Breaking News

BigTv News

ಬೆಂಗಳೂರಿನಲ್ಲಿ ಸ್ಯಾಟಲೈಟ್ ರಿಂಗ್ ರಸ್ತೆ ಯೋಜನೆಗೆ ಕೇಂದ್ರದಿಂದ ಅನುಮೋದನೆ

ಬೆಂಗಳೂರು: ಕಳೆದ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಬೆಂಗಳೂರು ನಗರ, ಗ್ರಾಮೀಣ ಮತ್ತು ಸುತ್ತಮುತ್ತಲಿನ ತಾಲ್ಲೂಕುಗಳನ್ನು ಸಂಪರ್ಕಿಸುವ ಮಹತ್ವಾಕಾಂಕ್ಷೆಯ ಯೋಜನೆಯಾದ ಸ್ಯಾಟಲೈಟ್ ರಿಂಗ್ ರಸ್ತೆ ಯೋಜನೆಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ದೊರೆತಿದೆ. ಸಂಸತ್ ಅಧಿವೇಶನದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಮತ್ತು ಬೆಂಗಳೂರು ಗ್ರಾಮಾಂತರ ಸಂಸದ ಡಾ. ಸಿ.ಎನ್. ಮಂಜುನಾಥ್ ರವರ ಮನವಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಸ್ಪಂದಿಸಿದ್ದು, ಕಾಮಗಾರಿಗೆ ಅನುಮೋದನೆ …

Read More »

ಬಸವಕಲ್ಯಾಣದಲ್ಲಿ ಅ. 19,20 ರಂದು ಸ್ವಾಭಿಮಾನಿ ಕಲ್ಯಾಣ ಪರ್ವ ಆಯೋಜನೆ

ಬೀದರ್:‌ ಬಸವ ಧರ್ಮ ಪೀಠದ ಸ್ವಾಭಿಮಾನಿ ಶರಣರ ಬಳಗದ ವತಿಯಿಂದ ಅ. 19 ಮತ್ತು 20 ರಂದು ಶರಣ ಭೂಮಿ ಬಸವಕಲ್ಯಾಣದಲ್ಲಿ ಸ್ವಾಭಿಮಾನಿ ಕಲ್ಯಾಣ ಪರ್ವ ಆಯೋಜಿಸಲಾಗುವುದು ಎಂದು ಬೆಂಗಳೂರಿನ ಬಸವ ಗಂಗೋತ್ರಿಯ ಚನ್ನಬಸವೇಶ್ವರ ಜ್ಞಾನಪೀಠದ ಪೀಠಾಧ್ಯಕ್ಷರಾದ ಡಾ. ಚನ್ನಬಸವಾನಂದ ಸ್ವಾಮೀಜಿ ತಿಳಿಸಿದರು. ನಗರದದಲ್ಲಿ ಗುರುವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ತೆಲಂಗಾಣ, ಮಹಾರಾಷ್ಟ್ರ, ತಮಿಳುನಾಡು ಮತ್ತು ಆಂಧ್ರಪ್ರದೇಶ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಿಂದ ಶರಣ ಶರಣೆಯರು ಪಾಲ್ಗೊಳ್ಳುತಿದ್ದಾರೆ. ಬಸವ …

Read More »

ಬ್ರಿಕ್ಸ್ ಭದ್ರತಾ ಸಲಹೆಗಾರರ ಸಮಾವೇಶ: ಅಜಿತ್ ದೋವಲ್ ಸೆರ್ಗೆಯ್ ಶೋಯಿಗು ಮಾತುಕತೆ

ರಷ್ಯಾ: ಬ್ರಿಕ್ಸ್ ರಾಷ್ಟ್ರಗಳ ಭದ್ರತಾ ಸಲಹೆಗಾರರ ಸಮಾವೇಶದಲ್ಲಿ ಪಾಲ್ಗೊಳ್ಳಲು ರಷ್ಯಾಕ್ಕೆ ಆಗಮಿಸಿರುವ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಸೇಂಟ್ ಪೀಟರ್ಸ್‌ಬರ್ಗ್‌ನಲ್ಲಿ ರಷ್ಯಾದ ಎನ್‌ಎಸ್‌ಎ ಸೆರ್ಗೆಯ್ ಶೋಯಿಗು ಅವರೊಂದಿಗೆ ಮಾತುಕತೆ ನಡೆಸಿದರು. ಉಕ್ರೇನ್‌ನೊಂದಿಗಿನ ಎರಡೂವರೆ ವರ್ಷಗಳ ಯುದ್ಧವನ್ನು ಕೊನೆಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಅವರ ಶಾಂತಿ ಪ್ರಸ್ತಾವವನ್ನು ದೋವಲ್, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಹಂಚಿಕೊಳ್ಳಲಿದ್ದಾರೆ ಎಂದು ಹೇಳಲಾಗಿದೆ. ದೋವಲ್ ಮತ್ತು ಶೋಯಿಗು ಪರಸ್ಪರ ಹಿತಾಸಕ್ತಿಗೆ ಸಂಬಂಧಿಸಿದ ಪ್ರಮುಖ …

Read More »

ಬೆಳೆಹಾನಿ ಪ್ರದೇಶವನ್ನು ವೀಕ್ಷಿಸಿದ ಸಚಿವ ರಹೀಂಖಾನ್

ಬೀದರ್: ತಾಲೂಕಿನಲ್ಲಿ ನಿರಂತರ ಮಳೆಯಿಂದ ಬೆಳೆ ಹಾನಿಯಾದ ಪ್ರದೇಶಕ್ಕೆ ಪೌರಾಡಳಿತ ಸಚಿವ ರಹೀಂಖಾನ್ ಅವರು ಗುರುವಾರ ಭೇಟಿ ನೀಡಿದರು. ಮಾಳೆಗಾಂವ್, ವಿಳಾಸಪುರ ಗ್ರಾಮಗಳ ಹೊಲಗಳಲ್ಲಿ ಮಳೆ ನೀರು ನಿಂತು ಹೆಸರು, ಉದ್ದು, ತೊಗರಿ ಬೆಳೆ ಹಾನಿಯಾಗಿರುವುದನ್ನು ವೀಕ್ಷಿಸಿದರು. ಬೆಳೆ ಸಮೀಕ್ಷೆಯನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು, ಹಾನಿ ವಾಸ್ತವ ವರದಿ ಸಲ್ಲಿಸಿ, ಬೆಳೆ ಹಾನಿಗೊಳಗಾದ ರೈತರಿಗೆ ಪರಿಹಾರ ಒದಗಿಸಬೇಕು. ಮನೆ ಕಳೆದುಕೊಂಡವರಿಗೂ ಪರಿಹಾರ ಕೊಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಮಾಳೆಗಾಂವ್ …

Read More »

ನಾಗಮಂಗಲದಲ್ಲಿ ಉದ್ವಿಗ್ನ ಸ್ಥಿತಿ: ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲು ಯತ್ನಾಳ್ ಆಗ್ರಹ

ಬೆಂಗಳೂರು: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಅನ್ಯಕೋಮಿನ ಯುವಕರು ದುರದ್ದೇಶಪೂರ್ವಕವಾಗಿ ಕಲ್ಲುತೂರಾಟ ನಡೆಸಿದ್ದು, ಇದು ಪೂರ್ವ ನಿಯೋಜಿತಕೃತ್ಯವಾಗಿದೆ. ಈ ಪ್ರಕರಣವನ್ನು ರಾಜ್ಯ ಸರ್ಕಾರ ತಾರ್ಕಿಕ ಅಂತ್ಯ ನೀಡಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ಫೈರ್ ಬ್ರ್ಯಾಂಡ್ ಬಿಜೆಪಿ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದ್ದಾರೆ. ನಾಗಮಂಗಲ ಪಟ್ಟಣದಲ್ಲಿ ನಡೆದ ಗಲಭೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಯತ್ನಾಳ್ ಅವರು, ನಿನ್ನೆ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ …

Read More »

ಮುಂದಿನ 4 ವರ್ಷ ನಾನೇ ಸಿಎಂ: ಸಿದ್ದರಾಮಯ್ಯರಿಂದ ಮಹತ್ವದ ಘೋಷಣೆ

ಬೆಂಗಳೂರು: ಮೂಡಾ‌ ಹಗರಣದಿಂದ ಸಿಎಂ ಸಿದ್ದರಾಮಯ್ಯ ಅವರ ಮೇಲೆ ವಿಪಕ್ಷ ನಾಯಕರು ದಾಳಿ ನಡೆಸುತ್ತಲೇ ಇದ್ದು, ಕೇಸ್ ಕೋರ್ಟ್ ನಲ್ಲಿ ನಡೆಯುತ್ತಿರುವ ಕಾರಣ ಸಿಎಂ ಸ್ಥಾನಕ್ಕೆ ಕುತ್ತು ಬರುತ್ತೆ, ಸರ್ಕಾರ ಪತನವಾಗುತ್ತೆ ಎಂದೇ ವಿಪಕ್ಷ ನಾಯಕರು ಹೇಳಿಕೆಗಳನ್ನ ನೀಡುತ್ತಿದ್ದಾರೆ. ಇದರ ನಡುವೆ ನಾನು ಕೂಡ ಸಿಎಂ ಆಕಾಂಕ್ಷಿ, ನಾನ್ಯಾಕೆ ಸಿಎಂ ಆಗಬಾರದು ಅಂತ ಹನುಮಂತನ ಬಾಲ ಬೆಳೆದಂತೆ ಆಕಾಂಕ್ಷಿಗಳ ಲೀಸ್ಟ್ ಬೆಳೆಯುತ್ತಾ ಹೋಗುತ್ತಿದೆ. ಹೀಗಾಗಲೇ ಸಿಎಂ ರೇಸ್‌ನಲ್ಲಿ ಸತೀಶ್ ಜಾರಕಿಹೊಳಿ, …

Read More »

ಸಂಕಷ್ಟಕ್ಕೆ ಸಿಲುಕಿದ ಕರ್ನಾಟಕದ ಹೈನುಗಾರಿಕೆ ವಲಯ

ಬೆಂಗಳೂರು: ಹಾಲು ಉತ್ಪಾದಕರು ಒಂದೆಡೆ ಚಿಲ್ಲರೆ ದರ ಏರಿಕೆ ಮಾಡುವಂತೆ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದರೆ, ಮತ್ತೊಂದೆಡೆ ಹಾಲು ಉತ್ಪಾದಕರು ಪ್ರೋತ್ಸಾಹಧನ ಹೆಚ್ಚಳಕ್ಕೆ ಒತ್ತಾಯಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಹೈನುಗಾರಿಕೆ ವಲಯ ಮತ್ತೆ ಸಂಕಷ್ಟಕ್ಕೆ ಸಿಲುಕಿದೆ. ನಂದಿನಿ ಬ್ರಾಂಡ್‌ನಡಿಯಲ್ಲಿ ಸರಕುಗಳನ್ನು ಮಾರಾಟ ಮಾಡುವ ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಜೂನ್‌ನಲ್ಲಿ ಪ್ರತಿ 500 ಮಿಲಿ ಪ್ಯಾಕೆಟ್‌ಗೆ 50 ಮಿಲಿ ಸೇರಿಸುವ ಸಂದರ್ಭದಲ್ಲಿ 2 ರೂ. ಹೆಚ್ಚಳ ಮಾಡಿದೆ. ಆದರೆ ಹಾಲು …

Read More »

100 ಬಿಎಂಟಿಸಿ ಬಸ್ ಗಳನ್ನು ಲೋಕಾರ್ಪಣೆಗೊಳಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಇಂದು ಬೆಂಗಳೂರು ನಗರದ ಜನತೆಯ ಅನುಕೂಲಕ್ಕೆ ಮೊದಲ ಹಂತದ 100 ನೂತನ ಬಿಎಂಟಿಸಿ ಬಸ್ ಗಳನ್ನು ಲೋಕಾರ್ಪಣೆ ಮಾಡಿದ್ದೇವೆ. ಒಟ್ಟು 840 ನೂತನ‌ ಬಸ್ ಗಳು ಬಿಎಂಟಿಸಿ ಸೇರಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಬಳಿ ಸಾರಿಗೆ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 100 ನೂತನ ಬಿಎಂಟಿಸಿ ಬಸ್ ಗಳನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು. ಬೆಂಗಳೂರು ನಗರದಲ್ಲಿ ಜನಸಂಖ್ಯೆ ಹೆಚ್ಚುತ್ತಿದೆ ಇಲ್ಲಿನ ಹೆಚ್ಚುತ್ತಿರುವ ಶ್ರಮಿಕ ವರ್ಗಗಳಿಗೆ …

Read More »

ಕಾಶ್ಮೀರದ 19 ಕ್ಷೇತ್ರಗಳಲ್ಲಿ ಮಾತ್ರ ಸ್ಪರ್ಧಿಸುವುದಾಗಿ ಬಿಜೆಪಿ ಘೋಷಣೆ

ಜಮ್ಮು ಮತ್ತು ಕಾಶ್ಮೀರ: ವಿಧಾನಸಭಾ ಚುನಾವಣೆಗೆ ಬಿಜೆಪಿ ಸಕಲ ತಯಾರಿ ಮಾಡಿಕೊಂಡಿದ್ದು, ಮೂರನೇ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಸಲು ಗುರುವಾರ ಕೊನೆಯ ದಿನವಾಗಿದೆ ಕಾಶ್ಮೀರ ಭಾಗದಲ್ಲಿ ಬಿಜೆಪಿ 19 ಕ್ಷೇತ್ರಗಳಲ್ಲಿ ಮಾತ್ರ ಸ್ಪರ್ಧೆ ಮಾಡುವುದಾಗಿ ಸ್ಪಷ್ಟನೆ ನೀಡಿದೆ. ಬುಧವಾರ ಸಂಜೆ ಪಕ್ಷದ ಅಧಿಕೃತ ಪ್ರಕಟಣೆಯಲ್ಲಿ ಕಾಶ್ಮೀರಕ್ಕೆ ಯಾವುದೇ ಹೊಸ ಅಭ್ಯರ್ಥಿಯನ್ನು ಘೋಷಣೆ ಮಾಡುವುದಿಲ್ಲ ಎಂದು ಹೇಳುವ ಮೂಲಕ ಎಲ್ಲಾ ಕುತೂಹಲಗಳಿಗೆ ತೆರೆ ಬಿದ್ದಿದೆ. ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ …

Read More »

402 ಪಿಎಸ್ಐ ಪರೀಕ್ಷೆ ಮುಂದೂಡಿಕೆ: ಡಾ.ಜಿ.ಪರಮೇಶ್ವರ್

ಚಿಕ್ಕಮಗಳೂರು: ಅಭ್ಯರ್ಥಿಗಳ, ವಿರೋಧ ಪಕ್ಷಗಳ ಒತ್ತಾಯಕ್ಕೆ ಮಣಿದ ಕರ್ನಾಟಕ ಸರ್ಕಾರ ಪಿಎಸ್‌ಐ ನೇಮಕಾತಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ 402 ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ) ನೇಮಕಾತಿ ಲಿಖಿತ ಪರೀಕ್ಷೆಯನ್ನು ಸೆಪ್ಟೆಂಬರ್ 22ರಂದು ನಡೆಸುವುದಾಗಿ ಈ ಹಿಂದೆ ದಿನಾಂಕವನ್ನು ನಿಗದಿ ಮಾಡಿತ್ತು. ಬೆಂಗಳೂರಿನಲ್ಲಿ ಗುರುವಾರ ಮಾತನಾಡಿದ ಗೃಹ ಸಚಿವ ಡಾ. ಜಿ. ಪರಮೇಶ್ವರ 402 ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ) ನೇಮಕಾತಿ ಲಿಖಿತ ಪರೀಕ್ಷೆಯನ್ನು ಮುಂದೂಡಿಕೆ ಮಾಡುವ …

Read More »