ತಿರುವನಂತಪುರ: ಕೇರಳದ ವಯನಾಡ್ ಜಿಲ್ಲೆಯಲ್ಲಿ ಸಂಭವಿಸಿದ ಸರಣಿ ಭೂಕುಸಿತದಿಂದಾಗಿ ಅಪಾರ ಪ್ರಮಾಣದ ಆಸ್ತಿಪಾಸ್ತಿ ನಷ್ಟವಾಗಿದೆ. ಸಂತ್ರಸ್ತರಿಗೆ ಪುನರ್ ವಸತಿ ಕಲ್ಪಿಸುವ ಸಲುವಾಗಿ ₹2,000 ಕೋಟಿ ಪರಿಹಾರ ಒದಗಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ. ವಯನಾಡ್ ಭೂಕುಸಿತದ ಕುರಿತು ಸಂದರ್ಶನದಲ್ಲಿ ಮಾತನಾಡಿರುವ ಅವರು, ಪಶ್ಚಿಮ ಘಟ್ಟಗಳ ಸಂರಕ್ಷಣೆ ಕುರಿತು ಮಾಧವ ಗಾಡ್ಗೀಳ್ ಮತ್ತು ಕಸ್ತೂರಿರಂಗನ್ ಸಮಿತಿಗಳು ಮಾಡಿರುವ ಶಿಫಾರಸುಗಳು ಅವೈಜ್ಞಾನಿಕ. ಈ ಸಮಿತಿಗಳು ವಾಸ್ತವಾಂಶಗಳನ್ನು …
Read More »ಸೆ.6ಕ್ಕೆ ಎತ್ತಿನಹೊಳೆ ಏತ ಕಾಮಗಾರಿ ಉದ್ಘಾಟನೆ
ಬೆಂಗಳೂರು: ಕರ್ನಾಟಕದ 7 ಜಿಲ್ಲೆಗಳಿಗೆ ಕುಡಿಯುವ ನೀರು ಹಾಗೂ ಕೆರೆ ತುಂಬಿಸುವ ಮಹತ್ವಾಕಾಂಕ್ಷಿ ಎತ್ತಿನಹೊಳೆ ಯೋಜನೆಯ ಏತ ಕಾಮಗಾರಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸೆ.6 ಗೌರಿ ಹಬ್ಬದಂದು ಉದ್ಘಾಟನೆ ಮಾಡಲಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಈ ಯೋಜನೆಯಿಂದ 7 ಜಿಲ್ಲೆಗಳಿಗೆ ಕುಡಿಯುವ ನೀರು ಸಿಗಲಿದೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ ಜಿಲ್ಲೆಗಳು ಈ ಯೋಜನೆಯನ್ನು ಎದುರುನೋಡುತ್ತಿದ್ದಾರೆ. ಅನೇಕ ನಾಯಕರು …
Read More »ರಾತ್ರೋರಾತ್ರಿ ರಷ್ಯಾ ಮೇಲೆ ಡ್ರೋನ್ ದಾಳಿ ನಡೆಸಿದ ಉಕ್ರೇನ್
ಕೀವ್- ಮಾಸ್ಕೋ ಮತ್ತು ರಷ್ಯಾದ ಹಲವಾರು ಇತರ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಉಕ್ರೇನ್ ರಾತ್ರೋರಾತ್ರಿ ಡ್ರೋನ್ ದಾಳಿ ನಡೆಸಿದೆ ಎಂದು ರಷ್ಯಾದ ಅಧಿಕಾರಿಗಳು ತಿಳಿಸಿದ್ದಾರೆ. ರಷ್ಯಾದ ನೈಋತ್ಯದಲ್ಲಿರುವ ಬ್ರಿಯಾನ್ಸ್ಕ್ ನ ಗಡಿ ಪ್ರದೇಶದ ಮೇಲೆ ಕನಿಷ್ಠ 12 ಉಕ್ರೇನ್ ಉಡಾವಣೆ ಮಾಡಿದ ಡ್ರೋನ್ಗಳನ್ನು ನಾಶಪಡಿಸಲಾಗಿದೆ ಎಂದು ಪ್ರದೇಶದ ಗವರ್ನರ್ ಅಲೆಕ್ಸಾಂಡರ್ ಬೊಗೊಮಾಜ್ ಟೆಲಿಗ್ರಾಮ್ನಲ್ಲಿ ತಿಳಿಸಿದ್ದಾರೆ. ಕುರ್ಸ್ಕ್ ಪ್ರದೇಶದ ಮೇಲೆ ಎರಡು ಮಾನವರಹಿತ ದಾಳಿ ವಾಹನಗಳನ್ನು ಸಹ ನಾಶಪಡಿಸಲಾಗಿದೆ, ಉಕ್ರೇನ್ನ ಆಕ್ರಮಣದಿಂದ ಭಾಗಶಃ …
Read More »ರಾಜ್ಯಾದ್ಯಂತ ಪೋಡಿ ದುರಸ್ತಿ ಅಭಿಯಾನ ಆರಂಭ:ಸಚಿವ ಕೃಷ್ಣಬೈರೇಗೌಡ
ಬೆಂಗಳೂರು : ರಾಜ್ಯಾದ್ಯಂತ ಸೆಪ್ಟೆಂಬರ್ 2 ರ ನಾಳೆಯಿಂದ ಪೋಡಿ ದುರಸ್ತಿ ಅಭಿಯಾನವನ್ನು ಆರಂಭಿಸಲಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ರೈತರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ರಾಜ್ಯದಲ್ಲಿ ಸುಮಾರು 10 ಲಕ್ಷ ರೈತರಿಗೆ ಹತ್ತಾರು ವರ್ಷಗಳ ಹಿಂದೆ ಸರ್ಕಾರಿ ಜಮೀನು ಅಕ್ರಮ ಸಕ್ರಮದಡಿ ಮಂಜೂರಾಗಿದ್ದರೂ ಸಹ, ಪೋಡಿ ದುರಸ್ಥಿ ಆಗದೆ ಬಾಕಿ ಉಳಿದಿದೆ ಲಕ್ಷಾಂತರ ರೈತರು ಅನೇಕ ವರ್ಷಗಳಿಂದ ಪ್ರಯತ್ನ ಮಾಡುತ್ತಿದ್ದರೂ ಸಹ, ಕೆಲವೇ ಕೆಲವರಿಗೆ ಮಾತ್ರ ಪೋಡಿ …
Read More »ಪ್ರಾಸಿಕ್ಯೂಷನ್ ಅರ್ಜಿ ಯಾವುದು ಬಾಕಿ ಇಲ್ಲವೆಂದು ಸ್ಪಷ್ಟನೆ ನೀಡಿದ ರಾಜಭವನ
ಬೆಂಗಳೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕ್ರಮ ಖಂಡಿಸಿ ಹಾಗೂ ಬಿಜೆಪಿ, ಜೆಡಿಎಸ್ ನಾಯಕರ ವಿರುದ್ಧದ ಪ್ರಕರಣಗಳ ಸಂಬಂಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ಒತ್ತಾಯಿಸಿ ಕಾಂಗ್ರೆಸ್ ನಾಯಕರು ರಾಜಭವನ ಚಲೋ ನಡೆಸಿದ್ದ ಬೆನ್ನಲ್ಲೇ ರಾಜಭವನ ಮಹತ್ವದ ಮಾಹಿತಿ ನೀಡಿದೆ. ರಾಜಭವನ ಕಚೇರಿಯಲ್ಲಿ ಯಾವುದೇ ಪ್ರಕರಣಗಳ ಪ್ರಾಸಿಕ್ಯೂಷನ್ ಅರ್ಜಿ ಬಾಕಿ ಇಲ್ಲ ಎಂದು ಸ್ಪಷ್ಟಪಡಿಸಿದೆ. ಕೇಂದ್ರ …
Read More »ಮಂಕಿಪಾಕ್ಸ್ ಖಾಯಿಲೆ: ಸೂಕ್ತ ಕ್ರಮಕ್ಕೆ ಮುಂದಾದ ಯುನಿಸೆಫ್
ನವದೆಹಲಿ : ವಿಶ್ವಸಂಸ್ಥೆಯ ಮಕ್ಕಳ ನಿಧಿ (ಯುನಿಸೆಫ್) ವಿವಿಧ ದೇಶಗಳಲ್ಲಿ ಮಂಗನ ಕಾಯಿಲೆಯಿಂದ ಹದಗೆಡುತ್ತಿರುವ ಪರಿಸ್ಥಿತಿಯ ಬಗ್ಗೆ ಎಚ್ಚರಿಕೆ ವಹಿಸಿದೆ. ಮಂಗನ ಕಾಯಿಲೆಯಿಂದ ರಕ್ಷಣೆಗಾಗಿ ಯುನಿಸೆಫ್ ತುರ್ತು ಟೆಂಡರ್ ನೀಡಿದೆ.ಯುನಿಸೆಫ್, ಗವಿ ಲಸಿಕೆ ಒಕ್ಕೂಟ, ಆಫ್ರಿಕಾ ಸಿಡಿಸಿ ಮತ್ತು ವಿಶ್ವ ಆರೋಗ್ಯ ಸಂಸ್ಥೆಯ ಸಹಯೋಗದೊಂದಿಗೆ, ಬಿಕ್ಕಟ್ಟಿನ ಪೀಡಿತ ದೇಶಗಳಿಗೆ mPox ಲಸಿಕೆಗಳನ್ನು ಸುರಕ್ಷಿತಗೊಳಿಸಲು ಈ ತುರ್ತು ಟೆಂಡರ್ ಅನ್ನು ನೀಡಿದೆ. ತಯಾರಕರ ಉತ್ಪಾದನಾ ಸಾಮರ್ಥ್ಯವನ್ನು ಅವಲಂಬಿಸಿ, 2025 ರ ವೇಳೆಗೆ …
Read More »ನಾಯಿ ದಾಳಿ: ರಾಜ್ಯದಲ್ಲಿ 12ಕ್ಕೂ ಹೆಚ್ಚು ಜನರು ರೇಬಿಸ್ಗೆ ಬಲಿ
ಬೆಂಗಳೂರು : ಕರ್ನಾಟಕದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಈ ವರ್ಷ ನಾಯಿ ದಾಳಿಯಿಂದಾಗಿ ರೇಬಿಸ್ ಕಾಯಿಲೆಗೆ 12ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ರಾಜ್ಯದಲ್ಲಿ ಪ್ರತಿ ವರ್ಷ ರೇಬೀಸ್ ರೋಗಕ್ಕೆ 25ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ.ಈ ವರ್ಷ ಈಗಾಗಲೇ ರಾಜ್ಯದಲ್ಲಿ 12ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ. 2022ರಲ್ಲಿ 32 ಜನರು ರೇಬಿಸ್ ರೋಗಕ್ಕೆ ಬಲಿಯಾಗಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ರೇಬಿಸ್ …
Read More »ಗಂಗಾಕಲ್ಯಾಣ ಯೋಜನೆ:ಸೆ.15 ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ
ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಸಿಹಿಸುದ್ದಿ ನೀಡಿದ್ದು, ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಗಂಗಾಕಲ್ಯಾಣ ನೀರಾವರಿ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಸೆ.15 ರವರೆಗೆ ಅವಧಿ ವಿಸ್ತರಣೆ ಮಾಡಲಾಗಿದೆ. ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮಗಳ ವ್ಯಾಪ್ತಿಗೆ ಒಳಪಡುವ …
Read More »ರಾಜ್ಯಾದ್ಯಂತ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ
ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ಕರ್ನಾಟಕ ಕರಾವಳಿಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗಲಿದೆ. ಮಲೆನಾಡು ಸುತ್ತಮುತ್ತ ವ್ಯಾಪಕ ಮಳೆಯೊಂದಿಗೆ, ಕೆಲವೆಡೆ ಚದುರಿದಂತೆ ಅತಿ ಲಘುವಾಗಿ ಮಳೆಯಾಗಲಿದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲೂ ವರುಣ ಅಬ್ಬರಿಸಲಿದ್ದಾನೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೀದರ್ ಮತ್ತು …
Read More »ಉರುಳಿ ಬಿದ್ದ ಛತ್ರಪತಿ ಶಿವಾಜಿ ಪ್ರತಿಮೆ : ಕ್ಷಮೆಯಾಚಿಸಿದ ಪ್ರಧಾನಿ
ಮುಂಬೈ: ಮಹಾರಾಷ್ಟ್ರದ ಸಿಂಧುದುರ್ಗದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಉರುಳಿ ಬಿದ್ದ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಕ್ಷಮೆಯಾಚಿಸಿದ್ದಾರೆ. 2013ರಲ್ಲಿ ಬಿಜೆಪಿ ನನ್ನನ್ನು ಪ್ರಧಾನಿ ಅಭ್ಯರ್ಥಿ ಎಂದು ಹೆಸರಿಸಿತ್ತು. ನಾನು ಮಾಡಿದ ಮೊದಲ ಕೆಲಸವೆಂದರೆ ರಾಯಗಢದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಸಮಾಧಿಯ ಮುಂದೆ ಭಕ್ತನಾಗಿ ಕುಳಿತು ಹೊಸ ಪ್ರಯಾಣವನ್ನು ಪ್ರಾರಂಭಿಸಿದೆ ಎಂದು ಮೋದಿ ಪಾಲ್ಟರ್ನಲ್ಲಿ ಹೇಳಿದ್ದಾರೆ ”ಛತ್ರಪತಿ ಶಿವಾಜಿ ಮಹಾರಾಜರು ನಮಗೆ ಕೇವಲ ಹೆಸರಲ್ಲ… ಇಂದು ನಾನು ನನ್ನ ದೇವರು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





