ಜಿನೀವಾ: ಚೀನಾದೊಟ್ಟಿಗೆ ಇರುವ ಶೇ 75ರಷ್ಟು ಸಮಸ್ಯೆಗಳು ಇತ್ಯರ್ಥವಾಗಿವೆ, ಆದರೆ ಗಡಿಯಲ್ಲಿ ಹೆಚ್ಚು ಸೈನಿಕರನ್ನು ನಿಯೋಜಿಸುತ್ತಿರುವುದೇ ದೊಡ್ಡ ಸಮಸ್ಯೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಹೇಳಿದರು. ಸ್ವಿಸ್ ನಗರದಲ್ಲಿ ಚಿಂತಕರ ಚಾವಡಿ ಆಯೋಜಿಸಿದ್ದ ಸಂವಾದದಲ್ಲಿ ಮಾತನಾಡಿದ ಅವರು, ಜೂನ್ 2020ರಲ್ಲಿ ನಡೆದ ಗಲ್ವಾನ್ ಕಣಿವೆ ಸಂಘರ್ಷವು ಭಾರತ ಚೀನಾ ಸಂಬಂಧದ ಮೇಲೆ ದುಷ್ಪರಿಣಾಮ ಬೀರಿದೆ, ಬಿಕ್ಕಟ್ಟು ಶಮನಕ್ಕೆ ಉಭಯ ದೇಶಗಳ ಮಾತುಕತೆ ಚಾಲ್ತಿಯಲ್ಲಿದೆ ಎಂದು ಹೇಳಿದರು. ವಾಸ್ತವ ನಿಯಂತ್ರಣ …
Read More »ಬೆಳೆಗಳಿಗೆ ಎಸಿ ರೈನ್ ಜೆಟ್ ಅಳವಡಿಸಿದ ರೈತ
ಮುದಗಲ್: ಸಮೀಪದ ನಾಗಲಾಪುರ ಗ್ರಾಮದ ರೈತ ಕನಕಪ್ಪ ತಮ್ಮ ಹೊಲದಲ್ಲಿನ ಬೆಳೆಗಳಿಗೆ ಎಸಿ ರೈನ್ ಜೆಟ್ ಅಳವಡಿಸಿ ಕಡಿಮೆ ನೀರಿನಲ್ಲಿ ಉತ್ತಮ ಬೆಳೆಯುತ್ತಿದ್ದಾರೆ. ಎಸಿ ರೈನ್ ಜೆಟ್ ಮೂಲಕ 7 ಗಂಟೆಗಳಲ್ಲಿ 3 ಎಕರೆ ಬೆಳೆಗೆ ನೀರು ಉಣಿಸಲಾಗುತ್ತಿದೆ. ಈ ಪದ್ಧತಿಯಿಂದ ಭೂಮಿ ಸವಕಳಿ ಬರುವುದಿಲ್ಲ, ಗಟ್ಟಿಯಾಗುವುದಿಲ್ಲ ಇದರಿಂದ ಎರೆ ಹುಳುಗಳ ಸಂಖ್ಯೆ ಹೆಚ್ಚಾಗಿ ಬೆಳೆಯೂ ಫಲವತ್ತಾಗಿ ಬರುತ್ತದೆ. ಗಾಳಿಯಲ್ಲಿನ ಸಾರಜನಕ, ರಂಜಕ, ಪೊಟಾಸಿಯಂ ಕಾಂಪ್ಲೆಕ್ಸ್ ನೀರಿನ ಮೂಲಕ ಬೆಳೆ …
Read More »ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಹಾಸ್ಟೆಲ್ ವಾರ್ಡನ್
ಕಲಬುರಗಿ: ಹಾಸ್ಟೆಲ್ ದಲ್ಲಿ ಹಾಜರಾತಿ ಹಾಕಲು ಅಡುಗೆ ಸಹಾಯಕರಿಂದ 15 ಸಾವಿರ ರೂ ಲಂಚ ಪಡೆಯುವಾಗ ಲೋಕಾಯುಕ್ತರು ಬಲೆ ಬೀಸಿದ್ದಾರೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಲಬುರಗಿ ವಿಶ್ವ ವಿದ್ಯಾಲಯ ಮೆಟ್ರಿಕ್ ನಂತರ ಸ್ನಾತಕೋತರ ಬಾಲಕರ ವಸತಿ ನಿಲಯದ ಹಾಸ್ಟೆಲ್ ವಾರ್ಡನ್ ಶಿವಶರಣಪ್ಪ 20 ಸಾವಿರ ರೂ ಲಂಚ ಬೇಡಿಕೆ ಇಟ್ಟು 15 ಸಾವಿರ ರೂ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಅಡುಗೆ ಸಹಾಯಕ ಶ್ರೀಮಂತ ಎನ್ನುವರು ದೂರು ನೀಡಿದ್ದಾರೆ, …
Read More »ಮೋದಿ ಆಗಮನಕ್ಕೆ ಕಾಯುತ್ತಿದ್ದೇನೆ: ರಷ್ಯಾ ಅಧ್ಯಕ್ಷ ಪುಟಿನ್
ನವದೆಹಲಿ: ರಷ್ಯಾ ಉಕ್ರೇನ್ ಸಂಘರ್ಷಕ್ಕೆ ಪರಿಹಾರದ ಭಾಗವಾಗಿ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಗುರುವಾರ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುತಿನ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ರಷ್ಯಾದ ಸೇಂಟ್ ಪೀಟರ್ಸ್ಬರ್ಗ್ನಲ್ಲಿ ನಡೆಯುತ್ತಿರುವ ಬ್ರಿಕ್ಸ್(ಬ್ರೆಜಿಲ್, ರಷ್ಯಾ, ಭಾರತ, ಚೀನ, ದಕ್ಷಿಣ ಆಫ್ರಿಕಾ)ನ ರಾಷ್ಟ್ರೀ ಯ ಭದ್ರತಾ ಸಲಹೆಗಾರರ ಸಮಾವೇಶದ ವೇಳೆ ಈ ಮಾತುಕತೆ ನಡೆಸಲಾಗಿದೆ.ಈ ವೇಳೆ, ದೋವಲ್ ಜತೆಗಿನ ಮಾತುಕತೆಯಲ್ಲಿ ರಷ್ಯಾದ ಕಝನ್ನಲ್ಲಿ ಅಕ್ಟೋಬರ್ನಲ್ಲಿ ನಡೆಯಲಿರುವ ಬ್ರಿಕ್ಸ್ ಶೃಂಗಕ್ಕೆ …
Read More »ಪಿಎಂ ಆವಾಸ್ ಯೋಜನೆ: ಗ್ರಾಮೀಣ ಬಡ ಕುಟುಂಬಗಳು ಯೋಜನೆ ವ್ಯಾಪ್ತಿಗೆ ಸೇರ್ಪಡೆ
ನವದೆಹಲಿ: ವಸತಿರಹಿತರೆಲ್ಲರಿಗೂ ವಸತಿ ಕಲ್ಪಿಸುವ ಕೇಂದ್ರ ಸರಕಾರದ ಅತ್ಯಂತ ಮಹತ್ವಾಕಾಂಕ್ಷೆಯ ಯೋಜನೆಯಡಿ ಅನುಷ್ಠಾನಗೊಳಿಸಲಾದ ಪ್ರಧಾನಮಂತ್ರಿ ಆವಾಸ್ ಯೋಜನೆ ಗ್ರಾಮೀಣ (ಪಿಎಂಎವೈ-ಜಿ)ದ ಫಲಾನುಭವಿಗಳಾಗಲು ಈ ಹಿಂದೆ ಕೇಂದ್ರ ಸರಕಾರ ಅನುಸರಿಸುತ್ತಿದ್ದ ಸ್ವಯಂಚಾಲಿತ ಹೊರಗುಳಿಯುವಿಕೆ ಮಾನದಂಡದಲ್ಲಿ ಕೆಲವು ಪ್ರಮುಖ ಸಡಿಲಿಕೆಗಳನ್ನು ಮಾಡಿದೆ. ಇದರಿಂದ ಗ್ರಾಮೀಣ ಪ್ರದೇಶದ ಮತ್ತಷ್ಟು ಬಡ ಕುಟುಂಬಗಳು ಈ ಯೋಜನೆಯ ವ್ಯಾಪ್ತಿಗೆ ಸೇರ್ಪಡೆಯಾಗಲಿದ್ದು, ಸ್ವಂತ ಸೂರು ಹೊಂದುವ ಇವರ ಕನಸು ಶೀಘ್ರದಲ್ಲಿಯೇ ನನಸಾಗಲಿದೆ. ರಾಜ್ಯಗಳ ಗ್ರಾಮೀಣಾಭಿವೃದ್ಧಿ ಸಚಿವರೊಂದಿಗೆ ಕೇಂದ್ರ ಸಚಿವ …
Read More »ಪಿಂಚಣಿ ಕುರಿತು ಮಹತ್ವದ ಸೂಚನೆ ನೀಡಿದ ಕೇಂದ್ರ ಸರ್ಕಾರ
ನವದೆಹಲಿ : ಕೇಂದ್ರ ಸರ್ಕಾರದ ಪಿಂಚಣಿದಾರರಿಗೆ ಕೊನೆಗೂ ಪರಿಹಾರದ ಸುದ್ದಿ ಬಂದಿದೆ, ನಿವೃತ್ತಿ ಹೊಂದಿದವರಿಗೆ ಪಿಂಚಣಿ ಬಿಡುಗಡೆ ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ಕೇಂದ್ರವು ಅಧಿಕಾರಿಗಳಿಗೆ ಸೂಚಿಸಿದೆ. ಕೇಂದ್ರ ಸರ್ಕಾರ ನಡೆಸಿದ ತಪಾಸಣೆಯಲ್ಲಿ ನಿವೃತ್ತರು ಪಿಂಚಣಿ ಪ್ರಕ್ರಿಯೆಗೆ ಹಲವು ತೊಂದರೆಗಳನ್ನು ಎದುರಿಸುತ್ತಿರುವುದು ಕಂಡು ಬಂದಿದೆ. ಇತ್ತೀಚೆಗೆ, ಅಧಿಕೃತ ಜ್ಞಾಪಕ ಪತ್ರದ ಮೂಲಕ, ಪಿಂಚಣಿ ಪ್ರಕರಣಗಳನ್ನು ಅಂತಿಮಗೊಳಿಸುವಲ್ಲಿ ಹೆಚ್ಚುತ್ತಿರುವ ವಿಳಂಬದಿಂದಾಗಿ, ಎಲ್ಲಾ ಕೇಂದ್ರ ಪಿಂಚಣಿದಾರರು ತೊಂದರೆಗೊಳಗಾಗುತ್ತಿದ್ದಾರೆ ಎಂದು ಹೈಲೈಟ್ ಮಾಡಲಾಗಿದೆ. ಹಣಕಾಸು ಸಚಿವಾಲಯದ ಅಡಿಯಲ್ಲಿ …
Read More »ಸಾಮಾಜಿಕ ಬಹಿಷ್ಕಾರ: ಯಾದಗಿರಿಯಲ್ಲಿ ಅನಿಷ್ಟ ಪದ್ಧತಿ ಇನ್ನೂ ಜೀವಂತ
ಯಾದಗಿರಿ: ಸಾಮಾಜಿಕ ಬಹಿಷ್ಕಾರದ ಅನಿಷ್ಟ ಪದ್ಧತಿ ಯಾದಗಿರಿಯಲ್ಲಿ ಇನ್ನೂ ಜೀವಂತ ಇರುವುದು ಬೆಳಕಿಗೆ ಬಂದಿದೆ. ಕೇಸ್ ದಾಖಲಿಸಿದ್ದಕ್ಕೆ ದಲಿತರಿಗೆ ಬಹಿಷ್ಕಾರ ಹಾಕಿದ ವಿದ್ಯಮಾನ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಬಪ್ಪರಗಾ ಗ್ರಾಮದಿಂದ ವರದಿಯಾಗಿದೆ, ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಸವರ್ಣೀಯ ಯುವಕನೊಬ್ಬನ ಮೇಲೆ ದಲಿತ ಕುಟುಂಬ ಪೊಲೀಸರಿಗೆ ದೂರು ನೀಡಿದ್ದೇ ಬಹಿಷ್ಕಾರಕ್ಕೆ ಕಾರಣವಾಗಿದೆ. ದಲಿತರಿಗೆ ಅಂಗಡಿಗಳಲ್ಲಿ ಸಾಮಗ್ರಿ ನೀಡದಂತೆ ಸವರ್ಣೀಯರು ಕಟ್ಟಪ್ಪಣೆ ಮಾಡಿದ್ದಾರೆ. ಇದರಿಂದಾಗಿ ದಲಿತರ ಮಕ್ಕಳಿಗೆ ಪೆನ್ನು, …
Read More »ಮಾತೃವಂದನಾ ಯೋಜನೆಯಡಿ ಗರ್ಭಿಣಿಯರಿಗೆ 11 ಸಾವಿರ ರೂ. ಪ್ರೋತ್ಸಾಹಧನ
ಬೆಂಗಳೂರು : ಗರ್ಭಿಣಿ ಮಹಿಳೆಯರಿಗೆ ಸಿಹಿಸುದ್ದಿ ಸಿಕ್ಕಿದ್ದು, ಕೇಂದ್ರ ಸರ್ಕಾರದ ಮಾತೃವಂದನಾ ಯೋಜನೆಯಡಿ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಯೋಜನೆಗಳಲ್ಲೊಂದಾದ ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯ ಸೌಲಭ್ಯ ಪಡೆಯಲು ಮೊದಲನೇ ಪ್ರಸವದ ಗರ್ಭಿಣಿ ಮಹಿಳೆಯರು ಮತ್ತು ಎರಡನೇ ಪ್ರಸವದಲ್ಲಿ ಹೆಣ್ಣು ಮಗು ಜನಿಸಿದ ಮಹಿಳೆಯರಿಂದ ನೋಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಮಾತೃವಂದನಾ ಯೋಜನೆಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ. ನೋಂದಣಿಗೆ ನಿಗಧಿತ ನಮೂನೆಯಲ್ಲಿ ಭರ್ತಿ ಮಾಡಿದ …
Read More »9 ರಾಜ್ಯಗಳ ಸಚಿವರ ಸಭೆ ಆಯೋಜಿಸಲು ಕರ್ನಾಟಕ ಪ್ರಯತ್ನಿಸುತ್ತಿದೆ: ಸಚಿವ ಕೃಷ್ಣ ಬೈರೇಗೌಡ
ತಿರುವನಂತಪುರ: ರಾಜ್ಯಗಳ ಬೇಡಿಕೆಗಳು ಹಾಗೂ ಕಾಳಜಿಗಳ ಕುರಿತು ಗಮನಹರಿಸುವಂತೆ 16ನೇ ಹಣಕಾಸು ಆಯೋಗದ ಮೇಲೆ ಒತ್ತಡ ಹೇರುವುದಕ್ಕಾಗಿ ಕನಿಷ್ಠ 9 ರಾಜ್ಯಗಳ ಸಚಿವರ ಸಭೆ ಆಯೋಜಿಸಲು ಕರ್ನಾಟಕ ಪ್ರಯತ್ನಿಸುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಇಲ್ಲಿ ನಡೆದ ಐದು ರಾಜ್ಯಗಳ ಸಚಿವರ ಸಭೆಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ನಡೆಯಲಿರುವ ಮುಂದಿನ ಸಭೆಯಲ್ಲಿ ಪಾಲ್ಗೊಳ್ಳುವಂತೆ ಮಹಾರಾಷ್ಟ್ರ, ಆಂಧ್ರಪ್ರದೇಶ, ಹರಿಯಾಣ ಮತ್ತು ಗುಜರಾತ್ ರಾಜ್ಯಗಳ ಸಚಿವರನ್ನು ಕೋರಲಾಗಿದೆ ಎಂದರು.
Read More »ರಾಜ್ಯದಲ್ಲಿ ಸೆ.13 ರವರೆಗೆ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು: ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿನ ಹವಾಮಾನ ವೈಪರೀತ್ಯಗಳ ಪ್ರಭಾವ ಮುಂದುವರಿದಿದ್ದು, ಹೀಗಾಗಿದ ದೇಶದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ರಾಜಸ್ಥಾನ, ಗುಜರಾತ್, ತೆಲಂಗಾಣದಲ್ಲಿ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಕರ್ನಾಟಕದಲ್ಲಿ ಸೆಪ್ಟಂಬರ್ 13ರ ವರೆಗೆ ಆರು ಜಿಲ್ಲೆಗಳಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಹಾಗೂ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





