ಬೆಂಗಳೂರಿನ ಪೀಣ್ಯ ವ್ಯಾಪ್ತಿಯ ಇಂಡಸ್ಇಂಡ್ ಬ್ಯಾಂಕ್ನಲ್ಲಿ ಉದ್ಯೋಗಿಯೊಬ್ಬ ನಕಲಿ ಚಿನ್ನ ಅಡವಿಟ್ಟು ₹1.53 ಕೋಟಿ ವಂಚನೆ ಎಸಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಗೋಲ್ಡ್ ಲೋನ್ ಅನುಮೋದನೆ ಮತ್ತು ಚಿನ್ನ ಪರಿಶೀಲನೆ ಜವಾಬ್ದಾರಿ ಹೊಂದಿದ್ದ ನಾಗೇಶ್, ಅಸಲಿ ಚಿನ್ನದ ಕೊಂಡಿಗಳನ್ನು ಬದಲಿಸಿ ಉಳಿದ ಭಾಗಕ್ಕೆ ನಕಲಿ ಚಿನ್ನ ಜೋಡಿಸಿ ಸ್ನೇಹಿತರ ಹೆಸರಿನಲ್ಲಿ 15 ಖಾತೆಗಳ ಮೂಲಕ ಸಾಲ ಮಂಜೂರು ಮಾಡಿಸಿದ್ದಾನೆ ಎಂದು ಆರೋಪಿಸಲಾಗಿದೆ. ಬ್ಯಾಂಕ್ ಆಡಿಟ್ ವೇಳೆ ವಂಚನೆ ಬಯಲಾಗಿದ್ದು, ಬಳಿಕ …
Read More »ರಾಯಚೂರು ಜೈಲಿನಲ್ಲಿ ಖೈದಿ ಹಠಾತ್ ಸಾವು.. ಪೊಲೀಸರ ವಿರುದ್ಧ ಭುಗಿಲೆದ್ದ ಕುಟುಂಬಸ್ಥರ ಆರೋಪ
ರಾಯಚೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಖೈದಿ ಭೀಮರಾಯ (42) ಮೃತಪಟ್ಟಿದ್ದಾರೆ. ದೇವದುರ್ಗ ತಾಲೂಕಿನ ಮೆದರಗೋಳ ಗ್ರಾಮದ ನಿವಾಸಿಯಾಗಿದ್ದ ಭೀಮರಾಯ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಳೆದ ಎರಡು ತಿಂಗಳಿನಿಂದ ನ್ಯಾಯಾಂಗ ಬಂಧನದಲ್ಲಿದ್ದರು. ಬುಧವಾರ ರಾತ್ರಿ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ತಕ್ಷಣ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಾಥಮಿಕವಾಗಿ ಹೃದಯಾಘಾತದಿಂದ ಸಾವು ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆದರೆ ಭೀಮರಾಯ …
Read More »ಮಲ್ಲಾಪೂರದಲ್ಲಿ ಅನಾಮಧೇಯ ಮಹಿಳೆ ಶವ ಪತ್ತೆ; ಕೊಲೆ ಶಂಕೆ
ಗದಗ ಜಿಲ್ಲೆಯ ರೋಣ ತಾಲೂಕಿನ ಮಲ್ಲಾಪೂರ ಗ್ರಾಮದ ಸಮೀಪದ ಕೃಷಿ ಹೊಂಡದಲ್ಲಿ 25 ರಿಂದ 28 ವರ್ಷದೊಳಗಿನ ಅನಾಮಧೇಯ ಮಹಿಳೆಯ ಶವ ಪತ್ತೆಯಾಗಿದ್ದು, ದುಷ್ಕರ್ಮಿಗಳು ಕಲ್ಲಿನಿಂದ ತಲೆಗೆ ಜಜ್ಜಿ ಕೊಲೆ ಮಾಡಿ ಬಳಿಕ ಶವವನ್ನು ಹೊಂಡಕ್ಕೆ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ರೋಣ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪ್ರಾಥಮಿಕ ಮಾಹಿತಿಯಂತೆ, ಮಹಿಳೆಯ ಕುತ್ತಿಗೆಯಲ್ಲಿದ್ದ ತಾಳಿ ಸರವನ್ನು ಎಳೆದಿರುವ ಗುರುತುಗಳು …
Read More »ಶಾಲಾ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿ ಪ್ರಚೋದನೆ – ಆಟೋ ಡ್ರೈವರ್ ಅರೆಸ್ಟ್!
ಕೊಡಗು ಜಿಲ್ಲೆಯ ಸುಂಟಿಕೊಪ್ಪದಲ್ಲಿ 12 ವರ್ಷದ ಶಾಲಾ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಆಟೋ ಚಾಲಕನ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಶಾಲೆಯಿಂದ ಮನೆಗೆ ಮರಳುತ್ತಿದ್ದ ಬಾಲಕಿಯನ್ನು ಮೊಬೈಲ್ನಲ್ಲಿ ವಿಡಿಯೋ ತೋರಿಸುವುದಾಗಿ ನಂಬಿಸಿ ಮನೆಗೆ ಕರೆದೊಯ್ದು ಕೃತ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಜುಲೈ 29ರಂದು ನಡೆದಿದ್ದ ಈ ಘಟನೆ ಬಗ್ಗೆ ಯಾರಿಗಾದರೂ ತಿಳಿಸಿದರೆ ಜೀವ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಬೆದರಿಕೆಯಿಂದ ಬಾಲಕಿ …
Read More »ಜಮೀನು ವಿವಾದ ; ದಲಿತ ಕುಟುಂಬದ ಮೇಲೆ ಜಾತಿ ನಿಂದನೆ ಆರೋಪ; 12 ಮಂದಿಯ ವಿರುದ್ಧ ಪ್ರಕರಣ ದಾಖಲು
ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಕಟ್ಟೊಳ್ಳಿ ಗ್ರಾಮದಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ದಲಿತ ಕುಟುಂಬದ ವಿರುದ್ಧ ಜಾತಿ ನಿಂದನೆ, ಅಕ್ರಮ ಪ್ರವೇಶ, ಹಲ್ಲೆಗೆ ಯತ್ನ ಹಾಗೂ ಜೀವ ಬೆದರಿಕೆ ಆರೋಪದಡಿ 12 ಮಂದಿಯ ವಿರುದ್ಧ ಮಹಾಗಾಂವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕಾಶ್ ಸಿಂಗೆ ನೀಡಿದ ದೂರಿನ ಪ್ರಕಾರ, ತಮ್ಮ ಜಮೀನಿನಲ್ಲಿ ಬಿತ್ತನೆ ಮಾಡಿದ್ದ ಬೆಳೆ ಪ್ರದೇಶಕ್ಕೆ ಆರೋಪಿಗಳು ಅಕ್ರಮವಾಗಿ ಪ್ರವೇಶಿಸಿ ಮತ್ತೊಮ್ಮೆ ಬಿತ್ತನೆ ನಡೆಸಿದ್ದು, ಪ್ರಶ್ನಿಸಿದಾಗ ಜಾತಿ ನಿಂದನೆ …
Read More »ಸಾಲವಾಗಿ ಪಡೆದಿದ್ದ 5 ಲಕ್ಷ ಹಣ ವಾಪಾಸ್ ಕೇಳಿದ್ದಕ್ಕೆ ವಿವಾಹಿತ ಮಹಿಳೆ ರೇಪ್ ಕೇಸ್ ಬೆದರಿಕೆ: 24ರ ಯುವಕ ಆತ್ಮಹತ್ಯೆ
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಗಂಜಿಗೆರೆ ಕೊಪ್ಪಲು ಗ್ರಾಮದಲ್ಲಿ 24 ವರ್ಷದ ಹರೀಶ್ ಎಂಬ ಯುವಕ ಪಂಪ್ಹೌಸ್ನಲ್ಲಿ ನೇಣು ಬಿಗಿದುಕೊಂಡು ಮೃತಪಟ್ಟಿರುವ ಘಟನೆ ನಡೆದಿದೆ. ಸಾಲವಾಗಿ ನೀಡಿದ್ದ ಹಣವನ್ನು ವಾಪಸ್ ಕೇಳಿದ ಬಳಿಕ ವಿವಾಹಿತೆ ರೇಪ್ ಕೇಸ್ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದರಿಂದ ಆತ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಕುಟುಂಬದ ಆರೋಪದ ಪ್ರಕಾರ, ಹರೀಶ್ ಮತ್ತು ಇಬ್ಬರು ಮಕ್ಕಳ ತಾಯಿ ದೀಪಿಕಾ ನಡುವೆ ನಾಲ್ಕು ವರ್ಷಗಳಿಂದ ಪರಿಚಯವಿದ್ದು, …
Read More »ಸುಳ್ಯ | ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ: ಆಟೋ ಚಾಲಕ ಬಂಧನ
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಸೂರ್ತಿಲದಲ್ಲಿ ವಿವಾಹಿತ ಮಹಿಳೆಯನ್ನು ಬೆದರಿಸಿ ನಿರಂತರ ಅತ್ಯಾಚಾರ ಎಸಗಿದ ಆರೋಪದ ಮೇಲೆ ಆಟೋ ಚಾಲಕ ಗೋಪಾಲಕೃಷ್ಣ ಜಯನಗರನನ್ನು ಪೊಲೀಸರು ಬಂಧಿಸಿದ್ದಾರೆ. ನ್ಯಾಯಾಲಯಕ್ಕೆ ಹಾಜರುಪಡಿಸಿದ ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಹಾವೇರಿ ಮೂಲದ ಮಹಿಳೆ ಸೂರ್ತಿಲದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದು, ಬಾಣಂತಿಯರ ಆರೈಕೆ ಕೆಲಸ ಮಾಡುತ್ತಿದ್ದರು. ಈ ವೇಳೆ ಪರಿಚಯವಾದ ಆರೋಪಿ 2025ರ ಜೂನ್ನಲ್ಲಿ ಮನೆಗೆ ಕರೆಸಿ ಮದ್ಯ ಕುಡಿಸಿ ಅತ್ಯಾಚಾರ …
Read More »ಚೆಕ್ ಅಮಾನ್ಯ ಪ್ರಕರಣ: ಇಬ್ಬರು ಸಾಲಗಾರರಿಗೆ ನ್ಯಾಯಾಲಯದಿಂದ ಶಿಕ್ಷೆ
ಉಡುಪಿ ಜಿಲ್ಲೆಯ ಮಹಾಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕ್ನಿಂದ ಪಡೆದ ಸಾಲವನ್ನು ಮರುಪಾವತಿಸದೆ ನೀಡಿದ ಚೆಕ್ ಅಮಾನ್ಯಗೊಂಡ ಪ್ರಕರಣದಲ್ಲಿ ಇಬ್ಬರು ಸಾಲಗಾರರಿಗೆ ಉಡುಪಿ ಜಿಲ್ಲಾ ಪ್ರಥಮ ದರ್ಜೆ ಹಿರಿಯ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ದೀಪಕ್ ಡಿ. ಶೆಣೈ ಅವರು 2021ರ ಮಾರ್ಚ್ 12ರಂದು ಮಲ್ಪೆ ಶಾಖೆಯಿಂದ ಪಡೆದಿದ್ದ 2 ಲಕ್ಷ ರೂ. ಸಾಲವನ್ನು ಮರುಪಾವತಿಸದ ಹಿನ್ನೆಲೆಯಲ್ಲಿ, 3 ಲಕ್ಷ ರೂ. ಮರುಪಾವತಿಸುವಂತೆ ಹಾಗೂ 5 ಸಾವಿರ ರೂ. ದಂಡ ಪಾವತಿಸುವಂತೆ ನ್ಯಾಯಾಲಯ ಆದೇಶಿಸಿದೆ. …
Read More »ಮಂಗಳೂರಿನ ಪ್ರತಿಷ್ಠಿತ ಕಾಲೇಜಿನಲ್ಲಿ ರ್ಯಾಗಿಂಗ್ ; ವಿದ್ಯಾರ್ಥಿಯ ಕುತ್ತಿಗೆ ಮೂಳೆ ಮುರಿತ, 6 ಮಂದಿ ಪೊಲೀಸ್ ವಶಕ್ಕೆ
ಮಂಗಳೂರಿನ ಖಾಸಗಿ ಕಾಲೇಜೊಂದರಲ್ಲಿ ರ್ಯಾಗಿಂಗ್ ಹೆಸರಿನಲ್ಲಿ ನಡೆದ ಹಲ್ಲೆಯಲ್ಲಿ ವಿದ್ಯಾರ್ಥಿಯೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ಹಲ್ಲೆಯಿಂದ ಕುತ್ತಿಗೆಯ ಮೂಳೆ ಮುರಿದಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ದ್ವಿತೀಯ ವರ್ಷದ ವಿದ್ಯಾರ್ಥಿಗಳ ಗುಂಪು ಜೂನಿಯರ್ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗಿದೆ. ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಅವರಲ್ಲಿ ಒಬ್ಬನ ಸ್ಥಿತಿ ಗಂಭೀರವಾಗಿದೆ. ಪ್ರಕರಣ ಸಂಬಂಧ 6 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕಾಲೇಜು ಆಡಳಿತವೂ ಆಂತರಿಕ ತನಿಖೆಗೆ …
Read More »ಹಳೆ ಲವರ್ ಕಾಟ ತಾಳಲಾರದೇ ಜೀವ ಬಿಟ್ಟ ಯುವತಿ.. ತ್ರಿಕೋನ ಪ್ರೇಮ ಪ್ರಕರಣದಲ್ಲಿ ಅಸಲಿಗೆ ಆಗಿದ್ದೇನು?
ಬಳ್ಳಾರಿಯಲ್ಲಿ ತ್ರಿಕೋನ ಪ್ರೇಮ ಪ್ರಕರಣ ದುರಂತ ಅಂತ್ಯ ಕಂಡಿದೆ. ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ವೈರಲ್ ಮಾಡುವುದಾಗಿ ಮಾಜಿ ಪ್ರಿಯಕರ ಬೆದರಿಕೆ ಹಾಕಿದ್ದರಿಂದ ಮನನೊಂದ ಫೀರ್ದೋಸ್ ಎಂಬ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಯುವತಿ ಮೊದಲು ಅಜೀಂ ಎಂಬಾತನನ್ನು ಪ್ರೀತಿಸುತ್ತಿದ್ದು, ಬಳಿಕ ಆತನಿಂದ ದೂರವಾಗಿ ಸೋಹೈಲ್ ಎಂಬ ಯುವಕನನ್ನು ಮದುವೆಯಾಗಲು ನಿರ್ಧರಿಸಿದ್ದರು. ಈ ವಿಚಾರ ತಿಳಿದ ಅಜೀಂ, ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





