ತೈಪೆ: ವಿವಾದಿತ ದಕ್ಷಿಣ ಚೀನಾ ಸಮುದ್ರದಲ್ಲಿ ಚೀನಾ ಮತ್ತು ಫಿಲಿಪ್ಪೀನ್ಸ್ ನೌಕೆಗಳು ಡಿಕ್ಕಿ ಹೊಡೆದಿವೆ. ಈ ವಿಚಾರಕ್ಕೆ ಸಂಬಂಧಿಸಿ ಚೀನಾ ತೈವಾನ್ ಪರಸ್ಪರ ಆರೋಪ ಮಾಡಿಕೊಂಡಿವೆ. ನಮ್ಮ ನೌಕೆಯ ಮೇಲೆ ಫಿಲಿಪೈನ್ಸ್ನ ನೌಕೆಯು ಉದ್ದೇಶಪೂರ್ವಕವಾಗಿ ಡಿಕ್ಕಿ ಹೊಡೆದಿದೆ ಎಂದು ಚೀನಾ ಆರೋಪಿಸಿದೆ. ಇನ್ನೊಂದೆಡೆ ಫಿಲಿಪೈನ್ಸ್ನ ಕರಾವಳಿ ಕಾವಲು ಪಡೆ, ಚೀನಾದ ನೌಕೆ ನೌಕೆಯ ಮೇಲೆ ದಾಳಿ ನಡೆಸಿ, ಹಾನಿ ಮಾಡಿದೆ ಎಂದು ಪ್ರತ್ಯಾರೋಪಿಸಿದೆ. ಚೀನಾ ಅಕ್ರಮ ಪ್ರವೇಶ ತಡೆಯಲು ಫಿಲಿಪೈನ್ …
Read More »ಸಿಎಂ ಆಗುವ ಕನಸನ್ನು ಬಿಚ್ಚಿಟ್ಟ ಸಚಿವ ಜಮೀರ ಅಹ್ಮದ
ಹುಬ್ಬಳ್ಳಿ : ಸಿದ್ದರಾಮಯ್ಯ ಅನುಮತಿ ಕೊಟ್ಟರೆ ನಾನೇ ಸಿಎಂ ಆಗುತ್ತೇನೆ ಎಂದು ಕಾಂಗ್ರೆಸ್ಸಿನ ಹಿರಿಯ ನಾಯಕ ಆರ್ ವಿ ದೇಶಪಾಂಡೆ ಹೇಳಿಕೆ ನೀಡಿದ್ದಾರೆ. ಈ ಒಂದು ಹೇಳಿಕೆಗೆ ಸಚಿವ ಜಮೀರ್ ಅಹ್ಮದ್ ಪ್ರತಿಕ್ರಿಯೆ ನೀಡಿದ್ದು, ಎಲ್ಲರಿಗೂ ಸಿಎಂ ಆಗಬೇಕೆಂಬ ಆಸೆ ಇರುತ್ತದೆ. ನನಗೂ ಸಿಎಂ ಆಗಬೇಕೆಂಬ ಆಸೆ ಇರಲ್ವಾ ಎಂದು ತಿಳಿಸಿದರು. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಆಗಬೇಕು ಅನ್ನುವ ಆಸೆ ಯಾರಿಗೆ ಇರಲ್ಲ ಹೇಳಿ ನನಗೂ …
Read More »ಕಾಣೆಯಾಗಿದ್ದ ರಷ್ಯಾ ಹೆಲಿಕಾಪ್ಟರ್ ಪತನ:17 ಮಂದಿ ಸಾವು
ಮಾಸ್ಕೋ: ರಷ್ಯಾದ ಪೂರ್ವದಲ್ಲಿ ಕಾಣೆಯಾದ ಹೆಲಿಕಾಪ್ಟರ್ ಕೊನೆಯ ಬಾರಿಗೆ ಸಂಪರ್ಕಿಸಲಾದ ಸ್ಥಳದ ಬಳಿ 900 ಮೀಟರ್ ಎತ್ತರದಲ್ಲಿ ಪತ್ತೆಯಾಗಿದೆ. ಅದರಲ್ಲಿದ್ದ 17 ಜನರ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ.22 ಮಂದಿಯಲ್ಲಿ ಕಾಣೆಯಾದ ಇತರ ಸದಸ್ಯರ ಹುಡುಕಾಟ ಮುಂದುವರೆದಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಹೆಲಿಕಾಪ್ಟರ್ ನಲ್ಲಿದ್ದವರೆಲ್ಲರೂ ಸಾವನ್ನಪ್ಪಿದ್ದಾರೆ ಎಂದು ಭಾವಿಸಲಾಗಿದೆ. ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಲ್ಲಿ ಕಳಪೆ ಗೋಚರತೆಯಿಂದಾಗಿ ಹೆಲಿಕಾಪ್ಟರ್ ಪತನಗೊಂಡಿರಬಹುದು ಎಂದು ರಷ್ಯಾದ ತುರ್ತು ಸಚಿವಾಲಯ ತಿಳಿಸಿದೆ. ಎಂಐ-8 ಹೆಲಿಕಾಪ್ಟರ್ ಶನಿವಾರ ಕಮ್ಚಾಟ್ಕಾ …
Read More »ಕೇರಳದ ಭೂಕುಸಿತ: ಪರಿಹಾರ ಒದಗಿಸುವಂತೆ ಕೇಂದ್ರಕ್ಕೆ ಸಿಎಂ ವಿಜಯನ್ ಮನವಿ
ತಿರುವನಂತಪುರ: ಕೇರಳದ ವಯನಾಡ್ ಜಿಲ್ಲೆಯಲ್ಲಿ ಸಂಭವಿಸಿದ ಸರಣಿ ಭೂಕುಸಿತದಿಂದಾಗಿ ಅಪಾರ ಪ್ರಮಾಣದ ಆಸ್ತಿಪಾಸ್ತಿ ನಷ್ಟವಾಗಿದೆ. ಸಂತ್ರಸ್ತರಿಗೆ ಪುನರ್ ವಸತಿ ಕಲ್ಪಿಸುವ ಸಲುವಾಗಿ ₹2,000 ಕೋಟಿ ಪರಿಹಾರ ಒದಗಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ. ವಯನಾಡ್ ಭೂಕುಸಿತದ ಕುರಿತು ಸಂದರ್ಶನದಲ್ಲಿ ಮಾತನಾಡಿರುವ ಅವರು, ಪಶ್ಚಿಮ ಘಟ್ಟಗಳ ಸಂರಕ್ಷಣೆ ಕುರಿತು ಮಾಧವ ಗಾಡ್ಗೀಳ್ ಮತ್ತು ಕಸ್ತೂರಿರಂಗನ್ ಸಮಿತಿಗಳು ಮಾಡಿರುವ ಶಿಫಾರಸುಗಳು ಅವೈಜ್ಞಾನಿಕ. ಈ ಸಮಿತಿಗಳು ವಾಸ್ತವಾಂಶಗಳನ್ನು …
Read More »ಸೆ.6ಕ್ಕೆ ಎತ್ತಿನಹೊಳೆ ಏತ ಕಾಮಗಾರಿ ಉದ್ಘಾಟನೆ
ಬೆಂಗಳೂರು: ಕರ್ನಾಟಕದ 7 ಜಿಲ್ಲೆಗಳಿಗೆ ಕುಡಿಯುವ ನೀರು ಹಾಗೂ ಕೆರೆ ತುಂಬಿಸುವ ಮಹತ್ವಾಕಾಂಕ್ಷಿ ಎತ್ತಿನಹೊಳೆ ಯೋಜನೆಯ ಏತ ಕಾಮಗಾರಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸೆ.6 ಗೌರಿ ಹಬ್ಬದಂದು ಉದ್ಘಾಟನೆ ಮಾಡಲಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಈ ಯೋಜನೆಯಿಂದ 7 ಜಿಲ್ಲೆಗಳಿಗೆ ಕುಡಿಯುವ ನೀರು ಸಿಗಲಿದೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ ಜಿಲ್ಲೆಗಳು ಈ ಯೋಜನೆಯನ್ನು ಎದುರುನೋಡುತ್ತಿದ್ದಾರೆ. ಅನೇಕ ನಾಯಕರು …
Read More »ರಾತ್ರೋರಾತ್ರಿ ರಷ್ಯಾ ಮೇಲೆ ಡ್ರೋನ್ ದಾಳಿ ನಡೆಸಿದ ಉಕ್ರೇನ್
ಕೀವ್- ಮಾಸ್ಕೋ ಮತ್ತು ರಷ್ಯಾದ ಹಲವಾರು ಇತರ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಉಕ್ರೇನ್ ರಾತ್ರೋರಾತ್ರಿ ಡ್ರೋನ್ ದಾಳಿ ನಡೆಸಿದೆ ಎಂದು ರಷ್ಯಾದ ಅಧಿಕಾರಿಗಳು ತಿಳಿಸಿದ್ದಾರೆ. ರಷ್ಯಾದ ನೈಋತ್ಯದಲ್ಲಿರುವ ಬ್ರಿಯಾನ್ಸ್ಕ್ ನ ಗಡಿ ಪ್ರದೇಶದ ಮೇಲೆ ಕನಿಷ್ಠ 12 ಉಕ್ರೇನ್ ಉಡಾವಣೆ ಮಾಡಿದ ಡ್ರೋನ್ಗಳನ್ನು ನಾಶಪಡಿಸಲಾಗಿದೆ ಎಂದು ಪ್ರದೇಶದ ಗವರ್ನರ್ ಅಲೆಕ್ಸಾಂಡರ್ ಬೊಗೊಮಾಜ್ ಟೆಲಿಗ್ರಾಮ್ನಲ್ಲಿ ತಿಳಿಸಿದ್ದಾರೆ. ಕುರ್ಸ್ಕ್ ಪ್ರದೇಶದ ಮೇಲೆ ಎರಡು ಮಾನವರಹಿತ ದಾಳಿ ವಾಹನಗಳನ್ನು ಸಹ ನಾಶಪಡಿಸಲಾಗಿದೆ, ಉಕ್ರೇನ್ನ ಆಕ್ರಮಣದಿಂದ ಭಾಗಶಃ …
Read More »ರಾಜ್ಯಾದ್ಯಂತ ಪೋಡಿ ದುರಸ್ತಿ ಅಭಿಯಾನ ಆರಂಭ:ಸಚಿವ ಕೃಷ್ಣಬೈರೇಗೌಡ
ಬೆಂಗಳೂರು : ರಾಜ್ಯಾದ್ಯಂತ ಸೆಪ್ಟೆಂಬರ್ 2 ರ ನಾಳೆಯಿಂದ ಪೋಡಿ ದುರಸ್ತಿ ಅಭಿಯಾನವನ್ನು ಆರಂಭಿಸಲಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ರೈತರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ರಾಜ್ಯದಲ್ಲಿ ಸುಮಾರು 10 ಲಕ್ಷ ರೈತರಿಗೆ ಹತ್ತಾರು ವರ್ಷಗಳ ಹಿಂದೆ ಸರ್ಕಾರಿ ಜಮೀನು ಅಕ್ರಮ ಸಕ್ರಮದಡಿ ಮಂಜೂರಾಗಿದ್ದರೂ ಸಹ, ಪೋಡಿ ದುರಸ್ಥಿ ಆಗದೆ ಬಾಕಿ ಉಳಿದಿದೆ ಲಕ್ಷಾಂತರ ರೈತರು ಅನೇಕ ವರ್ಷಗಳಿಂದ ಪ್ರಯತ್ನ ಮಾಡುತ್ತಿದ್ದರೂ ಸಹ, ಕೆಲವೇ ಕೆಲವರಿಗೆ ಮಾತ್ರ ಪೋಡಿ …
Read More »ಪ್ರಾಸಿಕ್ಯೂಷನ್ ಅರ್ಜಿ ಯಾವುದು ಬಾಕಿ ಇಲ್ಲವೆಂದು ಸ್ಪಷ್ಟನೆ ನೀಡಿದ ರಾಜಭವನ
ಬೆಂಗಳೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕ್ರಮ ಖಂಡಿಸಿ ಹಾಗೂ ಬಿಜೆಪಿ, ಜೆಡಿಎಸ್ ನಾಯಕರ ವಿರುದ್ಧದ ಪ್ರಕರಣಗಳ ಸಂಬಂಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ಒತ್ತಾಯಿಸಿ ಕಾಂಗ್ರೆಸ್ ನಾಯಕರು ರಾಜಭವನ ಚಲೋ ನಡೆಸಿದ್ದ ಬೆನ್ನಲ್ಲೇ ರಾಜಭವನ ಮಹತ್ವದ ಮಾಹಿತಿ ನೀಡಿದೆ. ರಾಜಭವನ ಕಚೇರಿಯಲ್ಲಿ ಯಾವುದೇ ಪ್ರಕರಣಗಳ ಪ್ರಾಸಿಕ್ಯೂಷನ್ ಅರ್ಜಿ ಬಾಕಿ ಇಲ್ಲ ಎಂದು ಸ್ಪಷ್ಟಪಡಿಸಿದೆ. ಕೇಂದ್ರ …
Read More »ಮಂಕಿಪಾಕ್ಸ್ ಖಾಯಿಲೆ: ಸೂಕ್ತ ಕ್ರಮಕ್ಕೆ ಮುಂದಾದ ಯುನಿಸೆಫ್
ನವದೆಹಲಿ : ವಿಶ್ವಸಂಸ್ಥೆಯ ಮಕ್ಕಳ ನಿಧಿ (ಯುನಿಸೆಫ್) ವಿವಿಧ ದೇಶಗಳಲ್ಲಿ ಮಂಗನ ಕಾಯಿಲೆಯಿಂದ ಹದಗೆಡುತ್ತಿರುವ ಪರಿಸ್ಥಿತಿಯ ಬಗ್ಗೆ ಎಚ್ಚರಿಕೆ ವಹಿಸಿದೆ. ಮಂಗನ ಕಾಯಿಲೆಯಿಂದ ರಕ್ಷಣೆಗಾಗಿ ಯುನಿಸೆಫ್ ತುರ್ತು ಟೆಂಡರ್ ನೀಡಿದೆ.ಯುನಿಸೆಫ್, ಗವಿ ಲಸಿಕೆ ಒಕ್ಕೂಟ, ಆಫ್ರಿಕಾ ಸಿಡಿಸಿ ಮತ್ತು ವಿಶ್ವ ಆರೋಗ್ಯ ಸಂಸ್ಥೆಯ ಸಹಯೋಗದೊಂದಿಗೆ, ಬಿಕ್ಕಟ್ಟಿನ ಪೀಡಿತ ದೇಶಗಳಿಗೆ mPox ಲಸಿಕೆಗಳನ್ನು ಸುರಕ್ಷಿತಗೊಳಿಸಲು ಈ ತುರ್ತು ಟೆಂಡರ್ ಅನ್ನು ನೀಡಿದೆ. ತಯಾರಕರ ಉತ್ಪಾದನಾ ಸಾಮರ್ಥ್ಯವನ್ನು ಅವಲಂಬಿಸಿ, 2025 ರ ವೇಳೆಗೆ …
Read More »ನಾಯಿ ದಾಳಿ: ರಾಜ್ಯದಲ್ಲಿ 12ಕ್ಕೂ ಹೆಚ್ಚು ಜನರು ರೇಬಿಸ್ಗೆ ಬಲಿ
ಬೆಂಗಳೂರು : ಕರ್ನಾಟಕದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಈ ವರ್ಷ ನಾಯಿ ದಾಳಿಯಿಂದಾಗಿ ರೇಬಿಸ್ ಕಾಯಿಲೆಗೆ 12ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ರಾಜ್ಯದಲ್ಲಿ ಪ್ರತಿ ವರ್ಷ ರೇಬೀಸ್ ರೋಗಕ್ಕೆ 25ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ.ಈ ವರ್ಷ ಈಗಾಗಲೇ ರಾಜ್ಯದಲ್ಲಿ 12ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ. 2022ರಲ್ಲಿ 32 ಜನರು ರೇಬಿಸ್ ರೋಗಕ್ಕೆ ಬಲಿಯಾಗಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ರೇಬಿಸ್ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





