ಕಲಬುರಗಿ: ಪೊಲೀಸರು, ಸರ್ಕಾರಿ ಅಧಿಕಾರಿಗಳು, ಉದ್ಯಮಿಗಳನ್ನೇ ಟಾರ್ಗೆಟ್ ಮಾಡಿ ಹನಿ ಟ್ರ್ಯಾಪ್ ಖೆಡ್ಡಾಗೆ ಕೆಡವುತ್ತಿದ್ದ ಗುಂಪಿನ ವಿರುದ್ಧ ಕಲಬುರ್ಗಿಯಲ್ಲಿ ಪ್ರಕರಣ ದಾಖಲಾಗಿದೆ. ಕಲಬುರ್ಗಿಯ ಸ್ಟೇಷನ್ ಬಜಾರ್ ಠಾಣೆಯಲ್ಲಿ ದಲಿತ ಸೇನೆಯ ಹಣಮಂತ ಯಳಸಂಗಿ, ಪ್ರಭು ಹಿರೇಮಠ, ರಾಜು ಲೆಂಗಟಿ, ಶ್ರೀಕಾಂತ್ ರೆಡ್ಡಿ, ಮಂಜು ಭಂಡಾರಿ ಸೇರಿದತೆ 8 ಜನರ ವಿರುದ್ಧ ಹನಿಟ್ರ್ಯಾಪ್ ಆರೋಪದಲ್ಲಿ ಪ್ರಕರಣ ದಾಖಲಾಗಿದೆ, ಸಾಮಾಜಿಕ ಜಾಲತಾಣಗಳ ಮೂಲಕ ಯುವತಿಯರನ್ನು ಪರಿಚಿಸಿಕೊಂಡು ಆರ್ಥಿಕವಾಗಿ ಸಂಕಷ್ಟದಲ್ಲಿರುವ ಯುವತಿಯರಿಗೆ ಹಣದ ಆಮಿಷವೊಡ್ಡಿ, …
Read More »ಪತಿಯ ಅನೈತಿಕ ಸಂಬಂಧಕ್ಕೆ ಮನನೊಂದ ಪತ್ನಿ ಆತ್ಮಹತ್ಯೆಗೆ ಶರಣು
ಬೆಂಗಳೂರು : ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಹುಳಿಮಾವಿನ ಅಕ್ಷಯನಗರದಲ್ಲಿ ನಡೆದಿದೆ. ಕಳೆದ 2 ದಿನಗಳ ಹಿಂದೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಅನುಷಾ ಗಂಭೀರವಾಗಿ ಗಾಯಗೊಂಡಿದ್ದರು ಆದರೆ ಚಿಕಿತ್ಸೆ ಫಲಿಸದೇ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ, ಕೌಟುಂಬಿಕ ಕಲಹದ ಹಿನ್ನೆಲೆ ಹಾಗೂ ಪತಿಯ ಅನೈತಿಕ ಸಂಬಂಧಕ್ಕೆ ಮನನೊಂದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
Read More »ಮಣಿಪುರದಲ್ಲಿ ಕುಕಿ ಮತ್ತು ಮೈಟಿ ಗುಂಪುಗಳ ನಡುವೆ ಗುಂಡಿನ ದಾಳಿ: ಐವರು ಸಾವು
ನವದೆಹಲಿ: ಈಶಾನ್ಯ ರಾಜ್ಯದಲ್ಲಿ ಹೊಸ ಹಿಂಸಾಚಾರದ ಮಧ್ಯೆ ಜಿರಿಬಾಮ್ ಜಿಲ್ಲೆಯ ಕುಕಿ ಮತ್ತು ಮೈಟಿ ಗುಂಪುಗಳ ನಡುವೆ ಶನಿವಾರ ಮುಂಜಾನೆ ಸಂಭವಿಸಿದ ಗುಂಡಿನ ಚಕಮಕಿಯಲ್ಲಿ ಐದು ಜನರು ಸಾವನ್ನಪ್ಪಿದ್ದಾರೆ. ನಿದ್ರೆಯಲ್ಲಿ ಒಬ್ಬ ವ್ಯಕ್ತಿಯನ್ನು ಗುಂಡಿಕ್ಕಿ ಕೊಲ್ಲಲಾಗಿದ್ದು, ನಂತರದ ಗುಂಡಿನ ಚಕಮಕಿಯಲ್ಲಿ ನಾಲ್ವರು ಸಶಸ್ತ್ರ ವ್ಯಕ್ತಿಗಳು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲಾ ಕೇಂದ್ರದಿಂದ ಸುಮಾರು 5 ಕಿ.ಮೀ ದೂರದಲ್ಲಿರುವ ನಿರ್ಜನ ಪ್ರದೇಶದಲ್ಲಿ ಏಕಾಂಗಿಯಾಗಿ ವಾಸಿಸುತ್ತಿದ್ದ ವ್ಯಕ್ತಿಯ ಮನೆಗೆ ನುಗ್ಗಿದ ಉಗ್ರರು …
Read More »ಜೈವಿಕ ತಂತ್ರಜ್ಞಾನ ನೀತಿ ಪ್ರಕಟ: ತಂತ್ರಜ್ಞಾನ ಕ್ಷೇತ್ರದಲ್ಲಿ ಉದ್ಯೋಗ ಸೃಷ್ಟಿ
ಬೆಂಗಳೂರು: ರಾಜ್ಯವನ್ನು ಜಾಗತಿಕ ಜೈವಿಕ ತಂತ್ರಜ್ಞಾನ ಉತ್ಪಾದನಾ ಕೇಂದ್ರವನ್ನಾಗಿಸುವ ಗುರಿ ಹೊಂದಲಾಗಿದ್ದು, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ 2024 -29 ನೇ ಸಾಲಿನ ಜೈವಿಕ ತಂತ್ರಜ್ಞಾನ ನೀತಿಯನ್ನು ಪ್ರಕಟಿಸಿದೆ. ಇದರೊಂದಿಗೆ 2029ರ ವೇಳೆಗೆ ಜೈವಿಕ ತಂತ್ರಜ್ಞಾನ ಕ್ಷೇತ್ರದಲ್ಲಿ 30,000 ಉದ್ಯೋಗ ಸೃಷ್ಟಿ, 20,000 ಜನರಿಗೆ ವಿಶೇಷ ಕೌಶಲ್ಯ ತರಬೇತಿ ನೀಡುವ ಗುರಿ ಹೊಂದಲಾಗಿದೆ ರಾಜ್ಯದ ಜೈವಿಕ ತಂತ್ರಜ್ಞಾನ ಕ್ಷೇತ್ರಕ್ಕೆ ಹೊಸ ನವೋದ್ಯಮ, ಸೂಕ್ಷ್ಮ ಸಣ್ಣ ಮತ್ತು ಮಧ್ಯಮ …
Read More »ಭಾರತದ ಅಗ್ನಿ 4 ಬ್ಯಾಲಿಸ್ಟಿಕ್ ಕ್ಷಿಪಣಿಯ ಪರೀಕ್ಷೆ ಯಶಸ್ವಿ
ನವದೆಹಲಿ : ಒಡಿಶಾ ಕರಾವಳಿಯ ಚಂಡೀಪುರದಲ್ಲಿರುವ ಇಂಟಿಗ್ರೇಟೆಡ್ ಟೆಸ್ಟ್ ರೇಂಜ್ನಿಂದ ಭಾರತ ಶುಕ್ರವಾರ ಅಗ್ನಿ 4 ಮಧ್ಯಮ ಶ್ರೇಣಿಯ ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷಿಸಿದೆ. ಈ ಪರೀಕ್ಷೆಯಲ್ಲಿ ಅಗ್ನಿ ಕ್ಷಿಪಣಿ ನಿಗದಿತ ಮಾನದಂಡಗಳನ್ನು ಪೂರೈಸಿದೆ ಇದು ವಾಡಿಕೆಯ ತರಬೇತಿ ಉಡಾವಣೆಯಾಗಿದೆ ಎಂದು ಸ್ಟ್ರಾಟೆಜಿಕ್ ಫೋರ್ಸಸ್ ಕಮಾಂಡ್ ಹೇಳಿದೆ. ಇದರಲ್ಲಿ ಎಲ್ಲಾ ಕಾರ್ಯಾಚರಣೆಯ ನಿಯತಾಂಕಗಳನ್ನು ಮರು ಪರಿಶೀಲಿಸಲಾಗಿದೆ. ಭಾರತವು ಈ ಪರೀಕ್ಷೆಯ ಮೂಲಕ ತನ್ನ ವಿಶ್ವಾಸಾರ್ಹ ಕನಿಷ್ಠ ನಿರೋಧಕ ಸಾಮರ್ಥ್ಯವನ್ನು ಕಾಪಾಡಿಕೊಳ್ಳುತ್ತದೆ …
Read More »ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಡಿಪ್ಲೊಮಾ ಅತ್ಯಗತ್ಯ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ನವದೆಹಲಿ : ಮಹತ್ವದ ತೀರ್ಪಿನಲ್ಲಿ, ಭಾರತದ ಸರ್ವೋಚ್ಚ ನ್ಯಾಯಾಲಯವು ಶಿಕ್ಷಣದಲ್ಲಿ ಪದವಿ (ಬಿ.ಎಡ್) ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಮಾನ್ಯವಾದ ಅರ್ಹತೆ ಅಲ್ಲ, ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಪ್ರಾಥಮಿಕ ಶಿಕ್ಷಣದಲ್ಲಿ ಡಿಪ್ಲೊಮಾ ಅತ್ಯಗತ್ಯ ಅರ್ಹತೆ ಎಂದು ಸುಪ್ರೀಂ ಕೋರ್ಟ್ ಪುನರುಚ್ಚರಿಸಿದೆ. ನ್ಯಾಯಮೂರ್ತಿ ಅನಿರುದ್ಧ ಬೋಸ್ ಮತ್ತು ನ್ಯಾಯಮೂರ್ತಿ ಸುಧಾಂಶು ಧುಲಿಯಾ ಅವರನ್ನೊಳಗೊಂಡ ಪೀಠವು ದೇವೇಶ್ ಶರ್ಮಾ ವರ್ಸಸ್ ಯೂನಿಯನ್ ಆಫ್ ಇಂಡಿಯಾ ಪ್ರಕರಣದಲ್ಲಿ ಹಿಂದಿನ ತೀರ್ಪನ್ನು ಉಳಿಸಿಕೊಂಡು ತೀರ್ಪು ನೀಡಿದೆ …
Read More »7 ನೇ ವೇತನ ಆಯೋಗದ ಡಿಎ ಹೆಚ್ಚಳ: ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿಸುದ್ದಿ
ನವದೆಹಲಿ: 7ನೇ ವೇತನ ಆಯೋಗದ ಶಿಫಾರಸಿನಂತೆ ಕೇಂದ್ರ ಸರಕಾರಿ ನೌಕರರಿಗೆ ಸಂತಸದ ಸುದ್ದಿ ಸಿಗಲಿದ್ದು ಈ ತಿಂಗಳಿನಿಂದ ಡಿಎ ಹೆಚ್ಚಳವಾಗಲಿದೆ. ಡಿಎ ಹೆಚ್ಚಳಕ್ಕಾಗಿ ಹಲವು ದಿನಗಳಿಂದ ಕಾಯುತ್ತಿದ್ದು ಹೆಚ್ಚಿದ ಡಿಎಯನ್ನು ಅವರು ದಸರಾ ಮೊದಲು ಪಡೆಯಲಿದ್ದಾರೆ. 7ನೇ ವೇತನ ಆಯೋಗದ ಡಿಎ ಹೆಚ್ಚಳದಿಂದ ಕೇಂದ್ರ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರ ಮತ್ತೊಂದು ಸಿಹಿಸುದ್ದಿ ನೀಡುತ್ತಿದೆ ಹೊಸ ಪಿಂಚಣಿ ಯೋಜನೆಗೆ ಬದಲಾಗಿ ಏಕೀಕೃತ ಪಿಂಚಣಿ ಯೋಜನೆ ಜಾರಿಗೆ ತಂದಿರುವ ಕೇಂದ್ರ ಸರ್ಕಾರ …
Read More »ವಸ್ತುಗಳ ದರ ದುಪ್ಪಟ್ಟು ಏರಿಕೆ: ಮಾರುಕಟ್ಟೆಯಲ್ಲಿ ಭರ್ಜರಿ ಖರೀದಿ
ಬೆಳಗಾವಿ: ನಗರದ ಎಲ್ಲ ಮಾರುಕಟ್ಟೆಗಳಲ್ಲೂ ಶುಕ್ರವಾರ ಇಡೀ ದಿನ ಜನವೋ ಜನ ಚತುರ್ಥಿ ಸಿದ್ಧತೆಗಾಗಿ, ಪೂಜಾ ಸಾಮಗ್ರಿಗಳ ಖರೀದಿಗಾಗಿ ಜನ ಸಾಗರೋಪಾದಿಯಲ್ಲಿ ಮಾರುಕಟ್ಟೆಗೆ ಧಾವಿಸಿದರು. ಇದರಿಂದ ಎಲ್ಲ ವಸ್ತುಗಳ ದರವೂ ದುಪ್ಪಟ್ಟು ಏರಿಕೆಯಾಗಿದ್ದು ಕಂಡುಬಂತು. ಇಲ್ಲಿನ ಕಾಕತಿವೇಸ್, ಮಾರುತಿ ಗಲ್ಲಿ, ಗಣಪತಿ ಗಲ್ಲಿ, ರವಿವಾರ ಪೇಟೆ, ಮಾರ್ಕೆಟ್, ಕಿರ್ಲೊಸ್ಕರ್ ರಸ್ತೆ, ಖಡೇಬಜಾರ್, ರಾಮಲಿಂಗಖಿಂಡ ಗಲ್ಲಿ, ಕಂಬಳಿಕೂಟ ಸೇರಿದಂತೆ ಎಲ್ಲ ಕಡೆ ಜನಜಂಗುಳಿ ಕಂಡುಬಂತು ದಟ್ಟಣೆ ನಿಯಂತ್ರಣಕ್ಕೆ ಪೊಲೀಸರು ಹೈರಾಣಾದರು. ಪರಿಣಾಮ …
Read More »ವಿಶ್ವ ಪ್ರಜಾಪ್ರಭುತ್ವ ದಿನ: ಜಿಲ್ಲೆಯಲ್ಲಿ ಮಾನವ ಸರಪಳಿ ನಿರ್ಮಾಣ
ಬೆಳಗಾವಿ: ಸೆ.15ರಂದು ಆಚರಿಸಲಾಗುವ ವಿಶ್ವ ಪ್ರಜಾಪ್ರಭುತ್ವ ದಿನದ ಅಂಗವಾಗಿ ಜಿಲ್ಲೆಯಲ್ಲಿ 135 ಕಿ.ಮೀ ಉದ್ದದಷ್ಟು ಮಾನವ ಸರಪಣಿ ನಿರ್ಮಿಸಲಾಗುವುದು ಎಂದು ಜಿಲ್ಲಾ ಉಸ್ತುವರಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು. ನಗರದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೀದರಿನಿಂದ ಚಾಮರಾಜನಗರ ವರೆಗೆ 2,500 ಕಿ.ಮೀ ಉದ್ದದ ಮಾನವ ಸರಪಳಿ ನಿರ್ಮಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಪ್ರಜಾಪ್ರಭುತ್ವ ಮಹತ್ವ ಸಾರಲು ಇದನ್ನು ಯಶಸ್ವಿಗೊಳಿಸಬೇಕು ಎಂದರು. ಜಿಲ್ಲೆಯ ಎಲ್ಲ ಶಾಲೆ ಕಾಲೇಜು ಮಕ್ಕಳು, ಗ್ರಾಮ …
Read More »ಪ್ಯಾರಿಸ್ ಪ್ಯಾರಾಲಿಂಪಿಕ್ಸ್: ಪದಕ ವಿಜೇತರಿಗೆ ಪ್ರಧಾನಿ ಮೋದಿ ಅಭಿನಂದನೆ
ನವದೆಹಲಿ : ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ಪದಕ ವಿಜೇತರಾದ ಹರ್ವಿಂದರ್ ಸಿಂಗ್, ಕಪಿಲ್ ಪರ್ಮಾರ್, ಪ್ರಣವ್ ಸೂರ್ಮಾ, ಸಚಿನ್ ಸರ್ಜೆರಾವ್ ಖಿಲಾರಿ ಮತ್ತು ಧರಮ್ಬೀರ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ದೂರವಾಣಿ ಸಂಭಾಷಣೆ ನಡೆಸಿ ಅಭಿನಂದನೆ ಸಲ್ಲಿಸಿದರು. ಕ್ರೀಡಾಪಟುಗಳು ಪದಕಗಳನ್ನು ಗೆಲ್ಲುವುದು ದೇಶಕ್ಕೆ ದೊಡ್ಡ ಉಡುಗೊರೆ ಎಂದು ಪ್ರಧಾನಿ ಮೋದಿ ಹೇಳಿದರು. ಆಟಗಾರರ ಇಂತಹ ಅದ್ಭುತ ಪ್ರದರ್ಶನದ ಹಿಂದೆ ಹೋದ ತರಬೇತುದಾರರ ಪ್ರಯತ್ನಗಳನ್ನು ಅವರು ಶ್ಲಾಘಿಸಿದರು.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





