ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಹಾಗೂ ಜನಪರ ಕೆಲಸಗಳ ಕುರಿತು ಸಮಗ್ರ ಚರ್ಚೆ ನಡೆಸಲು ಮುಂದಿನ ಸಚಿವ ಸಂಪುಟ ಸಭೆಯನ್ನು ಕಲಬುರಗಿಯಲ್ಲಿ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಪ್ಪಿಗೆ ನೀಡಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಉದ್ದೇಶದಿಂದ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆಸಲು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೆವು. ಅದಕ್ಕೆ ಮುಖ್ಯಮಂತ್ರಿಗಳು ಮತ್ತು ಸಚಿವರು ಸ್ಪಂದಿಸಿದ್ದು, ಮುಂದಿನ …
Read More »ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಕ್ಕೆ ಗೆಜೆಟ್ ಅಧಿಸೂಚನೆ ಪ್ರಕಟ
ಬೆಂಗಳೂರು: ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಆಯ್ಕೆಯಾಗಿದ್ದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಹೊರಡಿಸಿದ್ದು, ಆದೇಶ ಪಡೆದ ಅಭ್ಯರ್ಥಿಗಳಿಗೆ ಇನ್ನೂ ಹದಿನೈದು ದಿನಗಳ ಒಳಗಾಗಿ ವರದಿ ಮಾಡಿಕೊಳ್ಳಲು ನಿರ್ದೇಶಿಸಲಾಗಿದೆ. ಈ ಸಂಬಂಧ ಗೆಜೆಟ್ ಅಧಿಸೂಚನೆ ಹೊರಡಿಸಲಾಗಿದ್ದು, ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ವಿವಿಧ ವಿಷಯಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ ಸರಕಾರವು ಅಧಿಸೂಚನೆ ಹೊರಡಿಸಿತ್ತು. ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ …
Read More »ಗಣೇಶ ಚತುರ್ಥಿ:ಸೆ.7 ರಂದು ಮಾಂಸ ಮಾರಾಟ ನಿಷೇಧಿಸಿ ಬಿಬಿಎಂಪಿ ಆದೇಶ
ಬೆಂಗಳೂರು: ಸೆ. 7 ರಂದು ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧ ಮಾಡಿ ಬಿಬಿಎಂಪಿ ಆದೇಶಿಸಿದೆ. ದಿ. 7 ರ ಶನಿವಾರದಂದು ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಪಶುಪಾಲನೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
Read More »ಜಿ.ಪಂ, ತಾ.ಪಂ.ಕ್ಷೇತ್ರಗಳಿಗೆ ಮೀಸಲಾತಿ: ಕಾಲಾವಕಾಶ ಕೇಳಿದ ರಾಜ್ಯಸರ್ಕಾರ
ಬೆಂಗಳೂರು: ರಾಜ್ಯದ ತಾ.ಪಂ. ಹಾಗೂ ಜಿ.ಪಂ. ಕ್ಷೇತ್ರಗಳಿಗೆ ಮೀಸಲಾತಿ ನಿಗದಿಪಡಿಸಲು ರಾಜ್ಯ ಸರ್ಕಾರ ಮತ್ತೆ 3 ವಾರ ಕಾಲಾವಕಾಶ ಕೇಳಿದೆ. ನ್ಯಾಯಾಲಯಕ್ಕೆ ನೀಡಿದ ಭರವಸೆಯಂತೆ ನಿಗದಿತ ಅವಧಿಯಲ್ಲಿ ಜಿ.ಪಂ., ತಾ.ಪಂ. ಕ್ಷೇತ್ರ ಪುನರ್ವಿಂಗಡಣೆ ಹಾಗೂ ಮೀಸಲಾತಿ ಪ್ರಕಟಿಸಲು ವಿಫಲವಾಗಿರುವ ರಾಜ್ಯ ಸರ್ಕಾರದ ವಿರುದ್ಧ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿ ಜತೆಗೆ, ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನದ ಮೀಸಲಾತಿ ಪ್ರಕಟಿಸಲು ಏಕಸದಸ್ಯ ನ್ಯಾಯಪೀಠ ಆದೇಶ …
Read More »ಕೇಂದ್ರ ಸರ್ಕಾರ: ಶೀಘ್ರವೇ ಎನ್ ಪಿ ಎಸ್ ವಾತ್ಸಲ್ಯ ಯೋಜನೆ ಜಾರಿ
ನವದೆಹಲಿ : ಪೋಷಕರಿಗೆ ಕೇಂದ್ರ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಅಪ್ರಾಪ್ತ ವಯಸ್ಕರಿಗೆ ಆರ್ಥಿಕ ಭವಿಷ್ಯವನ್ನು ಸುರಕ್ಷಿತಗೊಳಿಸುವ ಉಪಕ್ರಮವಾದ ಬಹುನಿರೀಕ್ಷಿತ ಎನ್ಪಿಎಸ್ ವಾತ್ಸಲ್ಯ ಯೋಜನೆಯು ಮುಂದಿನ ಎರಡು ವಾರಗಳಲ್ಲಿ ಪ್ರಾರಂಭವಾಗಲಿದ್ದು, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ಅಧಿಕೃತ ಉದ್ಘಾಟನೆ ನಡೆಯಲಿದೆ. ಸರ್ಕಾರ ಮತ್ತು ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ ಯೋಜನೆಯ ವಿವರಗಳನ್ನು ಅಂತಿಮಗೊಳಿಸುತ್ತಿದೆ, ಇದು ಪೋಷಕರು ತಮ್ಮ ಮಕ್ಕಳಿಗೆ ದೀರ್ಘಾವಧಿಯ ಸಂಪತ್ತನ್ನು ನಿರ್ಮಿಸಲು ರಚನಾತ್ಮಕ …
Read More »ಗೃಹಲಕ್ಷ್ಮಿ ಹಣ: ದೇವಸ್ಥಾನಕ್ಕೆ ದೇಣಿಗೆ ನೀಡಿದ ಮಹಿಳೆಯರು
ಕೊಪ್ಪಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಿಂದ ಬರುವ ಹಣದಿಂದ ಬಹಳಷ್ಟು ಮಹಿಳೆಯರು ಅನುಕೂಲ ಪಡೆದುಕೊಂಡಿದ್ದಾರೆ ಎಂದರೆ ತಪ್ಪಾಗಲಾರದು. ಈ ಹಿಂದೆ ಮಹಿಳೆಯರು ಗ್ಯಾರಂಟಿ ಯೋಜನೆಯಿಂದ ಬಂದ ಹಣವನ್ನು ಕೂಡಿಟ್ಟು ಮೊಬೈಲ್, ಕಣ್ಣಿನ ಶಸ್ತ್ರಚಿಕಿತ್ಸೆ, ಫ್ರಿಡ್ಜ್, ಹೋಳಿಗೆ ಊಟ, ಸೊಸೆಗೆ ಫ್ಯಾನ್ಸಿ ಸ್ಟೋರ್ ಹಾಕಿಕೊಡುವ ಮೂಲಕ ಸುದ್ದಿಯಾಗಿದ್ದರು. ಇದೀಗ ಕೊಪ್ಪಳ ಜಿಲ್ಲೆಯ ಕುಕನೂರು ತಾಲ್ಲೂಕಿನ ಹಿರೇಬಿಡನಾಳ ಗ್ರಾಮದಲ್ಲಿ 50ಕ್ಕೂ ಹೆಚ್ಚು ಮಹಿಳೆಯರು ದೇವಸ್ಥಾನ ನಿರ್ಮಾಣಕ್ಕೆ ಗೃಹಲಕ್ಷ್ಮಿ …
Read More »ಅನ್ನಭಾಗ್ಯ:ನಗದು ಬದಲು ಫುಡ್ ಕಿಟ್ ವಿತರಣೆಗಾಗಿ ಮುಂದಾದ ರಾಜ್ಯ ಸರ್ಕಾರ
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ ನಗದು ಬದಲು ಫುಡ್ ಕಿಟ್ ನೀಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಮುಂದಿನ ತಿಂಗಳಿನಿಂದ ಜಾರಿಗೆ ಬರಲಿದೆ. ಅಕ್ಟೋಬರ್ ನಿಂದಲೇ ನೂತನ ವ್ಯವಸ್ಥೆ ಜಾರಿಗೆ ಬರಲಿದ್ದು, ಅಕ್ಕಿಯ ಜೊತೆಗೆ ಅಡುಗೆ ಎಣ್ಣೆ, ಬೇಳೆ, ಸಕ್ಕರೆ ವಿತರಿಸಲಾಗುವುದು ಎಂದು ಆಹಾರ ಇಲಾಖೆ ತಿಳಿಸಿದೆ. ಬಿಪಿಎಲ್ ಕಾರ್ಡ್ ಫಲಾನುಭವಿಗಳಿಗೆ 5 ಕೆಜಿ ಅಕ್ಕಿ ಜೊತೆಗೆ 170 ರೂ. ಡಿಬಿಟಿ ಮೂಲಕ …
Read More »ಭೀಕರ ರಸ್ತೆ ಅಪಘಾತ: ನಾಲ್ವರು ಪಾದಚಾರಿಗಳು ಸಾವು
ವಿಜಯಪುರ : ವಿಜಯಪುರದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಪಾದಚಾರಿಗಳಿಗೆ ಬೈಕ್ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಕುಂಟೋಜಿಯಲ್ಲಿ ಪಾದಚಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ, ಹಿಂಬದಿ ಸವಾರ, ರಸ್ತೆ ಬದಿ ನಿಂತಿದ್ದ ಇಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ತಾಳಿಕೋಟೆ ತಾಲೂಕಿನ ಗೋಟಖಂಡಕಿ ನಿವಾಸಿ ನಿಂಗರಾಜ ಚೌದರಿ(32), ದೇವರಹಿಪ್ಪರಗಿ ತಾಲೂಕಿನ ಹಂಚಲಿ ನಿವಾಸಿ ಅನಿಲ್ ಖೈನೂರ (23) ಮಲಗಲದಿನ್ನಿ ಗ್ರಾಮದ ನಿವಾಸಿ …
Read More »ಇಂದು ಸಿಎಂ ಸಿದ್ದರಾಮಯ್ಯರಿಂದ ಎತ್ತಿನಹೊಳೆ ಯೋಜನೆ ಉದ್ಘಾಟನೆ
ಬೆಂಗಳೂರು: ಏಳು ಜಿಲ್ಲೆಗಳಿಗೆ ಕುಡಿಯುವ ನೀರು ಹಾಗೂ ಕೆರೆ ತುಂಬಿಸುವ ಮಹತ್ವಾಕಾಂಕ್ಷಿ ಎತ್ತಿನಹೊಳೆ ಯೋಜನೆಯ ಏತ ಕಾಮಗಾರಿಗೆ ಗೌರಿ ಹಬ್ಬದಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚಾಲನೆ ನೀಡಲಿದ್ದಾರೆ. ಈ ಯೋಜನೆಯಿಂದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ ಜಿಲ್ಲೆಯ ಜನರಿಗೆ ಅನುಕೂಲವಾಗಲಿದೆ. ಹೆಬ್ಬನಹಳ್ಳಿ ವಿತರಣಾ ತೊಟ್ಟಿ 4 ರಿಂದ 32 ಕಿ. ಮೀ. ದೂರದಲ್ಲಿ ಎಸ್ಕೇಪ್ ಚಾನೆಲ್ ಮಾಡಿದ್ದು, ಅಲ್ಲಿಂದ ನಾಲೆ ಮೂಲಕ ವಾಣಿವಿಲಾಸ ಸಾಗರಕ್ಕೆ ನೀರು ಹರಿಸಲಾಗುವುದು. …
Read More »ಮೈಸೂರು ದಸರಾ: ದೀಪಾಲಂಕಾರದಿಂದ ಉತ್ಸವದ ಅಂದ ಹೆಚ್ಚಿಸಿ
ಮೈಸೂರು: ನಾಡಹಬ್ಬ ದಸರಾ ನಮ್ಮ ಮನೆಯ ಹಬ್ಬವೆಂಬ ಮನಸ್ಥಿತಿಯೊಂದಿಗೆ ದೀಪಾಲಂಕಾರ ಮಾಡಿ ಉತ್ಸವದ ಅಂದ ಹೆಚ್ಚಿಸಬೇಕು ಎಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ಅಧ್ಯಕ್ಷ ರಮೇಶ್ ಬಂಡಿಸಿದ್ದೇಗೌಡ ಸೂಚಿಸಿದರು. ಇಲ್ಲಿನ ವಿಜಯನಗರ 2ನೇ ಹಂತದಲ್ಲಿರುವ ನಿಗಮದ ಪ್ರಧಾನ ಕಚೇರಿಯಲ್ಲಿ ಗುರುವಾರ ನಡೆದ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು ಈ ಬಾರಿ ವಿದ್ಯುತ್ ದೀಪಾಲಂಕಾರ 21 ದಿನಗಳವರೆಗೆ ಇರಲಿದೆ. ಹೀಗಾಗಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





