Breaking News

BigTv News

ಸಂಬಳ ಇಲ್ಲದೇ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಪರದಾಟ

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವಡೆ ಕಳೆದ 3-4 ತಿಂಗಳಿನಿಂದ ಸಂಬಳ ಬಾರದೇ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಪರದಾಟ ನಡೆಸುತ್ತಿದ್ದಾರೆ. ಕಳೆದ ಮೂರು ತಿಂಗಳಿಂದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿಯರಿಗೆ ಗೌರವಧನ ನೀಡುತ್ತಿಲ್ಲ ಎಂದು ಅಂಗನವಾಡಿ ಸಿಬ್ಬಂದಿ ತಮ್ಮ ಅಳಲು ತೋಡಿಕೊಳ್ಳುತ್ತಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ನಮಗೆ ಪ್ರತಿ ತಿಂಗಳು ಸರಿಯಾಗಿ ಗೌರವಧನ ನೀಡುತ್ತಿಲ್ಲ. ಎರಡು, ಮೂರು ತಿಂಗಳಿಗೊಮ್ಮೆ ನೀಡುತ್ತಿದ್ದಾರೆ. ಕೇಳಿದರೆ ಸರ್ಕಾರದಿಂದ ಅನುದಾನ …

Read More »

ರಾಷ್ಟ್ರಮಟ್ಟದಲ್ಲೂ ಮಿಂಚಲು ಸಜ್ಜಾದ ನಂದಿನಿ ಬ್ರ್ಯಾಂಡ್

ಬೆಂಗಳೂರು:- ಕರ್ನಾಟಕ ಹಾಲು ಒಕ್ಕೂಟ ಮಹಾಮಂಡಳ ಉತ್ಪಾದಿಸುವ ನಂದಿನಿ ಹಾಲನ್ನು ದೆಹಲಿಗೂ ಸರಬರಾಜು ಮಾಡುವಂತೆ ಬೇಡಿಕೆ ಬಂದಿದೆ. ನಂದಿನಿ ಹಾಲನ್ನು ರಾಷ್ಟ್ರ ರಾಜಧಾನಿ ದೆಹಲಿಗೂ ಕಳುಹಿಸುವಂತೆ ದೆಹಲಿ ಸರ್ಕಾರ ಮನವಿ ಮಾಡಿದೆ. ಪ್ರತಿನಿತ್ಯ ದೆಹಲಿಗೆ 1 ಲಕ್ಷ ಲೀಟರ್ ಹಾಲನ್ನು ಸರಬರಾಜು ಮಾಡುವಂತೆ ದೆಹಲಿ ಸರ್ಕಾರದಿಂದ ಮನವಿ ಮಾಡಲಾಗಿದೆ. ದೇಶದ ಮೆಟ್ರೋ ಪಾಲಿಟಿನ್ ಸಿಟಿಯಾಗಿರುವ ದೆಹಲಿ ಕೇಂದ್ರಾಡಳಿತ ಪ್ರದೇಶ ಆಗಿದ್ದರೂ ಪ್ರತ್ಯೇಕ ಸರ್ಕಾರದ ವ್ಯವಸ್ಥೆಯನ್ನು ಹೊಂದಿದೆ. ಇಲ್ಲಿನ ಜನಸಂಖ್ಯೆಗೆ ಅನುಗುಣವಾಗಿ …

Read More »

402 ಪಿಎಸ್ಐ ಹುದ್ದೆಗಳಿಗೆ ಸೆ.22 ರಂದು ಪರೀಕ್ಷೆ

ಬೆಂಗಳೂರು : ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 402 ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಸೆ.22ರಂದು ನಡೆಯುವ ಪರೀಕ್ಷೆಗೆ ಅಭ್ಯರ್ಥಿಗಳು ಕುರ್ತಾ, ಪೈಜಾಮಾ ಮತ್ತು ಜೀನ್ಸ್‌ ಪ್ಯಾಂಟ್ ಧರಿಸಿ ಬರುವುದನ್ನು ನಿರ್ಬಂಧಿಸಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಸರಳವಾದ ವಸ್ತ್ರಗಳನ್ನು ಧರಿಸುವಂತೆ ಸೂಚಿಸಿದೆ. ಪರೀಕ್ಷೆಗೆ 66 ಸಾವಿರ ಅಭ್ಯರ್ಥಿಗಳು ಹಾಜರಾಗಲಿದ್ದು, ಸುಗಮವಾಗಿ ನಡೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪರೀಕ್ಷೆಗೆ ಒಂದು ವಾರ ಮೊದಲು ಪ್ರವೇಶ ಪತ್ರ ಬಿಡುಗಡೆ ಮಾಡಲಾಗುವುದು ಎಂದು …

Read More »

ಭಾರತದ ಜೊತೆ ಹೊಂದಾಣಿಕೆ ಭಾವನೆಗೆ ಮುಂದಾದ ಬಾಂಗ್ಲಾದೇಶ

ನವದೆಹಲಿ: ಭಾರತದ ಜೊತೆಯಲ್ಲಿ ಕಿರಿಕ್ ಮಾಡಿಕೊಳ್ಳಲು ಸಜ್ಜಾದಂತೆ ಕಾಣುತ್ತಿದ್ದ ಬಾಂಗ್ಲಾದೇಶ ಈಗ ಮಂಡಿ ಊರುವ ಪರಿಸ್ಥಿತಿ ಬಂದಿದೆ. ಆಂತರಿಕ ಹಿಂಸಾಚಾರದಲ್ಲಿ ನಲುಗಿ ಹೋದ, ಭಾರತದ ನೆರೆಯ ದೇಶ ಬಾಂಗ್ಲಾ ಇದೀಗ ಭಾರತದ ಜೊತೆಗೆ ಹೊಂದಾಣಿಕೆ ಮಾಡಿಕೊಂಡು, ಜೀವನ ನಡೆಸಲು ಸಿದ್ಧವಾಗಿರುವ ಸೂಚನೆ ನೀಡಿದೆ. ಬಾಂಗ್ಲಾದೇಶ ಹಿಂಸಾಚಾರದ ಬೆಂಕಿಯಲ್ಲಿ ನರಳಿದ ನಂತರ ಕೈಯಲ್ಲಿ ಕಾಸು ಇಲ್ಲದೆ ತೀವ್ರ ಪರದಾಟ ಪಡುತ್ತಿದೆ. ಅದರಲ್ಲೂ ಬಾಂಗ್ಲಾದೇಶ ಜನರು ಇಷ್ಟೆಲ್ಲಾ ಹಿಂಸಾಚಾರ ನಡೆಸಿದ್ದ ಕಾರಣಕ್ಕೆ, ಅಲ್ಲಿದ್ದ …

Read More »

ಶಾಸಕ ಕೋನರೆಡ್ಡಿ ಮನೆಯಲ್ಲಿ ಜವಾರಿ ಊಟ ಸವಿದ ಜಮೀರ್ ಅಹ್ಮದ್

ಧಾರವಾಡ: ನವಲಗುಂದ ಕಾಂಗ್ರೆಸ್ ಶಾಸಕ ಎನ್ ಹೆಚ್ ಕೋನರೆಡ್ಡಿ ಅತಿಥಿ ಸತ್ಕಾರ ಮಾಡುವುದರಲ್ಲಿ ಎತ್ತಿದ ಕೈ. ಇವತ್ತು ಅವರ ಮನೆಗೆ ಭೇಟಿ ನೀಡಿದ ವಸತಿ ಖಾತೆ ಸಚಿವ ಬಿಜೆಡ್ ಜಮೀರ್ ಅಹ್ಮದ್ ಖಾನ್ ಅವರಿಗೆ ಕೋನರೆಡ್ಡಿ ಭರ್ಜರಿ ಔತಣ ಏರ್ಪಡಿಸಿದ್ದರು. ಉತ್ತರ ಮತ್ತು ಮುಂಬೈ ಕರ್ನಾಟದ ಮನೆಗಳಲ್ಲಿ ಅತಿಥಿಗಳಿಗಾಗಿ ಬಗೆಬಗೆಯ ಆಹಾರ ಪದಾರ್ಥಗಳನ್ನು ತಯಾರಿಸುತ್ತಾರೆ. ಹಾಗೆಯೇ ಜಮೀರ್, ಕೋನರೆಡ್ಡಿ ಮತ್ತು ಇತರ ನಾಯಕರು ಊಟವನ್ನು ಸವಿದಿದ್ದಾರೆ.

Read More »

ರಸ್ತೆ ಗುಂಡಿಗಳನ್ನು ಸರಿಪಡಿಸಲು ಪಾಲಿಕೆಗೆ ಡಿಸಿಎಂ ಸೂಚನೆ

ಬೆಂಗಳೂರು: ರಸ್ತೆಗಳಲ್ಲಿ ಗುಂಡಿ ತಪ್ಪಿಸಲು ಹೋಗಿ ಅಪಘಾತಗಳು ಹೆಚ್ಚಾಗುತ್ತಿದ್ದು, ಸರ್ಕಾರದ ವಿರುದ್ಧ ಜನರು ಸಿಡಿದೆದ್ದಿದ್ದಾರೆ, ಗುಂಡಿ ರಸ್ತೆಯಲ್ಲಿ ಸಂಚರಿಸುವಾಗ ಅವಘಡಗಳು ಹೆಚ್ಚಾಗ್ತಿದ್ದು, ಇದರಿಂದ ಸಂಚಾರಿ ಪೊಲೀಸರು ಬೇಸತ್ತಿದ್ದಾರೆ. ಈ ಹಿನ್ನಲೆ ಸಂಚಾರಿ ಪೊಲೀಸರೇ ನಗರದ ಕೆಲವೆಡೆ ಸ್ವಯಂ ಪ್ರೇರಿತರಾಗಿ ಗುಂಡಿ ಮುಚ್ಚುವ ಕೆಲಸ ಮಾಡ್ತಿದ್ದಾರೆ.ಆದ್ರೆ ಇಷ್ಟಾದ್ರೂ ಅಧಿಕಾರಿಗಳು ಹಾಗೂ ಸರ್ಕಾರ ಏನ್ಮಾಡ್ತಿದೆ ಅಂತ ಜನ ಆಕ್ರೋಶ ವ್ಯಕ್ತಪಡಿಸಿದ್ದು, ಬೆಂಗಳೂರು ಜನರಿಗೆ ಸರ್ಕಾರದಿಂದ ಗುಂಡಿ ಭಾಗ್ಯ ಅಂತ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ …

Read More »

ಜೋಗ ಜಲಪಾತ ಪ್ರವೇಶ ಶುಲ್ಕ ಹೆಚ್ಚಳ: ಪ್ರವಾಸಿಗರ ಆಕ್ಷೇಪ

ತಾಳಗುಪ್ಪ : ಪ್ರಕೃತಿಯ ರಮ್ಯ ತಾಣ ಜೋಗ ಜಲಪಾತ ವೀಕ್ಷಣೆ ಪ್ರವೇಶ ಶುಲ್ಕ ಈಗ ಮತ್ತಷ್ಟು ದುಬಾರಿಯಾಗಿದೆ. ಸುಮಾರು 183.7 ಕೋಟಿ ರು.ಗಳ ವೆಚ್ಚದಲ್ಲಿ ಜಲಪಾತದ ಆವರಣವನ್ನು ಅಂತಾರಾಷ್ಟ್ರೀಯ ಮಟ್ಟದ ಪ್ರವಾಸಿ ತಾಣವನ್ನಾಗಿ ರೂಪಿಸಲು ಹೊರಟಿರುವ ಜೋಗ ನಿರ್ವಹಣಾ ಪ್ರಾಧಿಕಾರವು, ಮೂಲ ಸೌಕರ್ಯ ಪೂರ್ಣ ರೂಪುಗೊಳ್ಳುವ ಮೊದಲೇ ಹಿಂದಿದ್ದ ಪ್ರವೇಶ ಶುಲ್ಕವನ್ನು ಹೆಚ್ಚಿಸಿದೆ.ಇದು ಈಗ ಪ್ರವಾಸಿಗರು ಹಾಗೂ ಸ್ಥಳೀಯರು ಆಕ್ಷೇಪಕ್ಕೆ ಕಾರಣವಾಗಿದೆ. ಜೋಗ ಜಲಪಾತದ ಪ್ರದೇಶದಲ್ಲಿ ಕಳೆದ ಎರಡು ವರ್ಷದಿಂದ …

Read More »

ಮುಡಾ ಹಗರಣ: ಸಿಎಂ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೆ ಒಂದು ವಾರಕಾಲ ಹೈಕೋರ್ಟ್ ರಿಲೀಫ್ ನೀಡಿದ್ದು, ಸಿಎಂ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಮತ್ತೆ ಮುಂದೂಡಿದೆ. ಮುಡಾ ಹಗರಣ ಸಂಬಂಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕ್ರಮ ಪ್ರಶ್ನಿಸಿ ಸಿದ್ದರಾಮಯ್ಯ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದು, ಅರ್ಜಿ ವಿಚಾರಣೆ ಕೈಗೊಂಡಿರುವ ಹೈಕೋರ್ಟ್ ಏಕಸದಸ್ಯ ಪೀಠ, ಸುದೀರ್ಘ ವಾದ ಪ್ರತಿವಾದ ಆಲಿಸಿತು. ವಾದ ಮಂಡನೆ ಬಳಿಕ …

Read More »

ಮಹತ್ವಾಕಾಂಕ್ಷಿ ಕೃಷಿ ಭಾಗ್ಯ ಯೋಜನೆಗೆ ರೈತರಿಂದ ಅರ್ಜಿ ಆಹ್ವಾನ

ಹುಬ್ಬಳ್ಳಿ: ಕೃಷಿ ಇಲಾಖೆಯಿಂದ 2024-25 ನೇ ಸಾಲಿನಲ್ಲಿ ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾದ ಕೃಷಿ ಭಾಗ್ಯ ಯೋಜನೆಯನ್ನು ಮರು ಜಾರಿ ಮಾಡಲಾಗಿದೆ. ಈ ಯೋಜನೆಯಡಿ ಕೃಷಿ ಹೊಂಡ ಮತ್ತು ಇತರೆ ಘಟಕಗಳನ್ನು ಅಳವಡಿಸಿಕೊಳ್ಳಲು ಇಚ್ಛಿಸುವ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಅಗತ್ಯ ದಾಖಲೆಗಳೊಂದಿಗೆ ಸೆಪ್ಟೆಂಬರ್ 20 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಹಿಂದಿನ ವರ್ಷಗಳಲ್ಲಿ ಕೃಷಿ ಭಾಗ್ಯ ಯೋಜನೆಯಡಿ, ನರೇಗಾ, ತೋಟಗಾರಿಕೆ ಇಲಾಖೆ, ಇತರೆ ಸರ್ಕಾರದ ಯೋಜನೆಯಡಿ ಕೃಷಿ ಹೊಂಡ ನಿರ್ಮಿಸಿಕೊಂಡ …

Read More »

ಡಿಜಿಟಲ್ ಕೃಷಿ ಅಭಿಯಾನ: ಕೇಂದ್ರ ಸರ್ಕಾರ ಅನುಮೋದನೆ

ನವದೆಹಲಿ: ರೈತರ ಜೀವನವನ್ನು ಸುಧಾರಿಸಲು ಮತ್ತು ಅವರ ಆದಾಯವನ್ನು ಹೆಚ್ಚಿಸಲು ಕ್ಯಾಬಿನೆಟ್ ಸಭೆಯಲ್ಲಿ 7 ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದ್ದು, 2,817 ಕೋಟಿ ಮೌಲ್ಯದ ಡಿಜಿಟಲ್ ಕೃಷಿ ಅಭಿಯಾನಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಘೋಷಿಸಿದರು. ಮೊದಲನೆಯದು ಡಿಜಿಟಲ್ ಅಗ್ರಿಕಲ್ಚರ್ ಮಿಷನ್ ಕೃಷಿಗಾಗಿ ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯದ ರಚನೆಯ ಮಾದರಿಯಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಕೆಲವು ಉತ್ತಮ ಪ್ರಾಯೋಗಿಕ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಅದರ ಆಧಾರದ ಮೇಲೆ, …

Read More »