Breaking News

BigTv News

ಉತ್ತರ ಜಾರ್ಜಿಯಾ: ಗುಂಡಿನ ದಾಳಿಗೆ ನಾಲ್ವರು ಬಲಿ

ವಾಷಿಂಗ್ಟನ್: ಉತ್ತರ ಜಾರ್ಜಿಯಾದ ಪ್ರೌಢಶಾಲೆಯಲ್ಲಿ ನಡೆದ ಗುಂಡಿನ ದಾಳಿಗೆ ನಾಲ್ವರು ಬಲಿಯಾಗಿದ್ದಾರೆ, ಒಂಬತ್ತು ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಶಂಕಿತನನ್ನು 14 ವರ್ಷದ ಕೋಲ್ಟ್ ಗ್ರೇ ಎಂದು ಗುರುತಿಸಲಾಗಿದೆ. ಬಲಿಯಾದವರನ್ನು ಮೇಸನ್ ಶೆರ್ಮರ್‌ಹಾರ್ನ್ (14), ಕ್ರಿಶ್ಚಿಯನ್ ಅಂಗುಲೋ (14), ಮತ್ತು ಶಿಕ್ಷಕರಾದ ರಿಚರ್ಡ್ ಆಸ್ಪಿನ್‌ವಾಲ್ (39), ಮತ್ತು ಕ್ರಿಸ್ಟಿನಾ ಇರಿಮಿ (53), ಎಂದು ಗುರುತಿಸಲಾಗಿದೆ. ಆಸ್ಪತ್ರೆಗೆ ದಾಖಲಾದ ಎಲ್ಲಾ ಒಂಬತ್ತು ಜನರಿಗೆ ಗಾಯಗಳಾಗಿದ್ದು ಚೇತರಿಸಿಕೊಳ್ಳುತ್ತಿದ್ದಾರೆ. ಆಪಾದಿತ …

Read More »

ಅನ್ನಭಾಗ್ಯ ಯೋಜನೆ: ಹಣದ ಬದಲು ಆಹಾರ ಕಿಟ್‌ ವಿತರಿಸಲು ಚಿಂತನೆ

ಬೆಂಗಳೂರು: ಪಡಿತರದಾರರಿಗೆ ಹೆಚ್ಚುವರಿ 5kg ಅಕ್ಕಿಗೆ ಪರ್ಯಾಯವಾಗಿ ನೇರ ನಗದು ವರ್ಗಾವಣೆ ವ್ಯವಸ್ಥೆ ಬದಲು ಆಹಾರ ಕಿಟ್‌ ನೀಡುವುದಕ್ಕೆ ರಾಜ್ಯ ಸರ್ಕಾರ ತೀರ್ಮಾನಿಸಿದ್ದು ಈ ಬಗ್ಗೆ ಇಂದು ನಡೆಯುವ ಸಂಪುಟ ಸಭೆಯಲ್ಲಿ ಅಧಿಕೃತ ನಿರ್ಧಾರವಾಗುವ ಸಾಧ್ಯತೆಯಿದೆ. ಅನ್ನಭಾಗ್ಯ ಯೋಜನೆಯಡಿ 10 kg ಅಕ್ಕಿ ನೀಡುವುದಾಗಿ ಕಾಂಗ್ರೆಸ್‌ ಭರವಸೆ ನೀಡಿತ್ತು. ಆದರೆ ಮೊದಲಿಗೆ ಕೇಂದ್ರ ಸರ್ಕಾರ ಅಕ್ಕಿ ಪೂರೈಕೆಗೆ ಒಪ್ಪಿಗೆ ನೀಡದ ಕಾರಣ ಕಾರ್ಡ್‌ದಾರರಿಗೆ ಹೆಚ್ಚುವರಿ ಅಕ್ಕಿ ಬೆಲೆಯಷ್ಟು ಹಣ ನೀಡಲಾಗುತ್ತಿತ್ತು. …

Read More »

ಹೆಣ್ಣು ಭ್ರೂಣ ಹತ್ಯೆ ಪ್ರಕರಣ:12 ಆರೋಪಿಗಳು ಬಂಧನ

ಮಂಡ್ಯ: ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಅಭಿಷೇಕ್​ ಎಂಬಾತನನ್ನು ಬಂಧಿಸಲಾಗಿದೆ. ಸಾವಿರಾರು ಕರುಳಬಳ್ಳಿ ಕೊಂದಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಸಿಐಡಿಗೂ ಚಳ್ಳೆಹಣ್ಣು ತಿನ್ನಿಸಿ ದಂಧೆ ವಿಸ್ತರಿಸಿದ್ದ ಅಭಿಷೇಕ್​ ಪ್ರಮುಖ ಆರೋಪಿಯಾಗಿದ್ದಾನೆ. ಅಭಿಷೇಕ್ ಜೊತೆ ವಿರೇಶ್ ಸೇರಿದಂತೆ 12 ಆರೋಪಿಗಳನ್ನು ಬಂಧಿಸಲಾಗಿದ್ದು ಈಗಾಗಲೇ ಭ್ರೂಣ ಹತ್ಯೆ ಕೇಸ್ ​ನಲ್ಲಿ ವಿರೇಶ್​ ಜೈಲು ಸೇರಿ ಬೇಲ್ ಮೇಲೆ ಹೊರ ಬಂದಿದ್ದ. ಬಂಧಿತರಿಂದ 2 ಸ್ಕ್ಯಾನಿಂಗ್ ಮಷಿನ್, …

Read More »

ಅಕ್ರಮವಾಗಿ ಗಾಂಜಾ ಬೆಳೆದಿದ್ದ ಆರೋಪಿಯನ್ನು ಬಂಧಿಸಿದ ಪೋಲಿಸರು

ಶಿಡ್ಲಘಟ್ಟ: ಮೆಕ್ಕೆಜೋಳ ಬೆಳೆ ನಡುವೆ ಬೆಳೆದಿದ್ದ ಗಾಂಜಾ ಗಿಡವನ್ನು ಪತ್ತೆ ಮಾಡಿರುವ ದಿಬ್ಬೂರಹಳ್ಳಿ ಪೊಲೀಸರು ಸುಮಾರು 4 ಕೆ.ಜಿ.70 ಗ್ರಾಂ ಹಸಿ ಗಾಂಜಾ ಗಿಡವನ್ನು ವಶಕ್ಕೆ ಪಡೆದು ಆರೋಪಿಯನ್ನು ಬಂಧಿಸಿದ್ದಾರೆ. ತಾಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ದಿಂಬಾರ್ಲಹಳ್ಳಿ ದಾಸರ್ಲಹಳ್ಳಿ ಸರಹದ್ದಿನ ಮೆಕ್ಕೆ ಜೋಳದ ಜಮೀನಿನಲ್ಲಿ ಗಾಂಜಾ ಗಿಡಗಳು ಬೆಳೆದಿದ್ದ ಶಿಡ್ಲಘಟ್ಟ ತಾಲ್ಲೂಕಿನ ಟಿ.ವೆಂಕಟಾಪುರ ಗ್ರಾಮದ ಜನಮಡಗಪ್ಪನನ್ನು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಎಸ್.ಪಿ.ಕುಶಾಲ್ ಚೌಕ್ಸಿ ಸಾರಥ್ಯದಲ್ಲಿ ಡಿವೈಎಸ್ಪಿ ಮುರಳೀಧರ್, …

Read More »

ಇಂದು ಶಿಕ್ಷಕರ ದಿನಾಚರಣೆ: ವಿದ್ಯಾರ್ಥಿಗಳ ಉತ್ತಮ ಭವಿಷ್ಯ ರೂಪಿಸುವ ಸಾಕಾರ ಮೂರ್ತಿ ಗುರು

ಬೆಂಗಳೂರು: ವಿದ್ಯಾರ್ಥಿಗಳು ತಮ್ಮ ಶಿಕ್ಷಕರ ಬಗ್ಗೆ ವಿಶೇಷವಾದ ಬಾಂಧವ್ಯವನ್ನು ಹೊಂದಿರುತ್ತಾರೆ. ನಮಗೆಲ್ಲರಿಗೂ ನಮ್ಮ ಗುರುಗಳು ನೀಡಿದ ಬೋಧನೆಗಳು ಉತ್ತಮ ಜೀವನವನ್ನು ನಡೆಸಲು ನಮಗೆ ಸ್ಫೂರ್ತಿ ನೀಡುತ್ತವೆ. ವಿದ್ಯಾರ್ಥಿ ಮತ್ತು ಶಿಕ್ಷಕರ ನಡುವಿನ ಈ ವಿಶಿಷ್ಟ ಸಂಬಂಧವನ್ನು ಆಚರಿಸಲು ಭಾರತದಲ್ಲಿ ಪ್ರತಿ ವರ್ಷ ಶಿಕ್ಷಕರ ದಿನವನ್ನು ಆಚರಿಸಲಾಗುತ್ತದೆ. ಭಾರತೀಯ ಸಂಸ್ಕೃತಿಯು ಗುರು ಮತ್ತು ಶಿಷ್ಯ ನಡುವಿನ ಸಂಬಂಧಕ್ಕೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುತ್ತದೆ. ಸೆಪ್ಟೆಂಬರ್ 5 ರಂದು ಶಿಕ್ಷಕರ ದಿನಾಚರಣೆಯು ಡಾ. ಸರ್ವಪಲ್ಲಿ …

Read More »

ಶಾಲಾ ಬಸ್ ಮತ್ತು ಸಾರಿಗೆ ಬಸ್ ನಡುವೆ ರಸ್ತೆ ಅಪಘಾತ: ಇಬ್ಬರು ವಿದ್ಯಾರ್ಥಿಗಳು ಸಾವು

ರಾಯಚೂರು: ಮಾನ್ವಿ ತಾಲೂಕಿನ ಕಪಗಲ್ ಕ್ರಾಸ್ ಬಳಿ ನಡೆದ ಕೆಎಸ್‌ಆರ್‌ಟಿಸಿ ಬಸ್ ಮತ್ತು ಶಾಲಾ ಬಸ್ ನಡುವೆ ಡಿಕ್ಕಿ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಖಾಸಗಿ ಶಾಲಾ ಬಸ್ ಹಾಗೂ ಸರ್ಕಾರಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿತ್ತು. ಘಟನೆ ವೇಳೆ ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಮೂವರು ವಿದ್ಯಾರ್ಥಿಗಳ ಕಾಲು ಕಟ್‌ ಆಗಿತ್ತು ಗಂಭೀರ ಗಾಯಗೊಂಡ ಮಕ್ಕಳನ್ನು ರಿಮ್ಸ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ಕಳುಹಿಸಲಾಗಿತ್ತು, ಆದರೆ ಚಿಕಿತ್ಸೆಗೆ ಸ್ಪಂದಿಸದೆ ಇಬ್ಬರು …

Read More »

ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿ: ಓರ್ವ ಸಾವು, ಮೂವರು ಗಂಭೀರ

ಗದಗ:- ರಾಂಗ್ ರೂಟ್ ನಲ್ಲಿ ಬಂದು ಬೈಕ್ ಗೆ ಬೈಕ್ ಡಿಕ್ಕಿ ಹೊಡೆದು ಹಿಂಬದಿ ಸವಾರ ಸಾವನ್ನಪ್ಪಿದ ಘಟನೆ ಮುಂಡರಗಿ ತಾಲೂಕಿನ ಹಳ್ಳಿಕೇರಿ ಹಾಗೂ ಹಳ್ಳಿಗುಡಿ ಗ್ರಾಮಗಳ ನಡುವೆ ಜರುಗಿದೆ. ಘಟನೆಯಲ್ಲಿ ಮೂವರು ಗಂಭೀರ ಗಾಯಗೊಂಡಿದ್ದಾರೆ. ಜಿಲ್ಲೆಯ ಮುಂಡರಗಿ ತಾಲೂಕಿನ ಹಳ್ಳಿಗುಡಿ ಗ್ರಾಮದ ನಿವಾಸಿ ವಸಂತ ಚೆನ್ನಳ್ಳಿ (38) ಮೃತ ದುರ್ದೈವಿ. ರಾಂಗ್ ರೂಟ್ ನಲ್ಲಿ ಒನ್ ವೇ ನಲ್ಲಿ ಬಂದು ಎದುರಿಗೆ ಬರುತ್ತಿದ್ದ ಬೈಕ್ ಗೆ ಬೈಕ್ ಡಿಕ್ಕಿ …

Read More »

ಸಿಎಂ ಬದಲಿಸಲು ಕಾಂಗ್ರೆಸ್ ಗೆ ಹೆಚ್ಚುತ್ತಿರುವ ಒತ್ತಡ: ಒಮ್ಮತದ ಅಭ್ಯರ್ಥಿಗಾಗಿ ಹೈಕಮಾಂಡ್ ಕಸರತ್ತು

ಬೆಂಗಳೂರು: ಮುಡಾ ನಿವೇಶನ ಹಂಚಿಕೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬದಲಿಸುವ ನಿರ್ಧಾರಕ್ಕೆ ಕಾಂಗ್ರೆಸ್‌ನ ಮೇಲೆ ಒತ್ತಡ ಹೆಚ್ಚುತ್ತಿರುವಂತೆಯೇ, ಯಾವುದೇ ವಿವಾದಗಳಿಗೆ ಕಾರಣವಾಗದ ಒಮ್ಮತದ ಅಭ್ಯರ್ಥಿಗಾಗಿ ಪಕ್ಷದ ಹೈಕಮಾಂಡ್ ಯೋಜನೆ ರೂಪಿಸುತ್ತಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸಿದ್ದರಾಮಯ್ಯ ಅವರ ಸ್ಥಾನಕ್ಕೆ ಫೇವರಿಟ್ ಆಗಿದ್ದರೂ, ಹಿಂದುಳಿದ ಸಮುದಾಯಗಳನ್ನು ಒಗ್ಗೂಡಿಸಲು ಹಿಂದುಳಿದ ವರ್ಗಗಳ ನಾಯಕರನ್ನು ಮುಂದಿನ ಸಿಎಂ ಆಗಿ ಆಯ್ಕೆ ಮಾಡುವ ಸಾಧ್ಯತೆಯನ್ನು ಹೈಕಮಾಂಡ್ ಪರಿಶೀಲಿಸುತ್ತಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ …

Read More »

ಮೋದಿ ಸಿಂಗಾಪುರ ಪ್ರವಾಸ: 4 ಒಪ್ಪಂದಗಳಿಗೆ ಉಭಯ ರಾಷ್ಟ್ರಗಳು ಸಹಿ

ಸಿಂಗಾಪುರ್ : ಭಾರತ ಮತ್ತು ಸಿಂಗಾಪುರ ಡಿಜಿಟಲ್ ತಂತ್ರಜ್ಞಾನಗಳು, ಅರೆವಾಹಕಗಳು, ಆರೋಗ್ಯ ಸಹಕಾರ ಮತ್ತು ಕೌಶಲ್ಯ ಅಭಿವೃದ್ಧಿ ಕ್ಷೇತ್ರಗಳಲ್ಲಿ ನಾಲ್ಕು ತಿಳುವಳಿಕೆ ಒಪ್ಪಂದಕ್ಕೆ ಸಹಿ ಹಾಕಿದ್ದು, ಉಭಯ ರಾಷ್ಟ್ರಗಳ ನಡುವಿನ ಸಹಕಾರವನ್ನು ಮತ್ತಷ್ಟು ಬಲಪಡಿಸುತ್ತದೆ. ಸಿಂಗಾಪುರ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಅಲ್ಲಿನ ಸಂಸತ್ ಭವನಕ್ಕೆ ಆಗಮಿಸಿದಾಗ ಅವರಿಗೆ ವಿದ್ಯುಕ್ತ ಸ್ವಾಗತ ದೊರೆಯಿತು. ಸಿಂಗಾಪುರ ಪ್ರಧಾನ ಮಂತ್ರಿ ಲಾರೆನ್ಸ್ ವಾಂಗ್ ಅವರನ್ನು ಭೇಟಿಯಾದರು. ಉಭಯ ನಿಯೋಗಗಳು ದ್ವಿಪಕ್ಷೀಯ ಸಭೆಗಳನ್ನು …

Read More »

ಗೃಹಲಕ್ಷ್ಮೀಯರಿಗೆ ಗೌರಿಗಣೇಶ ಹಬ್ಬಕ್ಕೆ ಉಡುಗೊರೆ: ಗೃಹಲಕ್ಷ್ಮೀ ಹಣ ಖಾತೆಗೆ ಜಮಾ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ನಾಳೆ ಅಥವಾ ನಾಡಿದ್ದು ಗೃಹಲಕ್ಷ್ಮಿ ಯೋಜನೆಯ 12 ಮತ್ತು 13 ನೇ ಕಂತಿನ ಹಣ ಬಿಡುಗಡೆಯಾಗುವ ಸಾಧ್ಯತೆ ಇದೆ. ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ ಎಂದು ಇಲಾಖೆ ತಿಳಿಸಿದ್ದು, ಸದ್ಯ ತಾಂತ್ರಿಕ ಸಮಸ್ಯೆ ಪರಿಹರಿಸಲಾಗಿದ್ದು, ನಾಳೆ ಅಥವಾ ನಾಡಿದ್ದು ಗೃಹಲಕ್ಷ್ಮಿ ಹಣ ಖಾತೆಗೆ ಜಮಾ ಆಗುವ ಸಾಧ್ಯತೆ …

Read More »