Breaking News

BigTv News

ಗಣೇಶ ಹಬ್ಬದೊಳಗೆ ಅಂಗನವಾಡಿ ಸಿಬ್ಬಂದಿಗೆ ಬಾಕಿ ವೇತನ: ಲಕ್ಷ್ಮೀ ಹೆಬ್ಬಾಳ್ಕರ್

ತುಮಕೂರು: ಗಣೇಶ ಹಬ್ಬದ ಒಳಗೆ ಕೋಲಾರ, ಕೊಪ್ಪಳ ಹಾಗೂ ಯಾದಗಿರಿ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಬಾಕಿ ವೇತನ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು. ಅಂಗನವಾಡಿ ಕಾರ್ಯಕರ್ತೆಯರಿಗೆ ಸಂಬಳ ಆಗದ ವಿಚಾರಕ್ಕೆ ನಗರದ ಬಾಲಭವನ ಆವರಣದಲ್ಲಿ ಮಂಗಳವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳನ್ನು ವಿತರಿಸಿದ ಬಳಿಕ ಪ್ರತಿಕ್ರಿಯಿಸಿದ ಅವರು, ಕೇಂದ್ರ ಸರ್ಕಾರ ಹಾಗೂ …

Read More »

ಅಲ್ಪಸಂಖ್ಯಾತ ಅಭ್ಯರ್ಥಿಗಳಿಗೆ ಐಎಎಸ್ ಕೆಎಎಸ್ ಸ್ಪರ್ಧಾತ್ಮಕ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಪ್ರಸಕ್ತ ಸಾಲಿನ ‌ಅಲ್ಪಸಂಖ್ಯಾತರ ಅಭ್ಯರ್ಥಿಗಳಿಗೆ ಐ.ಎ.ಎಸ್, ಕೆ.ಎ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ಪರೀಕ್ಷಾ ಪೂರ್ವ ತರಬೇತಿ ನೀಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತರ ಅಭ್ಯರ್ಥಿಗಳಿಗೆ 2024-25 ನೇ ಸಾಲಿಗೆ ಐ.ಎ.ಎಸ್/ಕೆ.ಎ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ಪರೀಕ್ಷಾ ಪೂರ್ವ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಸೇವಾಸಿಂಧು ಪೋರ್ಟಲ್ನಲ್ಲಿ (https://sevasindhu.karnataka.gov.in) ಅರ್ಜಿ ಸಲ್ಲಿಸಬಹುದು. ಅರ್ಹ ಅಭ್ಯರ್ಥಿಗಳು ಕೂಡಲೇ ಇದರ ಸದುಪಯೋಗಪಡಿಸಿಕೊಳ್ಳಲು ಕೋರಿದೆ. …

Read More »

10 ಸಾವಿರ ಅಡಿ ಎತ್ತರದಿಂದ ಬಿದ್ದು ಪರ್ವತಾರೋಹಿ ಸಾವು

ಇಟಲಿ: ಸ್ವಿಸ್ ಗಡಿಯಿಂದ ಕೆಲವೇ ಮೈಲಿ ದೂರದಲ್ಲಿ ಭಾನುವಾರ ಸಂಭವಿಸಿದ ಅಪಘಾತದಲ್ಲಿ ಪರ್ವತಾರೋಹಿಯಾಗಿದ್ದ ಆಡಿ ಕಂಪನಿಯ ಉನ್ನತ ಕಾರ್ಯನಿರ್ವಾಹಕರೊಬ್ಬರು 10 ಸಾವಿರ ಅಡಿ ಎತ್ತರದಿಂದ ಬಿದ್ದು ಸಾವನ್ನಪ್ಪಿದ್ದಾರೆ ಎಂದು ವರದಿಗಳು ತಿಳಿಸಿವೆ. ಐಷಾರಾಮಿ ಕಾರು ಕಂಪನಿಯ ಇಟಲಿ ಮೂಲದ ಕಾರ್ಯಾಚರಣೆಗಳನ್ನು ನಡೆಸುತ್ತಿರುವ 62 ವರ್ಷದ ಫ್ಯಾಬ್ರಿಜಿಯೊ ಲಾಂಗೊ ಅವರು ಉತ್ತರ ಇಟಲಿಯ ಆಡಮೆಲ್ಲೊ ಪರ್ವತಗಳಲ್ಲಿನ ಸಿಮಾ ಪೇಯರ್ ಅನ್ನು ಏರುತ್ತಿದ್ದಾಗ ಶಿಖರದ ಬಳಿ ಬಿದ್ದಿದ್ದಾರೆ ಎಂದು ಯುರೋಪಿಯನ್ ಮೂಲದ ಹಲವಾರು …

Read More »

ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆ: ಸಮೀಕ್ಷೆಯಲ್ಲಿ ಇಂಡಿಯಾ ಮೈತ್ರಿಕೂಟಕ್ಕೆ ಮೇಲುಗೈ

ಶ್ರೀನಗರ : ಬರೋಬ್ಬರಿ ಹತ್ತು ವರ್ಷಗಳ ನಂತರ ಚುನಾವಣೆ ನಡೆಯುತ್ತಿರುವ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆ ದೇಶದ ಗಮನ ಸೆಳೆದಿದೆ. ಇದೀಗ ಚುನಾವಣಾ ಪೂರ್ವ ಸಮೀಕ್ಷೆಯೊಂದು ಹೊರಬಿದ್ದಿದ್ದು, ಈ ಬಾರಿ ಬಿಜೆಪಿಗೆ ತೀರ ಮುಖಭಂಗವಾಗುವ ಸಾಧ್ಯತೆ ಇದೆ. ಅಲ್ಲದೇ ಕಾಂಗ್ರೆಸ್‌ ಎನ್‌ಸಿ ಮೈತ್ರಿಕೂಟ ಪರ ಜನರ ನಿಲುವು ಹೆಚ್ಚಿದೆ ಎಂಬುದು ಬಯಲಾಗಿದೆ.90 ಸದಸ್ಯ ಬಲದ ಜಮ್ಮು ಮತ್ತು ಕಾಶ್ಮೀರದ ವಿಧಾಸಭೆ ಚುನಾವಣೆ ಕುರಿತು ಎಲೆಕ್ಷನ್ ಟ್ರ್ಯಾಕರ್ ಮತದಾರರ ಅಭಿಪ್ರಾಯ …

Read More »

ತುಮಕೂರಿನಲ್ಲಿ ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ ಕಾರ್ಯಕ್ರಮ

ತುಮಕೂರು : ನಗರದಲ್ಲಿ ಇಂದು ಸರ್ಕಾರದಿಂದ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ನಡೆಯಿತು. ಸಾಮೂಹಿಕ ಸೀಮಂತ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ‌ಹೆಬ್ಬಾಳ್ಕರ್ ಅವರು ಭಾಗವಹಿಸಿ ಮಡಿಲು ತುಂಬಿದ್ದಾರೆ. ಈ ಸಂದರ್ಭದಲ್ಲಿ ಮಗುವಿನ ಆಗಮನದಲ್ಲಿರುವ ಮಹಿಳೆಯರಿಗೆ ಸಚಿವೆ ಲಕ್ಷ್ಮೀ ‌ಹೆಬ್ಬಾಳ್ಕರ್ ಶುಭ ಕೋರಿದ್ದಾರೆ. ತುಮಕೂರಿನ ಬಾಲಭವನದ ಆವರಣದಲ್ಲಿ ಇಂದು ಸಾಮೂಹಿಕ ಸೀಮಂತ ಕಾರ್ಯಕ್ರಮದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅದ್ಧೂರಿ ಸ್ವಾಗತ ಕೋರಲಾಯಿತು.ಪಟಾಕಿ ಸಿಡಿಸಿ ಪೂರ್ಣ …

Read More »

ಕಲಬುರಗಿಯಲ್ಲಿ ಮೆಗಾ ಜವಳಿ ಪಾರ್ಕ್‌ ನಿರ್ಮಾಣ

ಕಲಬುರಗಿ: ಜಿಲ್ಲೆಯ 1,000 ಎಕರೆ ಪ್ರದೇಶದಲ್ಲಿ ಪಿ.ಪಿ.ಪಿ ಮಾದರಿಯಲ್ಲಿ ಮೆಗಾ ಜವಳಿ ಪಾರ್ಕ್‌ನ್ನು ಸ್ಥಾಪಿಸಲಾಗುತ್ತಿದ್ದು ಇದರಿಂದ 1 ಲಕ್ಷ ಜನರಿಗೆ ನೇರ ಉದ್ಯೋಗ ಹಾಗೂ 2 ಲಕ್ಷ ಜನರಿಗೆ ಪರೋಕ್ಷ ಉದ್ಯೋಗ ಸೃಜನೆಯಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ಈ ಯೋಜನೆಗೆ ಪೂರಕವಾದ ಮೂಲ ಸೌಕರ್ಯಕ್ಕಾಗಿ 50 ಕೋಟಿ ರೂ. ಅನುದಾನವನ್ನು ಈ ಬಾರಿಯ ಆಯವ್ಯಯದಲ್ಲಿ ಘೋಷಿಸಲಾಗಿದೆ ಎಂದೂ ಸಚಿವರು ಹೇಳಿದ್ದಾರೆ.ಕಲಬುರಗಿ ಜಿಲ್ಲಾಧಿಕಾರಿ …

Read More »

ಗಣೇಶ ಹಬ್ಬ: ಪ್ರಯಾಣಿಕರಿಗೆ ಊರಿಗೆ ತೆರಳಲು ವಿಶೇಷ ರೈಲು ಸೇವೆ

ಬೆಂಗಳೂರು: ಗೌರಿ ಗಣೇಶ ಹಬ್ಬದ ಪ್ರಯುಕ್ತ ಊರಿಗೆ ಹೋಗುವವರಿಗೆ ರೈಲ್ವೆ ಇಲಾಖೆಯಿಂದ ಸಿಹಿ ಸುದ್ದಿ ನೀಡಲಾಗಿದೆ. ಗೌರಿ ಗಣೇಶ ಹಬ್ಬಕ್ಕೆ ಊರಿಗೆ ಹೋಗುವ ಪ್ರಯಾಣಿಕರ ಸಂಖ್ಯೆ ಹೆಚ್ಚಿರಲಿದೆ ಎಂಬುದನ್ನು ಮನಗಂಡ ರೈಲ್ವೆ ಇಲಾಖೆಯು ಭುವನೇಶ್ವರ ಬೆಳಗಾವಿ ನಡುವೆ ವಿಶೇಷ ರೈಲು ಸೇವೆಯನ್ನು ನೀಡಲು ಮುಂದಾಗಿದೆ. ನಮ್ಮ ದೇಶದಲ್ಲಿ ಗೌರಿ ಗಣೇಶ ಹಬ್ಬವನ್ನು ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತದೆ. ಇನ್ನು ಹುಬ್ಬಳ್ಳಿ ಧಾರವಾಡ, ಬೆಳಗಾವಿ, ಗೋವಾ, ಮುಂಬೈ ನಗರಗಳಲ್ಲಿ ಗಣೇಶ ಹಬ್ಬವನ್ನು ಜಾತ್ರೆಗಿಂತಲೂ …

Read More »

ಚಾಮುಂಡಿ ಬೆಟ್ಟ ಅಭಿವೃದ್ಧಿಗೆ ಅಗತ್ಯ ಕ್ರಮ: ಸಿಎಂ ಸಿದ್ದರಾಮಯ್ಯ

ಮೈಸೂರು: ಮೈಸೂರು ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಡ ಅಧಿದೇವತೆ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕುರಿತು ಸಭೆಯನ್ನು ನಡೆಸಿದ್ದಾರೆ. ಮೊದಲಿಗೆ ದೇವಿ ದರ್ಶನ ಪಡೆದ ಸಿಎಂ ಆ ಬಳಿಕ ಸಚಿವರು, ಶಾಸಕರು ಹಾಗೂ ಅಧಿಕಾರಿಗಳೊಂದಿಗೆ ಪ್ರಾಧಿಕಾರದ ಸಭೆ ನಡೆಸಿದ್ದು, ಅಧಿಕಾರಿಗಳಿಂದ ಬೆಟ್ಟದ ಅಭಿವೃದ್ಧಿಯ ಬಗ್ಗೆ ಮಾಹಿತಿ ಪಡೆದು ಅಗತ್ಯ ಕ್ರಮ ಕೈಗೊಳ್ಳುವಮತೆ ಸೂಚನೆ ನೀಡಿದ್ದಾರೆ. ಸಭೆಯ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಚಾಮುಂಡಿ ಬೆಟ್ಟದಲ್ಲಿ ಪ್ರಸಾದ ವಿತರಣೆಗೆ ಕ್ರಮ ಕೈಗೊಳ್ಳುತ್ತೇವೆ. …

Read More »

ಅತ್ಯಾಚಾರ ವಿರೋಧಿ ಮಸೂದೆಯನ್ನು ಅಂಗೀಕರಿಸಿದ ಪಶ್ಚಿಮ ಬಂಗಾಳ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆಯು ಇಂದು ಹೊಸದಾಗಿ ಪ್ರಸ್ತಾಪಿಸಿದ ಅತ್ಯಾಚಾರ ವಿರೋಧಿ ಮಸೂದೆಯನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಬಿಜೆಪಿ ನಾಯಕ ಮತ್ತು ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಅವರು ಮಸೂದೆಗೆ ತಿದ್ದುಪಡಿಗಳನ್ನು ಪ್ರಸ್ತಾಪಿಸಿದ್ದಾರೆ. ಕಳೆದ ತಿಂಗಳು ಕೋಲ್ಕತ್ತಾದ ಆರ್ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರ ಕೊಲೆಯಾದ ಹಿನ್ನೆಲೆಯಲ್ಲಿ ಟಿಎಂಸಿ ಸರ್ಕಾರ ಎರಡು ದಿನಗಳ ವಿಧಾನಸಭೆಯ ವಿಶೇಷ ಅಧಿವೇಶನವನ್ನು ಕರೆದಿದೆ. ಇಂದು ಬೆಳಿಗ್ಗೆ ಮಸೂದೆಯನ್ನು …

Read More »

ಚೆನೈ ತ್ಯಾಜ್ಯ ನಿರ್ವಹಣೆ ಅಧ್ಯಯನಕ್ಕೆ ಭೇಟಿ ನೀಡಿದ ಡಿಕೆಶಿ

ಚೆನೈ: ಚೆನೈನ ಚೆಟ್​ಪೇಟೆಯಲ್ಲಿರುವ ಬಯೋ ಸಿಎನ್​ಜಿ ಘಟಕಕ್ಕೆ ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ ನೀಡಿದ್ದು ಘನ ತ್ಯಾಜ್ಯ ವಿಲೇವಾರಿ ಮತ್ತು ನಿರ್ವಹಣೆ ಸಂಬಂಧ ಮಾಹಿತಿ ಪಡೆದಿದ್ದಾರೆ. ಈ ವೇಳೆ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಘನ ತ್ಯಾಜ್ಯ ನಿರ್ವಹಣೆಯಲ್ಲಿ ಚೆನ್ನೈ ಮಾದರಿ ಅಧ್ಯಯನ ಮಾಡಲು ನಾನು ನನ್ನ ತಂಡದೊಂದಿಗೆ ಇಲ್ಲಿಗೆ ಬಂದಿದ್ದೇವೆ, ಇಲ್ಲಿನ ತ್ಯಾಜ್ಯ ನಿರ್ವಹಣೆಯಿಂದ ಸಾಕಷ್ಟು ವಿಚಾರಗಳನ್ನು ತಿಳಿದುಕೊಂಡಂತಾಯಿತು.ಕಳೆದ ಒಂದು ವರ್ಷದಿಂದ ಭೇಟಿ ನೀಡಬೇಕು ಎಂದುಕೊಂಡಿದ್ದೆ. ಈಗ ಸಮಯ …

Read More »