Breaking News

BigTv News

ಅಕ್ರಮವಾಗಿ ಗಾಂಜಾ ಬೆಳೆದಿದ್ದ ಆರೋಪಿಯನ್ನು ಬಂಧಿಸಿದ ಪೋಲಿಸರು

ಶಿಡ್ಲಘಟ್ಟ: ಮೆಕ್ಕೆಜೋಳ ಬೆಳೆ ನಡುವೆ ಬೆಳೆದಿದ್ದ ಗಾಂಜಾ ಗಿಡವನ್ನು ಪತ್ತೆ ಮಾಡಿರುವ ದಿಬ್ಬೂರಹಳ್ಳಿ ಪೊಲೀಸರು ಸುಮಾರು 4 ಕೆ.ಜಿ.70 ಗ್ರಾಂ ಹಸಿ ಗಾಂಜಾ ಗಿಡವನ್ನು ವಶಕ್ಕೆ ಪಡೆದು ಆರೋಪಿಯನ್ನು ಬಂಧಿಸಿದ್ದಾರೆ. ತಾಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ದಿಂಬಾರ್ಲಹಳ್ಳಿ ದಾಸರ್ಲಹಳ್ಳಿ ಸರಹದ್ದಿನ ಮೆಕ್ಕೆ ಜೋಳದ ಜಮೀನಿನಲ್ಲಿ ಗಾಂಜಾ ಗಿಡಗಳು ಬೆಳೆದಿದ್ದ ಶಿಡ್ಲಘಟ್ಟ ತಾಲ್ಲೂಕಿನ ಟಿ.ವೆಂಕಟಾಪುರ ಗ್ರಾಮದ ಜನಮಡಗಪ್ಪನನ್ನು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಎಸ್.ಪಿ.ಕುಶಾಲ್ ಚೌಕ್ಸಿ ಸಾರಥ್ಯದಲ್ಲಿ ಡಿವೈಎಸ್ಪಿ ಮುರಳೀಧರ್, …

Read More »

ಇಂದು ಶಿಕ್ಷಕರ ದಿನಾಚರಣೆ: ವಿದ್ಯಾರ್ಥಿಗಳ ಉತ್ತಮ ಭವಿಷ್ಯ ರೂಪಿಸುವ ಸಾಕಾರ ಮೂರ್ತಿ ಗುರು

ಬೆಂಗಳೂರು: ವಿದ್ಯಾರ್ಥಿಗಳು ತಮ್ಮ ಶಿಕ್ಷಕರ ಬಗ್ಗೆ ವಿಶೇಷವಾದ ಬಾಂಧವ್ಯವನ್ನು ಹೊಂದಿರುತ್ತಾರೆ. ನಮಗೆಲ್ಲರಿಗೂ ನಮ್ಮ ಗುರುಗಳು ನೀಡಿದ ಬೋಧನೆಗಳು ಉತ್ತಮ ಜೀವನವನ್ನು ನಡೆಸಲು ನಮಗೆ ಸ್ಫೂರ್ತಿ ನೀಡುತ್ತವೆ. ವಿದ್ಯಾರ್ಥಿ ಮತ್ತು ಶಿಕ್ಷಕರ ನಡುವಿನ ಈ ವಿಶಿಷ್ಟ ಸಂಬಂಧವನ್ನು ಆಚರಿಸಲು ಭಾರತದಲ್ಲಿ ಪ್ರತಿ ವರ್ಷ ಶಿಕ್ಷಕರ ದಿನವನ್ನು ಆಚರಿಸಲಾಗುತ್ತದೆ. ಭಾರತೀಯ ಸಂಸ್ಕೃತಿಯು ಗುರು ಮತ್ತು ಶಿಷ್ಯ ನಡುವಿನ ಸಂಬಂಧಕ್ಕೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುತ್ತದೆ. ಸೆಪ್ಟೆಂಬರ್ 5 ರಂದು ಶಿಕ್ಷಕರ ದಿನಾಚರಣೆಯು ಡಾ. ಸರ್ವಪಲ್ಲಿ …

Read More »

ಶಾಲಾ ಬಸ್ ಮತ್ತು ಸಾರಿಗೆ ಬಸ್ ನಡುವೆ ರಸ್ತೆ ಅಪಘಾತ: ಇಬ್ಬರು ವಿದ್ಯಾರ್ಥಿಗಳು ಸಾವು

ರಾಯಚೂರು: ಮಾನ್ವಿ ತಾಲೂಕಿನ ಕಪಗಲ್ ಕ್ರಾಸ್ ಬಳಿ ನಡೆದ ಕೆಎಸ್‌ಆರ್‌ಟಿಸಿ ಬಸ್ ಮತ್ತು ಶಾಲಾ ಬಸ್ ನಡುವೆ ಡಿಕ್ಕಿ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಖಾಸಗಿ ಶಾಲಾ ಬಸ್ ಹಾಗೂ ಸರ್ಕಾರಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿತ್ತು. ಘಟನೆ ವೇಳೆ ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಮೂವರು ವಿದ್ಯಾರ್ಥಿಗಳ ಕಾಲು ಕಟ್‌ ಆಗಿತ್ತು ಗಂಭೀರ ಗಾಯಗೊಂಡ ಮಕ್ಕಳನ್ನು ರಿಮ್ಸ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ಕಳುಹಿಸಲಾಗಿತ್ತು, ಆದರೆ ಚಿಕಿತ್ಸೆಗೆ ಸ್ಪಂದಿಸದೆ ಇಬ್ಬರು …

Read More »

ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿ: ಓರ್ವ ಸಾವು, ಮೂವರು ಗಂಭೀರ

ಗದಗ:- ರಾಂಗ್ ರೂಟ್ ನಲ್ಲಿ ಬಂದು ಬೈಕ್ ಗೆ ಬೈಕ್ ಡಿಕ್ಕಿ ಹೊಡೆದು ಹಿಂಬದಿ ಸವಾರ ಸಾವನ್ನಪ್ಪಿದ ಘಟನೆ ಮುಂಡರಗಿ ತಾಲೂಕಿನ ಹಳ್ಳಿಕೇರಿ ಹಾಗೂ ಹಳ್ಳಿಗುಡಿ ಗ್ರಾಮಗಳ ನಡುವೆ ಜರುಗಿದೆ. ಘಟನೆಯಲ್ಲಿ ಮೂವರು ಗಂಭೀರ ಗಾಯಗೊಂಡಿದ್ದಾರೆ. ಜಿಲ್ಲೆಯ ಮುಂಡರಗಿ ತಾಲೂಕಿನ ಹಳ್ಳಿಗುಡಿ ಗ್ರಾಮದ ನಿವಾಸಿ ವಸಂತ ಚೆನ್ನಳ್ಳಿ (38) ಮೃತ ದುರ್ದೈವಿ. ರಾಂಗ್ ರೂಟ್ ನಲ್ಲಿ ಒನ್ ವೇ ನಲ್ಲಿ ಬಂದು ಎದುರಿಗೆ ಬರುತ್ತಿದ್ದ ಬೈಕ್ ಗೆ ಬೈಕ್ ಡಿಕ್ಕಿ …

Read More »

ಸಿಎಂ ಬದಲಿಸಲು ಕಾಂಗ್ರೆಸ್ ಗೆ ಹೆಚ್ಚುತ್ತಿರುವ ಒತ್ತಡ: ಒಮ್ಮತದ ಅಭ್ಯರ್ಥಿಗಾಗಿ ಹೈಕಮಾಂಡ್ ಕಸರತ್ತು

ಬೆಂಗಳೂರು: ಮುಡಾ ನಿವೇಶನ ಹಂಚಿಕೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬದಲಿಸುವ ನಿರ್ಧಾರಕ್ಕೆ ಕಾಂಗ್ರೆಸ್‌ನ ಮೇಲೆ ಒತ್ತಡ ಹೆಚ್ಚುತ್ತಿರುವಂತೆಯೇ, ಯಾವುದೇ ವಿವಾದಗಳಿಗೆ ಕಾರಣವಾಗದ ಒಮ್ಮತದ ಅಭ್ಯರ್ಥಿಗಾಗಿ ಪಕ್ಷದ ಹೈಕಮಾಂಡ್ ಯೋಜನೆ ರೂಪಿಸುತ್ತಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸಿದ್ದರಾಮಯ್ಯ ಅವರ ಸ್ಥಾನಕ್ಕೆ ಫೇವರಿಟ್ ಆಗಿದ್ದರೂ, ಹಿಂದುಳಿದ ಸಮುದಾಯಗಳನ್ನು ಒಗ್ಗೂಡಿಸಲು ಹಿಂದುಳಿದ ವರ್ಗಗಳ ನಾಯಕರನ್ನು ಮುಂದಿನ ಸಿಎಂ ಆಗಿ ಆಯ್ಕೆ ಮಾಡುವ ಸಾಧ್ಯತೆಯನ್ನು ಹೈಕಮಾಂಡ್ ಪರಿಶೀಲಿಸುತ್ತಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ …

Read More »

ಮೋದಿ ಸಿಂಗಾಪುರ ಪ್ರವಾಸ: 4 ಒಪ್ಪಂದಗಳಿಗೆ ಉಭಯ ರಾಷ್ಟ್ರಗಳು ಸಹಿ

ಸಿಂಗಾಪುರ್ : ಭಾರತ ಮತ್ತು ಸಿಂಗಾಪುರ ಡಿಜಿಟಲ್ ತಂತ್ರಜ್ಞಾನಗಳು, ಅರೆವಾಹಕಗಳು, ಆರೋಗ್ಯ ಸಹಕಾರ ಮತ್ತು ಕೌಶಲ್ಯ ಅಭಿವೃದ್ಧಿ ಕ್ಷೇತ್ರಗಳಲ್ಲಿ ನಾಲ್ಕು ತಿಳುವಳಿಕೆ ಒಪ್ಪಂದಕ್ಕೆ ಸಹಿ ಹಾಕಿದ್ದು, ಉಭಯ ರಾಷ್ಟ್ರಗಳ ನಡುವಿನ ಸಹಕಾರವನ್ನು ಮತ್ತಷ್ಟು ಬಲಪಡಿಸುತ್ತದೆ. ಸಿಂಗಾಪುರ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಅಲ್ಲಿನ ಸಂಸತ್ ಭವನಕ್ಕೆ ಆಗಮಿಸಿದಾಗ ಅವರಿಗೆ ವಿದ್ಯುಕ್ತ ಸ್ವಾಗತ ದೊರೆಯಿತು. ಸಿಂಗಾಪುರ ಪ್ರಧಾನ ಮಂತ್ರಿ ಲಾರೆನ್ಸ್ ವಾಂಗ್ ಅವರನ್ನು ಭೇಟಿಯಾದರು. ಉಭಯ ನಿಯೋಗಗಳು ದ್ವಿಪಕ್ಷೀಯ ಸಭೆಗಳನ್ನು …

Read More »

ಗೃಹಲಕ್ಷ್ಮೀಯರಿಗೆ ಗೌರಿಗಣೇಶ ಹಬ್ಬಕ್ಕೆ ಉಡುಗೊರೆ: ಗೃಹಲಕ್ಷ್ಮೀ ಹಣ ಖಾತೆಗೆ ಜಮಾ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ನಾಳೆ ಅಥವಾ ನಾಡಿದ್ದು ಗೃಹಲಕ್ಷ್ಮಿ ಯೋಜನೆಯ 12 ಮತ್ತು 13 ನೇ ಕಂತಿನ ಹಣ ಬಿಡುಗಡೆಯಾಗುವ ಸಾಧ್ಯತೆ ಇದೆ. ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ ಎಂದು ಇಲಾಖೆ ತಿಳಿಸಿದ್ದು, ಸದ್ಯ ತಾಂತ್ರಿಕ ಸಮಸ್ಯೆ ಪರಿಹರಿಸಲಾಗಿದ್ದು, ನಾಳೆ ಅಥವಾ ನಾಡಿದ್ದು ಗೃಹಲಕ್ಷ್ಮಿ ಹಣ ಖಾತೆಗೆ ಜಮಾ ಆಗುವ ಸಾಧ್ಯತೆ …

Read More »

ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ

ಬೆಂಗಳೂರು : ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಜಿಲ್ಲೆಯ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ. ಇಂದು ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ. ಅತ್ಯಾಚಾರ ಕುರಿತು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. …

Read More »

ಮೋದಿ ಬ್ರೂನೈಗೆ ಭೇಟಿ: ಅಭಿವೃದ್ಧಿ ನೀತಿ ಕುರಿತು ದ್ವಿಪಕ್ಷೀಯ ಮಾತುಕತೆ

ಬಂದಾರ್‌ ಸೆರಿ ಬೆಗವಾನ್‌: ಭಾರತವು ಅಭಿವೃದ್ಧಿಯ ನೀತಿಯನ್ನು ಬೆಂಬಲಿಸುತ್ತದೆಯೇ ಹೊರತು ವಿಸ್ತರಣಾ ನೀತಿಯನ್ನಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ದ್ವಿಪಕ್ಷೀಯ ಮಾತುಕತೆಗಾಗಿ ಬ್ರೂನೈಗೆ ಭೇಟಿ ನೀಡಿದ್ದ ಅವರು, ಚೀನಾ ಗುರಿಯಾಗಿರಿಸಿಕೊಂಡು ಈ ಹೇಳಿಕೆ ನೀಡಿದರು. ಅಲ್ಲದೆ, ಇಂಡೊ ಪೆಸಿಫಿಕ್‌ ಸಾಗರದಲ್ಲಿ ಮುಕ್ತ ಸಂಚಾರದ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದರು ಸುಲ್ತಾನ್ ಬೊಲ್ಕಿಯಾ ಅವರು ಆಯೋಜಿಸಿದ್ದ ಔತಣ ಕೂಟದಲ್ಲಿ ಪಾಲ್ಗೊಂಡ ಮೋದಿ, ನಾವು ಅಭಿವೃದ್ಧಿಯ ನೀತಿಯನ್ನು ಬೆಂಬಲಿಸುತ್ತೇವೆಯೇ ಹೊರತು ವಿಸ್ತರಣಾ ನೀತಿಯನ್ನು …

Read More »

ಕೊಡಗು: ಗೌರವಧನವಿಲ್ಲದೇ ಕೂಲಿ ಕೆಲಸಕ್ಕೆ ಮುಂದಾದ ಅಂಗನವಾಡಿ ಸಿಬ್ಬಂದಿ

ಕೊಡಗು : ಇವರೆಲ್ಲಾ ದೇಶದ ಮುಂದಿನ ಉತ್ತಮ ಪ್ರಜೆಗಳನ್ನು ನಿರ್ಮಿಸುವ ಅಂಗನವಾಡಿ ಶಿಕ್ಷಕಿ ಮತ್ತು ಸಹಾಯಕಿಯರು ಪುಟಾಣಿ ಮಕ್ಕಳ ಲಾಲನೆ ಪಾಲನೆ ಮಾಡುತ್ತಾ ಜೊತೆಗೆ ವಿದ್ಯೆಯನ್ನು ಕಲಿಸುವ ಕೆಲಸವನ್ನೂ ಒಟ್ಟೊಟ್ಟಿಗೆ ಮಾಡುವ ಇವರ ಹೊಟ್ಟೆಗೆ ಹಿಟ್ಟಿಲ್ಲ ಎನ್ನುವಂತ ಸ್ಥಿತಿ ನಿರ್ಮಾಣವಾಗಿದೆ. ಹೌದು ಅದಕ್ಕೆ ಕಾರಣ ಅಂಗನಾಡಿ ಶಿಕ್ಷಕಿಯರು ಮತ್ತು ಸಹಾಯಕಿಯರಿಗೆ ಪ್ರತ ತಿಂಗಳು ದೊರೆಯುವ ಗೌರವಧನ ಕಳೆದ ನಾಲ್ಕು ತಿಂಗಳಿನಿಂದ ದೊರೆತ್ತಿಲ್ಲ ಎನ್ನುವುದು. ಇದನ್ನೇ ನಂಬಿಕೊಂಡು ಸ್ವಂತ ಮನೆಯೂ ಇಲ್ಲದೆ …

Read More »