ಹೂವಿನಹಡಗಲಿ: ತಾಲ್ಲೂಕಿನಲ್ಲಿ ಮುಂಗಾರು ಋತುವಿನ ಈರುಳ್ಳಿ ಕಟಾವು ಪ್ರಾರಂಭವಾಗಿದ್ದು, ಮಾರುಕಟ್ಟೆಯಲ್ಲಿ ಎ ಗ್ರೇಡ್ ಈರುಳ್ಳಿಗೆ ಉತ್ತಮ ಬೆಲೆಯಿದ್ದು, ಬೆಳೆಗಾರರು ಹೆಚ್ಚಿನ ಲಾಭದ ನಿರೀಕ್ಷೆಯಲ್ಲಿದ್ದಾರೆ. ಈ ವರ್ಷ ತಾಲ್ಲೂಕಿನಲ್ಲಿ 1,250 ಹೆಕ್ಟೇರ್ ಪ್ರದೇಶದಲ್ಲಿ ಈರುಳ್ಳಿ ಬಿತ್ತನೆಯಾಗಿದೆ, ಇಲ್ಲಿನ ರೈತರು ಬೆಂಗಳೂರು ಮಾರುಕಟ್ಟೆಯನ್ನು ಹೆಚ್ಚಾಗಿ ಅವಲಂಬಿಸಿದ್ದಾರೆ. ಇಟ್ಟಿಗಿ ಹೋಬಳಿಯ ಇಟ್ಟಿಗಿ, ಉತ್ತಂಗಿ, ತಳಕಲ್ಲು, ಕೆಂಚಮ್ಮನಹಳ್ಳಿ, ಮಹಾಜನದಹಳ್ಳಿ, ಸೋಗಿ ಗ್ರಾಮ, ಹಡಗಲಿ, ಹಿರೇಹಡಗಲಿ ಹೋಬಳಿಯ ಕೆಲವು ಗ್ರಾಮಗಳಲ್ಲಿ ರೈತರು ಈರುಳ್ಳಿ ಬೆಳೆದಿದ್ದಾರೆ, ಐದಾರು ವರ್ಷದಿಂದ …
Read More »ಯುವನಿಧಿ ಯೋಜನೆಯಲ್ಲಿ ಬೀದರ್ ಕಳಪೆ ಸಾಧನೆ
ಬೀದರ್: ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಯುವನಿಧಿಯಲ್ಲಿ ಬೀದರ್ ಜಿಲ್ಲೆಯ ಸಾಧನೆ ಬಹಳ ಕಳಪೆಯಾಗಿದೆ, ಯುವನಿಧಿಗೆ ಸಂಬಂಧಿಸಿದಂತೆ ಅಧಿಕಾರಿಗಳು ಮಾಡುತ್ತಿರುವ ಕೆಲಸ ತೃಪ್ತಿ ತಂದಿಲ್ಲ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್. ಮೆಹರೋಜ್ ಖಾನ್ ಬೇಸರ ವ್ಯಕ್ತಪಡಿಸಿದರು. ನಗರದ ಜಿಲ್ಲಾ ಪಂಚಾಯಿತಿಯಲ್ಲಿ ಏರ್ಪಡಿಸಿದ್ದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆ ಹಾಗೂ ಫಲಾನುಭವಿಗಳ ಜೊತೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಬೀದರ್ …
Read More »11 ಸಾವಿರ ಎಕರೆ ಭೂಮಿಯನ್ನು ಅಧಿಸೂಚಿತ ಅರಣ್ಯ ಎಂದು ಘೋಷಣೆ: ಈಶ್ವರ ಖಂಡ್ರೆ
ಬೆಂಗಳೂರು: ಕಳೆದ 18 ತಿಂಗಳಲ್ಲಿ ಅರಣ್ಯ ಇಲಾಖೆ ಸುಮಾರು 11 ಸಾವಿರ ಎಕರೆ ಭೂಮಿಯನ್ನು ಅಧಿಸೂಚಿತ ಅರಣ್ಯ ಎಂದು ಘೋಷಿಸಿದೆ. ಜತೆಗೆ ಬೆಂಗಳೂರು, ಕೋಲಾರ, ಬೀದರ್ ಸೇರಿ ರಾಜ್ಯದ ವಿವಿಧೆಡೆ ಸಾವಿರಾರು ಕೋಟಿ ರೂ. ಬೆಲೆ ಬಾಳುವ 10 ಸಾವಿರ ಎಕರೆಗೂ ಹೆಚ್ಚು ಅರಣ್ಯ ಭೂಮಿಯನ್ನು ಮರಳಿ ವಶಕ್ಕೆ ಪಡೆಯಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದರು. ಅವರು ಬೆಂಗಳೂರಿನ ಅರಣ್ಯ ಭವನದಲ್ಲಿ ರಾಷ್ಟ್ರೀಯ ಹುತಾತ್ಮರ ದಿನದ ಅಂಗವಾಗಿ …
Read More »ಸೆಮಿಕಂಡಕ್ಟರ್ ಕ್ಷೇತ್ರಕ್ಕೆ ಭಾರತವೇ ಚಾಲಕಶಕ್ತಿ: ಪ್ರಧಾನಿ ನರೇಂದ್ರ ಮೋದಿ
ನವದೆಹಲಿ: ಜಗತ್ತಿನ ಪ್ರತಿಯೊಂದು ಉಪಕರಣದಲ್ಲೂ ಭಾರತ ನಿರ್ವಿುತ ಚಿಪ್ ಹೊಂದಿರಬೇಕು ಎನ್ನುವುದು ನಮ್ಮ ಕನಸಾಗಿದೆ. ಚಿಪ್ ಡಿಸೈನಿಂಗ್ನಲ್ಲಿ ಶೇಕಡ 20ರಷ್ಟು ಪ್ರತಿಭೆಗಳ ಕೊಡುಗೆ ಭಾರತದಿಂದ ಆಗುತ್ತಿದೆ, ಮುಂಬರುವ ದಿನಗಳಲ್ಲಿ ಸೆಮಿಕಂಡಕ್ಟರ್ ಕ್ಷೇತ್ರಕ್ಕೆ ಭಾರತವೇ ಚಾಲಕಶಕ್ತಿಯಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದರು. ಗ್ರೇಟರ್ ನೋಯ್ಡಾದ ನಾಲೇಜ್ ಪಾರ್ಕ್ನಲ್ಲಿ ಸೆಮಿಕಾನ್ ಇಂಡಿಯಾ 2024 ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಸೆಮಿಕಂಡಕ್ಟರ್ ತಯಾರಿಕೆಯಲ್ಲಿ 1.5 ಲಕ್ಷ ಕೋಟಿ ರೂ.ಗೂ ಅಧಿಕ ಹೂಡಿಕೆ …
Read More »ಜಮ್ಮುಮತ್ತುಕಾಶ್ಮೀರ ಚುನಾವಣೆ: ಕಾಂಗ್ರೆಸ್ ನಿಂದ 5 ಗ್ಯಾರಂಟಿಗಳನ್ನು ಘೋಷಿಸಿದ ಮಲ್ಲಿಕಾರ್ಜುನ ಖರ್ಗೆ
ಅನಂತನಾಗ್: ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳಾ ಉದ್ಯಮಿಗಳಿಗೆ ಐದು ಲಕ್ಷದವರೆಗೆ ಬಡ್ಡಿ ರಹಿತ ಸಾಲ ಸೇರಿದಂತೆ ಐದು ಗ್ಯಾರಂಟಿಗಳನ್ನು ನೀಡುವುದಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ಘೋಷಿಸಿದ್ದಾರೆ. ದಕ್ಷಿಣ ಕಾಶ್ಮೀರದಲ್ಲಿ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ನಡೆಸಿದ ನಡೆಸಿದ ಖರ್ಗೆ, ಮಹಿಳಾ ಉದ್ಯಮಿಗಳಿಗೆ 5 ಲಕ್ಷದವರೆಗೆ ಬಡ್ಡಿ ರಹಿತ ಸಾಲ, ಪ್ರತಿ ಕುಟುಂಬಕ್ಕೆ 25 ಲಕ್ಷ ಆರೋಗ್ಯ …
Read More »ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮದ ಲೋಗೊ ಅನಾವರಣಗೊಳಿಸಿದ ಸಚಿವ ಮಧು ಬಂಗಾರಪ್ಪ
ಬೆಳಗಾವಿ: ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮವು ಶಿಕ್ಷಣ ಇಲಾಖೆಯ ಮಹತ್ವಾಕಾಂಕ್ಷೆಯ ಕಾರ್ಯಕ್ರಮವಾಗಿದೆ. ಈ ಕಾರ್ಯಕ್ರಮದ ಮೂಲಕ ಸರ್ಕಾರಿ ಶಾಲೆಗಳಲ್ಲಿನ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವುದರ ಮೂಲಕ ಅವರ ಭವಿಷ್ಯವನ್ನು ಉಜ್ವಲಗೊಳಿಸಬಹುದಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಬೆಳಗಾವಿ ಸುವರ್ಣಸೌಧದಲ್ಲಿ ಬುಧವಾರ ಜರುಗಿದ ನಮ್ಮಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮದ ಲೋಗೋ ಅನ್ನು ವಿದ್ಯಾರ್ಥಿಗಳಿಂದ ಅನಾವವರಣಗೊಳಿಸಿ ದಾನಿಗಳಿಗೆ ಗೌರವ ಸಮರ್ಪಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. …
Read More »ಜಮ್ಮುಮತ್ತುಕಾಶ್ಮೀರದಲ್ಲಿ ಗುಂಡಿನ ದಾಳಿ: ಮೂವರು ಜೈಷ್ ಉಗ್ರರ ಎನ್ ಕೌಂಟರ್
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರ ಉಪಟಳ ಶುರುವಾಗಿದ್ದು, ಇಂದು ನಡೆದ ಸೇನಾ ಕಾರ್ಯಾಚರಣೆಯಲ್ಲಿ ಜೈಶ್-ಎ-ಮೊಹಮ್ಮದ್ ಸಂಘಟನೆಯ ಮೂವರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಉಧಂಪುರದ ಬಸಂತ್ಗಢ ಪ್ರದೇಶದಲ್ಲಿ ಬುಧವಾರ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಉಗ್ರರು ಸೇನೆ ಬೀಸಿದ ಬಲೆಗೆ ಬಿದ್ದಿದ್ದು, ಯೋಧರು ನಾಲ್ಕು ದಿಕ್ಕಿನಿಂದಲೂ ಅವರನ್ನು ಆವರಿಸಿದ್ದರು. ಬಳಿಕ ನಡೆದ ಗುಂಡಿನ ಚಕಮಕಿಯಲ್ಲಿ ಉಗ್ರರನ್ನು ಹೊಡೆರುದುಳಿಸುವಲ್ಲಿ ಸೇನೆ ಯಶಸ್ವಿಯಾಗಿದೆ.
Read More »ದೇಶದಲ್ಲಿ ಈ ಬಾರಿ ಚಳಿಯ ತಾಪಮಾನ ಅಧಿಕ: ಹವಾಮಾನ ಇಲಾಖೆ
ನವದೆಹಲಿ: ಈ ಬಾರಿ ದೇಶದಲ್ಲಿ ಬೇಸಿಗೆಯ ಬಿಸಿ, ಮುಂಗಾರಿನ ಮಳೆ ಹಿಂದೆಂದಿಗಿಂತ ಅಧಿಕವಾಗಿಯೇ ದಾಖಲಾಗಿದೆ. ಅದರ ಜತೆಗೆ ಈ ಬಾರಿ ದೇಶದಲ್ಲಿ ಚಳಿಯೂ ಅಧಿಕವಾಗಿಯೇ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಲಾ ನಿನಾ ವಿದ್ಯಮಾನವನ್ನು ಆರಂಭದಿಂದ ಗಮನಿಸಿ, ಇದು ರಾಷ್ಟ್ರದಾದ್ಯಂತ ಹೆಚ್ಚಿದ ಮಳೆ ಮತ್ತು ತಾಪಮಾನದಲ್ಲಿ ಗಮನಾರ್ಹ ಕುಸಿತವನ್ನು ಉಂಟುಮಾಡಬಹುದು ಎಂದು ಹವಾಮಾನ ಇಲಾಖೆ ಹೇಳಿದೆ. ಭಾರತದ ವಿವಿಧ ಪ್ರದೇಶಗಳಲ್ಲಿ ವಿವಿಧ ಪ್ರಮಾಣದ ತಾಪಮಾನ ದಾಖಲಾಗಲಿದ್ದು, ಪರಿಣಾಮವೂ ವಿಭಿನ್ನವಾಗಿರಲಿದೆ. …
Read More »ಹದಗೆಟ್ಟ ಭೀಮಾನದಿ ಸೇತುವೆ: ಭಾರೀ ವಾಹನಗಳ ಸಂಚಾರ ನಿಷೇಧ
ವಡಗೇರಾ: ತಾಲ್ಲೂಕಿನ ಗುರುಸುಣಿಗಿ ಕ್ರಾಸ್ನಿಂದ ಯಾದಗಿರಿ ನಗರಕ್ಕೆ ಹೋಗುವ ರಾಜ್ಯ ಹೆದ್ದಾರಿಯ ಭೀಮಾ ನದಿಯ ಹಳೆಯ ಸೇತುವೆಯ ಮೇಲೆ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಗುರುಸುಣಿಗಿ ಕ್ರಾಸ್ನಿಂದ ಭೀಮಾ ನದಿಗೆ ಅಡ್ಡಲಾಗಿ ಕಟ್ಟಿರುವ ಹೊಸ ಬ್ರಿಜ್ ಕಂಬ್ಯಾರೇಜು ಮೂಲಕ ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗಿದೆ. ಗುರುಸುಣಿಗಿ ಗ್ರಾಮದ ಕ್ರಾಸ್ ಹತ್ತಿರ ಬ್ಯಾರಿಕೇಡ್ ಹಾಕಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ಯಾದಗಿರಿ ನಗರದ ಸಮೀಪದಲ್ಲಿ ರೈಲ್ವೆ ಸೇತುವೆಯ ಹತ್ತಿರ ಭೂ ಕುಸಿತ …
Read More »ಹಳ್ಳದ ಸೇತುವೆಗಿಲ್ಲ ದುರಸ್ತಿ ಭಾಗ್ಯ: ಸ್ಥಳೀಯರ ಆಕ್ರೋಶ
ಗದಗ: ಜಿಲ್ಲೆಯ ಮುಂಡರಗಿ ತಾಲೂಕಿನ ಬೆಣ್ಣೆಹಳ್ಳಿ-ನಾಗರಹಳ್ಳಿ ಮಾರ್ಗದ ಸೇತುವೆಯೊಂದರಲ್ಲಿ ಪದೇ ಪದೇ ಅಪಘಾತಗಳು ಸಂಭವಿಸುತ್ತಿದ್ದು, ಅಧಿಯಾರಿಗಳು ಕೈ ಕಟ್ಟಿ ಕುಳಿತಿದ್ದಾರೆ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಬೆಣ್ಣೆಹಳ್ಳಿ-ನಾಗರಹಳ್ಳಿ ಮಾರ್ಗದಲ್ಲಿರುವ ಹಳ್ಳವೊಂದಕ್ಕೆ ನಿರ್ಮಿಸಲಾಗಿರುವ ಸೇತುವೆಯಲ್ಲಿ ಕಳೆದ ವಾರವಷ್ಟೇ ಬೈಕ್ ಸವಾರನೊಬ್ಬನನ್ನು ಬಲಿ ಪಡೆದಿತ್ತು, ಇದೀಗ ಸೇತುವೆ ದಾಟುತ್ತಿರುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಹಳ್ಳಕ್ಕೆ ಬಿದ್ದಿದೆ. ಮಹೇಶ್ ಹೂಳಕಣ್ಣವರ ಟ್ರ್ಯಾಕ್ಟರ್ ಚಾಲಕ, ನಾಗರಹಳ್ಳಿ ಗ್ರಾಮದಿಂದ ಬೆಣ್ಣೆಹಳ್ಳಿಯತ್ತ ತೆರಳುತ್ತಿದ್ದ ವೇಳೆ ಚಾಲಕನ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





