Breaking News

BigTv News

ನಕಲಿ ಅಂಕಪಟ್ಟಿ ಸಲ್ಲಿಕೆ: ನೀರಾವರಿ ಇಲಾಖೆಯ ಹುದ್ದೆಗಳಲ್ಲಿ ಗೋಲ್ಮಾಲ್ ಆರೋಪ

ಬೆಂಗಳೂರು : ನೀರಾವರಿ ಇಲಾಖೆಯ ಹೊಸ ಆಯ್ಕೆ ಪಟ್ಟಿಯಲ್ಲಿ ಗೋಲ್ಮಾಲ್ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಹಲವು ಅಭ್ಯರ್ಥಿಗಳು ನಕಲಿ ದಾಖಲೆ ಸಲ್ಲಿಸಿ ಆಯ್ಕೆ ಪಟ್ಟಿಯಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ ಎಂಬ ಆರೋಪವಿದೆ. ಇದೇ ವರ್ಷ ಜೂನ್​ 27 ರಂದು ಹೊಸದಾಗಿ 182 ಅಭ್ಯರ್ಥಿಗಳ ತಾತ್ಕಾಲಿಕ ಅಂತಿಮ ಆಯ್ಕೆ ಪಟ್ಟಿ ಪ್ರಕಟವಾಗಿತ್ತು. ಆಯ್ಕೆಯಾದ 182 ಅಭ್ಯರ್ಥಿಗಳಲ್ಲಿ 62 ಜನರು ನಕಲಿ ಅಂಕಪಟ್ಟಿಯನ್ನು ನೀಡಿದ್ದಾರೆ ಎಂದು ಕೆಲ ಅಭ್ಯರ್ಥಿಗಳು ಆರೋಪ ಮಾಡಿದ್ದಾರೆ. 2022ರ …

Read More »

ಎತ್ತಿನಹೊಳೆ ಯೋಜನೆ: ವರದಿ ಸಲ್ಲಿಸುವಂತೆ ರಾಜ್ಯಕ್ಕೆ ನೋಟಿಸ್ ನೀಡಿದ ಕೇಂದ್ರಸರ್ಕಾರ

ಬೆಂಗಳೂರು: ಮೊನ್ನೆ ಅಷ್ಟೇ ಉದ್ಘಾಟನೆಗೊಂಡಿರುವ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಯೋಜನೆಗೆ ಕೇಂದ್ರ ಸರ್ಕಾರ ತಕರಾರು ಎತ್ತಿದೆ. ಎತ್ತಿನಹೊಳೆ ಯೋಜನೆಯಿಂದ ಪಶ್ಚಿಮ ಘಟ್ಟಕ್ಕೆ ಹಾನಿಯಾದ ಬಗ್ಗೆ ವರದಿ ಹಿನ್ನೆಲೆಯಲ್ಲಿ ಯೋಜನೆಯ ಕಾರ್ಯ ಸಾಧ್ಯತೆ ವರದಿ ಸಲ್ಲಿಸುವಂತೆ ಕೇಂದ್ರ ಅರಣ್ಯ, ಪರಿಸರ ಮತ್ತು ತಾಪಮಾನ ಸಚಿವಾಲಯ, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಕಂಚಿಗಾನಹಳ್ಳಿಯ ಸರ್ವೆ ಸಂಖ್ಯೆ 2, 30 ಹಾಗೂ ಯಲ್ಲಾಪುರ ಗ್ರಾಮದ ಸರ್ವೆ …

Read More »

ಭಾರತ ಮತ್ತು ಯುಎಇ ಬಾಂಧವ್ಯ ವೃದ್ಧಿಗಾಗಿ ದ್ವಿಪಕ್ಷೀಯ ಮಾತುಕತೆ

ನವದೆಹಲಿ:‌ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಅಬುಧಾಬಿ ಯುವರಾಜ ಶೇಖ್‌ ಖಾಲೀದ್‌ ಬಿನ್‌ ಝಾಯೆದ್‌ ಅಲ್‌ ನಹ್ಯಾನ್‌ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡು, ಭಾರತ ಮತ್ತು ಯುಎಇ ನಡುವಿನ ಬಾಂಧವ್ಯ ವೃದ್ಧಿಗಾಗಿ ಚರ್ಚೆ ನಡೆಸಿರುವುದಾಗಿ ವರದಿ ತಿಳಿಸಿದೆ. ಅಬು ಧಾಬಿ ಯುವರಾಜ ಶೇಖ್‌ ಖಾಲೀದ್‌ ಅವರು ಎರಡು ದಿನಗಳ ಭಾರತ ಪ್ರವಾಸ ಕೈಗೊಂಡಿದ್ದು, ಈ ಸಂದರ್ಭದಲ್ಲಿ ದ್ವಿಪಕ್ಷೀಯ ಮಾತುಕತೆ ನಡೆಸಿರುವುದಾಗಿ ವರದಿ ವಿವರಿಸಿದೆ. ನವದೆಹಲಿಯಲ್ಲಿನ ಹೈದರಾಬಾದ್‌ ಹೌಸ್‌ ನಲ್ಲಿ ಯುವರಾಜ …

Read More »

ಪತ್ರಿಕಾ ವಿತರಕರಿಗೆ ಸೌಲಭ್ಯ ನೀಡಲು ಸರ್ಕಾರ ಬದ್ಧ: ಸಚಿವ ಡಿ‌.ಸುಧಾಕರ್‌

ಚಿತ್ರದುರ್ಗ: ಚಳಿ, ಮಳೆ, ಬಿಸಿಲನ್ನು ಲೆಕ್ಕಿಸದೇ ಮನೆಮನೆಗೆ ಪತ್ರಿಕೆ ತಲುಪಿಸುವ ಪತ್ರಿಕಾ ವಿತರಕರಿಗೆ ಸೌಲಭ್ಯ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ. ಸೂರ್ಯ ಹುಟ್ಟುವುದಕ್ಕೂ ಮೊದಲೇ ಮನೆಮನೆಗೆ ಪತ್ರಿಕೆ ತಲುಪಿಸುವ ಅವರ ಸೇವೆ ಅನನ್ಯವಾದುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್‌ ತಿಳಿಸಿದರು. ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ, ಜಿಲ್ಲಾ ಕಾರ್ಯನಿತರ ಪತ್ರಿಕಾ ವಿತರಕರ ಸಂಘದ ವತಿಯಿಂದ ಇಲ್ಲಿನ ಮುರುಘಾಮಠದ ಅನುಭವ ಮಂಟಪದಲ್ಲಿ ಭಾನುವಾರ ನಡೆದ ಪತ್ರಿಕಾ ವಿತರಕರ 4ನೇ ರಾಜ್ಯ …

Read More »

ಭಾರೀ ಮಳೆ: ಸಿಡಿಲು ಬಡಿದು 7 ಜನರು ಸಾವು

ಬಲೋದಬಜಾರ್: ಸಿಡಿಲು ಬಡಿದು ಏಳು ಜನರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ಛತ್ತೀಸ್‌ಗಢದ ಬಲೋದಬಜಾರ್ ಭಟಪರಾ ಜಿಲ್ಲೆಯಲ್ಲಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೊಹ್ತಾರಾ ಗ್ರಾಮದಲ್ಲಿ ಭಾನುವಾರ ಸಂಜೆ ಈ ದುರ್ಘಟನೆ ನಡೆದಿದ್ದು, ಮೃತರೆಲ್ಲರೂ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದಿದೆ ಎಂದು ಜಿಲ್ಲಾಡಳಿತದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಈ ವ್ಯಕ್ತಿಗಳು ಸಿಡಿಲು ಬಡಿದಾಗ ಭಾರಿ ಮಳೆಯ ನಡುವೆ ತಮ್ಮ ಹೊಲದ ಬಳಿಯ ಕೆರೆಯಂಚಿನಲ್ಲಿದ್ದರು ಎನ್ನಲಾಗಿದೆ. ಗಾಯಗೊಂಡ …

Read More »

ಹಣಕಾಸು ಸಚಿವರ ನೇತೃತ್ವದಲ್ಲಿ ಜಿಎಸ್‌ಟಿ ಮಂಡಳಿ ಸಭೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ಅಧ್ಯಕ್ಷತೆಯಲ್ಲಿ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಮಂಡಳಿಯ 54ನೇ ಸಭೆ ಸೋಮವಾರ ನಡೆಯಲಿದೆ. ಈ ಸಭೆಯು ರಾಜ್ಯಗಳ ಹಣಕಾಸು ಸಚಿವರನ್ನು ಒಳಗೊಂಡಿರಲಿದೆ. ವಿಮಾ ಕಂತುಗಳ ಮೇಲಿನ ತೆರಿಗೆ, ಜಿಎಸ್‌ಟಿ ಬೆಲೆ ಇಳಿಕೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವರ ಸಲಹೆಗಳ ಬಗ್ಗೆ ಮತ್ತು ಆನ್‌ಲೈನ್ ಗೇಮಿಂಗ್ ಕುರಿತ ವಾಸ್ತವಿಕ ವರದಿಯ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸುವ ನಿರೀಕ್ಷೆ ಇದೆ, ಕೇಂದ್ರ ಮತ್ತು …

Read More »

ಕೃಷಿ ಇಲಾಖೆ: ಯಂತ್ರೋಪಕರಣಗಳನ್ನು ಖರೀದಿಸಲು ಸಬ್ಸಿಡಿ ದರದಲ್ಲಿ ಸಹಾಯಧನ ಸೌಲಭ್ಯ

ಬೆಂಗಳೂರು: ಕೃಷಿ ಇಲಾಖೆಯಿಂದ 2024-25ನೇ ಸಾಲಿನಲ್ಲಿ ಸಹಾಯಧನ ಯೋಜನೆಯಡಿ ಮಿನಿ ಟ್ರ್ಯಾಕ್ಟರ್, ಟಿಲ್ಲರ್, ಪವರ್ ವೀಡರ್ ಸೇರಿದಂತೆ ಇತರೆ ಯಂತ್ರೋಪಕರಣಗಳನ್ನು ಖರೀದಿಸಲು ಸಬ್ಸಿಡಿ ದರದಲ್ಲಿ ಸಹಾಯಧನ ಸೌಲಭ್ಯಕ್ಕಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕೃಷಿ ಯಾಂತ್ರೀಕರಣ, ಕೃಷಿ ಸಂಸ್ಕರಣ ಯೋಜನೆಯಡಿ ಸಾಮಾನ್ಯ ವರ್ಗದ ರೈತರಿಗೆ ಶೇ.50 ರವರೆಗೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ರೈತರಿಗೆ ಶೇ.90 ವರೆಗೆ ಸಹಾಯಧನ ನೀಡಲಾಗುತ್ತದೆ. ಸೂಕ್ಷ್ಮ ನೀರಾವರಿ ಯೋಜನೆಯಡಿ ತುಂತುರು ನೀರಾವರಿ ಘಟಕಗಳಿಗೆ …

Read More »

ಕೃಷಿ ಭಾಗ್ಯ ಯೋಜನೆ: ರೈತರಿಗೆ ಸಹಾಯಧನ ಸೌಲಭ್ಯ

ಹೊಸಪೇಟೆ: ಪ್ರಸ್ತುತ ವರ್ಷದಲ್ಲಿ ಜಿಲ್ಲೆಯ ಒಟ್ಟು 6 ತಾಲ್ಲೂಕುಗಳಲ್ಲಿ ರಾಜ್ಯ ವಿಪತ್ತು ನಿರ್ವಹಣಾ ನಿಧಿ ಹಾಗೂ ಕೃಷಿ ಭಾಗ್ಯ ಯೋಜನೆಯನ್ನು ಸಾಮಾನ್ಯ ವರ್ಗದ ರೈತರಿಗೆ 80 ರಷ್ಟು ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ರೈತರಿಗೆ 90 ರಷ್ಟು ಸಹಾಯಧನದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಕ್ಷೇತ್ರ ಬದು ನಿರ್ಮಾಣದಲ್ಲಿ ಸಾಮಾನ್ಯರಿಗೆ 80 ರಷ್ಟು, ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ 90 ರಷ್ಟು ಸಹಾಯಧನ ನೀಡಲಾಗುವುದು. ನೀರು ಸಂಗ್ರಹಣಾ ರಚನೆಗೆ ಸಾಮಾನ್ಯರಿಗೆ 80 ರಷ್ಟು, …

Read More »

ನಕಲಿ ಆಧಾರ್ ಕಾರ್ಡ್ ಬಳಕೆ: ಅಕ್ರಮವಾಗಿ ಬೇರೊಬ್ಬರಿಗೆ ಜಮೀನು ನೋಂದಣಿ

ಹಾಸನ: ಜಿಲ್ಲೆಯ ಅರಕಲಗೂಡು ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ನಕಲಿ ಆಧಾರ್ ಕಾರ್ಡ್ ಬಳಸಿಕೊಂಡು ಮೂಲ ರೈತನ ಗಮನಕ್ಕೆ ಬಾರದೆ ಜಮೀನನ್ನು ಬೇರೊಬ್ಬರಿಗೆ ಕ್ರಯ, ನೋಂದಣಿ ಮಾಡಿದ ಘಟನೆ ನಡೆದಿದೆ. ಅರಕಲಗೂಡು ತಾಲೂಕು ರಾಮನಾಥಪುರ ಹೋಬಳಿ ಜಿಟ್ಟೇನಹಳ್ಳಿ ಗ್ರಾಮದ ಸರ್ವೆ ನಂಬರ್ 32/6, 32/35ರಲ್ಲಿ ತಲಾ 8.8 ಗುಂಟೆ ಭೂಮಿ ಶ್ರೀನಿವಾಸ ಬಿನ್ ಜವರೇಗೌಡ, ರೇವಣ್ಣ ಬಿನ್ ಜವರೇಗೌಡ ಸಹೋದರರಿಗೆ ಪಿತ್ರಾರ್ಜಿತ ಆಸ್ತಿಯಾಗಿ ಬಂದಿದೆ. ಈ ಜಮೀನನ್ನು ಅವರಿಗೆ ತಿಳಿಯದಂತೆ ಕೊಣನೂರು …

Read More »

ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್

ಬೆಳಗಾವಿ: ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ ಜೋರಾಗಿದೆ. ಕರ್ನಾಟಕದಲ್ಲಿಯೂ ಹಲವು ಕಡೆ ಗಣೇಶೋತ್ಸವ ಆಚರಣೆ ಮಾಡುವ ಸಮಿತಿಗಳು ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿವೆ, ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು ಬೆಳಗಾವಿಯಲ್ಲಿಯೂ ಗಣೇಶ ಹಬ್ಬದ ಸಂಭ್ರಮ ಜೋರಾಗಿದೆ. ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಡಿಸಿ ಮೊಹಮ್ಮದ್ ರೋಷನ್ ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ್ದಾರೆ. ಕಛೇರಿಯಲ್ಲಿ ಪರಿಸರ ಸ್ನೇಹಿಯಾದ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿದರು. ಇದಕ್ಕೂ ಮೊದಲು ಅವರು ಗಣೇಶ ಮೂರ್ತಿಗೆ ನಗರದ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿರುವ ಗಣಪತಿ‌ ದೇವಸ್ಥಾನದಲ್ಲಿ …

Read More »