Breaking News

BigTv News

ಆಂಧ್ರ, ತೆಲಂಗಾಣದಲ್ಲಿ ಮುಂದುವರೆದ ವರುಣನ ಅಬ್ಬರ: 30 ಮಂದಿ ಸಾವು

ಅಮರಾವತಿ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳಲ್ಲಿ ಸತತ 2ನೇ ದಿನವೂ ವರುಣನ ಆರ್ಭಟ ಮುಂದುವರೆದು ಹಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ರಸ್ತೆ ಮತ್ತು ರೈಲು ಸಂಚಾರಕ್ಕೆ ಅಡಚನೆಯುಂಟಾಗಿದೆ. ಹಲವೆಡೆ ಮಳೆ ಸಂಬಂಧ ಅವಘಡಗಳು ಸಂಭವಿಸಿ ಮೃತಪಟ್ಟವರ ಸಂಖ್ಯೆ 30ಕ್ಕೆ ಏರಿಕೆಯಾಗಿದೆ. ಉಭಯ ರಾಜ್ಯಗಳ ನದಿಗಳು ಮೈದುಂಬಿ ಹರಿಯುತ್ತಿವೆ. ಮುನ್ನೆಚ್ಚರಿಕೆ ಕ್ರಮವಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆಗಳು ಪ್ರವಾಹ ಪೀಡಿತ …

Read More »

ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ: ಡಿಕೆಶಿ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಸಿಎಂ ಬದಲಾವಣೆ ಕುರಿತ ಚರ್ಚೆ ಮುನ್ನೆಲೆಗೆ ಬಂದಿದ್ದು, ಇದಕ್ಕೆ ತೆರೆ ಎಳೆಯುವ ಪ್ರಯತ್ನವನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಮಾಡಿದ್ದಾರೆ. ಸಿದ್ದರಾಮಯ್ಯ ಅನುಮತಿ ಕೊಟ್ರೆ ನಾನು ಸಿಎಂ ಆಗ್ತೀನಿ ಎಂಬ ಕಾಂಗ್ರೆಸ್ ಹಿರಿಯ ಶಾಸಕ ಆರ್.ವಿ.ದೇಶಪಾಡೆ ಹೇಳಿಕೆಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಸದ್ಯಕ್ಕೆ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ ಎಂದು ನೇರವಾಗಿ ಹೇಳಿದ್ದಾರೆ. ದೇಶಪಾಂಡೆ ಹಿರಿಯ ನಾಯಕರು, ಅನುಭವಿ ರಾಜಕಾರಣಿಗಳು, ಸಿಎಂ ಆಗಬೇಕು ಎಂದು ಆಸೆಪಡುವುದರಲ್ಲಿ ತಪ್ಪೇನಿಲ್ಲ. ಅವರು …

Read More »

ಬಾಂಗ್ಲಾ ಮೂಲದ ಅಪ್ರಾಪ್ತ ಹೆಣ್ಣು ಮಕ್ಕಳ ಕಳ್ಳಸಾಗಣೆ: ಮೂವರ ಬಂಧನ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅಪ್ರಾಪ್ತ ಹೆಣ್ಣು ಮಕ್ಕಳ ಕಳ್ಳಸಾಗಣೆ ಮಾಡುತ್ತಿರುವುದು ಮತ್ತು ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವುದು ಬೆಳಕಿಗೆ ಬಂದಿದೆ. ಸಿಸಿಬಿ ಪೊಲೀಸರು ನಡೆಸಿದ ದಾಳಿಯಿಂದ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಬೆಂಗಳೂರಿನ ಹೊಂಗಸಂದ್ರದ ಮನೆಯೊಂದರ ಮೇಲೆ ಸಿಸಿಬಿ ಮಹಿಳಾ ಸಂರಕ್ಷಣಾ ದಳ ದಾಳಿ ನಡೆಸಿದ್ದು, ಈ ವೇಳೆ ಮನೆಯಲ್ಲಿ ಇಬ್ಬರು ಹುಡುಗಿಯರು ಪತ್ತೆಯಾಗಿದ್ದಾರೆ. ದಾಳಿ ವೇಳೆ ಪತ್ತೆಯಾದ ಇಬ್ಬರೂ ಸಹ ಅಪ್ರಾಪ್ತೆಯರು ಎಂಬುದು ವಿಚಾರಣೆ ವೇಳೆ ತಿಳಿದುಬಂದಿದೆ. ಅಲ್ಲದೆ, …

Read More »

ಆಂಬುಲೆನ್ಸ್ ಗಳ ಕೊರತೆ: ಗ್ರಾಮೀಣ ಜನರ ಪರದಾಟ

ಕಲಬುರಗಿ: ಹೆರಿಗೆ ನೋವಿನಿಂದ ಬಳಲುತ್ತಿದ್ದ ಚಿಂಚೋಳಿ ತಾಲ್ಲೂಕಿನ ಸುಲೇಪೇಟದ ಶಿಲ್ಪಾ ಎಂಬುವವರನ್ನು ಜಿಲ್ಲಾಸ್ಪತ್ರೆಗೆ ಕರೆತರುವಾಗ ಮೂರು ಬಾರಿ ಆಂಬುಲೆನ್ಸ್ ಬದಲಿಸಲಾಗಿತ್ತು. ಈ ವೇಳೆ ದಾರಿ ಮಧ್ಯದಲ್ಲೇ ಹೆರಿಗೆಯಾಗಿ ಮಗು ಸಾವನ್ನಪ್ಪಿತ್ತು. ಮೂರು ಬಾರಿ ಆಂಬುಲೆನ್ಸ್ ಬದಲಿಸಿದ್ದರಿಂದ ತಮ್ಮ ಮಗು ಸಾವನ್ನಪ್ಪಿದೆ ಎಂದು ಆರೋಪಿಸಿ ಪೋಷಕರು ಕಣ್ಣೀರಿಟ್ಟಿದ್ದರು. ಆಂಬುಲೆನ್ಸ್‌ಗಳ ಕೊರತೆ, ಸಕಾಲಕ್ಕೆ ಸಿಗದ ಸೇವೆ, ಅಧ್ವಾನ ರಸ್ತೆಗಳು, ಆಂಬುಲೆನ್ಸ್‌ನಲ್ಲಿ ಸೂಕ್ತ ವೈದ್ಯಕೀಯ ಸೌಲಭ್ಯದ ಕೊರತೆ, ಸಿಬ್ಬಂದಿ ಇಲ್ಲದಿರುವಿಕೆ ಮತ್ತಿತರ ಕಾರಣಗಳಿಂದಾಗಿ ಹಲವು …

Read More »

ಆಹಾರ ಕ್ಷಾಮಕ್ಕೆ ಸಿಲುಕಿರುವ ನಮೀಬಿಯಾ: ವನ್ಯಜೀವಿಗಳ ಹತ್ಯೆ

ಹೊಸದೆಹಲಿ: ಶತಮಾನದ ಭೀಕರ ಬರದಿಂದಾಗಿ ಆಹಾರ ಕ್ಷಾಮಕ್ಕೆ ಸಿಲುಕಿರುವ ನಮೀಬಿಯಾ ತನ್ನ ನಾಗರಿಕರಿಗೆ ಆಹಾರ ಪೂರೈಸುವ ಉದ್ದೇಶದಿಂದ ಈಗ ಆನೆಗಳ ಸಹಿತ 700ಕ್ಕೂ ಅಧಿಕ ವನ್ಯಜೀವಿಗಳ ಹತ್ಯೆ ನಡೆಸಲು ಮುಂದಾಗಿದೆ. ನಮೀಬಿಯಾದ ಶೇ. 84ರಷ್ಟು ಆಹಾರ ಸಂಗ್ರಹ ಮುಗಿದಿದ್ದು, 25 ಲಕ್ಷಕ್ಕೂ ಅಧಿಕ ಮಂದಿ ತೀವ್ರ ಹಸಿವಿನಿಂದ ದಿನ ದೂಡುವ ಸ್ಥಿತಿಗೆ ತಲುಪಿದ್ದಾರೆ.ಜತೆಗೆಶುದ್ಧ ನೀರಿನ ಕೊರತೆಯಿಂದಾಗಿ ಕಾಲಾರಾದಂತಹ ರೋಗಗಳು ಹರಡುತ್ತಿವೆ. ನೀರು ಸಂಗ್ರಹಿಸಲು ತೆರಳುವ ಮಹಿಳೆ ಯರ ಮೇಲೆ ದಾಳಿಗಳು …

Read More »

ಮುಡಾ ಹಗರಣದಲ್ಲಿ ನನ್ನ ವಿರುದ್ಧವೂ ಆರೋಪ ಹೆದರುವ ಪ್ರಶ್ನೆಯೇ ಇಲ್ಲ: ಡಿಕೆಶಿ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ನನ್ನ ವಿರುದ್ಧವೂ ಷಡ್ಯಂತರ ನಡೆಯುತ್ತಿದೆ. ರಾಜ್ಯಪಾಲರಿಗೆ ನನ್ನ ವಿರುದ್ಧವೂ ದೂರು ನೀಡಲು ಸಿದ್ಧತೆ ನಡೆಯುತ್ತಿದೆ ಎನ್ನುವುದು ನನಗೆ ಗೊತ್ತಿದೆ. ಆದರೆ, ನಾನು ಹೆದರುವ ಪ್ರಶ್ನೆಯೇ ಇಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಹೇಳಿದ್ದಾರೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಈಗಾಗಲೇ ಕರ್ನಾಟಕದ ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್‌ ಅವರು ಅನುಮತಿ ನೀಡಿರುವುದು ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ. ಇದೀಗ ಕರ್ನಾಟಕ ಕಾಂಗ್ರೆಸ್‌ನ ಪ್ರಮುಖ …

Read More »

ಎತ್ತಿನಹೊಳೆ ಯೋಜನೆ ಸೆ.6 ರಂದು ಲೋಕಾರ್ಪಣೆ

ಬೆಂಗಳೂರು: ರಾಜ್ಯದಲ್ಲಿ ಹಲವು ಕಾರಣಗಳಿಗೆ ವಿವಾದಕ್ಕೆ ಗುರಿಯಾಗಿದ್ದ ಹಾಗೂ ಏಳು ಜಿಲ್ಲೆಗಳಿಗೆ ಕುಡಿಯುವ ನೀರೊದಗಿಸುವ ಬಹು ನಿರೀಕ್ಷಿತ ಎತ್ತಿನ ಹೊಳೆ ಯೋಜನೆಯ ಏತ ಕಾಮಗಾರಿಗಳು ಕೊನೆಗೂ ಪೂರ್ಣಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೌರಿ ಹಬ್ಬದ ದಿನವಾದ ಸೆ.6ರಂದು ಏಳು ವಿಯರ್‌ಗಳ ಮೂಲಕ ನೀರು ಮೇಲೆತ್ತುವ ಯೋಜನೆಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ಯೋಜನೆಯ ಮೊದಲ ಹಂತವಾದ 8 ವಿಯರ್‌ಗಳ ಮೂಲಕ 28 ಟಿಎಂಸಿ ನೀರನ್ನು ಮೇಲೆತ್ತುವ ಲಿಫ್ಟ್‌ ಕಾಂಪೊನೆಂಟ್‌ ಪೂರ್ಣಗೊಳಿಸಲು ನಿರ್ಧರಿಸಲಾಗಿತ್ತು. 3ನೇ …

Read More »

ಸರ್ಕಾರಿ ಭೂ ಒತ್ತುವರಿ ತೆರವು ಕಾರ್ಯಾಚರಣೆ ಆರಂಭ: ಕೃಷ್ಣಬೈರೇಗೌಡ

ಬೆಂಗಳೂರು: ರಾಜ್ಯಾಧ್ಯಂತ ಸರ್ಕಾರಿ ಭೂಮಿ ಒತ್ತುವರಿದಾರರಿಗೆ ಬಿಗ್ ಶಾಕ್ ಎನ್ನುವಂತೆ ಸೆಪ್ಟೆಂಬರ್2 ರ ಇಂದಿನಿಂದ ಲ್ಯಾಂಡ್ ಬೀಟ್‌ ಆಯಪ್ ಆಧರಿಸಿ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಸರ್ಕಾರ ನಡೆಸಲಿದೆ. ಈ ಕುರಿತು ಮಾಹಿತಿ ಹಂಚಿಕೊಂಡ ಕಂದಾಯ ಸಚಿವ ಕೃಷ್ಣಭೈರೇಗೌಡ, ಲ್ಯಾಂಡ್ ಬೀಟ್‌ ಆಯಪ್ ಆಧರಿಸಿ ಸೆಪ್ಟೆಂಬರ್‌ ತಿಂಗಳಿನಿಂದ ರಾಜ್ಯಾದ್ಯಂತ ಸರ್ಕಾರ ಭೂ ಒತ್ತುವರಿ ತೆರವು ಕಾರ್ಯಾಚರಣೆಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು. ಕಂದಾಯ, ಅರಣ್ಯ, ಶಿಕ್ಷಣ ಹಾಗೂ ಪಿಡಬ್ಲ್ಯೂಡಿ ಇಲಾಖೆ ಸೇರಿ …

Read More »

ಶಿವಾಜಿ ಪ್ರತಿಮೆ ಕುಸಿತ ಪ್ರಕರಣ: ಫಡ್ನವೀಸ್ ವಿರುದ್ಧ ಪವನ್ ಖೇರಾ ಆರೋಪ

ಮುಂಬೈ: ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯಲ್ಲಿ ಸಂಭವಿಸಿದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಕುಸಿತ ಪ್ರಕರಣದ ಕುರಿತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಸುಳ್ಳು ಹೇಳಿಕೆಗಳನ್ನು ಹರಡುತ್ತಿದ್ದಾರೆ ಎಂದು ಕಾಂಗ್ರೆಸ್‌ ವಕ್ತಾರ ಪವನ್‌ ಖೇರಾ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಾಜಿ ಮಹಾರಾಜರ ಪ್ರತಿಮೆ ಕುಸಿತದಿಂದ ಅವರನ್ನು ಸ್ಫೂರ್ತಿಯಾಗಿ ನೋಡುತ್ತಿದ್ದ ದೇಶದ ಜನರ ಮನಸ್ಸಿಗೆ ಘಾಸಿಯಾಗಿದೆ. ಮೊಘಲರಿಗೆ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಭಿನ್ನಗೊಳಿಸಲು ಸಾಧ್ಯವಾಗಲಿಲ್ಲ. ಮೊಘಲರು ಮಾಡಲಾಗದ್ದನ್ನು ಈ ಭ್ರಷ್ಟ …

Read More »

ಅನಧಿಕೃತ ವಿದ್ಯುತ್ ತಂತಿ ಬೇಲಿ ಸ್ಪರ್ಶದಿಂದ ವನ್ಯಜೀವಿಗಳ ಸಾವು: ವರದಿಗೆ ಸಚಿವರ ಸೂಚನೆ

ಬೆಂಗಳೂರು: ಅನಧಿಕೃತ ವಿದ್ಯುತ್ ತಂತಿ ಬೇಲಿ ಸ್ಪರ್ಶದಿಂದ ವನ್ಯಜೀವಿ ಮೃತಪಡುತ್ತಿರುವ ಕುರಿತು ವರದಿ ಸಲ್ಲಿಸಲು ಅರಣ್ಯ ಸಚಿವ ಈಶ್ವರ ಖಂಡ್ರೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅರಣ್ಯದ ಅಂಚಿನಲ್ಲಿರುವ ತೋಟಗಳಲ್ಲಿ ಅನಧಿಕೃತವಾಗಿ ಅಳವಡಿಸಲಾಗಿರುವ ವಿದ್ಯುತ್ ತಂತಿಬೇಲಿ ಸ್ಪರ್ಶದಿಂದ ಕಾಡಾನೆ ಸೇರಿದಂತೆ ಹಲವು ವನ್ಯಜೀವಿಗಳು ಮೃತಪಡುತ್ತಿವೆ. ಈ ಕುರಿತು ಮರಣೋತ್ತರ ಪರೀಕ್ಷೆ ವರದಿ ಸಲ್ಲಿಸಬೇಕು. ಜತೆಗೆ ಐದು ವರ್ಷಗಳಲ್ಲಿ ಅಕ್ರಮ ವಿದ್ಯುತ್ ಸ್ಪರ್ಶದಿಂದ ಮತ್ತು ಬೇಲಿ ಉರುಳಿಗೆ ಸಿಲುಕಿ ಅಸಹಜವಾಗಿ ಎಷ್ಟು …

Read More »