Breaking News

BigTv News

ಜಮ್ಮು ಗಡಿಯಲ್ಲಿ ಪಾಕ್ ನಿಂದ ಅಪ್ರಚೋದಿತ ಗುಂಡಿನ ದಾಳಿ

ಕನಚಕ್: ಗಡಿ ಆಚೆಯಿಂದ ಪಾಕಿಸ್ತಾನ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಪರಿಣಾಮ ಓರ್ವ ಬಿಎಸ್‌ಎಫ್ ಯೋಧ ಗಾಯಗೊಂಡಿರುವ ಘಟನೆ ಅಖ್ನೂರ್‌ನಲ್ಲಿರುವ ಕನಾಚಕ್‌ನಲ್ಲಿ ನಡೆದಿದೆ. ಈ ಹಿನ್ನೆಲೆಯಲ್ಲಿ ಗಡಿ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಬುಧವಾರ ಮುಂಜಾನೆ ಜಮ್ಮು ಜಿಲ್ಲೆಯ ಅಖ್ನೂರ್ ಪ್ರದೇಶದಲ್ಲಿರುವ ಗಡಿಯಲ್ಲಿ ಪಾಕಿಸ್ತಾನದಿಂದ ಅಪ್ರಚೋದಿತ ಗುಂಡಿನ ದಾಳಿ ನಡೆದಿದೆ. ಈ ಅವಘಡದಲ್ಲಿ ಬಿಎಸ್‌ಎಫ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಡಿಯಾಚೆಗಿನ ಅಪ್ರಚೋದಿತ ಗುಂಡಿನ ದಾಳಿಗೆ ಬಿಎಸ್‌ಎಫ್ ಪಡೆಗಳು ಪ್ರತಿದಾಳಿ …

Read More »

ಸೆಮಿಕಾನ್ ಇಂಡಿಯಾ 2024 ಕಾನ್ಫೆರೆನ್ಸ್ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ಬುಧವಾರ ಬೆಳಗ್ಗೆ ಸೆಮಿಕಾನ್ ಇಂಡಿಯಾ 2024 ಕಾನ್ಫೆರೆನ್ಸ್ ಅನ್ನು ಉದ್ಘಾಟಿಸಿದ್ದಾರೆ. ಉತ್ತರಪ್ರದೇಶ ರಾಜ್ಯಕ್ಕೆ ಸೇರಿದ ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್​ಪೋ ಮಾರ್ಟ್​ನಲ್ಲಿ ಮೂರು ದಿನಗಳ ಕಾಲ ಸೆಮಿಕಾನ್ ಇಂಡಿಯಾ ಸಮಾವೇಶ ನಡೆಯಲಿದೆ. ಸೆಮಿಕಂಡಕ್ಟರ್ ಕ್ಷೇತ್ರದ ಜಾಗತಿಕ ಸಂಸ್ಥೆಗಳ ಸಿಇಒಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕೇಂದ್ರ ಸಚಿವ ಡಾ. ಅಶ್ವಿನಿ ವೈಷ್ಣವ್ ಮೊದಲಾದ ಹಲವರು ಉಪಸ್ಥಿತರಿದ್ದರು. ಸೆಪ್ಟೆಂಬರ್ 13ರವರೆಗೆ ಮೂರು …

Read More »

ಕೇಂದ್ರ ಸರ್ಕಾರದಿಂದ ಜಾನುವಾರು ಸಾಕಾಣಿಕೆಗೆ ಉದ್ಯಮಿ ಮಿತ್ರ ಯೋಜನೆ ಜಾರಿಗೆ

ನವದೆಹಲಿ : ಕೇಂದ್ರ ಸರ್ಕಾರವು ರೈತರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಜಾನುವಾರು ಸಾಕಣೆದಾರರ ಜೀವನೋಪಾಯವನ್ನು ಸುಧಾರಿಸಲು ಮತ್ತು ಅವರ ಜೀವನ ಮಟ್ಟವನ್ನು ಹೆಚ್ಚಿಸಲು ಹಲವಾರು ಯೋಜನೆಗಳನ್ನು ತಂದಿದೆ. ಸಣ್ಣ ಮತ್ತು ಮಧ್ಯಮ ಉದ್ದಿಮೆದಾರರನ್ನು ಪ್ರೋತ್ಸಾಹಿಸಲು ಉದ್ಯಮಿ ಮಿತ್ರ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದ್ದು, ಕುರಿ, ಕೋಳಿ, ಹಂದಿ ಸಾಕಣೆಗೆ ಸಹಾಯಧನ ನೀಡಲಾಗುತ್ತಿದೆ. ಈ ಯೋಜನೆಯು ಹಿತ್ತಲಿನಲ್ಲಿ ಕೋಳಿ, ಕುರಿ, ಮೇಕೆ, ಹಂದಿ ಸಾಕಣೆ, ಮೇವು ಮತ್ತು ಮೇವಿನ ಬೆಳೆ ದಾಸ್ತಾನುಗಳನ್ನು ಸುಧಾರಿಸುವ ಗುರಿಯನ್ನು …

Read More »

ಅರಣ್ಯ ಭೂಮಿ ಒತ್ತುವರಿಗೊಳಿಸಲು ಸಂಸದ ಮಲ್ಲೇಶ್ ಬಾಬು ಸೂಚನೆ

ಕೋಲಾರ: ಅರಣ್ಯ ಭೂಮಿ ಒತ್ತುವರಿ ತೆರವುಗೊಳಿಸಲು ಮುಂದಾಗುವ ಅಧಿಕಾರಿಗಳು ಒತ್ತುವರಿ ತೆರವಿಗು ಮುಂಚೆ ಕಂದಾಯ ಇಲಾಖೆ ಹಾಗೂ ಅರಣ್ಯ ಇಲಾಖೆ ಜಂಟಿ ಸರ್ವೆ ಮಾಡಿ ನಂತರ ಒತ್ತುವರಿ ತೆರವುಗೊಳಿಸಲು ಮುಂದಾಗಬೇಕು ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸಂಸದ ಮಲ್ಲೇಶ್ ಬಾಬು ಸೂಚನೆ ನೀಡಿದರು. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ದಿಶಾ ಸಭೆಯಲ್ಲಿ ಅಧ್ಯಕ್ಷತೆ ವಹಿತಿ ಮಾತನಾಡಿ ಅಧಿಕಾರಿಗಳು ಕೇಂದ್ರ ಸರ್ಕಾರದ ಯೋಜನೆಗಳನ್ನು ಕಟ್ಟ ಕಡೆಯ ವ್ಯಕ್ತಿಗೆ ತಲುಪುವಂತೆ ಕ್ರಮ …

Read More »

ಪಿಎಂ ಮತ್ಸ್ಯ ಕಿಸಾನ್ ಸಮೃದ್ಧಿ ಯೋಜನೆಗೆ ಚಾಲನೆ: ಕೇಂದ್ರ ಸಚಿವ ರಾಜೀವ್ ರಂಜನ್ ಸಿಂಗ್

ನವದೆಹಲಿ: ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವ ರಾಜೀವ್ ರಂಜನ್ ಸಿಂಗ್ ಅವರು ನವದೆಹಲಿಯಲ್ಲಿಂದು ನಡೆಯುವ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಮತ್ಸ್ಯ ಕಿಸಾನ್ ಸಮೃದ್ಧಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ಮೀನುಗಾರಿಕಾ ವಲಯದಲ್ಲಿ ಉತ್ಪಾದನೆ ಮತ್ತು ಸಂಸ್ಕರಣಾ ಕ್ಲಸ್ಟರ್‌ಗಳ ಮೇಲೆ ಪ್ರಮಾಣಿತ ಕಾರ್ಯಾಚರಣೆಯ ವಿಧಾನವನ್ನು ಅವರು ಇದೇ ವೇಳೆ ಬಿಡುಗಡೆ ಮಾಡಲಿದ್ದಾರೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯ ಅಡಿಯಲ್ಲಿ ರಾಷ್ಟ್ರೀಯ ಆದ್ಯತೆಯ ಯೋಜನೆಗಳಿಗೆ ಇದು …

Read More »

ಪಿಎಂ ಆವಾಸ್ ಯೋಜನೆ: ಸೆ.15 ಕ್ಕೆ 26 ಲಕ್ಷ ಫಲಾನುಭವಿಗಳ ಗೃಹಪ್ರವೇಶ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಗ್ರಾಮೀಣ ಪ್ರದೇಶದ ಲಕ್ಷಾಂತರ ಫಲಾನುಭವಿಗಳಿಗೆ ಪಿಎಂ ಆವಾಸ್ ಯೋಜನೆಯ ಮೊದಲ ಕಂತುಗಳನ್ನು ಬಿಡುಗಡೆ ಮಾಡಲಿದ್ದಾರೆ ಮತ್ತು 26 ಲಕ್ಷ ಫಲಾನುಭವಿಗಳ ಗೃಹ ಪ್ರವೇಶ ಸೆಪ್ಟೆಂಬರ್ 15 ರಂದು ಜೆಮ್ಶೆಡ್ಪುರದಲ್ಲಿ ನಡೆಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಮಂಗಳವಾರ ಪ್ರಕಟಿಸಿದ್ದಾರೆ. ರಾಜ್ಯಗಳ ಗ್ರಾಮೀಣಾಭಿವೃದ್ಧಿ ಸಚಿವರೊಂದಿಗೆ ಆನ್ಲೈನ್ ಸಭೆಯನ್ನುದ್ದೇಶಿಸಿ ಮಾತನಾಡಿದ ಚೌಹಾಣ್, ಪ್ರಧಾನಿ ನರೇಂದ್ರ ಮೋದಿ ಅವರು ಲಕ್ಷಾಂತರ ಪಿಎಂ ಆವಾಸ್ ಯೋಜನೆ …

Read More »

ಬೈಕ್ ಸರಿಯಾಗಿ ದುರಸ್ತಿ ಮಾಡಿಲ್ಲ ಎಂದು ಶೋರೂಂಗೆ ಬೆಂಕಿ ಹಚ್ಚಿದ ವ್ಯಕ್ತಿ

ಕಲಬುರಗಿ: ತನ್ನ ಬೈಕ್‌ ಸರಿಯಾಗಿ ದುರಸ್ತಿ ಮಾಡಿಲ್ಲ ಎಂಬ ಕೋಪದಲ್ಲಿ ವ್ಯಕ್ತಿಯೊಬ್ಬರು ಹುಮನಾಬಾದ್ ಮುಖ್ಯರಸ್ತೆಯಲ್ಲಿನ ಓಲಾ ಎಲೆಕ್ಟ್ರಿಕ್‌ ವಾಹನದ ಶೋರೂಂಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣ ಚೌಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ. ನಗರದ ನಿವಾಸಿ ಮಹಮದ್ ನದೀಮ್ ಬೆಂಕಿ ಹಚ್ಚಿದ ಆರೋಪಿ ಎಂದು ತಿಳಿದುಬಂದಿದೆ. ಮಂಗಳವಾರ ಬೆಳಿಗ್ಗೆ 10ರ ಸುಮಾರಿಗೆ ಶೋರೂಂಗೆ ಬಂದ ನದೀಮ್, ತನ್ನ ಎಲೆಕ್ಟ್ರಿಕ್ ಬೈಕ್ ದುರಸ್ತಿಯ ಬಗ್ಗೆ ಶೋರೂಂ ಸಿಬ್ಬಂದಿ ಜತೆಗೆ …

Read More »

ಆರ್ಥಿಕವಾಗಿ ಹಿಂದುಳಿದ ಸಾಮಾನ್ಯ ವರ್ಗದ ಬಡ ಕುಟುಂಬಗಳಿಗೆ ಶೇ.10 ರಷ್ಟು ಮೀಸಲಾತಿ

ನವದೆಹಲಿ : ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗಗಳನ್ನು ಉತ್ತೇಜಿಸಲು ರಚಿಸಲಾಗಿದೆ. ಸಾಮಾನ್ಯ ವರ್ಗವನ್ನು ಹೊರತುಪಡಿಸಿ ಇತರ ವಿಭಾಗಗಳು ಅದರ ಪ್ರಯೋಜನವನ್ನು ಪಡೆದುಕೊಂಡವು. ಹೀಗಾಗಿ ಬಡ ಸಾಮಾನ್ಯ ವರ್ಗದವರಿಗೆ ಮೀಸಲಾತಿ ನೀಡಬೇಕು ಎಂಬ ಬೇಡಿಕೆ ಬಹಳ ದಿನಗಳಿಂದ ಕೇಳಿ ಬರುತ್ತಿತ್ತು. ಇದನ್ನು ಗಮನದಲ್ಲಿಟ್ಟುಕೊಂಡು ಕೆಲವು ವರ್ಷಗಳ ಹಿಂದೆ ಕೇಂದ್ರ ಸರ್ಕಾರವು ಸಾಮಾನ್ಯ ವರ್ಗದ ಬಡ ಕುಟುಂಬಗಳಿಗೆ 10 ಪ್ರತಿಶತ ಮೀಸಲಾತಿಯನ್ನು ಒದಗಿಸಿದೆ. ಸಾಮಾನ್ಯ ವರ್ಗದ ಬಡ …

Read More »

ಮೆಡಿಕಲ್ ಕಾಲೇಜ್ ನಲ್ಲಿ ಓಣಂ ಹಬ್ಬ ಆಚರಣೆ: ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದ ವಿದ್ಯಾರ್ಥಿಗಳು

ಬಾಗಲಕೋಟೆ: ಅದು ಪಕ್ಕಾ ಕನ್ನಡ ನೆಲ, ಅದರಲ್ಲೂ ಜವಾರಿ ನಾಡು ಉತ್ತರ ಕರ್ನಾಟಕ. ಇಂತಹ ನಾಡಲ್ಲಿ ಕೇರಳ ಕುಟ್ಟಿಗಳು ಒಂದೇ ಸಮನೆ ಹೆಜ್ಜೆ ಹಾಕುತ್ತಿದ್ದರು‌. ಚಂಡೆ ಮದ್ದಳೆ ಸದ್ದಿಗೆ ಮೈಚಳಿ ಬಿಟ್ಟು ಕುಣಿದು ಕುಪ್ಪಳಿಸಿದರು. ಉತ್ತರ ಕರ್ನಾಟಕದಲ್ಲಿ ಕೇರಳ ಹಬ್ಬದ ವಾತಾವರಣ ಸೃಷ್ಟಿ ಮಾಡಿದ್ದರು. ಹುರುಪಿನಿಂದ ಚಂಡೆ ಬಾರಿಸುತ್ತಿರುವ ಕಲಾವಿದರು ಚಂಡೆ ಮದ್ದಳೆ ಸದ್ದಿಗೆ ಯುವತಿಯರ ಭರ್ಜರಿ ಕುಣಿತ. ಕೇರಳ ಸಾಂಪ್ರದಾಯಿಕ ಉಡುಗೆಯಲ್ಲಿ ಕಲರ್ ಪುಲ್ ಸಂಭ್ರಮ. ಈ ದೃಶ್ಯ …

Read More »

ಜನಾಂಗೀಯ ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಸಿ ಆರ್ ಪಿ ಎಫ್ ಬೆಟಾಲಿಯನ್ ಗಳ ನಿಯೋಜನೆ

ನವದೆಹಲಿ: ಜನಾಂಗೀಯ ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಕೇಂದ್ರದ ನಿರ್ದೇಶನದಂತೆ ಅಸ್ಸಾಂ ರೈಫಲ್ಸ್ ಘಟಕಗಳ ಜಾಗಕ್ಕೆ ತಲಾ 1,000 ಸಿಬ್ಬಂದಿಯನ್ನೊಳಗೊಂಡ ಸಿ ಆರ್ ಪಿ ಎಫ್ ಎರಡು ಹೊಸ ಬೆಟಾಲಿಯನ್‌ಗಳನ್ನು ನಿಯೋಜಿಸಲಾಗಿದೆ. ತೆಲಂಗಾಣದ ವಾರಂಗಲ್‌ನಿಂದ ಬೆಟಾಲಿಯನ್ ಸಂಖ್ಯೆ 58 ಮತ್ತು ಜಾರ್ಖಂಡ್‌ನ ಲತೇಹರ್‌ನಿಂದ ಬೆಟಾಲಿಯನ್ ಸಂಖ್ಯೆ 112 ಅನ್ನು ಸ್ಥಳಾಂತರಿಸಲಾಗುತ್ತದೆ. ಮೊದಲ ಘಟಕವು ಮಣಿಪುರದ ಕಾಂಗ್ವೈ (ಚುರಾಚಂದಪುರ) ದಲ್ಲಿ ತನ್ನ ಪ್ರಧಾನ ಕಛೇರಿಯನ್ನು ಹೊಂದಿರುತ್ತದೆ ಮತ್ತು ಎರಡನೇ ಘಟಕವು ಇಂಫಾಲ್ ಸುತ್ತಲೂ …

Read More »