನಡೆಸಲಾಯಿತು. ಕಪ್ಪು‌ ಪಟ್ಟಿ ‌ಧರಿಸಿ‌ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಲಾಯಿತು. ಕರವೇ ಜಿಲ್ಲಾಧ್ಯಕ್ಷ ಸೋಮನಾಥ ಮುಧೋಳ್‌ ನೇತೃತ್ವದಲ್ಲಿ ‌ಜಿಲ್ಲಾಧಿಕಾರಿ ಕಚೇರಿ‌ ಎದುರು‌ ಜಮಾಯಿಸಿದ‌ ಕಾರ್ಯಕರ್ತರು ಪ್ರತಿಭಟನೆ‌ ನಡೆಸಿ ಬಳಿಕ ಜಿಲ್ಲಾಡಳಿತಕ್ಕೆ ಮನವಿ‌ ಸಲ್ಲಿಸಿದರು. ಕೇಂದ್ರ ಸರ್ಕಾರದ ಸೌಮ್ಯದ ಕಚೇರಿ ಮತ್ತು ಸಂಸ್ಥೆಗಳಲ್ಲಿ ಕಳೆದ 25 ವರ್ಷಗಳಿಂದ ಸೆ. 14 ರಂದು …

Read More »

ಭೀಮಾನದಿ ತೀರದಲ್ಲಿ 130 ಕೋಟಿ ರೂ.ವೆಚ್ಚದ ಬ್ಯಾರೇಜ್ ಗೆ ಪ್ರಸ್ತಾವನೆ ಸಲ್ಲಿಕೆ: ಶಾಸಕ ಪಾಟೀಲ್

ಕಲಬುರಗಿ: ಇದೇ ತಿಂಗಳ 17 ರಂದು ಕಲಬುರಗಿಯಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆ ಹಿನ್ನಲೆ ಭೀಮಾ ನದಿ ತೀರದಲ್ಲಿ 130 ಕೋಟಿ ವೆಚ್ಚದ ಬ್ರಿಡ್ಜ್ ಕಂ ಬ್ಯಾರೇಜ್ ಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಅಂತ ಅಫಜಲಪುರ ಶಾಸಕ ಎಂವೈ ಪಾಟೀಲ್ ಹೇಳಿದ್ದಾರೆ.. ಕಲಬುರಗಿಯಲ್ಲಿಂದು ಮಾತನಾಡಿದ ಪಾಟೀಲ್ ಬೆಳಗುಂಪಾ ಹಾಗು ಹರವಾಳ ನಡುವಿನಲ್ಲಿ ಈ ಬ್ರಿಜ್ ಕಂ ಬ್ಯಾರೇಜ್ ಬರಲಿದೆ ಅದಕ್ಕಾಗಿ ಮೈನರ್ ಇರಿಗೇಶನ್ ಇಲಾಖೆಗೆ ಈಗಾಗಲೇ ಪ್ರಸ್ತಾವನೆ ಕಳಿಸಿದ್ದು ಸಚಿವ ಸಂಪುಟ …

Read More »