ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನಂತೆ 2030ರ ವೇಳೆಗೆ ಶೇ.30ರಷ್ಟು ಎಲೆಕ್ಟ್ರಿಕ್ ವಾಹನಗಳನ್ನು ಬಳಕೆ ಮಾಡಲು ಗುರಿ ನಿಗದಿಪಡಿಸಲಾಗಿದ್ದು, ಆ ಗುರಿ ಮುಟ್ಟಲು ಸರ್ವ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ವಿಶ್ವ ಎಲೆಕ್ಟ್ರಿಕ್ ವಾಹನ ದಿನ ಅಂಗವಾಗಿ ಭಾರತೀಯ ಅಟೋಮೊಬೈಲ್ ಸೊಸೈಟಿ ಹಮ್ಮಿಕೊಂಡಿದ್ದ ಎರಡನೇ ಆವೃತ್ತಿಯ ಎಲೆಕ್ಟ್ರಿಕ್ ವಾಹನಗಳ ರಾಲಿಯನ್ನು ಸಚಿವರು ನವದೆಹಲಿಯ ಭಾರತ್ ಮಂಟಪದಲ್ಲಿ …
Read More »ಚಂದ್ರನಲ್ಲಿ ಪರಮಾಣು ಘಟಕ ಸ್ಥಾಪಿಸಲು ರಷ್ಯಾಗೆ ಕೈಜೋಡಿಸಲಿರುವ ಭಾರತ, ಚೀನಾ
ನವದೆಹಲಿ: ಚಂದ್ರ ಮತ್ತು ಮಂಗಳ ಗ್ರಹದಲ್ಲಿ ವಸಾಹತು ನಿರ್ಮಿಸಲು ಮನುಷ್ಯ ಪ್ರಯತ್ನಿಸುತ್ತಿದ್ದಾನೆ. ಈ ನಿಟ್ಟಿನಲ್ಲಿ ಪ್ರಯೋಗಗಳು ನಡೆದಿದ್ದು, ಭವಿಷ್ಯದ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ಚಂದ್ರನಲ್ಲಿ ಮನುಷ್ಯನ ವಸಾಹತು ಸುಗಮವಾಗಿ ಆಗುವ ಸಲುವಾಗಿ ಪರಮಾಣು ವಿದ್ಯುತ್ ಘಟಕ ಸ್ಥಾಪಿಸಲು ರಷ್ಯಾ ಯೋಜಿಸುತ್ತಿದೆ. ಈ ಯೋಜನೆಗೆ ಚೀನಾ ಮತ್ತು ಭಾರತ ದೇಶಗಳು ರಷ್ಯಾ ಜೊತೆ ಕೈ ಜೋಡಿಸುತ್ತಿವೆ. ಚಂದ್ರನ ದಕ್ಷಿಣ ಧ್ರುವದಲ್ಲಿ ನೌಕೆಯನ್ನು ಇಳಿಸಿದ ವಿಶ್ವದ ಮೊದಲ ದೇಶ ಎನಿಸಿರುವ ಭಾರತ ಮುಂದಿನ ವರ್ಷಗಳಲ್ಲಿ …
Read More »ರಾಜ್ಯದಲ್ಲಿ 3 ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು : ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದ ಹಲವಡೆ ಇಂದಿನಿಂದ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಮಳೆಯಾಗಲಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸೆ.9 ರಿಂದ 11 ರವರೆಗೆ ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನು ಉತ್ತರ ಕರ್ನಾಟಕದ …
Read More »ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಉಸ್ತುವಾರಿಯಾಗಿ ಐವನ್ ಡಿಸೋಜರನ್ನು ನೇಮಿಸಿದ ಎಐಸಿಸಿ
ಮಂಗಳೂರು: ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ನಡೆಯಲಿದ್ದು, ಇದರ ಬಿವಂಡಿ ಲೋಕಸಭಾ ಕ್ಷೇತ್ರದ ಎಲ್ಲಾ ವಿಧಾನ ಸಭಾ ಕ್ಷೇತ್ರಗಳ ಚುನಾವಣಾ ಉಸ್ತುವಾರಿಯಾಗಿ ಶಾಸಕ ಐವನ್ ಡಿಸೋಜ ಅವರನ್ನು ನೇಮಕ ಮಾಡಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಆದೇಶ ಹೊರಡಿಸಿದ್ದಾರೆ. ಈ ಹಿಂದೆ ಮಹಾರಾಷ್ಟ್ರ ಲೋಕಸಭಾ ಚುನಾವಣೆಯಲ್ಲಿ ಮುಂಬೈ ಮಹಾನಗರದ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಿದ್ದ ಐವನ್ ಡಿಸೋಜ ಕೇರಳ, ಗೋವಾ ಅಲ್ಲದೆ ಉತ್ತರ ಹಾಗೂ ಪೂರ್ವ ರಾಜ್ಯಗಳಲ್ಲಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳ ಸ್ಕ್ರೀನಿಂಗ್ ಕಮಿಟಿ …
Read More »ಅನ್ನಬಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ವಿತರಿಸಿ: ಪಡಿತರ ವಿತರಕ ಸಂಘ ಆಗ್ರಹ
ಬೆಂಗಳೂರು: ಚುನಾವಣೆ ಮುನ್ನ ಮತದಾರರಿಗೆ ಕೊಟ್ಟ ಭರವಸೆಯಂತೆ ಅನ್ನಬಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ವಿತರಿಸಬೇಕೆಂದು ರಾಜ್ಯ ಸರ್ಕಾರಿ ಪಡಿತರ ವಿತರಕ ಸಂಘ ಸರ್ಕಾರವನ್ನು ಆಗ್ರಹಿಸಿದೆ. 2013ರ ಜುಲೈನಲ್ಲಿ ಮೊದಲ ಬಾರಿ ಸಿಎಂ ಆಗಿದ್ದಾಗ ಸಿದ್ದರಾಮಯ್ಯ ಅನ್ನಭಾಗ್ಯ ಯೋಜನೆಗೆ ಜಾರಿಗೆ ತಂದರು. ಯೋಜನೆಯಡಿ ಬಿಪಿಎಲ್ ಕುಟುಂಬಗಳಿಗೆ 30 ಕೆಜಿ ಅಕ್ಕಿಯನ್ನು ಕೆಜಿಗೆ 1 ರೂ. ದರದಲ್ಲಿ ನೀಡಲಾಗುತ್ತಿತ್ತು. 2023ರ ವಿಧಾನಸಭಾ ಚುನಾವಣೆಗೆ ಮುನ್ನ ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ …
Read More »ಗ್ರಾಮ ಪಂಚಾಯಿತಿ ತೆರಿಗೆ ವಸೂಲಿ ಪ್ರಮಾಣ ಶೇ.58 ಕ್ಕೆ ಏರಿಕೆ: ಸಚಿವ ಪ್ರಿಯಾಂಕ್ ಖರ್ಗೆ
ಕಲಬುರಗಿ: ರಾಜ್ಯದ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಆಸ್ತಿಗಳ ತೆರಿಗೆ ವಸೂಲಿ ಪ್ರಮಾಣ ಶೇ 58ಕ್ಕೆ ಹೆಚ್ಚಳವಾಗಿದೆ. ಶೇ 50ರಷ್ಟು ಹೆಚ್ಚುವರಿ ಆಸ್ತಿಗಳನ್ನು ತೆರಿಗೆ ವ್ಯಾಪ್ತಿಗೆ ಒಳಪಡಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು. ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೆರಿಗೆ ವಸೂಲಿಗೆ ಗುರಿ ನಿಗದಿ ಮಾಡುವುದರ ಜೊತೆಗೆ ತೆರಿಗೆ ಹಣವನ್ನು ಆನ್ಲೈನ್ ಮೂಲಕ ಪಾವತಿಸಲು ಅನುವಾಗಲು ಪಿಒಎಸ್ ಸಾಧನಗಳನ್ನು ನೀಡಲಾಗಿದೆ. ಇದರಿಂದಾಗಿ ತೆರಿಗೆ …
Read More »ಪಾಕ್ ಆಕ್ರಮಿತ ಕಾಶ್ಮೀರದ ಜನರಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕರೆ
ಜಮ್ಮು: ಬನ್ನಿ ಭಾರತವನ್ನು ಸೇರಿಕೊಳ್ಳಿ. ನಾವು ನಿಮ್ಮನ್ನು ನಮ್ಮವರೆಂದೇ ಭಾವಿಸಿದ್ದೇವೆ ಎಂದು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಜನರಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕರೆ ನೀಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ರಾಂಬನ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಕೇಶ್ ಸಿಂಗ್ ಠಾಕೂರ್ ಪರ ಭಾನುವಾರ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿ ಮಾತನಾಡಿದ ಸಿಂಗ್, ನಾನು ಪಾಕ್ ಆಕ್ರಮಿತ ಕಾಶ್ಮೀರದ ನಿವಾಸಿಗಳಿಗೆ ಒಂದು ಮಾತು ಹೇಳಲು ಬಯಸುತ್ತೇನೆ, ಪಾಕಿಸ್ತಾನ ಸರ್ಕಾರ ನಿಮ್ಮನ್ನು ವಿದೇಶಿಯರೆಂದು …
Read More »ಕಮಲಾವತಿ ನದಿಯಲ್ಲಿ ಕೊಚ್ಚಿ ಹೋದ ಬಾಲಕ
ಸೇಡಂ: ಬಹಿರ್ದೆಸೆಗೆ ಕಮಲಾವತಿ ನದಿ ಬಳಿಗೆ ತೆರಳಿದ ಬಾಲಕನೊಬ್ಬ ಭಾನುವಾರ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದಾನೆ. ಪಟ್ಟಣದ ದೊಡ್ಡ ಅಗಸಿ ಬಡಾವಣೆಯ ಕೋಲಿವಾಡ ನಿವಾಸಿ ರಾಹುಲ್ ನಾಗಪ್ಪ ಎಳ್ಳಿ (17) ನದಿಯಲ್ಲಿ ಕೊಚ್ಚಿ ಹೋದ ಬಾಲಕ. ನಾನು ಮತ್ತು ರಾಹುಲ್ ಕಮಲಾವತಿ ನದಿ ಬಳಿಗೆ ಬಹಿರ್ದೆಸೆಗೆ ತೆರಳಿದ್ದೆವು. ರಾಹುಲ್ ಬಹಿರ್ದೆಸೆಗೆ ಸ್ವಲ್ಪ ದೂರ ತೆರಳಿ ನೀರಿಗಿಳಿದಿದ್ದ. ನದಿ ನೀರಿನ ಪ್ರವಾಹ ಹೆಚ್ಚಿತು. ರಾಹುಲ್ ನೀರಲ್ಲಿ ಮುಳುಗಿದ. ವಿಷಯವನ್ನು ನದಿ ಸಮೀಪದಲ್ಲಿದ್ದವರ ಗಮನಕ್ಕೆ …
Read More »ಗ್ರಾಮ ಪಂಚಾಯಿತಿಗಳು ವಿತರಿಸುವ ಇ-ಸ್ವತ್ತು ದಾಖಲೆಗಳ ಲೋಪ ಸರಿಪಡಿಸಲು ಪ್ರಿಯಾಂಕ್ ಖರ್ಗೆ ಸೂಚನೆ
ಬೆಂಗಳೂರು: ಗ್ರಾಮೀಣ ಪ್ರದೇಶಗಳ ಆಸ್ತಿಗಳಿಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿಗಳು ವಿತರಿಸುತ್ತಿರುವ ಇ- ಸ್ವತ್ತು ದಾಖಲೆ ವಿತರಣೆಯಲ್ಲಿ ಸಾಕಷ್ಟು ಲೋಪ ಕಂಡು ಬಂದಿದ್ದು, ಇದಕ್ಕೆ ಕಾರಣವಾದ ಕೇಂದ್ರ ಸರ್ಕಾರ ಎನ್ಐಸಿ ಸೇವೆ ಸುಧಾರಿಸಲು ಕ್ರಮ ಕೈಗೊಳ್ಳುವಂತೆ ಗ್ರಾಮೀಣ ಅಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ನೀಡಿದ್ದಾರೆ. ಇ- ಸ್ವತ್ತು ಕಾರ್ಯಕ್ರಮದ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಗ್ರಾಮೀಣ ರೈತರ ಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕಿದ್ದ ಇ- ಸ್ವತ್ತು ಕಾರ್ಯಕ್ರಮ ಕಳೆದ ಎಂಟು ತಿಂಗಳಿಂದ …
Read More »ರಾಜ್ಯ ಸರ್ಕಾರದಿಂದ ಮಹಿಳೆಯರಿಗಾಗಿ ಉದ್ಯೋಗಿನಿ ಯೋಜನೆಗೆ ಅರ್ಜಿ ಆಹ್ವಾನ
ಬಳ್ಳಾರಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ನಗರ ಶಿಶು ಅಭಿವೃದ್ದಿ ಯೋಜನೆಯಡಿ ಉದ್ಯೋಗಿನಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಸೆ.20ರೊಳಗಾಗಿ ಅರ್ಜಿ ಸಲ್ಲಿಸಬಹುದು ಎಂದು ಬಳ್ಳಾರಿ ನಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಳಿಸಿದ್ದಾರೆ. ಮಹಿಳೆಯರಿಗೆ ವ್ಯಾಪಾರ, ಸೇವಾ ಹಾಗೂ ಗುಡಿ ಕೈಗಾರಿಕ ಚಟುವಟಿಕೆಗಳಿಗೆ ಆರ್ಥಿಕ ನೀಡಲು ಉದ್ದೇಶಿಸಲಾಗಿದ್ದು, ಮಹಿಳಾ ಫಲಾನುಭವಿಗಳು ಬೆಂಗಳೂರು ಒನ್, ಕರ್ನಾಟಕ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





