Breaking News

BigTv News

ಜಮ್ಮುಮತ್ತುಕಾಶ್ಮೀರದಲ್ಲಿ ಭಯೋತ್ಪಾದನೆ ಕೊನೆಗೊಳ್ಳುತ್ತೆ: ಪ್ರಧಾನಿ ಮೋದಿ

ಜಮ್ಮು: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ಕೊನೆಯ ಉಸಿರು ತೆಗೆದುಕೊಳ್ಳುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ, ದೇಶದ ಈ ಸುಂದರ ನಾಡನ್ನು ಹಾಳುಮಾಡಿದ ವಂಶ ರಾಜಕಾರಣಿಗಳ ವಿರುದ್ಧ ತಮ್ಮ ಸರ್ಕಾರ ಹೊಸ ನಾಯಕತ್ವವನ್ನು ಬಿಂಬಿಸುತ್ತಿದೆ ಎಂದು ಹೇಳಿದ್ದಾರೆ. ಜಮ್ಮುಕಾಶ್ಮೀರ ವಿಧಾನಸಭೆ ಚುನಾವಣೆ ನಿಮಿತ್ತ ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸಿ ದೋಡಾ ಜಿಲ್ಲೆಯಲ್ಲಿ ಇಂದು ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ನಾವು ಮತ್ತು ನೀವು ಒಟ್ಟಾಗಿ ಜಮ್ಮು ಕಾಶ್ಮೀರವನ್ನು …

Read More »

ಖಾದ್ಯ ತೈಲಗಳ ಮೇಲಿನ ಆಮದು ತೆರಿಗೆಯನ್ನು ಶೇ.20 ರಷ್ಟು ಹೆಚ್ಚಿಸಿದ ಕೇಂದ್ರ ಸರ್ಕಾರ

ನವದೆಹಲಿ: ವಿಶ್ವದ ಅತಿದೊಡ್ಡ ಖಾದ್ಯ ತೈಲ ಆಮದುದಾರ ದೇಶ ಎನಿಸಿಕೊಂಡಿರುವ ಭಾರತ ಕಚ್ಚಾ ಮತ್ತು ಸಂಸ್ಕರಿಸಿದ ಖಾದ್ಯ ತೈಲಗಳ ಮೇಲಿನ ಮೂಲ ಆಮದು ತೆರಿಗೆಯನ್ನು ಶೇ. 20ರಷ್ಟು ಹೆಚ್ಚಿಸಿದ್ದು, ಈ ಬಗ್ಗೆ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ಸ್ಥಳೀಯ ರೈತರನ್ನು ಬೆಂಬಲಿಸಲು ಈ ಕ್ರಮ ಕೈಗೊಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಈ ಕ್ರಮದಿಂದ ಆಮದು ಮಾಡಿಕೊಳ್ಳುವ ಅಡುಗೆ ಎಣ್ಣೆ ಬೆಲೆ ಹೆಚ್ಚಿ ಬೇಡಿಕೆ ಕಡಿಮೆಯಾಗುತ್ತದೆ. ಕ್ರಮೇಣ ತಾಳೆ ಎಣ್ಣೆ, ಸೋಯಾಬೀನ್‌ …

Read More »

ಸೆ.21 ರಿಂದ 24 ರವರೆಗೆ ಧಾರವಾಡದಲ್ಲಿ ಕೃಷಿ ಮೇಳ ಆಯೋಜನೆ

ಧಾರವಾಡ: ದೇಶದ ಟಾಪ್ ಟೆನ್ ಕೃಷಿ ವಿಶ್ವವಿದ್ಯಾಲಯಗಳ ಪಟ್ಟಿಯಲ್ಲಿರುವ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕೃಷಿ ಮೇಳವನ್ನು ಇದೇ ಸೆಪ್ಟೆಂಬರ್ 21ರಿಂದ 24 ರವರೆಗೆ ನಡೆಸಲಾಗುತ್ತಿದೆ ಎಂದು ಕೃಷಿ ವಿವಿ ಕುಲಪತಿ ಡಾ. ಪಿ.ಎಲ್. ಪಾಟೀಲ್ ಹೇಳಿದರು. ಕೆವಿವಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹವಾಮಾನ ವೈಪರೀತ್ಯ ನಿರ್ವಹಣೆಗೆ ಕೃಷಿ ತಾಂತ್ರಿಕತೆಗಳು ವಿಷಯದ ಮೇಲೆ ಕೃಷಿ ಮೇಳವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದು, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ, ಸಭಾಪತಿ ಬಸವರಾಜ ಹೊರಟ್ಟಿ, ಕೇಂದ್ರ …

Read More »

ಹಾಲಿನ ದರ 5 ರೂ. ಹೆಚ್ಚಳಕ್ಕೆ ಶೀಘ್ರ ನಿರ್ಧಾರ: ಸಚಿವ ಕೆ.ಎನ್.ರಾಜಣ್ಣ

ತುಮಕೂರು: ನಂದಿನಿ ಹಾಲಿನ ಮಾರಾಟ ದರವನ್ನು ಲೀಟರ್‌ಗೆ ₹5 ಹೆಚ್ಚಳ ಮಾಡುವ ಪ್ರಸ್ತಾಪವಿದ್ದು, ಶೀಘ್ರವೇ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಶನಿವಾರ ತಿಳಿಸಿದರು. ಹಾಲಿನ ದರ ಹೆಚ್ಚಳ ಮಾಡಿದ ಸಂಪೂರ್ಣ ಹಣವನ್ನು ರೈತರಿಗೆ ವರ್ಗಾಯಿಸಲಾಗುವುದು, ಇದರಿಂದ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆಗೆ ಚರ್ಚಿಸಿದ್ದು, ಬೆಲೆ ಹೆಚ್ಚಳ ಮಾಡಲು ಸಮ್ಮತಿಸಿದ್ದಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ದೇಶದ ಯಾವುದೇ ರಾಜ್ಯದಲ್ಲೂ ಇಷ್ಟೊಂದು ಕಡಿಮೆ ಬೆಲೆ …

Read More »

ಯುಎಸ್ ಸೈನ್ಯದೊಂದಿಗೆ ಭಾರತೀಯ ಸೇನೆ ಜಂಟಿ ಸಮರಾಭ್ಯಾಸ

ಅಮೇರಿಕ: ಯುಎಸ್ ಸೈನ್ಯದೊಂದಿಗೆ ಭಾರತೀಯ ಸೇನೆ ಯುದ್ಧಾಭ್ಯಾಸ ನಡೆಸುತ್ತಿದ್ದು, ಮೈನವಿರೇಳಿಸುವ ಈ ಜಂಟಿ ಸಮರಾಭ್ಯಾಸದ ದೃಶ್ಯಗಳನ್ನು ಭಾರತೀಯ ಸೇನೆ ತನ್ನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ. ಇನ್ನು ಈ ಜಂಟಿ ಯುದ್ದಾಭ್ಯಾಸದಿಂದ ಎರಡು ಸೈನ್ಯಗಳ ನಡುವಿನ ಬಾಂಧವ್ಯ ಬಲಪಡಿಸುತ್ತದೆ. ಭಾರತ ಯುಎಸ್‌ಎ ಜಂಟಿ ಮಿಲಿಟರಿ ವ್ಯಾಯಾಮದ 20 ನೇ ಆವೃತ್ತಿಯ ಯುದ್ಧ ಅಭ್ಯಾಸವು ರಾಜಸ್ಥಾನದ ಮಹಾಜನ್ ಫೀಲ್ಡ್ ಫೈರಿಂಗ್ ರೇಂಜ್‌ನಲ್ಲಿರುವ ವಿದೇಶಿ ತರಬೇತಿ ನೋಡ್‌ನಲ್ಲಿ ಪ್ರಾರಂಭಗೊಂಡಿದೆ. ಈ ಯುದ್ಧ ಅಭ್ಯಾಸವು ಸೆಪ್ಟೆಂಬರ್ …

Read More »

ಜಮ್ಮುಮತ್ತುಕಾಶ್ಮೀರದಲ್ಲಿ ಭೀಕರ ಗುಂಡಿನ ದಾಳಿ: ಇಬ್ಬರು ಸೈನಿಕರು ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್‌ ಪ್ರದೇಶದಲ್ಲಿ ಭಯೋತ್ಪಾದಕರೊಂದಿಗೆ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ ಇಬ್ಬರು ಸೈನಿಕರು ಹುತಾತ್ಮರಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಹಿರಿಯ ಸೇನಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕಥುವಾ ಪ್ರದೇಶದಲ್ಲಿ ನಡೆದ ಪ್ರತ್ಯೇಕ ಎನ್‌ಕೌಂಟರ್‌ನಲ್ಲಿ ರೈಸಿಂಗ್ ಸ್ಟಾರ್ ಕಾರ್ಪ್ಸ್ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿವೆ. ಭದ್ರತಾ ಪಡೆಗಳು ಈ ಪ್ರದೇಶದಲ್ಲಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ನಂತರ ಕಿಶ್ತ್ವಾರ್‌ನ ಚಟ್ರೂನಲ್ಲಿ ಗುಂಡಿನ ಚಕಮಕಿ ಪ್ರಾರಂಭವಾಯಿತು. ಎನ್‌ಕೌಂಟರ್‌ ಇನ್ನೂ ನಡೆಯುತ್ತಿದೆ ಎಂದು ವೈಟ್ …

Read More »

ಬಾಸ್ಮತಿ ಅಕ್ಕಿ ಮೇಲಿದ್ದ ಕನಿಷ್ಠ ರಫ್ತು ದರ ರದ್ದತಿಗೆ ಕೇಂದ್ರ ಸರ್ಕಾರ ನಿರ್ಧಾರ

ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ಸರ್ಕಾರ ಶನಿವಾರ ಬಾಸ್ಮತಿ ಅಕ್ಕಿ ಮೇಲಿದ್ದ ಕನಿಷ್ಠ ರಫ್ತು ದರ ರದ್ದತಿಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬಾಸುಮತಿ ಅಕ್ಕಿ ರಫ್ತಿಗೆ ನಿಗದಿಪಡಿಸಿದ್ದ ಕನಿಷ್ಠ ರಫ್ತು ದರವನ್ನು (ಎಂಇಪಿ) ರದ್ದುಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಕೇಂದ್ರ ಕೃಷಿ ಖಾತೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ ತಿಳಿಸಿದ್ದಾರೆ. ರೈತರ ಕಲ್ಯಾಣದತ್ತ ಗಮನಹರಿಸುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಬಾಸ್ಮತಿ ಅಕ್ಕಿಯ ಮೇಲಿನ ಕನಿಷ್ಠ ರಫ್ತು …

Read More »

ಲಂಡನ್‌ನ ಬಸವೇಶ್ವರ ಸ್ಮಾರಕಕ್ಕೆ ನಮನ ಸಲ್ಲಿಸಿದ ಸಂಸದ ಬಸವರಾಜ ಬೊಮ್ಮಾಯಿ

ಲಂಡನ್​: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ಸಂಸದರಾದ ಬಸವರಾಜ ಬೊಮ್ಮಾಯಿ ಅವರು ಲಂಡನ್‌ನಲ್ಲಿ ಬಸವೇಶ್ವರನ ಸ್ಮಾರಕಕ್ಕೆ ನಮನ ಸಲ್ಲಿಸಿದರು. ಲಂಡನ್‌ನ ಮಾಜಿ ಉಪಮೇಯರ್ ರಾಜೇಶ್ ಅಗರ್ವಾಲ್ ಸಂಸದ ಬಸವರಾಜ್​ ಬೊಮ್ಮಾಯಿಗೆ ಸಾಥ್​ ನೀಡಿದರು. ಈ ಕಾರ್ಯಕ್ರಮವನ್ನು ಲಂಬೆತ್ ಬಸವೇಶ್ವರ ಫೌಂಡೇಶನ್ ಹಾಗೂ ಯುನೈಟೆಡ್ ಕಿಂಗ್ಡಮ್‌ನ ಬಸವ ಸಮಿತಿಯು ಜಂಟಿಯಾಗಿ ಆಯೋಜಿಸಿತ್ತು. ಕನ್ನಡ ಬಳಗ, ಕನ್ನಡಿಗರು ಯುಕೆ ಮತ್ತು ಭಾರತೀಯ ವಿದ್ಯಾ ಭವನದ ಗಣ್ಯರು ಭಾಗವಹಿಸಿದರು. ಲ್ಯಾಂಬೆತ್ ಮಾಜಿ ಮೇಯರ್ ಡಾ. …

Read More »

ಸುವರ್ಣ ಸೌಧದ ವಾರ್ಷಿಕ ನಿರ್ವಹಣೆ 2.5 ಕೋಟಿ ರೂ: ಬೆಳಗಾವಿ ಡಿಸಿ

ಬೆಳಗಾವಿ: ನವೆಂಬರ್ ಅಥವಾ ಡಿಸೆಂಬರ್‌ನಲ್ಲಿ ಬೆಳಗಾವಿಯಲ್ಲಿ ನಡೆಯಲಿರುವ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನಕ್ಕೆ ರಾಜ್ಯ ಸರ್ಕಾರ ಅದಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ಮುಂಬರುವ ಅಧಿವೇಶನಕ್ಕೆ ಬೆಳಗಾವಿಯ ಸುವರ್ಣ ವಿಧಾನ ಸೌಧ ಸಕಾಲಕ್ಕೆ ಸಿದ್ಧವಾಗಲಿದೆ. ಸೌಧದ ವಾರ್ಷಿಕ ನಿರ್ವಹಣೆಗೆ ಕನಿಷ್ಠ 2.5 ಕೋಟಿ ರೂಪಾಯಿ ನಿಧಿಯ ಅಗತ್ಯವಿದ್ದು, ಸರ್ಕಾರ ಇಷ್ಟು ವರ್ಷ ಸಮಯಕ್ಕೆ ಸರಿಯಾಗಿ ಬಿಡುಗಡೆ ಮಾಡಿದೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದ್ದಾರೆ. ಸುವರ್ಣ ಸೌಧವನ್ನು ಅಧಿವೇಶನಕ್ಕೆ ಸಜ್ಜುಗೊಳಿಸಲು ಅಗತ್ಯವಿರುವ …

Read More »

ಜಮ್ಮುಕಾಶ್ಮೀರದಲ್ಲಿ ಮತ್ತೆ ಆರ್ಟಿಕಲ್ 370 ಸ್ಥಾಪನೆ: ಫಾರೂಕ್ ಅಬ್ದುಲ್ಲಾ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣಾ ಕಾವು ಹೆಚ್ಚುತ್ತಿದೆ, ಎಲ್ಲಾ ಪಕ್ಷಗಳು ಈಗಾಗಲೇ ಚುನಾವಣಾ ಅಖಾಡಕ್ಕೆ ಧುಮುಕಿದ್ದು ವಿವಿಧ ಭರವಸೆಗಳನ್ನು ಮತದಾರರಿಗೆ ನೀಡುತ್ತಿವೆ. ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಕೂಡ ಇದೀಗ ರಾಜ್ಯದ ಜನತೆಗೆ ಮತ್ತೊಂದು ಭರವಸೆ ಕೊಟ್ಟಿದ್ದಾರೆ. ರಾಜ್ಯದಲ್ಲಿ ಮತ್ತೆ ಆರ್ಟಿಕಲ್ 370 ಸ್ಥಾಪಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಆರ್ಟಿಕಲ್ 370 ಜಮ್ಮು ಮತ್ತು ಕಾಶ್ಮೀರದ ಹೃದಯ ಬಡಿತ …

Read More »