Breaking News

BigTv News

ತನ್ನ ಗ್ಯಾರೇಜ್ ಬಳಿ ಮೂತ್ರ ವಿಸರ್ಜಿಸಿದ್ದಕ್ಕೆ ವ್ಯಕ್ತಿಯ ಹತ್ಯೆ: ಕಾರು ಮೆಕ್ಯಾನಿಕ್ ಬಂಧನ

ಬೆಂಗಳೂರು ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗ್ಯಾರೇಜ್‌ ಪಕ್ಕದಲ್ಲಿ ಮೂತ್ರ ವಿಸರ್ಜನೆ ಮಾಡಿದ ವಿಚಾರಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರು ಮೆಕ್ಯಾನಿಕ್ ಮೊಹಮ್ಮದ್ ಯೂಸೆಫ್ (30)ನನ್ನು ಪೊಲೀಸರು ಬಂಧಿಸಿದ್ದಾರೆ. ಜುಲೈ 28ರಂದು ರಾತ್ರಿ ಮದ್ಯ ಸೇವಿಸಿ ಮನೆಗೆ ತೆರಳುತ್ತಿದ್ದ ಕುಮಾರ್ (43) ಗ್ಯಾರೇಜ್ ಬಳಿ ಮೂತ್ರ ವಿಸರ್ಜನೆ ಮಾಡುತ್ತಿದ್ದ ವೇಳೆ ಆರೋಪಿ ಜಗಳ ಆರಂಭಿಸಿದ್ದಾನೆ. ಬಳಿಕ ಬೈಕ್‌ನಿಂದ ಕುಮಾರ್ ಅವರನ್ನು ಕೆಳಗೆ ಎಳೆದಿದ್ದು, ಅವರು …

Read More »

ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಭೀಕರ ಕೊಲೆ: ಅಪ್ರಾಪ್ತರು ಸೇರಿ 8 ಮಂದಿಯ ಬಂಧನ

ಅಸ್ಸಾಂನ ಹೈಲಕಂಡಿ ಜಿಲ್ಲೆಯಲ್ಲಿ 15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಬರ್ಬರವಾಗಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಹದಿಹರೆಯದವರೂ ಸೇರಿ ಒಟ್ಟು ಎಂಟು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆಯ ಖಾಸಗಿ ಅಂಗಗಳನ್ನು ವಿರೂಪಗೊಳಿಸಲಾಗಿದ್ದು, ದೇಹದ ಹಲವು ಭಾಗಗಳಲ್ಲಿ ಚಿತ್ರಹಿಂಸೆಯ ಗಾಯದ ಗುರುತುಗಳು ಪತ್ತೆಯಾಗಿವೆ. ಕುಟುಂಬದವರೊಂದಿಗೆ ಔತಣಕೂಟಕ್ಕೆ ತೆರಳಿದ್ದ ಬಾಲಕಿ ರಾತ್ರಿ ಒಬ್ಬಳೇ ಮನೆಗೆ ಮರಳಿದ್ದಳು. ಬಳಿಕ ಮನೆಯವರು ಮನೆಗೆ ಬಂದಾಗ ಆಕೆ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಪ್ರಕರಣ …

Read More »

ಲೈನ್ ಆಫ್ ಮಾಹಿತಿ ವಿವಾದ: ಮೆಸ್ಕಾಂ ಎ.ಇ. ವಿರುದ್ಧ ಹಲ್ಲೆ ಆರೋಪ; ಪೊಲೀಸರಿಗೆ ದೂರು

ಸುಳ್ಯ ಮೆಸ್ಕಾಂ ಕಚೇರಿಯಲ್ಲಿ ಲೈನ್ ಆಫ್ ಮಾಡಿದ ಕುರಿತು ಮುಂಚಿತವಾಗಿ ಮಾಹಿತಿ ನೀಡಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಸಹಾಯಕ ಎಂಜಿನಿಯರ್ (ಎ.ಇ.) ಒಬ್ಬರು ಆಪರೇಟರ್ ಮೇಲೆ ಹಲ್ಲೆ ನಡೆಸಿದ ಘಟನೆ ಸೋಮವಾರ ನಡೆದಿದೆ. ಗಾಯಗೊಂಡ ಆಪರೇಟರ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದ ಬಳಿಕ ಪೊಲೀಸರಿಗೆ ದೂರು ನೀಡಿದ್ದಾರೆ. 33 ಕೆವಿ ವಿದ್ಯುತ್ ಮಾರ್ಗದ ಜಂಪರ್ ದುರಸ್ತಿಗಾಗಿ ಆಪರೇಟರ್ ರಾಘವ ಅವರು ಲೈನ್ ಆಫ್ ಮಾಡಿದ್ದು, ಈ ಬಗ್ಗೆ ವಿಭಾಗದ ಮುಖ್ಯಸ್ಥರಿಗೆ …

Read More »

ಹುಬ್ಬಳ್ಳಿ-ವಿಜಯಪುರ ಬಸ್ ಅಪಘಾತ! 9 ಪ್ರಯಾಣಿಕರು ಆಸ್ಪತ್ರೆಗೆ ದಾಖಲು

ಹುಬ್ಬಳ್ಳಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KKRTC) ಬಸ್‌ ಚಾಲಕನ ನಿಯಂತ್ರಣ ತಪ್ಪಿ ನವಲಗುಂದ ತಾಲೂಕಿನ ಅಮರಗೋಳ ಕ್ರಾಸ್‌ ಬಳಿ ರಸ್ತೆ ಪಕ್ಕಕ್ಕೆ ಉರುಳಿ ಅಪಘಾತಕ್ಕೀಡಾಗಿದೆ. ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 38 ಮಂದಿಯಲ್ಲಿ ನಿರ್ವಾಹಕ ಸೇರಿ 9 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಹುಬ್ಬಳ್ಳಿಯಿಂದ ವಿಜಯಪುರಕ್ಕೆ ತೆರಳುತ್ತಿದ್ದ ಕೆಎ28 ಎಫ್ 2263 ಸಂಖ್ಯೆಯ ಬಸ್ ರಾಷ್ಟ್ರೀಯ ಹೆದ್ದಾರಿ 218ರಲ್ಲಿ ಸಂಚರಿಸುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. …

Read More »

ಬರೋಬ್ಬರಿ 5.50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಎಸಿ ಲೋಕಾಯುಕ್ತ ಬಲೆಗೆ!

ಮೈಸೂರು: ಜಮೀನಿನ ಕಂದಾಯ ಮೇಲ್ಮನವಿ ಇತ್ಯರ್ಥಪಡಿಸಲು 10 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದಲ್ಲಿ ಮೈಸೂರು ಜಿಲ್ಲೆಯ ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 5.50 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಎಸಿ ಕಾವ್ಯಾರಾಣಿ ಹಾಗೂ ಕಚೇರಿಯ ಗುಮಾಸ್ತ ಶಿವಕುಮಾರ್ ಅವರನ್ನು ವಶಕ್ಕೆ ಪಡೆದಿದ್ದಾರೆ. ಹೆಚ್.ಡಿ. ಕೋಟೆ ತಾಲೂಕಿನ ಜಮೀನಿನ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ನಿರ್ದೇಶನವಿದ್ದರೂ ಕೆಲಸ …

Read More »

ಸಂಪುಟ ವಿಸ್ತರಣೆ ಬೆನ್ನಲ್ಲೆ ಭುಗಿಲೆದ್ದ ಅಸಮಾಧಾನ: ಶಾಸಕ ಸ್ಥಾನಕ್ಕೆ ಯಶವಂತರಾಯ ಗೌಡ ರಾಜೀನಾಮೆ!

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಅಸಮಾಧಾನದ ಹೊಗೆ ಜೋರಾಗಿದೆ. ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಹಲವು ನಾಯಕರ ಬೆಂಬಲಿಗರು ರಾಜ್ಯದ ವಿವಿಧೆಡೆ ಪ್ರತಿಭಟನೆ ನಡೆಸುತ್ತಿದ್ದು, ಮೈಸೂರಿನಲ್ಲಿ ಶಾಸಕ ತನ್ವೀರ್ ಸೇಠ್ ಅವರ ಬೆಂಬಲಿಗರು ಬೀದಿಗಿಳಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆ ವೇಳೆ ಬೆಂಬಲಿಗನೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಈ ಘಟನೆ ಸಚಿವ ಸ್ಥಾನ ಹಂಚಿಕೆ ಕುರಿತ ಅಸಮಾಧಾನ ಎಷ್ಟರ ಮಟ್ಟಿಗೆ …

Read More »

ಸಿದ್ದರಾಮಯ್ಯ ಆಪ್ತ ಸಂತೋಷ್‌ ಲಾಡ್‌ಗೆ ಮತ್ತೆ ಒಲಿದ ಸಚಿವ ಸ್ಥಾನ

ಧಾರವಾಡ: ಕಲಘಟಗಿ ಕ್ಷೇತ್ರದ ಶಾಸಕ ಸಂತೋಷ್‌ ಎಸ್‌.ಲಾಡ್‌ ಅವರಿಗೆ ಮತ್ತೆ ಸಚಿವ ಸ್ಥಾನ ಒಲಿದಿದೆ. ‌ಮೂರನೇ ಬಾರಿಗೆ ಅವರಿಗೆ ಸಚಿವರಾಗುವ ಅವಕಾಶ ಲಭಿಸಿದೆ. ಲಾಡ್‌ ಅವರು ಮರಾಠ ಸಮುದಾಯದವರು. ಈ ಹಿಂದೆ ಸಿದ್ದರಾಮಯ್ಯ ಸಂಪುಟದಲ್ಲಿ ಲಾಡ್‌ ಅವರು ಕಾರ್ಮಿಕ ಸಚಿವ ಮತ್ತು ಧಾರವಾಡ ಜಿಲ್ಲಾ ಉಸ್ತವಾರಿ ಸಚಿವರಾಗಿದ್ದರು. 2013ರಲ್ಲಿ ಅವರು ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಸಚಿವರಾಗಿದ್ದರು. ಸಂತೋಷ್‌ ಲಾಡ್‌ ಅವರು ಸಿದ್ದರಾಮಯ್ಯ ಅವರ ಆಪ್ತರು. ಸಂತೋಷ್‌ ಅವರು ಲಾಡ್‌ …

Read More »

ಚಾಮರಾಜಪೇಟೆ ಪೊಲೀಸ್ ಠಾಣೆ ಬಳಿಯೇ ಕೊಕೇನ್ ಡೆಲಿವರಿ ದಂಧೆ! 50 ಲಕ್ಷ ರೂ. ಮೌಲ್ಯದ ಡ್ರಗ್ಸ್ ಜಪ್ತಿ

ಬೆಂಗಳೂರು ಚಾಮರಾಜಪೇಟೆ ಪೊಲೀಸ್ ಠಾಣೆ ಸಮೀಪ ಡೆಲಿವರಿ ಬೈಕ್ ಸೇವೆ ಬಳಸಿಕೊಂಡು ಕೊಕೇನ್ ಸಾಗಿಸುತ್ತಿದ್ದ ಆರೋಪದ ಮೇಲೆ 30 ವರ್ಷದ ರಾಜು ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಅನುಮಾನಾಸ್ಪದವಾಗಿ ಪದೇಪದೆ ಡೆಲಿವರಿ ಬೈಕ್‌ಗಳು ಅಪಾರ್ಟ್‌ಮೆಂಟ್‌ಗೆ ಬರುತ್ತಿದ್ದುದನ್ನು ಗಮನಿಸಿದ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಸೆರೆಹಿಡಿದಿದ್ದಾರೆ. ಪರಿಶೀಲನೆ ವೇಳೆ ಚಾಕೊಲೇಟ್ ಬಾಕ್ಸ್‌ಗಳೊಳಗೆ ಬಚ್ಚಿಟ್ಟಿದ್ದ 116.3 ಗ್ರಾಂ ಕೊಕೇನ್ ಪತ್ತೆಯಾಗಿದ್ದು, ಇದರ ಮೌಲ್ಯ ಸುಮಾರು ₹50 ಲಕ್ಷ ಎಂದು ಅಂದಾಜಿಸಲಾಗಿದೆ. ಡೆಲಿವರಿ ರೈಡರ್‌ಗಳಿಗೆ ವೇಗವಾಗಿ …

Read More »

ಹಾಸನದಲ್ಲಿ ಆಘಾತಕಾರಿ ಘಟನೆ: ತಂದೆ ಮೊಬೈಲ್ ಕೊಡಿಸದಿದ್ದಕ್ಕೆ ನೇಣು ಬಿಗಿದುಕೊಂಡು 13 ವರ್ಷದ ಬಾಲಕ ಆತ್ಮಹತ್ಯೆ

ಹಾಸನ ಹೊರವಲಯದ ಯಡಿಯೂರು ಗ್ರಾಮದಲ್ಲಿ ತಂದೆ ಮೊಬೈಲ್ ಫೋನ್ ಕೊಡಿಸದಿದ್ದಕ್ಕೆ ಮನನೊಂದು 13 ವರ್ಷದ ಪ್ರೀತಮ್ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ. ಪ್ರೀತಮ್ ಎಂಟನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಎನ್ನಲಾಗಿದೆ. ಮೊಬೈಲ್‌ಗಾಗಿ ಪದೇ ಪದೇ ಒತ್ತಾಯಿಸಿದರೂ, ಓದಿನ ಮೇಲೆ ಪರಿಣಾಮ ಬೀಳಬಹುದು ಎಂದು ತಂದೆ ನಿರಾಕರಿಸಿದ್ದರು. ಇದರಿಂದ ಮನನೊಂದ ಬಾಲಕ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಆಸ್ಪತ್ರೆಗೆ ಕರೆದೊಯ್ದರೂ ಬಾಲಕ …

Read More »

ಚುನಾವಣಾ ಆಯೋಗದ ಅಧಿಕಾರಿ ಹೆಸರಿನಲ್ಲಿ ಕರೆ ಮಾಡಿ ವೃದ್ಧನಿಗೆ 3.5 ಲಕ್ಷ ರೂ. ವಂಚಿಸಿದ ಸೈಬರ್ ಕಳ್ಳ!

ಬೆಂಗಳೂರು ನಗರದ 82 ವರ್ಷದ ಪಾರ್ಥಸಾರಥಿ ಎಂಬುವವರಿಗೆ ಚುನಾವಣಾ ಆಯೋಗದ ಅಧಿಕಾರಿ ಎಂದು ಕರೆ ಮಾಡಿದ ಸೈಬರ್ ವಂಚಕ, SIR ಅರ್ಜಿ ತಿರಸ್ಕೃತವಾಗಿದೆ ಎಂದು ನಂಬಿಸಿ ವಾಟ್ಸ್‌ಆಯಪ್ ಮೂಲಕ ಲಿಂಕ್ ಕಳುಹಿಸಿದ್ದ. ಅದರಲ್ಲಿ ವೈಯಕ್ತಿಕ ಮಾಹಿತಿ ಭರ್ತಿ ಮಾಡಿ ₹5 ನೋಂದಣಿ ಶುಲ್ಕ ಪಾವತಿಸುವಂತೆ ಸೂಚಿಸಿದ್ದಾನೆ. ವೃದ್ಧರು ₹5 ಪಾವತಿಸಲು ಪ್ರಯತ್ನಿಸಿದಾಗ ವಹಿವಾಟು ವಿಫಲವಾಗಿದೆ ಎಂದು ತೋರಿಸಿದೆ. ಬಳಿಕ ಕ್ಯೂಆರ್ ಕೋಡ್ ಕಳುಹಿಸುವುದಾಗಿ ಹೇಳಿದ ವಂಚಕ, ಅವರ ಕ್ರೆಡಿಟ್ ಕಾರ್ಡ್‌ನಿಂದ …

Read More »