Breaking News

BigTv News

ಕನ್ನಡ ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಪ್ರಕರಣ ಕೇಳಿ ಬಂದರೆ ಮುಲಾಜಿಲ್ಲದೆ ಕ್ರಮ: ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್​ ಪ್ರಕರಣಗಳು ಕಂಡು ಬಂದರೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಕನ್ನಡ ಚಿತ್ರರಂಗದಲ್ಲೂ ಕಾಸ್ಟಿಂಗ್ ಕೌಚ್ ಸದ್ದು ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಆ ರೀತಿ ಏನಾದರೂ ಆಗಿದ್ದರೆ ಕ್ರಮ ತೆಗೆದುಕೊಳ್ಳಲಾಗುವುದು ಮಹಿಳೆಯರ ರಕ್ಷಣೆಯೇ ನಮಗೆ ಮುಖ್ಯ ಎಂದು ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಆ ವಿಚಾರದ ಬಗ್ಗೆ …

Read More »

ಸ್ವಚ್ಛ ಭಾರತ ಮಿಷನ್ ಅಡಿಯಲ್ಲಿ ಶೌಚಾಲಯಗಳ ನಿರ್ಮಾಣ: 60 ಸಾವಿರ ಶಿಶುಗಳ ರಕ್ಷಣೆ

ನವದೆಹಲಿ: ರಾಷ್ಟ್ರೀಯ ಸ್ವಚ್ಛತಾ ಅಭಿಯಾನ ಸ್ವಚ್ಛ ಭಾರತ ಮಿಷನ್ ಅಡಿಯಲ್ಲಿ ದೇಶದಾದ್ಯಂತ ಶೌಚಾಲಯಗಳನ್ನು ನಿರ್ಮಿಸಿದ್ದರ ಫಲವಾಗಿ ಪ್ರತಿವರ್ಷ ಸುಮಾರು 60 ಸಾವಿರದಿಂದ 70 ಸಾವಿರ ಶಿಶು ಮರಣ ತಪ್ಪಿದೆ ಎಂದು ವರದಿಯೊಂದು ಹೇಳಿದೆ. ಯುಎಸ್‌ ಮೂಲದ ಇಂಟರ್‌ನ್ಯಾಷನಲ್‌ ಫುಡ್‌ ಪಾಲಿಸಿ ರೀಸರ್ಚ್‌ ಸಂಸ್ಥೆಯ ಸಂಶೋಧಕರ ತಂಡ, ಭಾರತದ ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿನ 600 ಜಿಲ್ಲೆಗಳ 20 ವರ್ಷದ ಅಂಕಿ ಅಂಶಗಳನ್ನು ವಿಶ್ಲೇಷಿಸಿದೆ. ಸ್ವಚ್ಛ ಭಾರತ ಮಿಷನ್‌ ಅಡಿಯಲ್ಲಿ …

Read More »

ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಸೇನಾವಾಹನ: ನಾಲ್ವರು ಸೇನಾ ಸಿಬ್ಬಂದಿ ಸಾವು

ಗ್ಯಾಂಗ್ಟಾಕ್: ಸಿಕ್ಕಿಂನ ಪಾಕ್ಯೊಂಗ್ ಜಿಲ್ಲೆಯಲ್ಲಿ ಸೇನಾ ವಾಹನವು ಅಪಘಾತಕ್ಕೀಡಾದ ಪರಿಣಾಮ ನಾಲ್ವರು ಸೇನಾ ಸಿಬ್ಬಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಸೇನಾ ಸಿಬ್ಬಂದಿ ಕರೆದೊಯ್ಯುತ್ತಿದ್ದ ವಾಹನವು ರೆನಾಕ್ ರೋಂಗ್ಲಿ ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮೃತರನ್ನು ಮಧ್ಯಪ್ರದೇಶದ ಸಿಪಾಯಿ ಪ್ರದೀಪ್ ಪಟೇಲ್, ಇಂಫಾಲ್ ನಿವಾಸಿ ಪೀಟರ್, ಹರಿಯಾಣ ನಿವಾಸಿ ನಾಯಕ್ ಗುರ್ಸೇವ್ ಸಿಂಗ್ ಮತ್ತು ತಮಿಳುನಾಡಿನ ಸುಬೇದಾರ್ ಕೆ ತಂಗಪಾಂಡಿ …

Read More »

ಫ್ರೆಂಚ್ ಪ್ರಧಾನಿಯಾಗಿ ಮೈಕಲ್ ಬಾರ್ನಿಯರ್ ನೇಮಕ

ಫ್ರೆಂಚ್ : ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ಅವರು ಜುಲೈ ಆರಂಭದಿಂದ ರಾಷ್ಟ್ರವನ್ನು ಆವರಿಸಿರುವ ರಾಜಕೀಯ ಬಿಕ್ಕಟ್ಟನ್ನು ಕೊನೆಗೊಳಿಸುವ ಪ್ರಯತ್ನದಲ್ಲಿ ಯುರೋಪಿಯನ್ ಒಕ್ಕೂಟದ ಮಾಜಿ ಬ್ರೆಕ್ಸಿಟ್ ಸಮಾಲೋಚಕ ಮೈಕೆಲ್ ಬಾರ್ನಿಯರ್ ಅವರನ್ನು ಪ್ರಧಾನಿಯಾಗಿ ಹೆಸರಿಸಿದ್ದಾರೆ. 73 ವರ್ಷದ ಕನ್ಸರ್ವೇಟಿವ್ ಈಗ ಆಡಳಿತವನ್ನು ವಹಿಸಿಕೊಳ್ಳುವ ಮೊದಲು ಸಂಸತ್ತಿನ ಕೆಳಮನೆಯಲ್ಲಿ ಅವಿಶ್ವಾಸ ಮತವನ್ನು ಎದುರಿಸಬೇಕಾಗಿದೆ.

Read More »

ಶಿಕ್ಷಣ ಮತ್ತು ಶಿಕ್ಷಕರಿಗೆ ಆದ್ಯತೆ ನೀಡಿದರೆ ಅಭಿವೃದ್ಧಿ ಸಾಧ್ಯ

ಬೆಳಗಾವಿ: ಶಿಕ್ಷಣ ಅಭಿವೃದ್ಧಿಯ ಸಂಕೇತವಾಗಿದ್ದು ಯಾವ ರಾಜ್ಯದವರು ಶಿಕ್ಷಣ ಮತ್ತು ಶಿಕ್ಷಕರಿಗೆ ಆದ್ಯತೆ ಕೊಟ್ಟಿದ್ದಾರೆಯೋ, ಅವರು ಅಭಿವೃದ್ಧಿಯತ್ತ ಸಾಗಿದ್ದಾರೆ ಎಂದು ಶಾಸಕ ಆಸೀಫ್‌ ಸೇಠ್‌ ಹೇಳಿದರು. ಇಲ್ಲಿನ ಗಾಂಧಿ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಬೆಳಗಾವಿ ಶೈಕ್ಷಣಿಕ ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆ, ಪ್ರತಿಭಾಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಣವು ನಮ್ಮನ್ನು ಅಭಿವೃದ್ಧಿಪಥದಲ್ಲಿ ಕೊಂಡೊಯ್ಯುತ್ತದೆ ಸಮಾಜದಲ್ಲಿ ಜಾಗೃತಿ ಮೂಡಿಸುತ್ತದೆ …

Read More »

ವಿಶ್ವವಿಖ್ಯಾತ ಅದ್ದೂರಿ ದಸರಾ ಆಚರಣೆಗೆ ಸಕಲ ಸಿದ್ಧತೆ

ಮೈಸೂರು: ವಿಶ್ವ ವಿಖ್ಯಾತ ದಸರಾ ಅದ್ದೂರಿ ಆಚರಣೆಗೆ ರಚಿಸಿರುವ 19 ಉಪಸಮಿತಿಗಳ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಹೆಚ್‌ಸಿ ಮಹದೇವಪ್ಪ ತಿಳಿಸಿದರು. ಅರಮನೆ ಸಭಾಂಗಣದಲ್ಲಿ ಹಮಿ ಕೊಂಡಿದ್ದ ದಸರಾ ಉಪಸಮಿತಿಗಳ ಸಭೆಯಲ್ಲಿ ಮಾತನಾಡಿದ ಸಚಿವರು, ಎಲ್ಲಾ ಸಮಿತಿಯ ಅಧಿಕಾರಿಗಳು ಸೂಕ್ತ ತಯಾರಿ ಮಾಡಿಕೊಂಡು ಅಚ್ಚುಕಟ್ಟಾಗಿ ದಸರಾ ಆಚರಣೆ ಮಾಡಬೇಕು ಎಂದು ಸೂಚಿಸಿದರು. ಸ್ತಬ್ಧ ಚಿತ್ರಗಳು ನಮ ಸಂಸ್ಕೃತಿಯನ್ನು ಬಿಂಬಿಸುವಂತೆ ಹಾಗೂ ಜನರಿಗೆ ಸಾಮಾಜಿಕ ಸಂದೇಶ ಸಾರುವಂತೆ …

Read More »

ಆರ್ಥಿಕ ಕುಸಿತದಿಂದ ತತ್ತರಿಸಿದ್ದ ಬಾಂಗ್ಲಾದೇಶ: ನೆರವಿಗೆ ಧಾವಿಸಿದ ಭಾರತ

ನವದೆಹಲಿ: ಆಂತರಿಕ ಪ್ರತಿಭಟನೆ, ಸರ್ಕಾರ ಬದಲಾವಣೆಯಿಂದ ಆರ್ಥಿಕ ಕುಸಿತದಿಂದ ತತ್ತರಿಸಿ ಹೋಗಿದ್ದ ಬಾಂಗ್ಲಾದೇಶದ ನೆರವಿಗೂ ಕೊನೆಗೂ ಭಾರತ ಧಾವಿಸಿದ್ದು, ಉಭಯ ದೇಶಗಳ ನಡುವೆ ಸ್ಥಗಿತಗೊಂಡಿದ್ದ ವ್ಯಾಪಾರ ವಹಿವಾಟು ಪುನಾರಂಭಗೊಂಡಿದೆ. ಹಿಂಸಾಚಾರದಿಂದಾಗಿ 47 ದಿನಗಳ ಅನಿಶ್ಚಿತತೆಯ ನಂತರ, ಭಾರತ ಮತ್ತು ಬಾಂಗ್ಲಾದೇಶದ ನಡುವೆ ಬೆನಾಪೋಲ್ ಬಂದಿರನ ಮೂಲಕ ವ್ಯಾಪಾರ ಪುನರಾರಂಭವಾಗಿದ್ದು, ಸರಬರಾಜು ಕೊರತೆ, ಹೆಚ್ಚಿನ ಹಣದುಬ್ಬರ ಮತ್ತು ಜೀವನೋಪಾಯ ನಷ್ಟದಿಂದಾಗಿ ತತ್ತರಿಸಿ ಹೋಗಿದ್ದ ಬಾಂಗ್ಲಾದೇಶದ ವ್ಯಾಪಾರಿಗಳು ಭಾರತದ ಈ ಕ್ರಮವನ್ನು ಸ್ವಾಗತಿಸಿದ್ದಾರೆ …

Read More »

ಮನೆ ಗೋಡೆ ಕುಸಿದು‌ ಮಹಿಳೆ ಸಾವು

ಶ್ರೀರಂಗಪಟ್ಟಣ: ಮನೆಯೊಂದರ ಗೋಡೆ ಕುಸಿದು‌ ಮಹಿಳೆ ಮೃತಪಟ್ಟಿರುವ ಘಟನೆ ತಾಲ್ಲೂಕಿನ ನೆಲಮನೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಎನ್.ಸಿ. ರಾಜಕುಮಾರ್ ಅವರ ಪತ್ನಿ ಶಾಂತಮ್ಮ (45) ಮೃತಪಟ್ಟಿದ್ದಾರೆ. ಗ್ರಾಮದ ಬಳಿ ಹರಿಯುವ ವಿಶ್ವೇಶ್ವರಯ್ಯ ವಿತರಣಾ ನಾಲೆಯಲ್ಲಿ ಪಾತ್ರೆ ತೊಳೆಯುತ್ತಿದ್ದ ಶಾಂತಮ್ಮ ಅವರ ಮೇಲೆ 6 ಅಡಿ ಎತ್ತರದ, 20 ಅಡಿ ಉದ್ದದ ಗೋಡೆ ದಿಢೀರ್ ಕುಸಿದಿದೆ ಶಾಂತಮ್ಮ ಗೋಡೆಯ ಅವಶೇಷಗಳ ಅಡಿ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಾಬು ಎಂಬುವರ ಮನೆಯ ಗೋಡೆ …

Read More »

ಜೀತದಾಳುಗಳಂತೆ ಬಲವಂತದ ದುಡಿಮೆ: 36 ಕಾರ್ಮಿಕರನ್ನು ರಕ್ಷಿಸಿದ ಪೋಲಿಸರು

ತಿಪಟೂರು: ತಾಲ್ಲೂಕಿನ ಹಾಲ್ಕುರಿಕೆ, ಮಂಜುನಾಥಪುರ ಸುತ್ತಮುತ್ತಲಿನ ಪ್ರದೇಶದಲ್ಲಿನ ಶುಂಠಿ ಜಮೀನಿನಲ್ಲಿ ಜೀತದಾಳುಗಳಂತೆ, ಬಲವಂತವಾಗಿ ದುಡಿಯುತ್ತಿದ್ದ 36 ಕಾರ್ಮಿಕರನ್ನು ಪೊಲೀಸರು ಬುಧವಾರ ರಾತ್ರಿ ರಕ್ಷಿಸಿದ್ದಾರೆ. ಈ ಭಾಗದ ಕೆಲ ಪ್ರಭಾವಿಗಳು ರೈತರಿಂದ ನೂರಾರು ಎಕರೆ ಜಮೀನು ಗುತ್ತಿಗೆ ಪಡೆದು ಶುಂಠಿ ಬೆಳೆದಿದ್ದರು. ಮೈಸೂರು, ಚಾಮರಾಜನಗರ, ಕೊಳ್ಳೇಗಾಲ, ಬಳ್ಳಾರಿ, ವಿಜಯಪುರ ಸೇರಿ ವಿವಿಧ ಜಿಲ್ಲೆಗಳ ಕಾರ್ಮಿಕರಿಗೆ ಹೆಚ್ಚಿನ ಕೂಲಿ ಆಸೆ ತೋರಿಸಿ ಜಮೀನಿನಲ್ಲಿ ಕೆಲಸ ಮಾಡಲು ಕರೆ ತಂದಿದ್ದರು. ಅಗತ್ಯ ಸೌಲಭ್ಯ, ಕೂಲಿ …

Read More »

ಲೈಂಗಿಕ ಕಿರುಕುಳ ಪ್ರಕರಣಗಳ ವಿರುದ್ಧ ಸಮಿತಿ ರಚಿಸಲು ಸಿಎಂ ಗೆ ಮನವಿ ಸಲ್ಲಿಸಿದ ಫೈರ್ ಸಂಸ್ಥೆ

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿಯೂ ಲೈಂಗಿಕ ಕಿರುಕುಳ ಪ್ರಕರಣಗಳು ನಡೆದಿದ್ದು, ಚಿತ್ರರಂಗದ ಮಹಿಳೆಯರ ರಕ್ಷಣೆಗಾಗಿ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸಮಿತಿ ರಚನೆ ಮಾಡುವಂತೆ ಫೈರ್ ಸಂಸ್ಥೆ ಸದಸ್ಯರು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದಾರೆ. ನಟ ಚೇತನ್ ನೇತೃತ್ವದಲ್ಲಿ ಫೈರ್ ಸಂಸ್ಥೆಯ ಸದಸ್ಯರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಕೇರಳದಲ್ಲಿ ಹೇಮಾ ಸಮಿತಿಯಂತೆ ಕನ್ನಡ ಚಿತ್ರರಂಗದಲ್ಲಿಯೂ ಸಮಿತಿ ರಚಿಸುವಂತೆ ಮನವಿ ಮಾಡಿದರು. 150ಕ್ಕೂ ಹೆಚ್ಚು ನಟ ನಟಿಯರು, ತಂತ್ರಜ್ಞರು, ನಿರ್ದೇಶಕರು, ಸಾಹಿತಿಗಳ …

Read More »