ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿ ಒಟ್ಟು 386 ಕಡೆ ಸಾರ್ವಜನಿಕ ಗಣೇಶೋತ್ಸವ ಜರಗಲಿದ್ದು ಇದರಲ್ಲಿ 30 ಕಡೆಗಳ ಗಣೇಶೋತ್ಸವ ಮೆರವಣಿಗೆಗಳನ್ನು ಅತೀ ಸೂಕ್ಷ್ಮವೆಂದು ಪೊಲೀಸ್ ಇಲಾಖೆ ಗುರುತಿಸಿದೆ. ಮಂಗಳೂರು ನಗರ ಪೊಲೀಸ್ ಕಮಿಷನರೆಟ್ ವ್ಯಾಪ್ತಿಯಲ್ಲಿ ಸೆ. 6ರಿಂದ ಸೆ.17ರ ವರೆಗೆ ಒಟ್ಟು 165 ಕಡೆ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿ ವಿಸರ್ಜನೆ ಮಾಡಲಾಗುತ್ತದೆ ಇದರಲ್ಲಿ 22 ಅತೀ ಸೂಕ್ಷ್ಮ, 64 ಸೂಕ್ಷ್ಮ ಮತ್ತು 79 ಸಾಮಾನ್ಯ ಗಣೇಶ …
Read More »ಶಾಲಾ ಮಕ್ಕಳಿಗೆ ವಾರದ 6 ದಿನವೂ ಮೊಟ್ಟೆ, ಚಿಕ್ಕಿ ಅಥವಾ ಬಾಳೆಹಣ್ಣು: ಸಚಿವ ಮಧು ಬಂಗಾರಪ್ಪ
ಬೆಂಗಳೂರು: ರಾಜ್ಯದಲ್ಲಿ ಸೆ.15 ಅಥವಾ 20ರ ನಂತರ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜತೆ ವಾರವಿಡೀ ಮೊಟ್ಟೆ, ಚಿಕ್ಕಿ ಅಥವಾ ಬಾಳೆಹಣ್ಣು ನೀಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿ, 6 ದಿನ ಹಾಲು, ರಾಗಿ ಮಾಲ್ಟ್, ಬಿಸಿಯೂಟ ಸಿಗುತ್ತಿದೆ ವಾರದಲ್ಲಿ ಒಂದು ದಿನ ಸಿಗುತ್ತಿರುವ ಮೊಟ್ಟೆಯನ್ನು 2 ದಿನ ನೀಡಲಾಗುತ್ತಿದೆ. ಅಜೀಂ ಪ್ರೇಮ್ಜೀ ಪ್ರತಿಷ್ಠಾನ ಜತೆ ಮಾಡಿಕೊಂಡಿರುವ ಒಪ್ಪಂದ ಪ್ರಕಾರ, 1,500 ಕೋಟಿ ರೂ. …
Read More »ಪಂಚಮಸಾಲಿ ಮೀಸಲಾತಿಗಾಗಿ ಬೃಹತ್ ಕಾನೂನು ಹೋರಾಟಕ್ಕೆ ಸಿದ್ದತೆ: ಜಯಮೃತ್ಯುಂಜಯ ಸ್ವಾಮೀಜಿ
ಗದಗ: ವಕೀಲರ ಮೂಲಕ ಪಂಚಮಸಾಲಿ ಮೀಸಲಾತಿ ಎರಡನೇ ಹಂತದ ಹೋರಾಟಕ್ಕೆ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ ಎಂದು ಪಂಚಮಸಾಲಿ ಕೂಡಲಸಂಗಮ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ಗದಗನಲ್ಲಿಂದು ವಕೀಲರ ಪೂರ್ವಭಾವಿ ಸಭೆ ನಡೆಸಿದ ಸ್ವಾಮೀಜಿ 2 ಎ ಮೀಸಲಾತಿ ಬಗ್ಗೆ ಸ್ಪಷ್ಟತೆ ಪಡೆಯಲು ವಕೀಲರ ಸಂಘಟನೆಗೆ ಕರೆ ನೀಡಿದರು. ಸೆಪ್ಟೆಂಬರ್ 22 ನೇ ತಾರೀಖು ಬೆಳಗಾವಿಯ ಗಾಂಧಿ ಭವನದಲ್ಲಿ ಪಂಚಮಸಾಲಿ ವಕೀಲರ ಪರಿಷತ್ ಆಯೋಜನೆ ಮಾಡಲಾಗಿದೆ ಸದನದಲ್ಲಿ ಸಮಾಜದ ಶಾಸಕರು ಈ ಕುರಿತು …
Read More »ಪ್ರವಾಹ ಸಂತ್ರಸ್ತರ ನೆರವಿಗಾಗಿ ದೇಣಿಗೆ ನೀಡಿದ ಪವನ್ ಕಲ್ಯಾಣ್
ಅಮರಾವತಿ: ಆಂಧ್ರ ಪ್ರದೇಶದಲ್ಲಿ ಏರ್ಪಟ್ಟಿರುವ ಪ್ರವಾಹದಿಂದ ಜನ ತತ್ತರಿಸಿ ಹೋಗಿದ್ದು, ಟಾಲಿವುಡ್ ಸೆಲಬ್ರಿಟಿಗಳು ಸಂತ್ರಸ್ತರ ನೆರವಿಗೆ ಧಾವಿಸಿದ್ದಾರೆ. ಇದೀಗ ಸರ್ಕಾರದ ಭಾಗವೇ ಆಗಿರುವ ಉಪಮುಖ್ಯಮಂತ್ರಿ, ನಟ ಪವನ್ ಕಲ್ಯಾಣ್ ಭಾರಿ ದೇಣಿಗೆಯನ್ನು ಘೋಷಿಸಿದ್ದಾರೆ. ತಮ್ಮ ಸ್ವಂತ ನಿಧಿಯಿಂದ ಪ್ರವಾಹ ಸಂತ್ರಸ್ತರಿಗಾಗಿ ಆಂಧ್ರದ 400 ಪಂಚಾಯತಿಗಳಿಗೆ ತಲಾ 1 ಲಕ್ಷ ರೂ.ಗಳಂತೆ 4 ಕೋಟಿ ರೂಪಾಯಿ ದೇಣಿಗೆ ನೀಡುವುದಾಗಿ ಘೋಷಿಸಿದ್ದಾರೆ. ಈ ಹಣವನ್ನು ನೇರವಾಗಿ ಆಯಾ ಪಂಚಾತಿಗಳ ಬ್ಯಾಂಕ್ ಖಾತೆಗೆ ಜಮೆ …
Read More »ಭಾರತ ಜೋಡೋ ಯಾತ್ರೆ ನನಗೆ ಮೌನದ ಸೌಂದರ್ಯವನ್ನು ಕಲಿಸಿತು: ರಾಹುಲ್ ಗಾಂಧಿ
ನವದೆಹಲಿ: ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಎರಡು ವರ್ಷಗಳ ಹಿಂದೆ ನಡೆದ ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆ ಭಾರೀ ಸದ್ದು ಮಾಡಿ ಅದು ಚುನಾವಣೆಯಲ್ಲಿ ಪಕ್ಷಕ್ಕೆ ಸಹಾಯ ಮಾಡಿತು ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ. ಇಂದು ಎರಡನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಸ್ಮರಿಸಿಕೊಂಡಿರುವ ರಾಹುಲ್ ಗಾಂಧಿ, ಭಾರತೀಯರು ಅಂತರ್ಗತವಾಗಿ ಜನರನ್ನು ಪ್ರೀತಿಸುತ್ತಾರೆ ಎಂಬುದನ್ನು ಯಾತ್ರೆ ಸಾಬೀತುಪಡಿಸಿತ್ತು. ದೇಶದ ಪ್ರತಿಯೊಂದು ಮೂಲೆಯಲ್ಲಿ ಪ್ರೀತಿಯ ಧ್ವನಿಯನ್ನು ಕೇಳಿಸಿಕೊಳ್ಳುವುದು ನಮ್ಮ ಧ್ಯೇಯವಾಗಿದೆ …
Read More »ಜಮೀನಿನ ಪಹಣಿ ಪತ್ರಕ್ಕೆ ಆಧಾರ್ ಜೋಡಣೆ ಕಡ್ಡಾಯ
ಬೆಂಗಳೂರು : ರಾಜ್ಯ ಸರ್ಕಾರವು ರೈತರಿಗೆ ಮುಖ್ಯ ಮಾಹಿತಿಯೊಂದನ್ನು ನೀಡಿದ್ದು, ರೈತರು ತಮ್ಮ ಜಮೀನಿನ ಪಹಣಿ ಪತ್ರಕ್ಕೆ ಆಧಾರ್ ಕಾರ್ಡ್ ಸಂಖ್ಯೆಯನ್ನು ಜೋಡಣೆ ಮಾಡುವುದು ಕಡ್ಡಾಯವಾಗಿರುತ್ತದೆ. ರೈತರು ಸರ್ಕಾರದ ಯಾವುದೇ ಸೌಲಭ್ಯದ ಫಲಾನುಭವಿಯಾಗಲು ರೈತರು ತಮ್ಮ ಆರ್ಟಿಸಿ ಗೆ ಆಧಾರ್ ಸಂಖ್ಯೆಯನ್ನು ಜೋಡಿಸಬೇಕು, ಈ ಕುರಿತು ಸರ್ಕಾರ ಹೊಸ ತಂತ್ರಾಂಶವನ್ನು ಅಭಿವೃದ್ದಿಪಡಿಸಿದ್ದು ಇದನ್ನು ರೈತರು ತಮ್ಮ ಮೊಬೈಲ್ ಮೂಲಕ ಅಥವಾ ಸಂಬಂಧಿಸಿದ ಗ್ರಾಮ ಆಡಳಿತ ಅಧಿಕಾರಿಗಳನ್ನು ಭೇಟಿ ಮಾಡಿ ಸದರಿ …
Read More »ಜಲಾಶಯಕ್ಕೆ ಬಾಗಿನ ಸಮಯದಲ್ಲಿ ಆಯತಪ್ಪಿದ ಸಚಿವರು: ಸ್ವಲ್ಪದರಲ್ಲೇ ಬಚಾವ್
ಬೀದರ್ : ಬೀದರ್ ಜಿಲ್ಲೆಯ ಕಾರಂಜಾ ಜಲಾಶಯ ತುಂಬಿ ಹರಿಯುತ್ತಿದ್ದು, ಸಚಿವ ಈಶ್ವರ್ ಖಂಡ್ರೆ ನದಿಗೆ ಬಾಗಿನ ಅರ್ಪಿಸಲು ಬಂದಿದ್ದರು. ಈ ವೇಳೆ ಸಚಿವ ಈಶ್ವರ್ ಖಂಡ್ರೆ ಆಯಾತಪ್ಪಿ ಮುಗ್ಗರಿಸಿ ಸ್ವಲ್ಪದರಲ್ಲೇ ಜಲಾಶಯಕ್ಕೆ ಬಿಳುವುದರಲ್ಲಿ ಬಚಾವ್ ಆಗಿದ್ದಾರೆ. 7.69 ಸಾಮರ್ಥ್ಯದ ಕಾರಂಜಾ ಜಲಾಶಯ ಈಗಾಗಲೇ ಸುಮಾರು 93ರಷ್ಟು ಭರ್ತಿಯಾಗಿದೆ, ಜಲಾಶಯ ಭರ್ತಿಯಾಗಿರುವ ಹಿನ್ನೆಲೆ ಕಾರಂಜಾ ಜಲಾಶಯಕ್ಕೆ ಸಚಿವ ಈಶ್ವರ್ ಖಂಡ್ರೆ ಬಾಗಿನ ಅರ್ಪಿಸಲು ಆಗಮಿಸಿದ್ದರು. ಈ ವೇಳೆ ಜಲಾಶಯಕ್ಕೆ ಪೂಜೆ …
Read More »ಗಣೇಶ ತರಲು ಹೋದಾಗ ಟಾಟಾ ಏಸ್ ಪಲ್ಟಿ: ಇಬ್ಬರು ಯುವಕರು ಸಾವು
ಚಿಕ್ಕಮಗಳೂರು: ವಿಘ್ನ ನಿವಾರಕ ಗಣೇಶನ ಮೂರ್ತಿಯನ್ನು ತರಲು ಹೋಗುತ್ತಿದ್ದ ವೇಳೆ ಟಾಟಾ ಏಸ್ ಪಲ್ಟಿಯಾದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನ ಭೈರಾಪುರ ಗೇಟ್ ಬಳಿ ನಡೆದಿದೆ. ಮೃತರನ್ನು ಲಿಂಗದಹಳ್ಳಿ ನಿವಾಸಿಗಳಾದ ಶ್ರೀಧರ್ (20) ಮತ್ತು ಧನುಷ್ (20) ಎಂದು ಗುರುತಿಸಲಾಗಿದ್ದು, ಭೈರಾಪುರ ಗೇಟ್ ಬಳಿ ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ಪಲ್ಟಿಯಾಗಿದೆ. ಈ ಕುರಿತು ಮಾತನಾಡಿರುವ ಹಿರಿಯ …
Read More »ಕೇಂದ್ರದಿಂದ ರಸ್ತೆ ಮೂಲಸೌಕರ್ಯ ಯೋಜನೆ ಮೌಲ್ಯಮಾಪನ: ರಾಜ್ಯಕ್ಕೆ 2 ಹೈವೆ ಯೋಜನೆಗಳು
ನವದೆಹಲಿ: ಪ್ರಧಾನ ಮಂತ್ರಿ ಗತಿ ಶಕ್ತಿ ಅಡಿಯಲ್ಲಿ ನೆಟ್ವರ್ಕ್ ಪ್ಲಾನಿಂಗ್ ಗ್ರೂಪ್ ಪ್ರಮುಖ ಸಭೆ ನಡೆಸಿದ್ದು, ಇದರಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯವು 18 ನಿರ್ಣಾಯಕ ರಸ್ತೆ ಮೂಲಸೌಕರ್ಯ ಯೋಜನೆಗಳನ್ನು ಮೌಲ್ಯಮಾಪನ ಮಾಡಿದೆ. ಹೊಸ ಹೆದ್ದಾರಿ ಯೋಜನೆಗಳನ್ನು ಪ್ರಸ್ತಾಪಿಸಿದ್ದು, ಇದರಲ್ಲಿ ಎರಡು ಹೈವೇ ಯೋಜನೆಗಳು ಕರ್ನಾಟಕಕ್ಕೆ ಬರಲಿವೆ ಎಂದು ಸಚಿವಾಲಯ ತಿಳಿಸಿದೆ, ಸಚಿವಾಲಯದ ಪ್ರಕಾರ, ಕರ್ನಾಟಕದ ಬೆಳಗಾವಿ ಹಾಗೂ ತುಮಕೂರು ಜಿಲ್ಲೆಗಳ ವ್ಯಾಪ್ತಿಯಲ್ಲಿ ಹತ್ತಾರು ಕಿಲೋ ಮೀಟರ್ …
Read More »ಟಿವಿ ಚಾನೆಲ್ಗಳಿಗೆ ಆಘಾತ ನೀಡಿದ ಕಾಂಗ್ರೆಸ್ ಸರ್ಕಾರ
ಬೆಂಗಳೂರು: ಕನ್ನಡ ನ್ಯೂಸ್ ಚಾನೆಲ್ಗಳ ಸಂಖ್ಯೆ ಈಗ ನೂರಕ್ಕೆ ತಲುಪಲು ಸಜ್ಜಾಗಿದ್ದು, ಎಲ್ಲೆಲ್ಲೂ ಈ ಬಗ್ಗೆ ಚರ್ಚೆ ನಡೆಯುತ್ತಿದೆ. ಹೀಗಿದ್ದಾಗ ಬಹುತೇಕ ನ್ಯೂಸ್ ಚಾನೆಲ್ಗಳು ಕಾಂಗ್ರೆಸ್ ವಿರುದ್ಧ ಉದ್ದೇಶ ಇಟ್ಟುಕೊಂಡೇ ಸುದ್ದಿ ಮಾಡುತ್ತಿವೆ ಎಂಬ ಆರೋಪ ಕಾಂಗ್ರೆಸ್ ನಾಯಕರದ್ದು. ಈ ಬೆಳವಣಿಗೆ ನಡುವೆ ಕರ್ನಾಟಕ ಕಾಂಗ್ರೆಸ್ ನಾಯಕರು ಟಿವಿ ಚಾನೆಲ್ಗಳಿಗೆ ಆಘಾತ ನೀಡಲು ಸಜ್ಜಾಗಿದ್ದು, ಟಿವಿ ಚಾನೆಲ್ಗಳ ವಿರುದ್ಧ ಹೊಸ ಬ್ರಹ್ಮಾಸ್ತ್ರ ಸಿದ್ಧಪಡಿಸಿದ್ದಾರೆ. ಅಂದಹಾಗೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





