Breaking News

BigTv News

ಮೋದಿ ಆಗಮನಕ್ಕೆ ಕಾಯುತ್ತಿದ್ದೇನೆ: ರಷ್ಯಾ ಅಧ್ಯಕ್ಷ ಪುಟಿನ್

ನವದೆಹಲಿ: ರಷ್ಯಾ ಉಕ್ರೇನ್‌ ಸಂಘರ್ಷಕ್ಕೆ ಪರಿಹಾರದ ಭಾಗವಾಗಿ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌ ಗುರುವಾರ ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುತಿನ್‌ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ರಷ್ಯಾದ ಸೇಂಟ್‌ ಪೀಟರ್ಸ್‌ಬರ್ಗ್‌ನಲ್ಲಿ ನಡೆಯುತ್ತಿರುವ ಬ್ರಿಕ್ಸ್‌(ಬ್ರೆಜಿಲ್‌, ರಷ್ಯಾ, ಭಾರತ, ಚೀನ, ದಕ್ಷಿಣ ಆಫ್ರಿಕಾ)ನ ರಾಷ್ಟ್ರೀ ಯ ಭದ್ರತಾ ಸಲಹೆಗಾರರ ಸಮಾವೇಶದ ವೇಳೆ ಈ ಮಾತುಕತೆ ನಡೆಸಲಾಗಿದೆ.ಈ ವೇಳೆ, ದೋವಲ್‌ ಜತೆಗಿನ ಮಾತುಕತೆಯಲ್ಲಿ ರಷ್ಯಾದ ಕಝನ್‌ನಲ್ಲಿ ಅಕ್ಟೋಬರ್‌ನಲ್ಲಿ ನಡೆಯಲಿರುವ ಬ್ರಿಕ್ಸ್‌ ಶೃಂಗಕ್ಕೆ …

Read More »

ಪಿಎಂ ಆವಾಸ್ ಯೋಜನೆ: ಗ್ರಾಮೀಣ ಬಡ ಕುಟುಂಬಗಳು ಯೋಜನೆ ವ್ಯಾಪ್ತಿಗೆ ಸೇರ್ಪಡೆ

ನವದೆಹಲಿ: ವಸತಿರಹಿತರೆಲ್ಲರಿಗೂ ವಸತಿ ಕಲ್ಪಿಸುವ ಕೇಂದ್ರ ಸರಕಾರದ ಅತ್ಯಂತ ಮಹತ್ವಾಕಾಂಕ್ಷೆಯ ಯೋಜನೆಯಡಿ ಅನುಷ್ಠಾನಗೊಳಿಸಲಾದ ಪ್ರಧಾನಮಂತ್ರಿ ಆವಾಸ್‌ ಯೋಜನೆ ಗ್ರಾಮೀಣ (ಪಿಎಂಎವೈ-ಜಿ)ದ ಫ‌ಲಾನುಭವಿಗಳಾಗಲು ಈ ಹಿಂದೆ ಕೇಂದ್ರ ಸರಕಾರ ಅನುಸರಿಸುತ್ತಿದ್ದ ಸ್ವಯಂಚಾಲಿತ ಹೊರಗುಳಿಯುವಿಕೆ ಮಾನದಂಡದಲ್ಲಿ ಕೆಲವು ಪ್ರಮುಖ ಸಡಿಲಿಕೆಗಳನ್ನು ಮಾಡಿದೆ. ಇದರಿಂದ ಗ್ರಾಮೀಣ ಪ್ರದೇಶದ ಮತ್ತಷ್ಟು ಬಡ ಕುಟುಂಬಗಳು ಈ ಯೋಜನೆಯ ವ್ಯಾಪ್ತಿಗೆ ಸೇರ್ಪಡೆಯಾಗಲಿದ್ದು, ಸ್ವಂತ ಸೂರು ಹೊಂದುವ ಇವರ ಕನಸು ಶೀಘ್ರದಲ್ಲಿಯೇ ನನಸಾಗಲಿದೆ. ರಾಜ್ಯಗಳ ಗ್ರಾಮೀಣಾಭಿವೃದ್ಧಿ ಸಚಿವರೊಂದಿಗೆ ಕೇಂದ್ರ ಸಚಿವ …

Read More »

ಪಿಂಚಣಿ ಕುರಿತು ಮಹತ್ವದ ಸೂಚನೆ ನೀಡಿದ ಕೇಂದ್ರ ಸರ್ಕಾರ

ನವದೆಹಲಿ : ಕೇಂದ್ರ ಸರ್ಕಾರದ ಪಿಂಚಣಿದಾರರಿಗೆ ಕೊನೆಗೂ ಪರಿಹಾರದ ಸುದ್ದಿ ಬಂದಿದೆ, ನಿವೃತ್ತಿ ಹೊಂದಿದವರಿಗೆ ಪಿಂಚಣಿ ಬಿಡುಗಡೆ ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ಕೇಂದ್ರವು ಅಧಿಕಾರಿಗಳಿಗೆ ಸೂಚಿಸಿದೆ. ಕೇಂದ್ರ ಸರ್ಕಾರ ನಡೆಸಿದ ತಪಾಸಣೆಯಲ್ಲಿ ನಿವೃತ್ತರು ಪಿಂಚಣಿ ಪ್ರಕ್ರಿಯೆಗೆ ಹಲವು ತೊಂದರೆಗಳನ್ನು ಎದುರಿಸುತ್ತಿರುವುದು ಕಂಡು ಬಂದಿದೆ. ಇತ್ತೀಚೆಗೆ, ಅಧಿಕೃತ ಜ್ಞಾಪಕ ಪತ್ರದ ಮೂಲಕ, ಪಿಂಚಣಿ ಪ್ರಕರಣಗಳನ್ನು ಅಂತಿಮಗೊಳಿಸುವಲ್ಲಿ ಹೆಚ್ಚುತ್ತಿರುವ ವಿಳಂಬದಿಂದಾಗಿ, ಎಲ್ಲಾ ಕೇಂದ್ರ ಪಿಂಚಣಿದಾರರು ತೊಂದರೆಗೊಳಗಾಗುತ್ತಿದ್ದಾರೆ ಎಂದು ಹೈಲೈಟ್ ಮಾಡಲಾಗಿದೆ. ಹಣಕಾಸು ಸಚಿವಾಲಯದ ಅಡಿಯಲ್ಲಿ …

Read More »

ಸಾಮಾಜಿಕ ಬಹಿಷ್ಕಾರ: ಯಾದಗಿರಿಯಲ್ಲಿ ಅನಿಷ್ಟ ಪದ್ಧತಿ ಇನ್ನೂ ಜೀವಂತ

ಯಾದಗಿರಿ: ಸಾಮಾಜಿಕ ಬಹಿಷ್ಕಾರದ ಅನಿಷ್ಟ ಪದ್ಧತಿ ಯಾದಗಿರಿಯಲ್ಲಿ ಇನ್ನೂ ಜೀವಂತ ಇರುವುದು ಬೆಳಕಿಗೆ ಬಂದಿದೆ. ಕೇಸ್ ದಾಖಲಿಸಿದ್ದಕ್ಕೆ ದಲಿತರಿಗೆ ಬಹಿಷ್ಕಾರ ಹಾಕಿದ ವಿದ್ಯಮಾನ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಬಪ್ಪರಗಾ ‌ಗ್ರಾಮದಿಂದ ವರದಿಯಾಗಿದೆ, ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಸವರ್ಣೀಯ ಯುವಕನೊಬ್ಬನ ಮೇಲೆ ದಲಿತ ಕುಟುಂಬ ಪೊಲೀಸರಿಗೆ ದೂರು ನೀಡಿದ್ದೇ ಬಹಿಷ್ಕಾರಕ್ಕೆ ಕಾರಣವಾಗಿದೆ. ದಲಿತರಿಗೆ ಅಂಗಡಿಗಳಲ್ಲಿ ಸಾಮಗ್ರಿ ನೀಡದಂತೆ ಸವರ್ಣೀಯರು ಕಟ್ಟಪ್ಪಣೆ ಮಾಡಿದ್ದಾರೆ. ಇದರಿಂದಾಗಿ ದಲಿತರ ಮಕ್ಕಳಿಗೆ ಪೆನ್ನು, …

Read More »

ಮಾತೃವಂದನಾ ಯೋಜನೆಯಡಿ ಗರ್ಭಿಣಿಯರಿಗೆ 11 ಸಾವಿರ ರೂ. ಪ್ರೋತ್ಸಾಹಧನ

ಬೆಂಗಳೂರು : ಗರ್ಭಿಣಿ ಮಹಿಳೆಯರಿಗೆ ಸಿಹಿಸುದ್ದಿ ಸಿಕ್ಕಿದ್ದು, ಕೇಂದ್ರ ಸರ್ಕಾರದ ಮಾತೃವಂದನಾ ಯೋಜನೆಯಡಿ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಯೋಜನೆಗಳಲ್ಲೊಂದಾದ ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯ ಸೌಲಭ್ಯ ಪಡೆಯಲು ಮೊದಲನೇ ಪ್ರಸವದ ಗರ್ಭಿಣಿ ಮಹಿಳೆಯರು ಮತ್ತು ಎರಡನೇ ಪ್ರಸವದಲ್ಲಿ ಹೆಣ್ಣು ಮಗು ಜನಿಸಿದ ಮಹಿಳೆಯರಿಂದ ನೋಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಮಾತೃವಂದನಾ ಯೋಜನೆಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ. ನೋಂದಣಿಗೆ ನಿಗಧಿತ ನಮೂನೆಯಲ್ಲಿ ಭರ್ತಿ ಮಾಡಿದ …

Read More »

9 ರಾಜ್ಯಗಳ ಸಚಿವರ ಸಭೆ ಆಯೋಜಿಸಲು ಕರ್ನಾಟಕ ಪ್ರಯತ್ನಿಸುತ್ತಿದೆ: ಸಚಿವ ಕೃಷ್ಣ ಬೈರೇಗೌಡ

ತಿರುವನಂತಪುರ: ರಾಜ್ಯಗಳ ಬೇಡಿಕೆಗಳು ಹಾಗೂ ಕಾಳಜಿಗಳ ಕುರಿತು ಗಮನಹರಿಸುವಂತೆ 16ನೇ ಹಣಕಾಸು ಆಯೋಗದ ಮೇಲೆ ಒತ್ತಡ ಹೇರುವುದಕ್ಕಾಗಿ ಕನಿಷ್ಠ 9 ರಾಜ್ಯಗಳ ಸಚಿವರ ಸಭೆ ಆಯೋಜಿಸಲು ಕರ್ನಾಟಕ ಪ್ರಯತ್ನಿಸುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಇಲ್ಲಿ ನಡೆದ ಐದು ರಾಜ್ಯಗಳ ಸಚಿವರ ಸಭೆಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ನಡೆಯಲಿರುವ ಮುಂದಿನ ಸಭೆಯಲ್ಲಿ ಪಾಲ್ಗೊಳ್ಳುವಂತೆ ಮಹಾರಾಷ್ಟ್ರ, ಆಂಧ್ರಪ್ರದೇಶ, ಹರಿಯಾಣ ಮತ್ತು ಗುಜರಾತ್‌ ರಾಜ್ಯಗಳ ಸಚಿವರನ್ನು ಕೋರಲಾಗಿದೆ ಎಂದರು.

Read More »

ರಾಜ್ಯದಲ್ಲಿ ಸೆ.13 ರವರೆಗೆ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿನ ಹವಾಮಾನ ವೈಪರೀತ್ಯಗಳ ಪ್ರಭಾವ ಮುಂದುವರಿದಿದ್ದು, ಹೀಗಾಗಿದ ದೇಶದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ರಾಜಸ್ಥಾನ, ಗುಜರಾತ್‌, ತೆಲಂಗಾಣದಲ್ಲಿ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಕರ್ನಾಟಕದಲ್ಲಿ ಸೆಪ್ಟಂಬರ್ 13ರ ವರೆಗೆ ಆರು ಜಿಲ್ಲೆಗಳಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಹಾಗೂ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ …

Read More »

ಅಗ್ನಿವೀರರಿಗೆ ಶೇ.10 ರಷ್ಟು ಮೀಸಲಾತಿ ಕಲ್ಪಿಸಿದ ಒಡಿಶಾ ಸರ್ಕಾರ

ಒಡಿಶಾ : ಒಡಿಶಾ ರಾಜ್ಯ ಸರ್ಕಾರವು ಇಂದು ಮಹತ್ವದ ನಿರ್ಣಯ ಕೈಗೊಂಡಿದ್ದು, ಸಚಿವ ಸಂಪುಟದಲ್ಲಿ ಮೂರು ಮಹತ್ವದ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಿದೆ. ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅಗ್ನಿವೀರ್ ಯೋಧರ ಬಗ್ಗೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಒಂದು ವರ್ಷದ ತರಬೇತಿ ಹಾಗೂ 4 ವರ್ಷಗಳ ಉದ್ಯೋಗದ ನಂತರ ಅಗ್ನಿವೀರರಿಗೆ ರಾಜ್ಯ ಸರ್ಕಾರಿ ಸೇವೆಯಲ್ಲಿ ಶೇ.10ರಷ್ಟು ಮೀಸಲಾತಿ ನೀಡಲು ತೀರ್ಮಾನಿಸಲಾಗಿದೆ. ರಾಜ್ಯ ಸರ್ಕಾರದ ಪೊಲೀಸ್ …

Read More »

ದ್ವಿಪಕ್ಷೀಯ ಮಾತುಕತೆಗಾಗಿ ಪ್ರಧಾನಿ ಮೋದಿಯನ್ನು ಆಹ್ವಾನಿಸಿದ ರಷ್ಯಾ ಅಧ್ಯಕ್ಷ ಪುಟಿನ್

ನವದೆಹಲಿ : ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಅಕ್ಟೋಬರ್ ನಲ್ಲಿ ನಡೆಯಲಿರುವ ಬ್ರಿಕ್ಸ್ ಶೃಂಗಸಭೆಯಲ್ಲಿ ದ್ವಿಪಕ್ಷೀಯ ಮಾತುಕತೆ ನಡೆಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಹ್ವಾನ ನೀಡಿದ್ದಾರೆ. ಉಕ್ರೇನ್ ಮತ್ತು ರಷ್ಯಾ ನಡುವೆ ಶಾಂತಿ ಒಪ್ಪಂದವನ್ನ ಸುಗಮಗೊಳಿಸುವಲ್ಲಿ ಭಾರತದ ಪ್ರಮುಖ ಪಾತ್ರವನ್ನು ಗಮನದಲ್ಲಿಟ್ಟುಕೊಂಡು ಈ ಆಹ್ವಾನವು ವಿಶೇಷವಾಗಿ ಗಮನಾರ್ಹವಾಗಿದೆ. ಪ್ರಸ್ತುತ ರಷ್ಯಾದಲ್ಲಿರುವ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು ರಷ್ಯಾದ ಸಹವರ್ತಿ ಸೆರ್ಗೆಯ್ ಶೋಯಿಗು ಅವರೊಂದಿಗೆ ಸೇಂಟ್ …

Read More »

ಕಾರ್ಮಿಕ ಇಲಾಖೆಯಿಂದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ

ಬೆಂಗಳೂರು : ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ವರ್ಗಗಳಾದ ಹಮಾಲರು, ಮನೆಗೆಲಸದವರು, ಚಿಂದಿ ಆಯುವವರು, ಟೈಲರ್ಗಳು, ಅಗಸರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಕ್ಷೌರಿಕರು, ಭಟ್ಟಿ ಕಾರ್ಮಿಕರು, ಗಿಗ್ ವೃತ್ತಿ ನಿರ್ವಹಿಸುತ್ತಿರುವ ಡೆಲಿವರಿ ಕಾರ್ಮಿಕರು, ದಿನಪತ್ರಿಕೆ ವಿತರಿಸುವ ಕಾರ್ಮಿಕರು, ಸಿನಿ ಕಾರ್ಮಿಕರು, ನೇಕಾರರು, ಬೀದಿಬದಿ ವ್ಯಾಪಾರಿಗಳು, ಹೋಟೆಲ್ ಕಾರ್ಮಿಕರು, ಫೊಟೋಗ್ರಾಫರ್ಗಳು, ಸ್ವತಂತ್ರ ಲೇಖನ ಬರಹಗಾರರು, ಕಲ್ಯಾಣ ಮಂಟಪ/ಸಭಾ ಭವನ/ಟೆಂಟ್/ಪೆಂಡಾಲ್ಗಳ ಕೆಲಸ ನಿರ್ವಹಿಸುವ ಎಲ್ಲಾ ಕಾರ್ಮಿಕರು, ಬೀಡಿ ಕಾರ್ಮಿಕರು ಮತ್ತು ಅಸಂಘಟಿತ ವಿಕಲಚೇತನ …

Read More »