Breaking News

BigTv News

ಪರಿಸರಸ್ನೇಹಿ ಗಣೇಶ ಸ್ಥಾಪನೆ: ಆಚೀವರ್ಸ್‌ ಅಕಾಡೆಮಿಯಿಂದ ಜಾಗೃತಿ ಜಾಥಾ

ಶ್ರೀರಂಗಪಟ್ಟಣ: ಪರಿಸರಸ್ನೇಹಿ ಗಣೇಶ ಮೂರ್ತಿಗಳನ್ನು ಸ್ಥಾಪಿಸುವಂತೆ ಆಚೀವರ್ಸ್‌ ಅಕಾಡೆಮಿ, ರೋಟರಿ ಕ್ಲಬ್‌ನಿಂದ ಪಟ್ಟಣದಲ್ಲಿ ಶುಕ್ರವಾರ ಜಾಗೃತಿ ಮೂಡಿಸಲಾಯಿತು. ಎರಡೂ ಸಂಘಟನೆಗಳ ಮುಖ್ಯಸ್ಥರು ಹಾಗೂ ಸದಸ್ಯರು ಮಣ್ಣಿನ ಗಣೇಶ ಮೂರ್ತಿಯನ್ನು ಹಿಡಿದು ಪಟ್ಟಣದ ಮುಖ್ಯ ಬೀದಿ ಸೇರಿದಂತೆ ವಿವಿಧೆಡೆ ಜಾಗೃತಿ ಜಾಥಾ ನಡೆಸಿದರು. ಹತ್ತಾರು ಮನೆ ಗಳು ಹಾಗೂ ಸಂಘ, ಸಂಸ್ಥೆಗಳಿಗೆ ಮಣ್ಣಿನ ಗಣೇಶ ಮತ್ತು ಗೌರಿ ಮೂರ್ತಿಗಳನ್ನು ಉಚಿತವಾಗಿ ವಿತರಿಸಿದರು. ರೋಟರಿ ಸಂಸ್ಥೆ ಅಧ್ಯಕ್ಷ ಮಂಜುರಾಮ್‌ ಮಾತನಾಡಿ, ರಾಸಾಯನಿಕ ಬಳಸಿ …

Read More »

ವಾಯುಮಾಲಿನ್ಯ ಹೆಚ್ಚಳ: ಗಾಳಿಯ ಗುಣಮಟ್ಟ ತೀವ್ರಗತಿಯಲ್ಲಿ ಕುಸಿತ

ಮೈಸೂರು: ನಗರದಲ್ಲಿ ವಾಯುಮಾಲಿನ್ಯ ಹೆಚ್ಚಾಗಿದ್ದು, ಗಾಳಿಯ ಗುಣಮಟ್ಟ ತೀವ್ರಗತಿಯಲ್ಲಿ ಕುಸಿಯುತ್ತಿದೆ ಎಂದು ಗ್ರೀನ್‌ ಪೀಸ್‌ ಇಂಡಿಯಾ ಸಂಸ್ಥೆಯ ಸಂಶೋಧನಾ ವರದಿಯು ತಿಳಿಸಿದೆ. ಇದು ವಾಯು ಮಾಲಿನ್ಯದಿಂದ ನಗರದ ಜನರ ಆರೋಗ್ಯದ ಮೇಲೆ ಗಂಭೀರ ಪರಿಣಾಮಗಳ ಬಗ್ಗೆ ಎಚ್ಚರಿಕೆ ನೀಡಿದೆ. ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ, ಬಂಡೀಪುರ ಹಾಗೂ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಿಂದ ಸುತ್ತುವರಿದಿರುವ ಮೈಸೂರಿನ ಗಾಳಿ ಶುದ್ಧವಾಗಿರಬೇಕಿತ್ತು. ಆದರೆ, ಮಾಲಿನ್ಯಕಾರಕ ಕಣಗಳಾದ ಪಿ.ಎಂ. ಗಾಳಿಯಲ್ಲಿರುವ ದೂಳಿನ ಕಣಗಳ ಪ್ರಮಾಣ 2.5 …

Read More »

ರಾಜ್ಯದಲ್ಲಿ ಇಂದು 169 ಡೆಂಗ್ಯೂ ಕೇಸ್ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ ಹೊತ್ತಲ್ಲೇ ಡೆಂಗ್ಯೂ ಕೇಸ್ ಆರ್ಭಟ ಮುಂದುವರೆದಿದ್ದು ಕಳೆದ 24 ಗಂಟೆಯಲ್ಲಿ ರಾಜ್ಯಾದ್ಯಂತ 169 ಡೆಂಗ್ಯೂ ಕೇಸ್ ಪತ್ತೆಯಾಗಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ 82, ಬೆಂಗಳೂರು ನಗರ, ಗ್ರಾಮಾಂತರ ಪ್ರದೇಶಗಳಲ್ಲಿ ತಲಾ ಮೂರು, ಕೋಲಾರ, ಶಿವಮೊಗ್ಗ, ವಿಜಯನಗರ ಹಾಗೂ ಕೊಡಗು ಜಿಲ್ಲೆಯಲ್ಲಿ ತಲಾ 2 ಕೇಸ್ ಪತ್ತೆಯಾಗಿರುವುದಾಗಿ ಹೇಳಿದೆ. ಚಿಕ್ಕಬಳ್ಳಾಪುರ 3, ತುಮಕೂರು 8, ಚಿತ್ರದುರ್ಗ, …

Read More »

ಬಸ್ ಗೆ ವ್ಯಾನ್ ಡಿಕ್ಕಿ: 12 ಜನರು ಸಾವು

ಹತ್ರಾಸ್ : ಇಲ್ಲಿನ ರಾಷ್ಟ್ರೀಯ ಹೆದ್ದಾರಿ 93 ರಲ್ಲಿ ಶುಕ್ರವಾರ ರಸ್ತೆ ಸಾರಿಗೆ ಬಸ್ ವಾಹನಕ್ಕೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ವ್ಯಾನ್ ನಲ್ಲಿ ಪ್ರಯಾಣಿಸುತ್ತಿದ್ದ 12 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಪಘಾತದಲ್ಲಿ ಇತರ ಹದಿನಾರು ಮಂದಿ ಗಾಯಗೊಂಡಿದ್ದು, ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಗ್ರಾ ಅಲಿಗಢ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಓವರ್ಟೇಕ್ ಮಾಡಲು ಪ್ರಯತ್ನಿಸುತ್ತಿದ್ದಾಗ ವ್ಯಾನ್ ಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ …

Read More »

ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಚಿರತೆ ಪ್ರತ್ಯಕ್ಷ

ಧಾರವಾಡ : ಧಾರವಾಡದಲ್ಲಿ ಕಾಡಿನಿಂದ ನಾಡಿಗೆ ಆಗಾಗ ಕಾಡು ಪ್ರಾಣಿಗಳು ಬಂದು ಜನರಲ್ಲಿ ಆತಂಕ ಮೂಡಿಸುತ್ತವೆ ಇದೀಗ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ ಕ್ಯಾಂಪಸ್ ನಲ್ಲಿ ಚಿರತೆ ಒಂದು ಓಡಾಡಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಸಹಜವಾಗಿ ಜನರಲ್ಲಿ ಆತಂಕ ಮೂಡಿಸಿದೆ. ಹೌದು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ ಕ್ಯಾಂಪಸ್ ನಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಕರ್ನಾಟಕ ವಿಶ್ವವಿದ್ಯಾಲಯ ಬಳಿಯ ರಸ್ತೆಯಲ್ಲಿ ಕಾಣಿಸಿಕೊಂಡ ಚಿರತೆಯು, ನಂತರ ಪತ್ರಿಕೋದ್ಯಮ ವಿಭಾಗಕ್ಕೆ ಹೋಗುವ ರಸ್ತೆಯಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. …

Read More »

2 ಲಕ್ಷ ಸಬ್ಸಿಡಿ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಕೃಷಿ ಭೂಮಿ ಬೆಂಬಲಿಸಲು ಹೊಸ ಉಪಕ್ರಮ

ನವದೆಹಲಿ: ಸಣ್ಣ ರೈತರಿಗೆ ಗಮನಾರ್ಹ ಪ್ರೋತ್ಸಾಹವಾಗಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು 5 ಎಕರೆಗಿಂತ ಕಡಿಮೆ ಭೂಮಿಯಲ್ಲಿ ಕೃಷಿ ಮಾಡುವವರನ್ನು ಬೆಂಬಲಿಸಲು ಹೊಸ ಉಪಕ್ರಮವನ್ನು ಪ್ರಾರಂಭಿಸಿವೆ. ಉದ್ಯೋಗ ಖಾತರಿ ಯೋಜನೆಯ ಭಾಗವಾಗಿ, ರೈತರು ಈಗ 16 ರೀತಿಯ ತೋಟಗಾರಿಕೆ ನೆಡುತೋಪು ಸಸಿಗಳನ್ನು ಉಚಿತವಾಗಿ ಪಡೆಯಲು ಅರ್ಹರಾಗಿರುತ್ತಾರೆ. ವಿಶೇಷವಾಗಿ ಅತಿವೃಷ್ಟಿ ಮತ್ತು ಅನಾವೃಷ್ಟಿಯಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಅನುಕೂಲವಾಗಲಿದೆ ಈ ಸಸಿಗಳನ್ನು ಯಾವುದೇ ವೆಚ್ಚವಿಲ್ಲದೆ ಒದಗಿಸುವ ಮೂಲಕ, ರೈತರು ಎದುರಿಸುತ್ತಿರುವ …

Read More »

ಜಮ್ಮುಮತ್ತುಕಾಶ್ಮೀರ ಚುನಾವಣೆ: ಬಿಜೆಪಿಯಿಂದ ಚುನಾವಣಾ ಪ್ರಣಾಳಿಕೆ ಬಿಡುಗಡೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಗೆ ಎಲ್ಲಾ ಪಕ್ಷಗಳು ಭರ್ಜರಿ ತಯಾರಿ ಮಾಡಿಕೊಂಡಿವೆ. ಬಿಜೆಪಿ ಕೂಡ ಸಿದ್ಧತೆ ಮಾಡಿಕೊಂಡಿದ್ದು, ಇದೀಗ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಶುಕ್ರವಾರ ನಡೆದ ಸಮಾವೇಶದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನೇತೃತ್ವದಲ್ಲಿ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಜಮ್ಮು ಮತ್ತು ಕಾಶ್ಮೀರ ಬಿಜೆಪಿ ಮುಖ್ಯಸ್ಥ ರವೀಂದರ್ ರೈನಾ ಮತ್ತು ಪಕ್ಷದ ಇತರ ಮುಖಂಡರು ಕೂಡ ಹಾಜರಿದ್ದರು. ಪ್ರಣಾಳಿಕೆ ಬಿಡುಗಡೆ …

Read More »

ಪ್ರಯಾಣಿಕರಿಗೆ ಗುಡ್ ನ್ಯೂಸ್: ಹಬ್ಬಕ್ಕೆ ಊರಿಗೆ ತೆರಳಲು ವಿಶೇಷ ಬಸ್ ಗಳ ವ್ಯವಸ್ಥೆ

ಬೆಂಗಳೂರು : ಗೌರಿ ಗಣೇಶ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಕೆಎಸ್ ಆರ್ ಟಿಸಿ ಯಿಂದ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ 200 ಕ್ಕೂ ಹೆಚ್ಚು ಬಿಎಂಟಿಸಿ ಬಸ್ ಗಳ ವ್ಯವಸ್ಥೆ ಮಾಡಿದೆ. ಈ ಹಿನ್ನೆಲೆ ತಮ್ಮ ತಮ್ಮ ಊರುಗಳಿಗೆ ತೆರಳಲು ಜನರು ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣದತ್ತ ಧಾವಿಸುತ್ತಿದ್ದಾರೆ. ಈ ಹಿನ್ನೆಲೆ ಮೆಜೆಸ್ಟಿಕ್ ನಲ್ಲಿ ಜನಸಂದಣಿ ಹೆಚ್ಚಾಗಿದೆ ಪ್ರಯಾಣಿಕರ ಸಂಖ್ಯೆ ಹೆಚ್ಚಳ ಹಿನ್ನೆಲೆ ವಿವಿಧ ಜಿಲ್ಲೆಗಳಿಗೆ ತೆರಳಲು …

Read More »

ಕ್ಷಯ ರೋಗದ ಹೊಸ ಚಿಕಿತ್ಸಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅನುಮೋದನೆ

ನವದೆಹಲಿ : 2025ರ ವೇಳೆಗೆ ದೇಶವನ್ನ ಕ್ಷಯರೋಗದಿಂದ ಮುಕ್ತಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ರಾಷ್ಟ್ರೀಯ ಟಿಬಿ ನಿರ್ಮೂಲನಾ ಕಾರ್ಯಕ್ರಮದ ಅಡಿಯಲ್ಲಿ ಬಹು ಔಷಧ ನಿರೋಧಕ ಕ್ಷಯರೋಗಕ್ಕೆ ಹೊಸ ಚಿಕಿತ್ಸೆಯಾದ ಬಿ ಪಾಲ್ಮ್ ನಿಯಮವನ್ನ ಪರಿಚಯಿಸಲು ಅನುಮೋದನೆ ನೀಡಿದೆ. ಈ ನಿಯಮಾವಳಿಯು ಬೆಡಾಕ್ವಿಲಿನ್ ಮತ್ತು ಲಿನೆಜೋಲಿಡ್ ಸಂಯೋಜನೆಯಲ್ಲಿ ಪ್ರೆಟೊಮನಿಡ್ ಎಂಬ ಹೊಸ ಟಿಬಿ ವಿರೋಧಿ ಔಷಧವನ್ನ ಒಳಗೊಂಡಿದೆ. ಪ್ರೆಟೊಮನಿಡ್ ನ್ನು ಈ ಹಿಂದೆ ಭಾರತದಲ್ಲಿ ಬಳಸಲು ಸೆಂಟ್ರಲ್ …

Read More »

ಆರೋಗ್ಯ ವಿಮೆ: ಶೇ.‌18 ರಷ್ಟು ಜಿ ಎಸ್ ಟಿಯನ್ನು ಮರುಪರಿಶೀಲಿಸಲು ಪ್ರಧಾನಿಗೆ ಪತ್ರ

ಬೆಂಗಳೂರು: ಆರೋಗ್ಯ ವಿಮೆಯ ಮೇಲಿನ ಶೇ 18 ರಷ್ಟು ಜಿ.ಎಸ್.ಟಿಯನ್ನ ಮರು ಪರಿಶೀಲಿಸುವಂತೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಒತ್ತಾಯಿಸಿದ್ದಾರೆ. ಸೆಪ್ಟೆಂಬರ್ 9 ರಂದು ಸಭೆ ಸೇರಲಿರುವ GST ಕೌನ್ಸಿಲ್‌ಗೆ ಮಧ್ಯಮ ಮತ್ತು ಕಡಿಮೆ ಆದಾಯದ ಪಾಲಿಸಿದಾರರಿಗೆ ಆರೋಗ್ಯ ವಿಮೆಯ ಮೇಲಿನ 18% ತೆರಿಗೆಯನ್ನು ಮರು ಪರಿಶೀಲಿಸುವಂತೆ ಶಿಫಾರಸು ಮಾಡುವಂತೆ ಪತ್ರದಲ್ಲಿ ಮನವಿ ಮಾಡಿದ್ದಾರೆ ಆರೋಗ್ಯ ವಿಮೆ ಮೇಲೂ ಶೇ 18 ರಷ್ಟು …

Read More »