Breaking News

BigTv News

ಸಿಎಂ ಬದಲಾವಣೆ ಬಗ್ಗೆ ಸ್ಪೋಟಕ ಹೇಳಿಕೆ ನೀಡಿದ ಬಸವರಾಜ ಬೊಮ್ಮಾಯಿ

ಗದಗ : ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ರಾತ್ರೋರಾತ್ರಿ ಮುಖ್ಯಮಂತ್ರಿ ಬದಲಾವಣೆ ಸನ್ನಿಹಿತವಾಗಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷದಲ್ಲಿ ರಾತ್ರೋರಾತ್ರಿ ಎರಡು ಸಿಎಂಗಳು ಬದಲಾದ ಇತಿಹಾಸವಿದೆ. ಈಗ ಕೆಲವರು ಸಿಎಂ ಕುರ್ಚಿಗೆ ಆಸೆ ತೋರಿಸುತ್ತಿರುವುದನ್ನು ನೋಡಿದ್ರೆ ಮತ್ತೊಂದು ರಾತ್ರೋರಾತ್ರಿ ಸಿಎಂ ಬದಲಾವಣೆ ಆಗುವ ಸಾಧ್ಯತೆ ಇದೆ ಎಂದಿದ್ದಾರೆ. ವೀರೇಂದ್ರ ಪಾಟೀಲ್ ಮುಖ್ಯಮಂತ್ರಿ ಆಗಿದ್ದರೂ ರಾತ್ರೋ ರಾತ್ರಿ ಎಲ್ಲ ಶಾಸಕರು ಬದಲಾದರು ಬಳಿಕ …

Read More »

ಕಾಡಾನೆ ದಾಳಿಯಿಂದ ಸಂಕಷ್ಟಕ್ಕೆ ಸಿಲುಕಿದ ಯಲ್ಲಾಪುರ ರೈತರು

ಯಲ್ಲಾಪುರ: ತಾಲ್ಲೂಕು ಕೇಂದ್ರದಿಂದ 12 ಕಿ.ಮೀ ದೂರದಲ್ಲಿರುವ ಮದನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ರೈತರು ಕಾಡಾನೆ ದಾಳಿಯಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಲ್ಲಿನ ಹೆಗ್ಗಾಪುರ, ಕರಡೊಳ್ಳಿ, ಹುಲಗೋಡ, ಹುಣಶೆಟ್ಟಿಕೊಪ್ಪ, ಕಳಸೂರು ಭಾಗದಲ್ಲಿ ಆನೆಗಳ ಹಾವಳಿ ನಿರಂತರವಾಗಿದೆ. ಕೃಷ್ಣ ದೇಸಾಯಿ 5 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಗೋವಿನ ಜೋಳ ಆನೆದಾಳಿಗೆ ಸಂಪೂರ್ಣ ಹಾನಿಯಾಗಿದೆ. ಜೋಳ, ಕಬ್ಬು, ಭತ್ತ ಹೆಚ್ಚಾಗಿ ಬೆಳೆಯಲಾಗುತ್ತಿದ್ದು ಆನೆ ದಾಳಿಯಾಗದಂತೆ ಶಾಶ್ವತ ಪರಿಹಾರ ಕ್ರಮ ಆಗಬೇಕಿದೆ. ಬೆಳೆಹಾನಿಗೆ ಸೂಕ್ತ …

Read More »

ಚಾಮುಂಡಿ ಬೆಟ್ಟ ಸುರಕ್ಷತೆಗೆ ಟಾಸ್ಕ್ ಫೋರ್ಸ್ ರಚನೆ

ಮೈಸೂರು: ಚಾಮುಂಡೇಶ್ವರಿ ಬೆಟ್ಟವೂ ಸೇರಿದಂತೆ ಪ್ರಾಧಿಕಾರದ ಅಧೀನದ ದೇಗುಲಗಳ ಅಭಿವೃದ್ಧಿಗೆ ಮುಂದಿನ ಐದು ವರ್ಷದ ನೀಲನಕ್ಷೆ ರೂಪಿಸುವಂತೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಪ್ರಥಮ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಮಹದೇಶ್ವರ ಬೆಟ್ಟದಲ್ಲಿ ಈಗಾಗಲೇ ಅಭಿವೃದ್ಧಿ ಪ್ರಾಧಿಕಾರವಿದೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ತರುವಾಯ ಸವದತ್ತಿ ಎಲ್ಲಮ್ಮ, ಕೊಪ್ಪಳದ ಹುಲಿಗೆಮ್ಮ, ಘಾಟಿ ಸುಬ್ರಹ್ಮಣ್ಯ ದೇಗುಲಗಳಿಗೆ ಪ್ರತ್ಯೇಕ ಪ್ರಾಧಿಕಾರಗಳನ್ನು ರಚನೆ …

Read More »

ಜಮ್ಮುಕಾಶ್ಮೀರ ಚುನಾವಣೆ: ಬಿಜೆಪಿ ಜೊತೆ ಮೈತ್ರಿ ತಳ್ಳಿಹಾಕಿದ ಮೆಹಬೂಬಾ ಮುಫ್ತಿ

ಶ್ರೀನಗರ : ಜಮ್ಮುಕಾಶ್ಮೀರದಲ್ಲಿ ಬಿಜೆಪಿ ಜೊತೆ ಯಾವುದೇ ರೀತಿಯ ಮೈತ್ರಿಯನ್ನು ಮಾಡಿಕೊಳ್ಳುವ ಸಾಧ್ಯತೆಯನ್ನು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಅವರು ತಳ್ಳಿಹಾಕಿದ್ದಾರೆ. ಆದರೆ ವಿಧಾನಸಭಾ ಚುನಾವಣೆ ಬಳಿಕ ಸರಕಾರ ರಚನೆಯಲ್ಲಿ ತನ್ನ ಪಕ್ಷದ ಸೇರ್ಪಡೆಯಿಲ್ಲದೆ ಯಾವುದೇ ಸರಕಾರ ರಚನೆಯಾಗುವುದು ಅಸಾಧ್ಯವೆಂದು ಅವರು ಪ್ರತಿಪಾದಿಸಿದ್ದಾರೆ. ಶ್ರೀನಗರದಲ್ಲಿರುವ ಪಿಡಿಪಿ ಮುಖ್ಯ ಕಾರ್ಯಾಲಯದಲ್ಲಿ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು ಎದುರಾಳಿ ಪಕ್ಷವಾದ ನ್ಯಾಶನಲ್ ಕಾನ್ಫರೆನ್ಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಜಮ್ಮುಕಾಶ್ಮೀರದಲ್ಲಿ ಹೇಗಾದರೂ ಮಾಡಿ …

Read More »

ಅರಣ್ಯಾಧಿಕಾರಿಗಳು ನಿಷ್ಠುರವಾಗಿ ಅರಣ್ಯ ಒತ್ತುವರಿ ತಡೆಯಬೇಕು: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅರಣ್ಯ ಸಂಪತ್ತಿನ ಸಂರಕ್ಷಣೆಯ ಮಹತ್ವ ಅರಿತಿದ್ದ ಇಂಧಿರಾಗಾಂಧಿಯವರು ಅರಣ್ಯ ಸಂರಕ್ಷಣಾ ಕಾಯ್ದೆ ಜಾರಿಗೆ ತಂದಿದ್ದಾರೆ ಇದು ಅತ್ಯಂತ ನಿಷ್ಠುರವಾಗಿದೆ ಅರಣ್ಯಾಧಿಕಾರಿಗಳೂ ಅಷ್ಟೇ ನಿಷ್ಠುರವಾಗಿ ಕಟ್ಟು ನಿಟ್ಟಾಗಿ ಅರಣ್ಯ ಒತ್ತುವರಿಯನ್ನು ತಡೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಅರಣ್ಯ ಇಲಾಖೆ ವತಿಯಿಂದ ನಡೆದ 49 ಅರಣ್ಯ ಅಧಿಕಾರಿ ಮತ್ತು ಸಿಬ್ಬಂದಿಗೆ ಮುಖ್ಯಮಂತ್ರಿಗಳ ವಿಶಿಷ್ಟ ಸೇವಾ ಪದಕ ಪ್ರದಾನ ಸಮಾರಂಭದಲ್ಲಿ ಪದಕ ವಿತರಿಸಿ ಅವರು …

Read More »

ರಷ್ಯಾ ಕ್ಷಿಪಣಿ ದಾಳಿ: ಉಕ್ರೇನ್ ನಲ್ಲಿ 41 ಜನರ ಸಾವು

ಉಕ್ರೇನ್: ಉಕ್ರೇನ್ ಮತ್ತು ರಷ್ಯಾ ಯುದ್ಧದ ಭೀಕರತೆಗೆ ಮತ್ತೆ ಮತ್ತೆ ಅಮೂಲ್ಯ ಮತ್ತು ಅಮಾಯಕ ಜೀವಗಳು ಬಲಿಯಾಗುತ್ತಿವೆ. ಅದರಲ್ಲೂ ತನ್ನ ಮೇಲೆ ಪದೇ ಪದೇ ಅಟ್ಯಾಕ್ ಮಾಡುತ್ತಿದೆ ಉಕ್ರೇನ್ ಸೇನೆ ಎಂದು ಆಕ್ರೋಶ ಹೊರ ಹಾಕುತ್ತಿದ್ದ ರಷ್ಯಾ ಮಿಲಿಟರಿ, ಇದೀಗ ದಿಢೀರ್ ಭಾರಿ ದೊಡ್ಡದಾಗಿ ದಾಳಿ ಆರಂಭ ಮಾಡಿದೆ. ಹೀಗಾಗಿ ಉಕ್ರೇನ್ ದೇಶದ ನೆಲ ಛಿದ್ರ ಛಿದ್ರವಾಗಿ ಹೋಗುತ್ತಿದ್ದು, ಇದೀಗ ರಷ್ಯಾ ಮಿಲಿಟರಿ ನಡೆಸಿದ ಅತ್ಯಂತ ಡೆಡ್ಲಿ ಕ್ಷಿಪಣಿ ದಾಳಿಯಲ್ಲಿ …

Read More »

ಆಂಧ್ರ ತೆಲಂಗಾಣದಲ್ಲಿ ಪ್ರವಾಹ: ಸಂತ್ರಸ್ತರ ನೆರವಿಗಾಗಿ ದೇಣಿಗೆ ನೀಡಿದ ಮೆಗಾಸ್ಟಾರ್ ಚಿರಂಜೀವಿ

ಹೈದರಾಬಾದ್: ಉಭಯ ತೆಲುಗು ರಾಜ್ಯಗಳಲ್ಲಿ ಪ್ರವಾಹದ ಹಿನ್ನೆಲೆಯಲ್ಲಿ ಮೆಗಾಸ್ಟಾರ್ ಚಿರಂಜೀವಿ ಮತ್ತೊಮ್ಮೆ ತಮ್ಮ ಸಹಾನುಭೂತಿ ವ್ಯಕ್ತಪಡಿಸಿದ್ದು ಎರಡೂ ರಾಜ್ಯಗಳಿಗೆ 1ಕೋಟಿ ರೂಪಾಯಿ ನೆರವು ಘೋಷಿಸಿದ್ದಾರೆ. ಕೇರಳದ ವಯನಾಡ್ ಭೂಕುಸಿತದ ಹಿನ್ನೆಲೆಯಲ್ಲಿ ಹೆಚ್ಚು ನೆರವು ನೀಡಿದ್ದ ಟಾಲಿವುಡ್ ಮಂದಿ ಈಗ ತಮ್ಮದೇ ನೆಲದಲ್ಲಿ ಜಲತಾಂಡವವಾಡುತ್ತಿದ್ದು, ಜನ ಜಾನುವಾರು ಪ್ರಾಣ ಕಳೆದುಕೊಂಡಿದ್ದು, ಸಂತ್ರಸ್ತರಿಗೆ ಸಹಾಯ ಮಾಡಲು ಮುಂದೆ ಬಂದು ದೇಣಿಗೆಯನ್ನು ಘೋಷಿಸುತ್ತಿದ್ದಾರೆ. ವಯನಾಡ್​ ಸಂತ್ರಸ್ತರ ನೆರವಿಗೆ 1 ಕೋಟಿ ನೆರವು ನೀಡಿದ್ದ ಚಿರಂಜೀವಿ …

Read More »

ವಾಹನಗಳಿಗೆ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸಲು ಸೆ.15 ರವರೆಗೆ ಕಾಲಾವಕಾಶ

ಬೆಂಗಳೂರು: ರಾಜ್ಯದಲ್ಲಿ ಎಚ್​ಎಸ್​ಆರ್​ಪಿ ಅಳವಡಿಸಲು ಸೆಪ್ಟೆಂಬರ್ 15ರವರೆಗೆ ಅವಕಾಶ ನೀಡಲಾಗಿದ್ದು ಎಚ್ಎಸ್ಆರ್ಪಿ ಗಳನ್ನು ಪಡೆಯದ ವಾಹನ ಮಾಲೀಕರು ಸೆ.16 ರಿಂದ ದಂಡವನ್ನು ಪಾವತಿಸಬೇಕಾಗುತ್ತದೆ ಹಾಗೂ ಇತರ ದಂಡದ ಕ್ರಮವನ್ನು ಎದುರಿಸಬೇಕಾಗುತ್ತದೆ. 2019ರ ಏಪ್ರಿಲ್ 1ರ ಮೊದಲು ರಾಜ್ಯದಲ್ಲಿ ನೋಂದಣಿಯಾಗಿರುವ ಎಲ್ಲ ವಾಹನಗಳಿಗೆ ಎಚ್‌ಎಸ್‌ಆರ್ಪಿ ಅಳವಡಿಸುವುದನ್ನು ಕಡ್ಡಾಯಗೊಳಿಸಿ ಸಾರಿಗೆ ಇಲಾಖೆ ಕಳೆದ ವರ್ಷ ಆಗಸ್ಟ್ನಲ್ಲಿ ಅಧಿಸೂಚನೆ ಹೊರಡಿಸಿತ್ತು.ಹಳೆ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ ಅಳವಡಿಕೆಗೆ ಸೆಪ್ಟೆಂಬರ್‌ 15ರವರೆಗೆ ಗಡುವು ವಿಸ್ತರಿಸಲಾಗಿದೆ. …

Read More »

ಹಬ್ಬಕ್ಕೆ ಸಾಲು ಸಾಲು ರಜೆ: ಖಾಸಗಿ ಬಸ್ ದುಪ್ಪಟ್ಟು ದರದಿಂದ ಪ್ರಯಾಣಿಕರಿಗೆ ಶಾಕ್

ಬೆಂಗಳೂರು: ಸಾಲು ಸಾಲು ರಜೆ ಬಂತು ಅಂದರೆ ಖಾಸಗಿ ಬಸ್​​ಗಳಿಗೆ ಹಬ್ಬವೋ ಹಬ್ಬ ಎರಡ್ಮೂರು ಪಟ್ಟು ದರ ಏರಿಕೆ ಮಾಡಿ ಜನರಿಂದ ವಸೂಲಿ ಶುರುವಾಗುತ್ತದೆ. ಈಗ ಮತ್ತದೇ ಚಾಳಿ ಮುಂದುವರಿದಿದ್ದು , ಗೌರಿ ಗಣೇಶ ಹಬ್ಬಕ್ಕೆ ಊರಿಗೆ ಹೊರಡುವ ಪ್ರಯಾಣಿಕರಿಗೆ ಶಾಕ್ ಎದುರಾಗಿದೆ. ಗೌರಿ ಗಣೇಶ, ದಸರಾ, ದೀಪಾವಳಿ, ಸಂಕ್ರಾಂತಿ ಹೀಗೆ ಹಬ್ಬಗಳ ಸೀಸನ್ ಬಂತು ಅಂದರೆ ಖಾಸಗಿ ಬಸ್ ಮಾಲೀಕರಿಗೆ ಭರ್ಜರಿ‌ ಲಾಟರಿ. ಸಿಕ್ಕಿದ್ದೇ ಚಾನ್ಸ್ ಎಂದು ಜನರಿಂದ …

Read More »

ಹೆದ್ದಾರಿಗಳ ಅತಿಕ್ರಮಣ ಪರಿಶೀಲಿಸಲು ಸೂಚನೆ ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಹೆದ್ದಾರಿಗಳ ಅತಿಕ್ರಮಣದ ಬಗ್ಗೆ ಕಾಲಕಾಲಕ್ಕೆ ಪರಿಶೀಲನೆ ನಡೆಸಲು ತಂಡ ರಚಿಸುವಂತೆ, ಅತಿಕ್ರಮಣದ ಬಗ್ಗೆ ದೂರು ನೀಡಲು ಸಾರ್ವಜನಿಕರಿಗೆ ಸಾಧ್ಯವಾಗುವಂತೆ ಪೋರ್ಟಲ್ ಅಭಿವೃದ್ಧಿಪಡಿಸುವಂತೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಅರ್ಜಿಯೊಂದರ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅಭಯ್ ಎಸ್. ಓಕ ಮತ್ತು ಅಗಸ್ಟೀನ್ ಜಾರ್ಜ್ ಮಸೀಹ್ ಅವರು, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅತಿಕ್ರಮಣ ನಡೆದಿದೆಯೇ ಎಂಬುದನ್ನು ಕಾಲಕಾಲಕ್ಕೆ ಪರಿಶೀಲಿಸಲು ಸೂಕ್ತವಾದ ತಂಡಗಳನ್ನು ರಚಿಸುವಂತೆ ಸಚಿವಾಲಯಕ್ಕೆ …

Read More »