ಬೆಂಗಳೂರು :ಮುಂದಿನ 2 ತಿಂಗಳ ಒಳಗಡೆ ಕೆಪಿಎಸ್ಸಿ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳಿಗೆ ಮರು ಪರೀಕ್ಷೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು, ಮರು ಪರೀಕ್ಷೆಯ ನಿರ್ಧಾರವನ್ನು ಪ್ರಕಟಿಸಿದ್ದು, ಕನ್ನಡ ಭಾಷಾಂತರದಲ್ಲಿ ಹಲವು ಲೋಪಗಳು ಕಂಡು ಬಂದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಮರು ಪರೀಕ್ಷೆ ನಡೆಸಬೇಕೆಂದು ಕೋರಿ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದರು. ಕೆಪಿಎಸ್ಸಿ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡಕ್ಕೆ ಅನುವಾದ …
Read More »ಪರಿಶೀಲನೆ ವೇಳೆ ಹುಲಿ ಬೋನಿಗೆ ಬಿದ್ದ ಅರಣ್ಯ ಸಿಬ್ಬಂದಿ
ಲಖೀಂಪುರ: ಹುಲಿ ಸೆರೆಗೆ ಇರಿಸಲಾಗಿದ್ದ ಬೋನಿನೊಳಗೆ ಅರಣ್ಯ ಸಿಬ್ಬಂದಿಯೆ ಸಿಕ್ಕಿಬಿದ್ದ ವಿಚಿತ್ರ ಘಟನೆಯೊಂದು ಉತ್ತರಪ್ರದೇಶದಲ್ಲಿ ನಡೆದಿದೆ. ಹಲವು ಗಂಟೆಗಳ ಸಾಹಸದ ಬಳಿಕ ಅರಣ್ಯ ಸಿಬ್ಬಂದಿಯನ್ನು ಬೋನಿನಿಂದ ಹೊರತಂದು ರಕ್ಷಿಸಲಾಗಿದೆ. ಲಖೀಂಪುರ ಖೇರಿಯ ಮಹೇಶ್ಪುರ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಹುಲಿ ಹಿಡಿಯಲು ಬೋನನ್ನು ಸಿದ್ಧಪಡಿಸಲಾಗಿತ್ತು. ಈ ವೇಳೆ ಸಿಬ್ಬಂದಿಯೊಬ್ಬ ಬೋನಿನ ಪರಿಶೀಲನೆಗೆ ಒಳಗೆ ಹೋಗಿದ್ದ ವೇಳೆ ಆಕಸ್ಮಿಕವಾಗಿ ಹೊರಗಿನಿಂದ ಲಾಕ್ ಆಗಿದೆ. ಲಾಕ್ನಲ್ಲಿ ದೋಷ ಕಂಡುಬಂದ ಕಾರಣ …
Read More »ಬಾಂಗ್ಲಾದಲ್ಲಿ 49 ಹಿಂದೂ ಶಿಕ್ಷಕರ ರಾಜೀನಾಮೆ
ಢಾಕಾ: ಬಾಂಗ್ಲಾದೇಶದಲ್ಲಿ ಮೀಸಲಾತಿ ಸಂಬಂಧ ಹೊತ್ತಿದ ಕಿಡಿ ಆಂದೋಲನವಾಗಿ ಬದಲಾದ ಪರಿಣಾಮ ಶೇಖ್ ಹಸೀನಾ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ಭಾರತಕ್ಕೆ ಪಲಾಯನವಾದರು. ಮಧ್ಯಂತರ ಸರ್ಕಾರ ರಚನೆ ಬಳಿಕವೂ ಬಾಂಗ್ಲಾದೇಶದಲ್ಲಿ ಹಿಂಸಾಚಾರಗಳು ನಿಲ್ಲುತ್ತಿಲ್ಲ. ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರಾಗಿರುವ ಹಿಂದೂಗಳ ಮೇಲೆ ದೌರ್ಜನ್ಯ ಎಸಗಲಾಗ್ತಿದೆ ಎಂಬ ಆರೋಪಗಳು ಮೊದಲಿನಿಂದಲೂ ಕೇಳಿ ಬರುತ್ತಿವೆ. ಇದೀಗ ಸುಮಾರು 49 ಹಿಂದೂ ಶಿಕ್ಷಕರಿಂದ ಬಲವಂತವಾಗಿ ರಾಜೀನಾಮೆ ಪಡೆಯಲಾಗಿದೆ ಎಂದು ವರದಿಯಾಗಿದೆ. ಇಷ್ಟೆಲ್ಲಾ ಆದರೆ ಮಾನವ ಹಕ್ಕುಗಳ ಪರ …
Read More »ಆಂಧ್ರ, ತೆಲಂಗಾಣದಲ್ಲಿ ಮುಂದುವರೆದ ವರುಣನ ಅಬ್ಬರ: 30 ಮಂದಿ ಸಾವು
ಅಮರಾವತಿ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳಲ್ಲಿ ಸತತ 2ನೇ ದಿನವೂ ವರುಣನ ಆರ್ಭಟ ಮುಂದುವರೆದು ಹಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ರಸ್ತೆ ಮತ್ತು ರೈಲು ಸಂಚಾರಕ್ಕೆ ಅಡಚನೆಯುಂಟಾಗಿದೆ. ಹಲವೆಡೆ ಮಳೆ ಸಂಬಂಧ ಅವಘಡಗಳು ಸಂಭವಿಸಿ ಮೃತಪಟ್ಟವರ ಸಂಖ್ಯೆ 30ಕ್ಕೆ ಏರಿಕೆಯಾಗಿದೆ. ಉಭಯ ರಾಜ್ಯಗಳ ನದಿಗಳು ಮೈದುಂಬಿ ಹರಿಯುತ್ತಿವೆ. ಮುನ್ನೆಚ್ಚರಿಕೆ ಕ್ರಮವಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆಗಳು ಪ್ರವಾಹ ಪೀಡಿತ …
Read More »ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ: ಡಿಕೆಶಿ ಸ್ಪಷ್ಟನೆ
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಸಿಎಂ ಬದಲಾವಣೆ ಕುರಿತ ಚರ್ಚೆ ಮುನ್ನೆಲೆಗೆ ಬಂದಿದ್ದು, ಇದಕ್ಕೆ ತೆರೆ ಎಳೆಯುವ ಪ್ರಯತ್ನವನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಮಾಡಿದ್ದಾರೆ. ಸಿದ್ದರಾಮಯ್ಯ ಅನುಮತಿ ಕೊಟ್ರೆ ನಾನು ಸಿಎಂ ಆಗ್ತೀನಿ ಎಂಬ ಕಾಂಗ್ರೆಸ್ ಹಿರಿಯ ಶಾಸಕ ಆರ್.ವಿ.ದೇಶಪಾಡೆ ಹೇಳಿಕೆಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಸದ್ಯಕ್ಕೆ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ ಎಂದು ನೇರವಾಗಿ ಹೇಳಿದ್ದಾರೆ. ದೇಶಪಾಂಡೆ ಹಿರಿಯ ನಾಯಕರು, ಅನುಭವಿ ರಾಜಕಾರಣಿಗಳು, ಸಿಎಂ ಆಗಬೇಕು ಎಂದು ಆಸೆಪಡುವುದರಲ್ಲಿ ತಪ್ಪೇನಿಲ್ಲ. ಅವರು …
Read More »ಬಾಂಗ್ಲಾ ಮೂಲದ ಅಪ್ರಾಪ್ತ ಹೆಣ್ಣು ಮಕ್ಕಳ ಕಳ್ಳಸಾಗಣೆ: ಮೂವರ ಬಂಧನ
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅಪ್ರಾಪ್ತ ಹೆಣ್ಣು ಮಕ್ಕಳ ಕಳ್ಳಸಾಗಣೆ ಮಾಡುತ್ತಿರುವುದು ಮತ್ತು ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವುದು ಬೆಳಕಿಗೆ ಬಂದಿದೆ. ಸಿಸಿಬಿ ಪೊಲೀಸರು ನಡೆಸಿದ ದಾಳಿಯಿಂದ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಬೆಂಗಳೂರಿನ ಹೊಂಗಸಂದ್ರದ ಮನೆಯೊಂದರ ಮೇಲೆ ಸಿಸಿಬಿ ಮಹಿಳಾ ಸಂರಕ್ಷಣಾ ದಳ ದಾಳಿ ನಡೆಸಿದ್ದು, ಈ ವೇಳೆ ಮನೆಯಲ್ಲಿ ಇಬ್ಬರು ಹುಡುಗಿಯರು ಪತ್ತೆಯಾಗಿದ್ದಾರೆ. ದಾಳಿ ವೇಳೆ ಪತ್ತೆಯಾದ ಇಬ್ಬರೂ ಸಹ ಅಪ್ರಾಪ್ತೆಯರು ಎಂಬುದು ವಿಚಾರಣೆ ವೇಳೆ ತಿಳಿದುಬಂದಿದೆ. ಅಲ್ಲದೆ, …
Read More »ಆಂಬುಲೆನ್ಸ್ ಗಳ ಕೊರತೆ: ಗ್ರಾಮೀಣ ಜನರ ಪರದಾಟ
ಕಲಬುರಗಿ: ಹೆರಿಗೆ ನೋವಿನಿಂದ ಬಳಲುತ್ತಿದ್ದ ಚಿಂಚೋಳಿ ತಾಲ್ಲೂಕಿನ ಸುಲೇಪೇಟದ ಶಿಲ್ಪಾ ಎಂಬುವವರನ್ನು ಜಿಲ್ಲಾಸ್ಪತ್ರೆಗೆ ಕರೆತರುವಾಗ ಮೂರು ಬಾರಿ ಆಂಬುಲೆನ್ಸ್ ಬದಲಿಸಲಾಗಿತ್ತು. ಈ ವೇಳೆ ದಾರಿ ಮಧ್ಯದಲ್ಲೇ ಹೆರಿಗೆಯಾಗಿ ಮಗು ಸಾವನ್ನಪ್ಪಿತ್ತು. ಮೂರು ಬಾರಿ ಆಂಬುಲೆನ್ಸ್ ಬದಲಿಸಿದ್ದರಿಂದ ತಮ್ಮ ಮಗು ಸಾವನ್ನಪ್ಪಿದೆ ಎಂದು ಆರೋಪಿಸಿ ಪೋಷಕರು ಕಣ್ಣೀರಿಟ್ಟಿದ್ದರು. ಆಂಬುಲೆನ್ಸ್ಗಳ ಕೊರತೆ, ಸಕಾಲಕ್ಕೆ ಸಿಗದ ಸೇವೆ, ಅಧ್ವಾನ ರಸ್ತೆಗಳು, ಆಂಬುಲೆನ್ಸ್ನಲ್ಲಿ ಸೂಕ್ತ ವೈದ್ಯಕೀಯ ಸೌಲಭ್ಯದ ಕೊರತೆ, ಸಿಬ್ಬಂದಿ ಇಲ್ಲದಿರುವಿಕೆ ಮತ್ತಿತರ ಕಾರಣಗಳಿಂದಾಗಿ ಹಲವು …
Read More »ಆಹಾರ ಕ್ಷಾಮಕ್ಕೆ ಸಿಲುಕಿರುವ ನಮೀಬಿಯಾ: ವನ್ಯಜೀವಿಗಳ ಹತ್ಯೆ
ಹೊಸದೆಹಲಿ: ಶತಮಾನದ ಭೀಕರ ಬರದಿಂದಾಗಿ ಆಹಾರ ಕ್ಷಾಮಕ್ಕೆ ಸಿಲುಕಿರುವ ನಮೀಬಿಯಾ ತನ್ನ ನಾಗರಿಕರಿಗೆ ಆಹಾರ ಪೂರೈಸುವ ಉದ್ದೇಶದಿಂದ ಈಗ ಆನೆಗಳ ಸಹಿತ 700ಕ್ಕೂ ಅಧಿಕ ವನ್ಯಜೀವಿಗಳ ಹತ್ಯೆ ನಡೆಸಲು ಮುಂದಾಗಿದೆ. ನಮೀಬಿಯಾದ ಶೇ. 84ರಷ್ಟು ಆಹಾರ ಸಂಗ್ರಹ ಮುಗಿದಿದ್ದು, 25 ಲಕ್ಷಕ್ಕೂ ಅಧಿಕ ಮಂದಿ ತೀವ್ರ ಹಸಿವಿನಿಂದ ದಿನ ದೂಡುವ ಸ್ಥಿತಿಗೆ ತಲುಪಿದ್ದಾರೆ.ಜತೆಗೆಶುದ್ಧ ನೀರಿನ ಕೊರತೆಯಿಂದಾಗಿ ಕಾಲಾರಾದಂತಹ ರೋಗಗಳು ಹರಡುತ್ತಿವೆ. ನೀರು ಸಂಗ್ರಹಿಸಲು ತೆರಳುವ ಮಹಿಳೆ ಯರ ಮೇಲೆ ದಾಳಿಗಳು …
Read More »ಮುಡಾ ಹಗರಣದಲ್ಲಿ ನನ್ನ ವಿರುದ್ಧವೂ ಆರೋಪ ಹೆದರುವ ಪ್ರಶ್ನೆಯೇ ಇಲ್ಲ: ಡಿಕೆಶಿ
ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ನನ್ನ ವಿರುದ್ಧವೂ ಷಡ್ಯಂತರ ನಡೆಯುತ್ತಿದೆ. ರಾಜ್ಯಪಾಲರಿಗೆ ನನ್ನ ವಿರುದ್ಧವೂ ದೂರು ನೀಡಲು ಸಿದ್ಧತೆ ನಡೆಯುತ್ತಿದೆ ಎನ್ನುವುದು ನನಗೆ ಗೊತ್ತಿದೆ. ಆದರೆ, ನಾನು ಹೆದರುವ ಪ್ರಶ್ನೆಯೇ ಇಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಈಗಾಗಲೇ ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅನುಮತಿ ನೀಡಿರುವುದು ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ. ಇದೀಗ ಕರ್ನಾಟಕ ಕಾಂಗ್ರೆಸ್ನ ಪ್ರಮುಖ …
Read More »ಎತ್ತಿನಹೊಳೆ ಯೋಜನೆ ಸೆ.6 ರಂದು ಲೋಕಾರ್ಪಣೆ
ಬೆಂಗಳೂರು: ರಾಜ್ಯದಲ್ಲಿ ಹಲವು ಕಾರಣಗಳಿಗೆ ವಿವಾದಕ್ಕೆ ಗುರಿಯಾಗಿದ್ದ ಹಾಗೂ ಏಳು ಜಿಲ್ಲೆಗಳಿಗೆ ಕುಡಿಯುವ ನೀರೊದಗಿಸುವ ಬಹು ನಿರೀಕ್ಷಿತ ಎತ್ತಿನ ಹೊಳೆ ಯೋಜನೆಯ ಏತ ಕಾಮಗಾರಿಗಳು ಕೊನೆಗೂ ಪೂರ್ಣಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೌರಿ ಹಬ್ಬದ ದಿನವಾದ ಸೆ.6ರಂದು ಏಳು ವಿಯರ್ಗಳ ಮೂಲಕ ನೀರು ಮೇಲೆತ್ತುವ ಯೋಜನೆಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ಯೋಜನೆಯ ಮೊದಲ ಹಂತವಾದ 8 ವಿಯರ್ಗಳ ಮೂಲಕ 28 ಟಿಎಂಸಿ ನೀರನ್ನು ಮೇಲೆತ್ತುವ ಲಿಫ್ಟ್ ಕಾಂಪೊನೆಂಟ್ ಪೂರ್ಣಗೊಳಿಸಲು ನಿರ್ಧರಿಸಲಾಗಿತ್ತು. 3ನೇ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





